ಭಾರತದಲ್ಲಿ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ ತನ್ನ ಐದನೇ ಕಾರು ಮಾದರಿಯಾಗಿ ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯೊಂದನ್ನು ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಸೆಗ್ಮೆಂಟ್‌ನಲ್ಲಿ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ರಸ್ತೆಗಿಳಿಯಲು ಸಜ್ಜಾಗುತ್ತಿದೆ.

ಭಾರತದಲ್ಲಿ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯ ಮೂಲಕ ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿರುವ ಎಂಜಿ ಮೋಟಾರ್ ಕಂಪನಿಯು ಸದ್ಯ ಹೊಸ ಕಾರನ್ನು ವಿವಿಧ ವೆರಿಯೆಂಟ್‌ನೊಂದಿಗೆ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ಕೋವಿಡ್ ಪರಿಣಾಮ ಹೊಸ ಕಾರಿನ ಬಿಡುಗಡೆ ದಿನಾಂಕವನ್ನು ಮುಂದೂಡಿಕೆ ಮಾಡುತ್ತದೆ.

ಭಾರತದಲ್ಲಿ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಮಾಹಿತಿಗಳ ಪ್ರಕಾರ ಹೊಸ ಕಾರು ಮುಂಬರುವ ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದ್ದು, ಸ್ಟ್ಯಾಂಡರ್ಡ್ ಹೆಕ್ಟರ್ ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಕಾರು ಮಾರುತಿ ಎಸ್-ಕ್ರಾಸ್, ರೆನಾಲ್ಟ್ ಡಸ್ಟರ್, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಭಾರತದಲ್ಲಿ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

2020ರ ಫೆಬ್ರವರಿಯಲ್ಲಿ ನಡೆದಿದ್ದ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಜೆಡ್ಎಸ್ ಹೆಸರಿನಲ್ಲಿ ಅನಾವರಣಗೊಂಡಿದ್ದ ಎಂಜಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಇದೀಗ ಉತ್ಪಾದನಾ ಮಾದರಿಯೊಂದಿಗೆ ಜೆಡ್ಎಸ್ ಬದಲಾಗಿ ಆಸ್ಟರ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ.

ಭಾರತದಲ್ಲಿ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಎಂಜಿ ಕಂಪನಿಯು ಹೊಸ ಕಾರಿನ ಆಸ್ಟರ್ ಹೆಸರನ್ನು ಈಗಾಗಲೇ ಕೇಂದ್ರ ಸಾರಿಗೆ ಇಲಾಖೆಯಲ್ಲಿ ಟ್ರೇಡ್‌ಮಾರ್ಕ್ ಸಲ್ಲಿಸಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಭಿನ್ನವಾದ ತಾಂತ್ರಿಕ ಅಂಶಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದೆ.

ಭಾರತದಲ್ಲಿ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರಿನ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಸೌಲಭ್ಯವು ಕಾರಿನ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸುವ ನೀರಿಕ್ಷೆಯಿದ್ದು, ಹೊಸ ಎಡಿಎಎಸ್ ಸೌಲಭ್ಯ ಅಳವಡಿಕೆಯಿಂದಾಗಿ ಸುರಕ್ಷಿತ ಕಾರು ಚಾಲನೆಗೆ ಅನುಕೂಲಕರವಾಗಿದೆ.

ಭಾರತದಲ್ಲಿ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಕಾರು ಚಾಲನೆ ವೇಳೆ ರಸ್ತೆಗುಂಡಿಗಳನ್ನು ಸುಲಭವಾಗಿ ಪತ್ತೆಹಚ್ಚಲು ಎಡಿಎಎಸ್ ತಂತ್ರಜ್ಞಾನದಲ್ಲಿ ರಡಾರ್ ಬಳಕೆಯಾಗಲಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ಕಾರ್ಯ ನಿರ್ವಹಣೆ ಮಾಡುವ ಮೂಲಕ ರಸ್ತೆಗುಂಡಿಯಿಂದಾಗುವ ಅಪಾಯವನ್ನು ತಡೆಯಬಲ್ಲದು.

ಭಾರತದಲ್ಲಿ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಜೊತೆಗೆ ಚಾಲಕನಿಗೆ ಧ್ವನಿ ಸಂದೇಶ ಮೂಲಕ ಎಚ್ಚರಿಕೆ ನೀಡುವ ಎಡಿಎಎಸ್ ಸೌಲಭ್ಯವು ರಿವರ್ಸ್ ಸಂದರ್ಭದಲ್ಲಿ 3ಡಿ ಪನೊರಮಿಕ್ ವ್ಯೂ ಸೌಲಭ್ಯ ಒದಗಿಸಲಿದ್ದು, ಪ್ರಯಾಣಿಕರಿಗೆ ಸುರಕ್ಷತೆಯನ್ನು ಖಾತ್ರಿಪಡಿಸುತ್ತದೆ.

ಭಾರತದಲ್ಲಿ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಇದರೊಂದಿಗೆ ಹೊಸ ಕಾರಿನಲ್ಲಿ ಅತ್ಯುತ್ತಮ ಲೆದರ್ ವ್ಯಾರ್ಪ್ ಆಸನಗಳು, ಹಿಂಬದಿಯ ಪ್ರಯಾಣಿಕರಿಗೆ ಎಸಿ ವೆಂಟ್ಸ್, 10-ಇಂಚಿನ ಇನ್ಪೋಟೈನ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಪ್ಲ್ಯಾಟ್-ಬಾಟಮ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಹಿಂಬದಿಯ ಪ್ರಯಾಣಿಕರಿಗೆ ಅರಾಮದಾಯಕವಾದ ಆಸನ ಸೌಲಭ್ಯಗಳಿವೆ.

ಭಾರತದಲ್ಲಿ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಮಾದರಿಯಲ್ಲೇ ತುಸು ವಿಭಿನ್ನ ವಿನ್ಯಾಸವನ್ನು ಹೊಂದಿರುವ ಹೊಸ ಕಾರು ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದೆ ಎನ್ನಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಯೆಂತೆ ಸಾಮಾನ್ಯ ಪೆಟ್ರೋಲ್ ಮಾದರಿಯನ್ನು ಮತ್ತು ಪರ್ಫಾಮೆನ್ಸ್ ಬಯಸುವ ಗ್ರಾಹಕರು ಟರ್ಬೊ ಪೆಟ್ರೋಲ್ ಮಾದರಿಯನ್ನು ಖರೀದಿಸಬಹುದು.

ಭಾರತದಲ್ಲಿ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರಿನಲ್ಲಿ 1.5-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಗಾಗಿ 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಹೊಸ ಎಂಜಿನ್‌ನಲ್ಲಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರಬಹುದೆಂದು ಅಂದಾಜಿಸಲಾಗಿದೆ.

ಭಾರತದಲ್ಲಿ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಈ ಮೂಲಕ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಎಂಜಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 9.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14 ಲಕ್ಷ ಬೆಲೆ ಹೊಂದಬಹುದೆಂದು ಅಂದಾಜಿಸಲಾಗುತ್ತಿದೆ.

Article Published On: Monday, June 28, 2021, 8:45 [IST]
English summary
MG Astor SUV India Launch Timeline Revealed. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+