ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಹೊಂದಿರುವ ದೇಶದ ಮೊದಲ ಕಾರು MG Astor ವಿಡಿಯೋ ರಿವ್ಯೂ

ಭಾರತದಲ್ಲಿ ಎಂಜಿ ಮೋಟಾರ್(MG Motor) ಕಂಪನಿಯು ತನ್ನ ಐದನೇ ಕಾರು ಮಾದರಿಯಾಗಿ ಹೊಚ್ಚ ಹೊಸ ಆಸ್ಟರ್(Astor) ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಹೊಸ ಆಸ್ಟರ್ ಕಾರು ಮಾದರಿಯು ಅತ್ಯುತ್ತಮ ವಿನ್ಯಾಸ, ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳು ಮತ್ತು ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಹೊಸ ಕಾರಿನ ಕಾರ್ಯಕ್ಷಮತೆ ಕುರಿತಂತೆ ಎಂಜಿ ಮೋಟಾರ್ ಕಂಪನಿಯು ಫಸ್ಟ್ ಡ್ರೈವ್ ಚಾಲನೆಯನ್ನು ಹಮ್ಮಿಕೊಂಡಿತ್ತು. ಡ್ರೈವ್‌ಸ್ಪಾರ್ಕ್ ತಂಡಕ್ಕೂ ಆಹ್ವಾನ ನೀಡಿದ್ದ ಕಂಪನಿಯು ದೇಶದ ಮೊದಲ ಕೃತಕ ಬುದ್ಧಿಮತ್ತೆ ಹೊಂದಿರುವ ಕಾರು ಮಾದರಿಯ ಚಾಲನೆಗೆ ಅವಕಾಶ ನೀಡಿತ್ತು.

ವ್ಯಯಕ್ತಿಕರಣಗೊಳಿಸಿದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸೌಲಭ್ಯ ಹೊಂದಿರುವ ಹೊಸ ಆಸ್ಟರ್ ಕಾರು ರಿಲಯನ್ಸ್ ಜಿಯೋದಿಂದ ಎರವಲು ಪಡೆಯಲಾದ ರಿಯಲ್-ಟೈಮ್ ಇನ್ಫೋಟೈನ್‌ಮೆಂಟ್ ಮತ್ತು ಟೆಲಿಮ್ಯಾಟಿಕ್ಸ್‌ಗಾಗಿ ಇ-ಸಿಮ್, ಐಒಟಿ ಟೆಕ್ ಹೊಂದಿದ್ದು, ಕಾರು ಚಾಲನೆಗೆ ಹೊಸ ಅನುಭವ ನೀಡುತ್ತದೆ.

ಹಾಗೆಯೇ ಹೊಸ ಕಾರಿನಲ್ಲಿರುವ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್)ನಲ್ಲಿ ಸೌಲಭ್ಯವು ಸಹ ಹಲವಾರು ಆಕ್ಟಿವ್ ಸೇಫ್ಟಿ ಫೀಚರ್ಸ್ ಮೂಲಕ ಕಾರು ಪ್ರಯಾಣವನ್ನು ಮತ್ತಷ್ಟು ಸುರಕ್ಷಿತಗೊಳಿಸಲಿದ್ದು, ಅಟೊನೊಮಸ್ ಬ್ರೇಕಿಂಗ್, ಆರು ಏರ್‌ಬ್ಯಾಗ್, 360 ಡಿಗ್ರಿ ವ್ಯೂ ಕ್ಯಾಮೆರಾ ಸೇರಿದಂತೆ ಹಲವಾರು ಸುರಕ್ಷಾ ಸೌಲಭ್ಯಗಳಿವೆ.

MG Astor ವಿಡಿಯೋ ರಿವ್ಯೂ

ಹೊಸ ಕಾರಿನಲ್ಲಿ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ 1.5-ಲೀಟರ್ ಪೆಟ್ರೋಲ್ ಮತ್ತು 1.3-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯನ್ನು ಜೋಡಿಸಲಾಗಿದ್ದು, ಕಾರು ಚಾಲನೆಯನ್ನು ಸುಲಭವಾಗಿಸಲು ಅರ್ಬನ್, ನಾರ್ಮಲ್ ಮತ್ತು ಡೈನಾಮಿಕ್ ಡ್ರೈವ್ ಮೋಡ್ ನೀಡಲಾಗಿದೆ. ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಬೆಲೆಯಲ್ಲೂ ಗಮನಸೆಳೆಯಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.50 ಲಕ್ಷದಿಂದ ರೂ. 18 ಲಕ್ಷ ಇರಬಹುದೆಂದು ನೀರಿಕ್ಷಿಸಲಾಗಿದೆ.

Most Read Articles

Kannada
English summary
Mg astor suv review video ai assistance adas and level 2 autonomous more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X