ಎಡಿಎಎಸ್ ಲೆವಲ್ 2 ತಂತ್ರಜ್ಞಾನ ಹೊಂದಿರುವ MG Astor ವಿಶೇಷತೆಗಳೇನು?

ಬಹನೀರಿಕ್ಷಿತ ಕಾರು ಮಾದರಿಗಳಲ್ಲಿ ಎಂಜಿ ಮೋಟಾರ್(MG Motor) ನಿರ್ಮಾಣದ ಆಸ್ಟರ್(Astor) ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಹಲವಾರು ವಿಶೇಷತೆಗಳೊಂದಿಗೆ ಬಿಡುಗಡೆಗೆ ಸಿದ್ದವಾಗಿದ್ದು, ವಿನೂತನ ತಂತ್ರಜ್ಞಾನ ಸೌಲಭ್ಯಗಳನ್ನು ಹೊಂದಿರುವ ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲೇ ಹಲವಾರು ಹೊಸ ತಾಂತ್ರಿಕ ಸೌಲಭ್ಯಗ ಹೊಂದಿದೆ.

ಎಡಿಎಎಸ್ ಲೆವಲ್ 2 ತಂತ್ರಜ್ಞಾನ ಹೊಂದಿರುವ MG Astor ವಿಶೇಷತೆಗಳೇನು?

ಹೊಸ ಆಸ್ಟರ್ ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ಅಭಿವೃದ್ದಿ ಹೊಂದಿದ್ದು, ಆಟೋನಮಸ್ ಲೆವಲ್ 2 ತಂತ್ರಜ್ಞಾನ ಹೊಂದಿರುವ ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಎಡಿಎಎಸ್ ಲೆವಲ್ 2 ತಂತ್ರಜ್ಞಾನ ಹೊಂದಿರುವ MG Astor ವಿಶೇಷತೆಗಳೇನು?

ಆಸ್ಟರ್ ಕಾರಿನಲ್ಲಿರುವ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಸೌಲಭ್ಯದೊಂದಿಗೆ 27 ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಲೆವಲ್ 2 ಎಡಿಎಎಸ್ ಸೌಲಭ್ಯವು ಕಾರು ಚಾಲನೆ ವೇಳೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸುತ್ತದೆ.

ಎಡಿಎಎಸ್ ಲೆವಲ್ 2 ತಂತ್ರಜ್ಞಾನ ಹೊಂದಿರುವ MG Astor ವಿಶೇಷತೆಗಳೇನು?

ಎಡಿಎಎಸ್ ಸೌಲಭ್ಯದಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫಾರ್ವಡ್ ಕೂಲಿಷನ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಲೇನ್ ಕೀಪ್ ಅಸಿಸ್ಟ್, ಲೈನ್ ಡಿಫಾರ್ಚರ್ ಪ್ರಿವೆಷನ್, ಸ್ಪೀಡ್ ವಾರ್ನಿಂಗ್, ಇಂಟೆಲಿಜೆಂಟ್ ಮೋಡ್ ಹೊಂದಿರುವ ಸ್ಪಿಡ್ ಅಸಿಸ್ಟ್ ಸಿಸ್ಟಂ, ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಲರ್ಟ್, ಕ್ರಾಸ್ ಟ್ರಾಫಿಕ್ ಅಲರ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್‌ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್‌ ನೀಡಲಾಗಿದೆ.

ಎಡಿಎಎಸ್ ಲೆವಲ್ 2 ತಂತ್ರಜ್ಞಾನ ಹೊಂದಿರುವ MG Astor ವಿಶೇಷತೆಗಳೇನು?

ಹೊಸ ಕಾರಿನಲ್ಲಿ ಎಡಿಎಎಸ್ ಸೌಲಭ್ಯವು ಆಕ್ಟಿವ್ ಸೇಫ್ಟಿ ಫೀಚರ್ಸ್ ಆಗಿರುವ ಹಿನ್ನಲೆಯಲ್ಲಿ ಇದು ಚಾಲಕನ ಚಾಲನಾ ವೈಖರಿಯನ್ನು ಆಧರಿಸಿ ಸುರಕ್ಷಿತ ಚಾಲನೆಯನ್ನು ಖಚಿತಪಡಿಸಲಿದ್ದು, ಎಡಿಎಎಸ್ ಜೊತೆಗೆ ಆರು ಏರ್‌ಬ್ಯಾಗ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್(ಇಎಸ್‌ಪಿ), ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಹಿಲ್ ಡಿಸೆಂಟ್ ಮತ್ತು 360 ಡಿಗ್ರಿ ವ್ಯೂ ಕ್ಯಾಮೆರಾ ಸೌಲಭ್ಯಗಳಿವೆ.

ಎಡಿಎಎಸ್ ಲೆವಲ್ 2 ತಂತ್ರಜ್ಞಾನ ಹೊಂದಿರುವ MG Astor ವಿಶೇಷತೆಗಳೇನು?

ಸೆಗ್ಮೆಂಟ್ ಫಸ್ಟ್ ಫೀಚರ್ಸ್ ಜೋಡಣೆ ಹೊಂದಿರುವ ಆಸ್ಟರ್ ಕಾರಿನಲ್ಲಿ 10.1 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಪವರ್ ಅಡ್ಜೆಸ್ಟ್ ಸೀಟ್, ಡ್ರೈವ್ ಮತ್ತು ಸ್ಪೀರಿಂಗ್ ಮೋಡ್, ಪನೊರಮಿಕ್ ಸನ್‌ರೂಫ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಹಿಟೆಡ್ ರಿಯರ್ ವ್ಯೂ ಮಿರರ್ ಸೌಲಭ್ಯವಿವೆ.

ಎಡಿಎಎಸ್ ಲೆವಲ್ 2 ತಂತ್ರಜ್ಞಾನ ಹೊಂದಿರುವ MG Astor ವಿಶೇಷತೆಗಳೇನು?

ಹೊಸ ಕಾರಿನ ಕ್ಯಾಬಿನ್ ಫೀಚರ್ಸ್ ಹೆಚ್ಚಿಸಲು ಫ್ರಂಟ್ ಅಂಡ್ ರಿಯಲ್ ಆರ್ಮ್ ರೆಸ್ಟ್, ಲೆದರ್ ಇಂಟಿರಿಯರ್, ರಿಯರ್ ಎಸಿ ವೆಂಟ್ಸ್, ಪಿಎಂ 2.5 ಕ್ಯಾಬಿನ್ ಫಿಲ್ಟರ್ ಜೊತೆಗೆ ಹೊಸ ಕಾರಿನ ಕನೆಕ್ಟೆಡ್ ಫೀಚರ್ಸ್‌ಗಳು ಕೂಡಾ ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿವೆ.

ಎಡಿಎಎಸ್ ಲೆವಲ್ 2 ತಂತ್ರಜ್ಞಾನ ಹೊಂದಿರುವ MG Astor ವಿಶೇಷತೆಗಳೇನು?

ವ್ಯಯಕ್ತಿಕರಣಗೊಳಿಸಿದ ಮೊದಲ ಕೃತಕ ಬುದ್ಧಿಮತ್ತೆ ಹೊಂದಿರುವ ಭಾರತದ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಆಸ್ಟರ್ ಕಾರಿನಲ್ಲಿ ರಿಲಯನ್ಸ್ ಜಿಯೋದಿಂದ ಎರವಲು ಪಡೆಯಲಾದ ರಿಯಲ್-ಟೈಮ್ ಇನ್ಫೋಟೈನ್‌ಮೆಂಟ್ ಮತ್ತು ಟೆಲಿಮ್ಯಾಟಿಕ್ಸ್‌ಗಾಗಿ ಇ-ಸಿಮ್, ಐಒಟಿ ಟೆಕ್ ಒಳಗೊಂಡಿದೆ.

ಎಡಿಎಎಸ್ ಲೆವಲ್ 2 ತಂತ್ರಜ್ಞಾನ ಹೊಂದಿರುವ MG Astor ವಿಶೇಷತೆಗಳೇನು?

4ಜಿ ಇಂಟರ್‌ನೆಟ್ ಸೌಲಭ್ಯದೊಂದಿಗೆ ಹಲವಾರು ಆಟೋಮೋಟಿವ್ ಸಂಬಂಧಿತ ಗ್ರಾಹಕರ ಸೇವೆಗಳನ್ನು ಸುಲಭವಾಗಿ ಹೊಸ ಪ್ಲ್ಯಾಟ್‌ಫಾರ್ಮ್ ಮೂಲಕ ಪಡೆದುಕೊಳ್ಳಬಹುದಾಗಿದ್ದು, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಸೌಲಭ್ಯದೊಂದಿಗೆ ಮನರಂಜನೆಯ ಜೊತೆಗೆ ಕಾರಿನ ತಾಂತ್ರಿಕ ಅಂಶಗಳ ನ್ಯೂನತೆಗಳ ಪತ್ತೆ ಹಚ್ಚುವಲ್ಲಿ ಸಹಕಾರಿಯಾಗುವುದರ ಜೊತೆ ವಾಯ್ಸ್ ಅಸಿಸ್ಟ್ ಮೂಲಕ ಕಾರು ಚಾಲನೆಯನ್ನು ಸರಳಗೊಳಿಸುತ್ತದೆ.

ಎಡಿಎಎಸ್ ಲೆವಲ್ 2 ತಂತ್ರಜ್ಞಾನ ಹೊಂದಿರುವ MG Astor ವಿಶೇಷತೆಗಳೇನು?

ಈ ಮೂಲಕ ಹೊಸ ಕಾರು ಪ್ರತಿ ಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚು ತಾಂತ್ರಿಕ ಅಂಶಗಳೊಂದಿಗೆ ಆಕರ್ಷಕ ಬೆಲೆಯಲ್ಲಿ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಆಸ್ಟರ್ ಹೊಸ ಕಾರಿನಲ್ಲಿ ಎಂಜಿ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಎಡಿಎಎಸ್ ಲೆವಲ್ 2 ತಂತ್ರಜ್ಞಾನ ಹೊಂದಿರುವ MG Astor ವಿಶೇಷತೆಗಳೇನು?

ಆಸ್ಟರ್ ಕಾರಿನ ಆರಂಭಿಕ ಮಾದರಿಗಳಲ್ಲಿ 1.3-ಲೀಟರ್ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಗಳಲ್ಲಿ 1.5-ಲೀಟರ್ ನ್ಯಾಚುರಲ್ ಆಸ್ಪೆರೆಡ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, 1.5-ಲೀಟರ್ ಪೆಟ್ರೋಲ್ ಮಾದರಿಯು 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ 1.3-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 8-ಸ್ಪೀಡ್ ಸಿವಿಟಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಎಡಿಎಎಸ್ ಲೆವಲ್ 2 ತಂತ್ರಜ್ಞಾನ ಹೊಂದಿರುವ MG Astor ವಿಶೇಷತೆಗಳೇನು?

1.5-ಲೀಟರ್ ಮಾದರಿಯು 138-ಬಿಎಚ್‌ಪಿ, 220-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.3-ಲೀಟರ್ ಪೆಟ್ರೋಲ್ ಮಾದರಿಯು 108-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಎಡಿಎಎಸ್ ಲೆವಲ್ 2 ತಂತ್ರಜ್ಞಾನ ಹೊಂದಿರುವ MG Astor ವಿಶೇಷತೆಗಳೇನು?

ಹೊಸ ಕಾರು 4323 ಎಂಎಂ ಉದ್ದ, 1650 ಎಂಎಂ ಎತ್ತರ, 1809 ಎಂಎಂ ಅಗಲ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು ಬ್ಲೂಟೂಥ್ ಪ್ರೇರಿತ ಡಿಜಿಟಲ್ ಕೀ ಸೌಲಭ್ಯವನ್ನು ಜೋಡಣೆ ಮಾಡಿದೆ.

ಎಡಿಎಎಸ್ ಲೆವಲ್ 2 ತಂತ್ರಜ್ಞಾನ ಹೊಂದಿರುವ MG Astor ವಿಶೇಷತೆಗಳೇನು?

ಹೊಸ ಆಸ್ಟರ್‌ನಲ್ಲಿ ಕಾರು ಚಾಲನೆಯನ್ನು ಸುಲಭಗೊಳಿಸಲು ಅರ್ಬನ್, ನಾರ್ಮಲ್ ಮತ್ತು ಡೈನಾಮಿಕ್ ಡ್ರೈವ್ ಮೋಡ್ ನೀಡಲಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10 ಲಕ್ಷದಿಂದ ರೂ. 16 ಲಕ್ಷ ಇರಬಹುದೆಂದು ನೀರಿಕ್ಷಿಸಲಾಗಿದೆ.

Article Published On: Monday, September 27, 2021, 12:01 [IST]
English summary
Mg astor suv autonomous level 2 features explained
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+