ವಿನೂತನ ತಂತ್ರಜ್ಞಾನ ಪ್ರೇರಿತ MG Astor ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಹೊಸ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಎಂಜಿ ಮೋಟಾರ್(MG Motor) ಕಂಪನಿಯು ತನ್ನ ಹೊಚ್ಚ ಹೊಸ ಆಸ್ಟರ್(Astor) ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳಿಸಿದೆ.

ವಿನೂತನ ತಂತ್ರಜ್ಞಾನ ಪ್ರೇರಿತ MG Astor ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಕಳೆದ ವರ್ಷ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಜೆಡ್ಎಸ್ ಹೆಸರಿನಲ್ಲಿ ಹೊಸ ಕಾರನ್ನು ಅನಾವರಣಗೊಳಿಸಿದ್ದ ಎಂಜಿ ಮೋಟಾರ್ ಕಂಪನಿಯು ಇದೀಗ ಅದೇ ಕಾರನ್ನು ಆಸ್ಟರ್ ಹೆಸರಿನೊಂದಿಗೆ ಬಿಡುಗಡೆ ಮಾಡುತ್ತಿದ್ದು, ಕಾನ್ಸೆಪ್ಟ್ ಮಾದರಿಗಿಂತಲೂ ಅತ್ಯುತ್ತಮ ವಿನ್ಯಾಸ ಮತ್ತು ತಂತ್ರಜ್ಞಾನ ಪ್ರೇರಣೆಯೊಂದಿಗೆ ಹೊಸ ಕಾರನ್ನು ಅಭಿವೃದ್ದಿಗೊಳಿಸಿದೆ.

ವಿನೂತನ ತಂತ್ರಜ್ಞಾನ ಪ್ರೇರಿತ MG Astor ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಹೊಸ ಕಾರು ಸದ್ಯ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಹ್ಯುಂಡೈ ಕ್ರೆಟಾ(Hyundai Creta) ಕಿಯಾ ಸೆಲ್ಟೊಸ್(Kia Seltos) ಸ್ಕೋಡಾ ಕುಶಾಕ್(Skoda Kushaq) ಕಾರುಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದ್ದು, ಪ್ರತಿ ಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಹೆಚ್ಚಿನ ಮಟ್ಟದ ತಂತ್ರಜ್ಞಾನ ಪ್ರೇರಣೆಯನ್ನು ಪಡೆದುಕೊಂಡಿರಲಿದೆ.

ವಿನೂತನ ತಂತ್ರಜ್ಞಾನ ಪ್ರೇರಿತ MG Astor ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಆಸ್ಟರ್ ಕಾರಿನಲ್ಲಿರುವ ಹೊಸ ಬಗೆಯ ತಾಂತ್ರಿಕ ಮಾಹಿತಿಗಳು ಕಂಪ್ಯಾಕ್ಟ್ ಎಸ್‌ಯುವಿ ಪ್ರಿಯರನ್ನು ಸೆಳೆಯಲಿದ್ದು, ಸ್ಪೋರ್ಟಿ ವಿನ್ಯಾಸದೊಂದಿಗೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಪಡೆದುಕೊಳ್ಳಲಿದೆ.

ವಿನೂತನ ತಂತ್ರಜ್ಞಾನ ಪ್ರೇರಿತ MG Astor ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಹೊಸ ಕಾರಿನ ಆಕರ್ಷಕವಾದ ಗ್ರಿಲ್ ಕಾರಿನ ಅಂದಕ್ಕೆ ಮತ್ತಷ್ಟು ಮೆರಗು ನೀಡಲಿದ್ದು, ಹ್ವಾಕ್ ಐ ಹೆಡ್‌ಲ್ಯಾಂಪ್ಸ್, ಕ್ರೊಮ್ ಸ್ಟಡ್ ಗ್ರಿಲ್, ಸ್ಪ್ಲಿಟ್ ಎಲ್ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ಡ್ಯುಯಲ್ ಎಕ್ಸಾಸ್ಟ್ ಟ್ರಿಪ್ಸ್, ರೂಫ್ ರೈಲ್ಸ್, ಆಲ್ ಅರೌಂಡ್ ಕ್ಲಾಡಿಂಗ್ ಹೊಂದಿರಲಿದೆ.

ವಿನೂತನ ತಂತ್ರಜ್ಞಾನ ಪ್ರೇರಿತ MG Astor ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಆಸ್ಟರ್ ಕಾರಿನಲ್ಲಿ ಕಂಪನಿಯು ಹಲವು ಸೆಗ್ಮೆಂಟ್ ಫಸ್ಟ್ ಫೀಚರ್ಸ್ ಜೋಡಣೆ ಮಾಡಿದ್ದು, 10.1 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಪವರ್ ಅಡ್ಜೆಸ್ಟ್ ಸೀಟ್, ಡ್ರೈವ್ ಮತ್ತು ಸ್ಪೀರಿಂಗ್ ಮೋಡ್, ಪನೊರಮಿಕ್ ಸನ್‌ರೂಫ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಹಿಟೆಡ್ ರಿಯರ್ ವ್ಯೂ ಮಿರರ್ ಸೌಲಭ್ಯವಿವೆ.

ವಿನೂತನ ತಂತ್ರಜ್ಞಾನ ಪ್ರೇರಿತ MG Astor ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಜೊತೆಗೆ ಹೊಸ ಕಾರಿನ ಕ್ಯಾಬಿನ್ ಫೀಚರ್ಸ್ ಹೆಚ್ಚಿಸಲು ಫ್ರಂಟ್ ಅಂಡ್ ರಿಯಲ್ ಆರ್ಮ್ ರೆಸ್ಟ್, ಲೆದರ್ ಇಂಟಿರಿಯರ್, ರಿಯರ್ ಎಸಿ ವೆಂಟ್ಸ್, ಪಿಎಂ 2.5 ಕ್ಯಾಬಿನ್ ಫಿಲ್ಟರ್ ಜೊತೆಗೆ ಹೊಸ ಕಾರಿನ ಕನೆಕ್ಟೆಡ್ ಫೀಚರ್ಸ್‌ಗಳು ಕೂಡಾ ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿವೆ.

ವಿನೂತನ ತಂತ್ರಜ್ಞಾನ ಪ್ರೇರಿತ MG Astor ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಹೊಸ ಕಾರಿನಲ್ಲಿ ಕಂಪನಿಯು ವ್ಯಯಕ್ತಿಕರಣಗೊಳಿಸಿದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸೌಲಭ್ಯವನ್ನು ಅಳವಡಿಸಿದ್ದು, ಆಸ್ಟರ್ ಕಾರು ಕೃತಕ ಬುದ್ಧಿಮತ್ತೆ ಹೊಂದಿರುವ ಭಾರತದ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ವಿನೂತನ ತಂತ್ರಜ್ಞಾನ ಪ್ರೇರಿತ MG Astor ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ರಿಲಯನ್ಸ್ ಜಿಯೋದಿಂದ ಎರವಲು ಪಡೆಯಲಾದ ರಿಯಲ್-ಟೈಮ್ ಇನ್ಫೋಟೈನ್‌ಮೆಂಟ್ ಮತ್ತು ಟೆಲಿಮ್ಯಾಟಿಕ್ಸ್‌ಗಾಗಿ ಇ-ಸಿಮ್, ಐಒಟಿ ಟೆಕ್ ಅನ್ನು ಒಳಗೊಂಡಿರುವ ಹೊಸ ಕಾರು ಗರಿಷ್ಠ ಸುರಕ್ಷತೆ ಖಚಿತಪಡಿಸಲಿದ್ದು, 4ಜಿ ಇಂಟರ್‌ನೆಟ್ ಸೌಲಭ್ಯದೊಂದಿಗೆ ಹಲವಾರು ಆಟೋಮೋಟಿವ್ ಸಂಬಂಧಿತ ಗ್ರಾಹಕರ ಸೇವೆಗಳನ್ನು ಸುಲಭವಾಗಿ ಹೊಸ ಪ್ಲ್ಯಾಟ್‌ಫಾರ್ಮ್ ಮೂಲಕ ಪಡೆದುಕೊಳ್ಳಬಹುದಾಗಿದೆ.

ವಿನೂತನ ತಂತ್ರಜ್ಞಾನ ಪ್ರೇರಿತ MG Astor ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಸೌಲಭ್ಯದೊಂದಿಗೆ ಮನರಂಜನೆ, ಕಾರಿನ ತಾಂತ್ರಿಕ ಅಂಶಗಳ ನ್ಯೂನತೆಗಳ ಪತ್ತೆ ಹಚ್ಚುವಲ್ಲಿ ಸಹಕಾರಿಯಾಗುವುದರ ಜೊತೆ ವಾಯ್ಸ್ ಅಸಿಸ್ಟ್ ಮೂಲಕ ಕಾರು ಚಾಲನೆಯನ್ನು ಸರಳಗೊಳಿಸುತ್ತದೆ.

ವಿನೂತನ ತಂತ್ರಜ್ಞಾನ ಪ್ರೇರಿತ MG Astor ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಹೊಸ ಕಾರಿನಲ್ಲಿರುವ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್)ನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫಾರ್ವಡ್ ಕೂಲಿಷನ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಲೇನ್ ಕೀಪ್ ಅಸಿಸ್ಟ್, ಲೈನ್ ಡಿಫಾರ್ಚರ್ ಪ್ರಿವೆಷನ್, ಸ್ಪೀಡ್ ವಾರ್ನಿಂಗ್, ಇಂಟೆಲಿಜೆಂಟ್ ಮೋಡ್ ಹೊಂದಿರುವ ಸ್ಪಿಡ್ ಅಸಿಸ್ಟ್ ಸಿಸ್ಟಂ, ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್‌ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್‌ಗಳಲಿವೆ.

ವಿನೂತನ ತಂತ್ರಜ್ಞಾನ ಪ್ರೇರಿತ MG Astor ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಆಕ್ಟಿವ್ ಸೇಫ್ಟಿ ಫೀಚರ್ಸ್‌ಗಳಲ್ಲಿ ಎಡಿಎಎಸ್ ತಂತ್ರಜ್ಞಾನವು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸೌಲಭ್ಯವಾಗಿಯೂ ಕಾರ್ಯ ನಿರ್ವಹಣೆ ಮಾಡಲಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಆರು ಏರ್‌ಬ್ಯಾಗ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್(ಇಎಸ್‌ಪಿ), ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಹಿಲ್ ಡಿಸೆಂಟ್ ಮತ್ತು 360 ಡಿಗ್ರಿ ವ್ಯೂ ಕ್ಯಾಮೆರಾ ಸೌಲಭ್ಯಗಳಿವೆ.

ವಿನೂತನ ತಂತ್ರಜ್ಞಾನ ಪ್ರೇರಿತ MG Astor ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಹೊಸ ಕಾರು 4323 ಎಂಎಂ ಉದ್ದ, 1650 ಎಂಎಂ ಎತ್ತರ, 1809 ಎಂಎಂ ಅಗಲ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು ಬ್ಲೂಟೂಥ್ ಪ್ರೇರಿತ ಡಿಜಿಟಲ್ ಕೀ ಸೌಲಭ್ಯವನ್ನು ಜೋಡಣೆ ಮಾಡಿದೆ.

ವಿನೂತನ ತಂತ್ರಜ್ಞಾನ ಪ್ರೇರಿತ MG Astor ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಎಂಜಿನ್ ಮತ್ತು ಪರ್ಫಾಮೆನ್ಸ್

ಆಸ್ಟರ್ ಹೊಸ ಕಾರಿನಲ್ಲಿ ಎಂಜಿ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದ್ದು, ಆರಂಭಿಕ ಮಾದರಿಗಳಲ್ಲಿ 1.3-ಲೀಟರ್ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಗಳಲ್ಲಿ 1.5-ಲೀಟರ್ ನ್ಯಾಚುರಲ್ ಆಸ್ಪೆರೆಡ್ ಪೆಟ್ರೋಲ್ ಎಂಜಿನ್ ನೀಡಲಾಗಿದೆ.

ವಿನೂತನ ತಂತ್ರಜ್ಞಾನ ಪ್ರೇರಿತ MG Astor ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

1.5-ಲೀಟರ್ ಪೆಟ್ರೋಲ್ ಮಾದರಿಯು 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 138-ಬಿಎಚ್‌ಪಿ, 220-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.3-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 8-ಸ್ಪೀಡ್ ಸಿವಿಟಿ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 108-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ವಿನೂತನ ತಂತ್ರಜ್ಞಾನ ಪ್ರೇರಿತ MG Astor ಕಂಪ್ಯಾಕ್ಟ್ ಎಸ್‌ಯುವಿ ಅನಾವರಣ

ಕಾರು ಚಾಲನೆಗೆ ಪೂರಕವಾಗಿ ಹೊಸ ಆಸ್ಟರ್‌ನಲ್ಲಿ ಅರ್ಬನ್, ನಾರ್ಮಲ್ ಮತ್ತು ಡೈನಾಮಿಕ್ ಡ್ರೈವ್ ಮೋಡ್ ನೀಡಲಾಗಿದ್ದು, ಸದ್ಯ ಅನಾವರಣಗೊಂಡಿರುವ ಹೊಸ ಕಾರು ಮುಂಬರುವ ದಸರಾ ವೇಳೆಗೆ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದೆ. ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಬೆಲೆಯಲ್ಲಿ ಗಮನಸೆಳೆಯಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10 ಲಕ್ಷದಿಂದ ರೂ. 16 ಲಕ್ಷ ಇರಬಹುದೆಂದು ನೀರಿಕ್ಷಿಸಲಾಗಿದೆ.

Most Read Articles

Kannada
English summary
Mg astor suv unveiled in india ahead of launch details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X