ಪ್ರತಿಸ್ಪರ್ಧಿ ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೊಂಡ MG Astor ಎಸ್‌ಯುವಿ

ಎಂಜಿ ಮೋಟಾರ್(MG Motor) ಕಂಪನಿಯು ತನ್ನ ಬಹುನೀರಿಕ್ಷಿತ ಆಸ್ಟರ್(Astor) ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.78 ಲಕ್ಷ ಬೆಲೆ ಹೊಂದಿದೆ.

ಪ್ರತಿಸ್ಪರ್ಧಿ ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೊಂಡ MG Astor ಎಸ್‌ಯುವಿ

ಹೊಸ ಕಾರು ಪ್ರತಿ ಸ್ಪರ್ಧಿ ಮಾದರಿಗಳಿಂತಲೂ ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳು ಮತ್ತು ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಪ್ರಮುಖ ಏಳು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ. ವಿವಿಧ ವೆರಿಯೆಂಟ್‌ಗಳಲ್ಲಿರುವ ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.9.78 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.78 ಲಕ್ಷ ಬೆಲೆ ಹೊಂದಿದೆ.

ಪ್ರತಿಸ್ಪರ್ಧಿ ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೊಂಡ MG Astor ಎಸ್‌ಯುವಿ

ಹೊಸ ಕಾರಿನಲ್ಲಿರುವ ಎಂಜಿ ಮೋಟಾರ್ ಕಂಪನಿಯು ಸ್ಟೈಲ್, ಸೂಪರ್, ಸ್ಮಾರ್ಟ್, ಶಾರ್ಪ್ ವೆರಿಯೆಂಟ್‌ಗಳೊಂದಿಗೆ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿದ್ದು, ಮ್ಯಾನುವಲ್, ಆಟೋಮ್ಯಾಟಿಕ್ ಮತ್ತು ಟರ್ಬೊ ಆವೃತ್ತಿಯನ್ನು ಹೊಂದಿದೆ.

ಸ್ಟೈಲ್ ಸೂಪರ್ ಸ್ಮಾರ್ಟ್ ಶಾರ್ಪ್
ವಿಟಿಐ-ಟೆಕ್ ಎಂಟಿ ರೂ. 9,78,000 ರೂ. 11,28,000 ರೂ. 12,98,000 ರೂ. 13,95,000
ವಿಟಿಐ ಟೆಕ್ ಸಿವಿಟಿ ರೂ. 12,68,000 ರೂ. 14,18,000 ರೂ. 14,98,000
220 ಟರ್ಬೊ ಎಟಿ ರೂ. 15,88,000 ರೂ. 16,78,000
ಪ್ರತಿಸ್ಪರ್ಧಿ ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೊಂಡ MG Astor ಎಸ್‌ಯುವಿ

ಹೊಸ ಕಾರಿನಲ್ಲಿರುವ 1.5-ಲೀಟರ್ ಪೆಟ್ರೋಲ್ ಮಾದರಿಯು 5 ಸ್ಪೀಡ್ ಮ್ಯಾನುವಲ್ ಅಥವಾ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 108-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.3-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಸಿವಿಟಿ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 138-ಬಿಎಚ್‌ಪಿ, 220-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಪ್ರತಿಸ್ಪರ್ಧಿ ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೊಂಡ MG Astor ಎಸ್‌ಯುವಿ

ಇನ್ನು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಹೆಚ್ಚಿನ ಮಟ್ಟದ ತಂತ್ರಜ್ಞಾನ ಪ್ರೇರಣೆಯನ್ನು ಪಡೆದುಕೊಂಡಿರುವ ಆಸ್ಟರ್ ಕಾರು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಸ್ಪೋರ್ಟಿ ವಿನ್ಯಾಸದೊಂದಿಗೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ಜೋಡಣೆ ಹೊಂದಿದೆ.

ಪ್ರತಿಸ್ಪರ್ಧಿ ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೊಂಡ MG Astor ಎಸ್‌ಯುವಿ

ಆಸ್ಟರ್ ಕಾರು ಆಕರ್ಷಕವಾದ ಗ್ರಿಲ್ ಜೊತೆ ಹ್ವಾಕ್ ಐ ಹೆಡ್‌ಲ್ಯಾಂಪ್ಸ್, ಕ್ರೊಮ್ ಸ್ಟಡ್ ಗ್ರಿಲ್, ಸ್ಪ್ಲಿಟ್ ಎಲ್ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ಡ್ಯುಯಲ್ ಎಕ್ಸಾಸ್ಟ್ ಟ್ರಿಪ್ಸ್, ರೂಫ್ ರೈಲ್ಸ್, ಆಲ್ ಅರೌಂಡ್ ಕ್ಲಾಡಿಂಗ್ ಹೊಂದಿರಲಿದೆ.

ಪ್ರತಿಸ್ಪರ್ಧಿ ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೊಂಡ MG Astor ಎಸ್‌ಯುವಿ

ಸೆಗ್ಮೆಂಟ್ ಫಸ್ಟ್ ಫೀಚರ್ಸ್ ಜೋಡಣೆ ಹೊಂದಿರುವ ಆಸ್ಟರ್ ಕಾರಿನಲ್ಲಿ 10.1 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಪವರ್ ಅಡ್ಜೆಸ್ಟ್ ಸೀಟ್, ಡ್ರೈವ್ ಮತ್ತು ಸ್ಪೀರಿಂಗ್ ಮೋಡ್, ಪನೊರಮಿಕ್ ಸನ್‌ರೂಫ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಹಿಟೆಡ್ ರಿಯರ್ ವ್ಯೂ ಮಿರರ್ ಸೌಲಭ್ಯವಿವೆ.

ಪ್ರತಿಸ್ಪರ್ಧಿ ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೊಂಡ MG Astor ಎಸ್‌ಯುವಿ

ಕ್ಯಾಬಿನ್ ಫೀಚರ್ಸ್ ಹೆಚ್ಚಿಸಲು ಫ್ರಂಟ್ ಅಂಡ್ ರಿಯಲ್ ಆರ್ಮ್ ರೆಸ್ಟ್, ಲೆದರ್ ಇಂಟಿರಿಯರ್, ರಿಯರ್ ಎಸಿ ವೆಂಟ್ಸ್, ಪಿಎಂ 2.5 ಕ್ಯಾಬಿನ್ ಫಿಲ್ಟರ್ ಜೊತೆಗೆ ಹೊಸ ಕಾರಿನ ಕನೆಕ್ಟೆಡ್ ಫೀಚರ್ಸ್‌ಗಳು ಕೂಡಾ ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿವೆ.

ಪ್ರತಿಸ್ಪರ್ಧಿ ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೊಂಡ MG Astor ಎಸ್‌ಯುವಿ

ಭಾರತದ ಮೊದಲ ವ್ಯಯಕ್ತಿಕರಣಗೊಳಿಸಿದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸೌಲಭ್ಯ ಹೊಂದಿರುವ ಆಸ್ಟರ್ ಕಾರು ರಿಲಯನ್ಸ್ ಜಿಯೋದಿಂದ ಎರವಲು ಪಡೆಯಲಾದ ರಿಯಲ್-ಟೈಮ್ ಇನ್ಫೋಟೈನ್‌ಮೆಂಟ್ ಮತ್ತು ಟೆಲಿಮ್ಯಾಟಿಕ್ಸ್‌ಗಾಗಿ ಇ-ಸಿಮ್, ಐಒಟಿ ಟೆಕ್ ಅನ್ನು ಒಳಗೊಂಡಿರುವ ಹೊಸ ಕಾರು ಗರಿಷ್ಠ ಸುರಕ್ಷತೆ ಖಚಿತಪಡಿಸಲಿದೆ.

ಪ್ರತಿಸ್ಪರ್ಧಿ ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೊಂಡ MG Astor ಎಸ್‌ಯುವಿ

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಸೌಲಭ್ಯದೊಂದಿಗೆ ಮನರಂಜನೆ, ಕಾರಿನ ತಾಂತ್ರಿಕ ಅಂಶಗಳ ನ್ಯೂನತೆಗಳ ಪತ್ತೆ ಹಚ್ಚುವಲ್ಲಿ ಸಹಕಾರಿಯಾಗುವುದರ ಜೊತೆ ವಾಯ್ಸ್ ಅಸಿಸ್ಟ್ ಮೂಲಕ ಕಾರು ಚಾಲನೆಯನ್ನು ಸರಳಗೊಳಿಸುತ್ತದೆ.

ಪ್ರತಿಸ್ಪರ್ಧಿ ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೊಂಡ MG Astor ಎಸ್‌ಯುವಿ

ಹೊಸ ಕಾರಿನಲ್ಲಿರುವ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್)ನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫಾರ್ವಡ್ ಕೂಲಿಷನ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಲೇನ್ ಕೀಪ್ ಅಸಿಸ್ಟ್, ಲೈನ್ ಡಿಫಾರ್ಚರ್ ಪ್ರಿವೆಷನ್, ಸ್ಪೀಡ್ ವಾರ್ನಿಂಗ್, ಇಂಟೆಲಿಜೆಂಟ್ ಮೋಡ್ ಹೊಂದಿರುವ ಸ್ಪಿಡ್ ಅಸಿಸ್ಟ್ ಸಿಸ್ಟಂ, ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್‌ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್‌ಗಳಲಿವೆ.

ಪ್ರತಿಸ್ಪರ್ಧಿ ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೊಂಡ MG Astor ಎಸ್‌ಯುವಿ

ಆಕ್ಟಿವ್ ಸೇಫ್ಟಿ ಫೀಚರ್ಸ್‌ಗಳಲ್ಲಿ ಎಡಿಎಎಸ್ ತಂತ್ರಜ್ಞಾನವು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸೌಲಭ್ಯವಾಗಿಯೂ ಕಾರ್ಯ ನಿರ್ವಹಣೆ ಮಾಡಲಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಆರು ಏರ್‌ಬ್ಯಾಗ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್(ಇಎಸ್‌ಪಿ), ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಹಿಲ್ ಡಿಸೆಂಟ್ ಮತ್ತು 360 ಡಿಗ್ರಿ ವ್ಯೂ ಕ್ಯಾಮೆರಾ ಸೌಲಭ್ಯಗಳಿವೆ.

ಪ್ರತಿಸ್ಪರ್ಧಿ ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೊಂಡ MG Astor ಎಸ್‌ಯುವಿ

ಹೊಸ ಕಾರು 4323 ಎಂಎಂ ಉದ್ದ, 1650 ಎಂಎಂ ಎತ್ತರ, 1809 ಎಂಎಂ ಅಗಲ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು ಬ್ಲೂಟೂಥ್ ಪ್ರೇರಿತ ಡಿಜಿಟಲ್ ಕೀ ಸೌಲಭ್ಯವನ್ನು ಜೋಡಣೆ ಮಾಡಿದೆ.

ಪ್ರತಿಸ್ಪರ್ಧಿ ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೊಂಡ MG Astor ಎಸ್‌ಯುವಿ

ಕಾರು ಚಾಲನೆಗೆ ಪೂರಕವಾಗಿ ಹೊಸ ಆಸ್ಟರ್‌ನಲ್ಲಿ ಅರ್ಬನ್, ನಾರ್ಮಲ್ ಮತ್ತು ಡೈನಾಮಿಕ್ ಡ್ರೈವ್ ಮೋಡ್ ನೀಡಲಾಗಿದ್ದು, ಹೊಸ ಕಾರಿನ ವಿತರಣೆಯು ಬುಕ್ಕಿಂಗ್ ಆಧರಿಸಿ ದಸರಾ ಸಂಭ್ರಮದಲ್ಲೇ ವಿತರಣೆ ಮಾಡಲು ನಿರ್ಧರಿಸಿದೆ.

Article Published On: Monday, October 11, 2021, 13:28 [IST]
English summary
Mg astor suv launched in india price features engine details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+