Just In
- 54 min ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 1 hr ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 2 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 2 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies ''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
- News Bengaluru Heat: ಏ.25 ರಂದು ನಗರದಲ್ಲಿ ಅತ್ಯಧಿಕ ತಾಪಮಾನ: 12 ವರ್ಷಗಳ ದಾಖಲೆ ಉಡೀಸ್
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿನೂತನ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳಲಿದೆ ಎಂಜಿ ಹೊಸ ಆಸ್ಟರ್ ಕಂಪ್ಯಾಕ್ಟ್ ಎಸ್ಯುವಿ
ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ ತನ್ನ ಐದನೇ ಕಾರು ಮಾದರಿಯಾಗಿ ಹೊಸ ಕಂಪ್ಯಾಕ್ಟ್ ಎಸ್ಯುವಿ ಮಾದರಿಯೊಂದನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್ಯುವಿ ಸೆಗ್ಮೆಂಟ್ನಲ್ಲಿ ಅತ್ಯುತ್ತಮ ಫೀಚರ್ಸ್ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.
ಹೊಸ ಕಂಪ್ಯಾಕ್ಟ್ ಎಸ್ಯುವಿ ಮಾದರಿಯ ಮೂಲಕ ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿರುವ ಎಂಜಿ ಮೋಟಾರ್ ಕಂಪನಿಯು ಸದ್ಯ ಹೊಸ ಕಾರನ್ನು ಜೆಡ್ಎಸ್ ಪೆಟ್ರೋಲ್ ಮಾದರಿಯಾಗಿ ಪರೀಕ್ಷೆ ಕೈಗೊಂಡಿದ್ದು, ಸ್ಟ್ಯಾಂಡರ್ಡ್ ಹೆಕ್ಟರ್ ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಕಾರು ಮಾರುತಿ ಎಸ್-ಕ್ರಾಸ್, ರೆನಾಲ್ಟ್ ಡಸ್ಟರ್, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೆ ಪೈಪೋಟಿಯಾಗಿ ಬಿಡುಗಡೆ ಮಾಡಲಾಗುತ್ತಿದೆ.
2020ರ ಫೆಬ್ರವರಿಯಲ್ಲಿ ನಡೆದಿದ್ದ ದೆಹಲಿ ಆಟೋ ಎಕ್ಸ್ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ಎಂಜಿ ಹೊಸ ಕಾರು ಮಾದರಿಯು ಈ ವರ್ಷದ ಮೂರನೇ ತ್ರೈಮಾಸಿಕ ವೇಳೆಗೆ ಬಿಡುಗಡೆಗೊಳ್ಳುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರು ದೇಶಿಯ ಮಾರುಕಟ್ಟೆಯಲ್ಲಿ ಆಸ್ಟರ್ ಹೆಸರಿನೊಂದಿಗೆ ಬಿಡುಗಡೆಯಾಗುವ ಸಾಧ್ಯತೆಗಳಿವೆ.
ಎಂಜಿ ಕಂಪನಿಯು ಆಸ್ಟರ್ ಹೆಸರನ್ನು ಈಗಾಗಲೇ ಕೇಂದ್ರ ಸಾರಿಗೆ ಇಲಾಖೆಯಲ್ಲಿ ಟ್ರೇಡ್ಮಾರ್ಕ್ ಸಲ್ಲಿಸಿದ್ದು, ಇತ್ತೀಚೆಗೆ ಹೊಸ ಕಾರು ಎಮರ್ಜೆನ್ಸಿ ಬ್ರೆಕ್ ಅಸಿಸ್ಟ್ ಸೌಲಭ್ಯದೊಂದಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವಾಗ ಸಾರ್ವಜನಿಕವಾಗಿ ಕಾಣಿಸಿಕೊಂಡಿದೆ.
ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಭಿನ್ನವಾದ ತಾಂತ್ರಿಕ ಅಂಶಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದ್ದು, ಹೊಸ ಕಾರಿನಲ್ಲಿರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಸೌಲಭ್ಯವು ಕಾರಿನ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸುವ ನೀರಿಕ್ಷೆಯಿದೆ. ಹೊಸ ಎಡಿಎಎಸ್ ಸೌಲಭ್ಯ ಅಳವಡಿಕೆಯಿಂದಾಗಿ ಕಾರು ಚಾಲನೆ ವೇಳೆ ರಸ್ತೆಗುಂಡಿಗಳನ್ನು ಸುಲಭವಾಗಿ ಪತ್ತೆಹಚ್ಚಲು ರಡಾರ್ ಬಳಕೆಯಾಗಲಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ಕಾರ್ಯ ನಿರ್ವಹಣೆ ಮಾಡುವ ಮೂಲಕ ರಸ್ತೆಗುಂಡಿಯಿಂದಾಗುವ ಅಪಾಯವನ್ನು ತಡೆಯಬಲ್ಲದು.
ಜೊತೆಗೆ ಚಾಲಕನಿಗೆ ಧ್ವನಿ ಸಂದೇಶ ಮೂಲಕ ಎಚ್ಚರಿಕೆ ನೀಡುವ ಎಡಿಎಎಸ್ ಸೌಲಭ್ಯವು ರಿವರ್ಸ್ ಸಂದರ್ಭದಲ್ಲಿ 3ಡಿ ಪನೊರಮಿಕ್ ವ್ಯೂ ಸೌಲಭ್ಯ ಒದಗಿಸಲಿದ್ದು, ಪ್ರಯಾಣಿಕರಿಗೆ ಸುರಕ್ಷತೆಯನ್ನು ಖಾತ್ರಿಪಡಿಸುತ್ತದೆ.
ಇದರೊಂದಿಗೆ ಹೊಸ ಕಾರಿನಲ್ಲಿ ಅತ್ಯುತ್ತಮ ಲೆದರ್ ವ್ಯಾರ್ಪ್ ಆಸನಗಳು, ಹಿಂಬದಿಯ ಪ್ರಯಾಣಿಕರಿಗೆ ಎಸಿ ವೆಂಟ್ಸ್, 10-ಇಂಚಿನ ಇನ್ಪೋಟೈನ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪ್ಲ್ಯಾಟ್-ಬಾಟಮ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಹಿಂಬದಿಯ ಪ್ರಯಾಣಿಕರಿಗೆ ಅರಾಮದಾಯಕವಾದ ಆಸನ ಸೌಲಭ್ಯಗಳಿವೆ.
ಹೊಸ ಕಾರು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಮಾದರಿಯಲ್ಲೇ ತುಸು ವಿಭಿನ್ನ ವಿನ್ಯಾಸವನ್ನು ಹೊಂದಿರುವ ಹೊಸ ಕಾರು ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದೆ ಎನ್ನಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಯೆಂತೆ ಸಾಮಾನ್ಯ ಪೆಟ್ರೋಲ್ ಮಾದರಿಯನ್ನು ಮತ್ತು ಪರ್ಫಾಮೆನ್ಸ್ ಬಯಸುವ ಗ್ರಾಹಕರು ಟರ್ಬೊ ಪೆಟ್ರೋಲ್ ಮಾದರಿಯನ್ನು ಖರೀದಿಸಬಹುದು.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಹೊಸ ಕಾರಿನಲ್ಲಿ 1.5-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಗಾಗಿ 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಹೊಸ ಎಂಜಿನ್ನಲ್ಲಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಹೊಂದಿರಬಹುದೆಂದು ಅಂದಾಜಿಸಲಾಗಿದೆ.
ಈ ಮೂಲಕ ಮಧ್ಯಮ ಕ್ರಮಾಂಕದ ಎಸ್ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಎಂಜಿ ಹೊಸ ಕಂಪ್ಯಾಕ್ಟ್ ಎಸ್ಯುವಿ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 9.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14 ಲಕ್ಷ ಬೆಲೆ ಹೊಂದಬಹುದೆಂದು ಅಂದಾಜಿಸಲಾಗುತ್ತಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಹೊಸ ಕಾರು 4,314-ಎಂಎಂ ಉದ್ದ, 1,890-ಎಂಎಂ ಅಗಲ, 1,611-ಎಂಎಂ ಎತ್ತರ ಮತ್ತು 2,589-ಎಂಎಂ ವೀಲ್ಹ್ಬೆಸ್ ಪಡೆದುಕೊಂಡಿದ್ದು, ಹೆಚ್ಚಿನ ಮಟ್ಟದ ಸ್ಥಳೀಯ ಬಿಡಿಭಾಗಗಳೊಂದಿಗೆ ಉತ್ಪಾದನೆಗೊಂಡಿರುವುದರಿಂದ ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಂತಲೂ ಬೆಲೆಯಲ್ಲಿ ಗಮನಸೆಳೆಯಲಿದೆ.