ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಎಂಜಿ ಮೋಟಾರ್ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಐದನೇ ಕಾರು ಮಾದರಿಯಾಗಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಸೆಗ್ಮೆಂಟ್‌ನಲ್ಲಿ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗುತ್ತಿದೆ.

ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯ ಮೂಲಕ ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿರುವ ಎಂಜಿ ಮೋಟಾರ್ ಕಂಪನಿಯು ಸದ್ಯ ಹೊಸ ಕಾರನ್ನು ದೇಶದ ವಿವಿಧ ನಗರಗಳಲ್ಲಿ ವಿವಿಧ ವೆರಿಯೆಂಟ್‌ನೊಂದಿಗೆ ಆಸ್ಟರ್ ಕಾರು ಮಾದರಿಯ ಪರೀಕ್ಷೆ ಕೈಗೊಂಡಿದ್ದು, ಸ್ಟ್ಯಾಂಡರ್ಡ್ ಹೆಕ್ಟರ್ ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಕಾರು ಮಾರುತಿ ಎಸ್-ಕ್ರಾಸ್, ರೆನಾಲ್ಟ್ ಡಸ್ಟರ್, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಕಳೆದ ವರ್ಷ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಜೆಡ್ಎಸ್ ಹೆಸರಿನೊಂದಿಗೆ ಅನಾವರಣಗೊಂಡಿದ್ದ ಎಂಜಿ ಹೊಸ ಕಾರು ಮಾದರಿಯು ಈ ವರ್ಷದ ಮೂರನೇ ತ್ರೈಮಾಸಿಕ ವೇಳೆಗೆ ಬಿಡುಗಡೆಗೊಳ್ಳುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರು ದೇಶಿಯ ಮಾರುಕಟ್ಟೆಯಲ್ಲಿ ಜೆಡ್ಎಸ್ ಬದಲಾಗಿ ಆಸ್ಟರ್ ಹೆಸರಿನಲ್ಲಿ ಬಿಡುಗಡೆಯಾಗಲಿದೆ.

ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಭಿನ್ನವಾದ ತಾಂತ್ರಿಕ ಅಂಶಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದ್ದು, ಅತ್ಯುತ್ತಮ ಫೀಚರ್ಸ್ ಹೊಂದಿರುವ ಡಿಜಿಟಲ್ ಇನ್‌ಸ್ಟ್ರುಮೆಂಟ್ ಹೊಂದಿರುವ ಹೊಸ ಕಾರು ಇತ್ತೀಚೆಗೆ ರೋಡ್ ಟೆಸ್ಟಿಂಗ್ ವೇಳೆ ಗಮನಸೆಳೆದಿದೆ.

ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಸ್ಪೀಡೋ ಮೀಟರ್, ಟ್ಯಾಚೊ ಮೀಟರ್ ಮತ್ತು ಮಲ್ಟಿ ಇನ್‌ರ್ಫಾಮೆಷನ್ ಡಿಸ್ಲೈ ಹೊಂದಿರುವ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಹೊಸ ಕಾರಿನ ಪ್ರಮುಖ ಆಕರ್ಷಣೆಯಾಗಿದ್ದು, ಮಲ್ಟಿ ಇನ್‌ರ್ಫಾಮೆಷನ್ ಡಿಸ್ಲೈ ಮೂಲಕ ಇಂಧನ ಲಭ್ಯತೆ ಸೇರಿದಂತೆ ಹಲವು ಮಾಹಿತಿಗಳನ್ನು ಒದಗಿಸುತ್ತದೆ. ಇದರೊಂದಿಗೆ ಹೊಸ ಕಾರಿನಲ್ಲಿ ಅತ್ಯುತ್ತಮ ಲೆದರ್ ವ್ಯಾರ್ಪ್ ಆಸನಗಳು, ಹಿಂಬದಿಯ ಪ್ರಯಾಣಿಕರಿಗೆ ಎಸಿ ವೆಂಟ್ಸ್, 10-ಇಂಚಿನ ಇನ್ಪೋಟೈನ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸೌಲಭ್ಯಗಳಿವೆ.

ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಜೊತೆಗೆ ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಪ್ಲ್ಯಾಟ್-ಬಾಟಮ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಹಿಂಬದಿಯ ಪ್ರಯಾಣಿಕರಿಗೆ ಅರಾಮದಾಯಕವಾದ ಆಸನ ಸೌಲಭ್ಯಗಳಿದ್ದು, ಹೊಸ ಕಾರಿನಲ್ಲಿ ಜೋಡಣೆ ಮಾಡಲಾಗುತ್ತಿರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಸೌಲಭ್ಯವು ಕಾರಿನ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸುವ ನೀರಿಕ್ಷೆಯಿದೆ.

ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಎಡಿಎಎಸ್ ಸೌಲಭ್ಯ ಅಳವಡಿಕೆಯಿಂದಾಗಿ ಕಾರು ಚಾಲನೆ ವೇಳೆ ರಸ್ತೆಗುಂಡಿಗಳನ್ನು ಸುಲಭವಾಗಿ ಪತ್ತೆಹಚ್ಚಲು ರಡಾರ್ ಬಳಕೆಯಾಗಲಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ಕಾರ್ಯ ನಿರ್ವಹಣೆ ಮಾಡುವ ಮೂಲಕ ರಸ್ತೆಗುಂಡಿಯಿಂದಾಗುವ ಅಪಾಯವನ್ನು ತಡೆಯಬಲ್ಲದು.

MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಮಾದರಿಯಲ್ಲೇ ಜೆಡ್ಎಸ್ ಪೆಟ್ರೋಲ್ ಮಾದರಿಯು ತುಸು ವಿಭಿನ್ನ ವಿನ್ಯಾಸದೊಂದಿಗೆ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದೆ ಎನ್ನಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಯೆಂತೆ ಸಾಮಾನ್ಯ ಪೆಟ್ರೋಲ್ ಮಾದರಿಯನ್ನು ಮತ್ತು ಪರ್ಫಾಮೆನ್ಸ್ ಬಯಸುವ ಗ್ರಾಹಕರು ಟರ್ಬೊ ಪೆಟ್ರೋಲ್ ಮಾದರಿಯನ್ನು ಖರೀದಿಸಬಹುದು.

ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರಿನಲ್ಲಿ 1.5-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಗಾಗಿ 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಹೊಸ ಎಂಜಿನ್‌ನಲ್ಲಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರಬಹುದೆಂದು ಅಂದಾಜಿಸಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಈ ಮೂಲಕ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಎಂಜಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 9.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14 ಲಕ್ಷ ಬೆಲೆ ಹೊಂದಬಹುದೆಂದು ಅಂದಾಜಿಸಲಾಗುತ್ತಿದೆ.

Article Published On: Monday, May 10, 2021, 21:00 [IST]
English summary
MG Astor SUV New Details Revealed Expected Launch Soon. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+