Astor ಎಸ್‌ಯುವಿ ಕಾರು ಮಾದರಿಗಾಗಿ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ MG Motor
ಎಂಜಿ ಮೋಟಾರ್(MG Motor) ಕಂಪನಿಯು ಹೊಸ ಆಸ್ಟರ್(Astor) ಕಾರು ಬಿಡುಗಡೆಯೊಂದಿಗೆ ಪ್ರತಿಸ್ಪರ್ಧಿ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿದ್ದು, ಹೊಸ ಕಾರಿನಲ್ಲಿ ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳೊಂದಿಗೆ ಆಸಕ್ತ ಗ್ರಾಹಕರಿಗೆ ಇದೀಗ ಆಕ್ಸೆಸರಿಸ್ ಪ್ಯಾಕೇಜ್ ಬಹಿರಂಗಪಡಿಸಿದೆ.

ಹೊಸ ಕಾರುಗಳಲ್ಲಿ ಸ್ಟ್ಯಾಂಡರ್ಡ್ ಫೀಚರ್ಸ್‌ಗಳಂತೆ ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿರುವ ತಾಂತ್ರಿಕ ಸೌಲಭ್ಯಗಳು ಸಹ ಹೆಚ್ಚಿನ ಬೇಡಿಕೆ ಹೊಂದಿದ್ದು, ಎಂಜಿ ಮೋಟಾರ್ ಕಂಪನಿಯು ಹೊಸ ಆಸ್ಟರ್ ಕಾರು ಮಾದರಿಗಳಾಗಿ ಆಕರ್ಷಕ ಬೆಲೆಗಳಲ್ಲಿ ವಿವಿಧ ಆಕ್ಸೆಸರಿಸ್‌ಗಳನ್ನು ಬಿಡುಗಡೆ ಮಾಡಿದೆ. ಹೊಸ ಆಕ್ಸೆಸರಿಸ್ ಪ್ಯಾಕೇಜ್‌ನಲ್ಲಿ ವೆರಿಯೆಂಟ್‌ಗಳಿಗೆ ಅನುಗುಣವಾಗಿ ವಿವಿಧ ತಾಂತ್ರಿಕ ಸೌಲಭ್ಯಗಳನ್ನು ಅಳವಡಿಸಲಿದ್ದು, ಸುಮಾರು ರೂ. 1 ಲಕ್ಷ ಮೌಲ್ಯದ ವಿವಿಧ ಆಕ್ಸೆಸರಿಸ್‌ಗಳನ್ನು ನೀಡಲಾಗಿದೆ.

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಸ್ಟೈಲ್, ಸೂಪರ್, ಸ್ಮಾರ್ಟ್, ಸ್ಯಾವಿ ಮತ್ತು ಶಾರ್ಪ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಸ್ಪೋರ್ಟಿ ವಿನ್ಯಾಸದೊಂದಿಗೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ಜೋಡಣೆ ಹೊಂದಿದ್ದು, ವಿವಿಧ ಆಕ್ಸೆಸರಿಸ್‌ಗಳು ಕಾರಿಗೆ ಐಷಾರಾಮಿ ಲುಕ್ ನೀಡಲಿವೆ.

ಕಾರಿನ ಹೊರಭಾಗದ ತಾಂತ್ರಿಕ ಅಂಶಗಳಿಗೆ ಸುರಕ್ಷತೆ ನೀಡುವ 360 ಡಿಗ್ರಿ ಕ್ಯಾಮೆರಾ, ಎಮರ್ಜೆನ್ಸಿ ಕಾರ್ ಕಿಟ್, ಟೈರ್ ಇನ್‌ಪ್ಲಾಟರ್, ಬೈಸಿಕಲ್ ಕ್ಯಾರಿಯರ್, ಪೆಡಲ್ ಲ್ಯಾಂಪ್, ಸೈಡ್ ಸ್ಟೆಪ್ ಬೋರ್ಡ್, ಇಲ್ಯೂಮೆಟೆಡ್ ವ್ಹೀಲ್ ಹಬ್, ಸೈಡ್ ಸ್ಕೂಪ್, ರಿಯರ್ ಬುಲ್ ಬಾರ್, ಸ್ಪಾಯ್ಲರ್ ಎಕ್ಸ್‌ಟೆಕ್ಷನ್, ಕಾರ್ ಕವರ್, ಪೆಂಟ್ ಪ್ರೊಟೆಕ್ಷನ್ ಕೊಟಿಂಗ್, ಕ್ರೊಮ್ ಗಾರ್ನಿಶ್ ನೀಡಲಾಗಿದೆ.

ಜೊತೆಗೆ ಡೋರ್ ವಿಸರ್, ಬೂಟ್ ಸಿಲ್ ಗಾರ್ಡ್, ವ್ಹೀಲ್ ಆರ್ಚ್ ಕ್ರೋಮ್, ಜಂಪರ್ ಕೇಬಲ್, ಎಕ್ಸಾಸ್ಟ್ ಫಿನಿಷರ್, ಫ್ಯೂಲ್ ಲಿಡ್ ಗಾರ್ನಿಶ್ ಸೇರಿದಂತೆ ಹಲವಾರು ಆಕ್ಸೆಸರಿಸ್‌ಗಳು ಆಕರ್ಷಕ ಬೆಲೆಗಳಿಗೆ ಬಿಡುಗಡೆ ಮಾಡಿದ್ದು, ಆಕ್ಸೆಸರಿಸ್ ಪ್ಯಾಕೇಜ್ ಈಗಾಗಲೇ ಎಂಜಿ ಕಂಪನಿಯ ಎಲ್ಲಾ ಅಧಿಕೃತ ಶೋರೂಂಗಳಲ್ಲೂ ಲಭ್ಯವಿದೆ.

ಹೊಸ ಕಾರು 1.5 ಲೀಟರ್ ಮತ್ತು 1.3 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಗಳೊಂದಿಗೆ ಖರೀದಿಗೆ ಲಭ್ಯವಿದ್ದು ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳು ಮತ್ತು ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ವಿವಿಧ ವೆರಿಯೆಂಟ್‌ಗಳು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.9.78 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.78 ಲಕ್ಷ ಬೆಲೆ ಹೊಂದಿದೆ.

ಆಸ್ಟರ್ ಕಾರು ಆಕರ್ಷಕವಾದ ಗ್ರಿಲ್ ಜೊತೆ ಹ್ವಾಕ್ ಐ ಹೆಡ್‌ಲ್ಯಾಂಪ್ಸ್, ಕ್ರೊಮ್ ಸ್ಟಡ್ ಗ್ರಿಲ್, ಸ್ಪ್ಲಿಟ್ ಎಲ್ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ಡ್ಯುಯಲ್ ಎಕ್ಸಾಸ್ಟ್ ಟ್ರಿಪ್ಸ್, ರೂಫ್ ರೈಲ್ಸ್, ಆಲ್ ಅರೌಂಡ್ ಕ್ಲಾಡಿಂಗ್ ಹೊಂದಿದೆ.

ಕಾರಿನ ಒಳಭಾಗವು ಆಕರ್ಷಕವಾಗಿದ್ದು, 10.1 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಪವರ್ ಅಡ್ಜೆಸ್ಟ್ ಸೀಟ್, ಡ್ರೈವ್ ಮತ್ತು ಸ್ಪೀರಿಂಗ್ ಮೋಡ್, ಪನೊರಮಿಕ್ ಸನ್‌ರೂಫ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಹಿಟೆಡ್ ರಿಯರ್ ವ್ಯೂ ಮಿರರ್ ಸೌಲಭ್ಯವಿವೆ.

ಕ್ಯಾಬಿನ್ ಫೀಚರ್ಸ್ ಹೆಚ್ಚಿಸಲು ಫ್ರಂಟ್ ಅಂಡ್ ರಿಯಲ್ ಆರ್ಮ್ ರೆಸ್ಟ್, ಲೆದರ್ ಇಂಟಿರಿಯರ್, ರಿಯರ್ ಎಸಿ ವೆಂಟ್ಸ್, ಪಿಎಂ 2.5 ಕ್ಯಾಬಿನ್ ಫಿಲ್ಟರ್ ಜೊತೆಗೆ ಹೊಸ ಕಾರಿನ ಕನೆಕ್ಟೆಡ್ ಫೀಚರ್ಸ್‌ಗಳು ಕೂಡಾ ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿವೆ.

ಮತ್ತೊಂದು ವಿಶೇಷವೆಂದರೆ ಹೊಸ ಕಾರಿನಲ್ಲಿ ಭಾರತದ ಮೊದಲ ವ್ಯಯಕ್ತಿಕರಣಗೊಳಿಸಿದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸೌಲಭ್ಯ ಜೋಡಿಸಲಾಗಿದ್ದು, ಇದು ರಿಲಯನ್ಸ್ ಜಿಯೋದಿಂದ ಎರವಲು ಪಡೆಯಲಾದ ರಿಯಲ್-ಟೈಮ್ ಇನ್ಫೋಟೈನ್‌ಮೆಂಟ್ ಮತ್ತು ಟೆಲಿಮ್ಯಾಟಿಕ್ಸ್‌ಗಾಗಿ ಇ-ಸಿಮ್, ಐಒಟಿ ಟೆಕ್ ಅನ್ನು ಒಳಗೊಂಡಿರುವ ಹೊಸ ಕಾರು ಗರಿಷ್ಠ ಸುರಕ್ಷತೆ ಖಚಿತಪಡಿಸಲಿದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಸೌಲಭ್ಯದೊಂದಿಗೆ ಮನರಂಜನೆ, ಕಾರಿನ ತಾಂತ್ರಿಕ ಅಂಶಗಳ ನ್ಯೂನತೆಗಳ ಪತ್ತೆ ಹಚ್ಚುವಲ್ಲಿ ಸಹಕಾರಿಯಾಗುವುದರ ಜೊತೆ ವಾಯ್ಸ್ ಅಸಿಸ್ಟ್ ಮೂಲಕ ಕಾರು ಚಾಲನೆಯನ್ನು ಸರಳಗೊಳಿಸುತ್ತದೆ.

ಹೊಸ ಕಾರಿನಲ್ಲಿರುವ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್)ನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫಾರ್ವಡ್ ಕೂಲಿಷನ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಲೇನ್ ಕೀಪ್ ಅಸಿಸ್ಟ್, ಲೈನ್ ಡಿಫಾರ್ಚರ್ ಪ್ರಿವೆಷನ್, ಸ್ಪೀಡ್ ವಾರ್ನಿಂಗ್, ಇಂಟೆಲಿಜೆಂಟ್ ಮೋಡ್ ಹೊಂದಿರುವ ಸ್ಪಿಡ್ ಅಸಿಸ್ಟ್ ಸಿಸ್ಟಂ, ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್‌ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್‌ಗಳಲಿವೆ.

ಆಕ್ಟಿವ್ ಸೇಫ್ಟಿ ಫೀಚರ್ಸ್‌ಗಳಲ್ಲಿ ಎಡಿಎಎಸ್ ತಂತ್ರಜ್ಞಾನವು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸೌಲಭ್ಯವಾಗಿಯೂ ಕಾರ್ಯ ನಿರ್ವಹಣೆ ಮಾಡಲಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಆರು ಏರ್‌ಬ್ಯಾಗ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್(ಇಎಸ್‌ಪಿ), ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಹಿಲ್ ಡಿಸೆಂಟ್ ಸೌಲಭ್ಯಗಳಿವೆ.


Click it and Unblock the Notifications