ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಸೌಲಭ್ಯ ಹೊಂದಿರುವ MG Astor ಜಾಹೀರಾತು ಬಿಡುಗಡೆ

ಎಂಜಿ ಮೋಟಾರ್(MG Motor) ಕಂಪನಿಯು ಮುಂದಿನ ತಿಂಗಳು ಅಕ್ಟೋಬರ್ ಮಧ್ಯಂತರದಲ್ಲಿ ತನ್ನ ಹೊಸ ಕಾರು ಮಾದರಿಯಾದ ಆಸ್ಟರ್(Astor) ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸಲಿದ್ದು, ವಿನೂತನ ತಂತ್ರಜ್ಞಾನ ಸೌಲಭ್ಯಗಳನ್ನು ಹೊಂದಿರುವ ಹೊಸ ಕಾರಿನ ಜಾಹೀರಾತನ್ನು ಪ್ರಕಟಿಸಿದೆ.

ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಸೌಲಭ್ಯ ಹೊಂದಿರುವ MG Astor ಜಾಹೀರಾತು ಬಿಡುಗಡೆ

ಆಸ್ಟರ್ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ಅಭಿವೃದ್ದಿ ಹೊಂದಿದ್ದು, ಎಂಜಿ ಕಂಪನಿಯು ತನ್ನ ಹೊಸ ಜಾಹೀರಾತಿನಲ್ಲಿ ಆಸ್ಟರ್ ಕಾರಿನ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಸಿಸ್ಟಂ ಸೌಲಭ್ಯದ ಕುರಿತಾಗಿ ಹೊಸ ಜಾಹೀರಾತು ಪ್ರಕಟಿಸಿದೆ.

ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಸೌಲಭ್ಯ ಹೊಂದಿರುವ MG Astor ಜಾಹೀರಾತು ಬಿಡುಗಡೆ

ಹೊಸ ಕಾರಿನಲ್ಲಿ ವ್ಯಯಕ್ತಿಕರಣಗೊಳಿಸಿದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸೌಲಭ್ಯವನ್ನು ಹೊಂದಿರುವ ಆಸ್ಟರ್ ಕಾರು ಕೃತಕ ಬುದ್ಧಿಮತ್ತೆ ಹೊಂದಿರುವ ಭಾರತದ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ರಿಲಯನ್ಸ್ ಜಿಯೋದಿಂದ ಎರವಲು ಪಡೆಯಲಾದ ರಿಯಲ್-ಟೈಮ್ ಇನ್ಫೋಟೈನ್‌ಮೆಂಟ್ ಮತ್ತು ಟೆಲಿಮ್ಯಾಟಿಕ್ಸ್‌ಗಾಗಿ ಇ-ಸಿಮ್, ಐಒಟಿ ಟೆಕ್ ಅನ್ನು ಒಳಗೊಂಡಿರುವ ಹೊಸ ಕಾರು ಗರಿಷ್ಠ ಸುರಕ್ಷತೆ ಖಚಿತಪಡಿಸಲಿದೆ.

4ಜಿ ಇಂಟರ್‌ನೆಟ್ ಸೌಲಭ್ಯದೊಂದಿಗೆ ಹಲವಾರು ಆಟೋಮೋಟಿವ್ ಸಂಬಂಧಿತ ಗ್ರಾಹಕರ ಸೇವೆಗಳನ್ನು ಸುಲಭವಾಗಿ ಹೊಸ ಪ್ಲ್ಯಾಟ್‌ಫಾರ್ಮ್ ಮೂಲಕ ಪಡೆದುಕೊಳ್ಳಬಹುದಾಗಿದ್ದು, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಸೌಲಭ್ಯದೊಂದಿಗೆ ಮನರಂಜನೆ, ಕಾರಿನ ತಾಂತ್ರಿಕ ಅಂಶಗಳ ನ್ಯೂನತೆಗಳ ಪತ್ತೆ ಹಚ್ಚುವಲ್ಲಿ ಸಹಕಾರಿಯಾಗುವುದರ ಜೊತೆ ವಾಯ್ಸ್ ಅಸಿಸ್ಟ್ ಮೂಲಕ ಕಾರು ಚಾಲನೆಯನ್ನು ಸರಳಗೊಳಿಸುತ್ತದೆ.

ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಸೌಲಭ್ಯ ಹೊಂದಿರುವ MG Astor ಜಾಹೀರಾತು ಬಿಡುಗಡೆ

ಹಾಗೆಯೇ ಹೊಸ ಕಾರಿನಲ್ಲಿರುವ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್)ನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫಾರ್ವಡ್ ಕೂಲಿಷನ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಲೇನ್ ಕೀಪ್ ಅಸಿಸ್ಟ್, ಲೈನ್ ಡಿಫಾರ್ಚರ್ ಪ್ರಿವೆಷನ್, ಸ್ಪೀಡ್ ವಾರ್ನಿಂಗ್, ಇಂಟೆಲಿಜೆಂಟ್ ಮೋಡ್ ಹೊಂದಿರುವ ಸ್ಪಿಡ್ ಅಸಿಸ್ಟ್ ಸಿಸ್ಟಂ, ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್‌ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್‌ಗಳಲಿವೆ.

ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಸೌಲಭ್ಯ ಹೊಂದಿರುವ MG Astor ಜಾಹೀರಾತು ಬಿಡುಗಡೆ

ಆಕ್ಟಿವ್ ಸೇಫ್ಟಿ ಫೀಚರ್ಸ್‌ಗಳಲ್ಲಿ ಎಡಿಎಎಸ್ ತಂತ್ರಜ್ಞಾನವು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸೌಲಭ್ಯವಾಗಿಯೂ ಕಾರ್ಯ ನಿರ್ವಹಣೆ ಮಾಡಲಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಆರು ಏರ್‌ಬ್ಯಾಗ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್(ಇಎಸ್‌ಪಿ), ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಹಿಲ್ ಡಿಸೆಂಟ್ ಮತ್ತು 360 ಡಿಗ್ರಿ ವ್ಯೂ ಕ್ಯಾಮೆರಾ ಸೌಲಭ್ಯಗಳಿವೆ.

ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಸೌಲಭ್ಯ ಹೊಂದಿರುವ MG Astor ಜಾಹೀರಾತು ಬಿಡುಗಡೆ

ಹಲವಾರು ಸೆಗ್ಮೆಂಟ್ ಫಸ್ಟ್ ಫೀಚರ್ಸ್ ಜೋಡಣೆ ಹೊಂದಿರುವ ಆಸ್ಟರ್ ಕಾರಿನಲ್ಲಿ 10.1 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಪವರ್ ಅಡ್ಜೆಸ್ಟ್ ಸೀಟ್, ಡ್ರೈವ್ ಮತ್ತು ಸ್ಪೀರಿಂಗ್ ಮೋಡ್, ಪನೊರಮಿಕ್ ಸನ್‌ರೂಫ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಹಿಟೆಡ್ ರಿಯರ್ ವ್ಯೂ ಮಿರರ್ ಸೌಲಭ್ಯವಿವೆ.

ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಸೌಲಭ್ಯ ಹೊಂದಿರುವ MG Astor ಜಾಹೀರಾತು ಬಿಡುಗಡೆ

ಹೊಸ ಕಾರಿನ ಕ್ಯಾಬಿನ್ ಫೀಚರ್ಸ್ ಹೆಚ್ಚಿಸಲು ಫ್ರಂಟ್ ಅಂಡ್ ರಿಯಲ್ ಆರ್ಮ್ ರೆಸ್ಟ್, ಲೆದರ್ ಇಂಟಿರಿಯರ್, ರಿಯರ್ ಎಸಿ ವೆಂಟ್ಸ್, ಪಿಎಂ 2.5 ಕ್ಯಾಬಿನ್ ಫಿಲ್ಟರ್ ಜೊತೆಗೆ ಹೊಸ ಕಾರಿನ ಕನೆಕ್ಟೆಡ್ ಫೀಚರ್ಸ್‌ಗಳು ಕೂಡಾ ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿವೆ.

ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಸೌಲಭ್ಯ ಹೊಂದಿರುವ MG Astor ಜಾಹೀರಾತು ಬಿಡುಗಡೆ

ಹೊಸ ಕಾರು ಪ್ರತಿ ಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಹೆಚ್ಚಿನ ಮಟ್ಟದ ತಂತ್ರಜ್ಞಾನ ಪ್ರೇರಣೆಯನ್ನು ಪಡೆದುಕೊಂಡಿರುವ ಆಸ್ಟರ್ ಕಾರು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಸ್ಪೋರ್ಟಿ ವಿನ್ಯಾಸದೊಂದಿಗೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ಜೋಡಣೆ ಹೊಂದಿದೆ.

ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಸೌಲಭ್ಯ ಹೊಂದಿರುವ MG Astor ಜಾಹೀರಾತು ಬಿಡುಗಡೆ

ಹೊಸ ಕಾರು 4323 ಎಂಎಂ ಉದ್ದ, 1650 ಎಂಎಂ ಎತ್ತರ, 1809 ಎಂಎಂ ಅಗಲ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು ಬ್ಲೂಟೂಥ್ ಪ್ರೇರಿತ ಡಿಜಿಟಲ್ ಕೀ ಸೌಲಭ್ಯವನ್ನು ಜೋಡಣೆ ಮಾಡಿದೆ.

ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಸೌಲಭ್ಯ ಹೊಂದಿರುವ MG Astor ಜಾಹೀರಾತು ಬಿಡುಗಡೆ

ಆಸ್ಟರ್ ಹೊಸ ಕಾರಿನಲ್ಲಿ ಎಂಜಿ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದ್ದು, ಆರಂಭಿಕ ಮಾದರಿಗಳಲ್ಲಿ 1.3-ಲೀಟರ್ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಗಳಲ್ಲಿ 1.5-ಲೀಟರ್ ನ್ಯಾಚುರಲ್ ಆಸ್ಪೆರೆಡ್ ಪೆಟ್ರೋಲ್ ಎಂಜಿನ್ ನೀಡಲಾಗಿದೆ.

ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಸೌಲಭ್ಯ ಹೊಂದಿರುವ MG Astor ಜಾಹೀರಾತು ಬಿಡುಗಡೆ

1.5-ಲೀಟರ್ ಪೆಟ್ರೋಲ್ ಮಾದರಿಯು 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 138-ಬಿಎಚ್‌ಪಿ, 220-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.3-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 8-ಸ್ಪೀಡ್ ಸಿವಿಟಿ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 108-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಸೌಲಭ್ಯ ಹೊಂದಿರುವ MG Astor ಜಾಹೀರಾತು ಬಿಡುಗಡೆ

ಹೊಸ ಆಸ್ಟರ್‌ನಲ್ಲಿ ಅರ್ಬನ್, ನಾರ್ಮಲ್ ಮತ್ತು ಡೈನಾಮಿಕ್ ಡ್ರೈವ್ ಮೋಡ್ ನೀಡಲಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10 ಲಕ್ಷದಿಂದ ರೂ. 16 ಲಕ್ಷ ಇರಬಹುದೆಂದು ನೀರಿಕ್ಷಿಸಲಾಗಿದೆ.

Article Published On: Thursday, September 23, 2021, 11:14 [IST]
English summary
Mg astor suv automatic braking feature highlighted in new tvc details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+