Just In
- 45 min ago ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- 1 hr ago ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- 1 hr ago ಬರಲಿದೆ ಮತ್ತೊಂದು ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್: ಕಡಿಮೆ ಖರ್ಚಿನಲ್ಲಿ ಓಡಾಡಬಹುದು!
- 2 hrs ago ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
Don't Miss!
- News ‘ಕಾಂಗ್ರೆಸ್ ಡೇಂಜರ್’ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Movies "ಸದಾ ನನ್ನ ಹಿಂಭಾಗವನ್ನೇ ಜೂಮ್ ಮಾಡ್ತಾರೆ"; ನೋರಾ ಫತೇಹಿ ಆಕ್ರೋಶ
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ Astor ಕಾರಿನಲ್ಲಿ ಹಲವು ಪ್ರೀಮಿಯಂ ಫೀಚರ್ಸ್ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಿದೆ MG Motor
ಎಂಜಿ ಮೋಟಾರ್(MG Motor) ಕಂಪನಿಯು ಆಸ್ಟರ್(Astor) ಕಂಪ್ಯಾಕ್ಟ್ ಎಸ್ಯುವಿ ಮಾದರಿಯ ಮೂಲಕ ಕಾರು ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವ ತವಕದಲ್ಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಪಡೆದುಕೊಳ್ಳಲಿದೆ.
ಹೊಸ ಆಸ್ಟರ್(Astor) ಕಾರಿನ ಪ್ರಮುಖ ತಾಂತ್ರಿಕ ಅಂಶಗಳ ಮಾಹಿತಿ ಹಂಚಿಕೊಂಡಿರುವ ಎಂಜಿ ಮೋಟಾರ್ ಕಂಪನಿಯು ಶೀಘ್ರದಲ್ಲೇ ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸಲಿದ್ದು, ಹೊಸ ಕಾರಿನಲ್ಲಿ ಎಂಜಿ ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ಗಳನ್ನು ಜೋಡಣೆ ಮಾಡಿದೆ.
ಆಸ್ಟರ್ ಕಾರು ಮಾದರಿಯು ಈ ತಿಂಗಳ ಕೊನೆಯಲ್ಲಿ ಇಲ್ಲವೇ ಅಕ್ಟೋಬರ್ ಮೊದಲ ವಾರದಲ್ಲಿ ದೇಶಿಯ ಮಾರುಕಟ್ಟೆಯನ್ನು ಪ್ರವೇಶಿಸುವುದು ಬಹುತೇಕ ಖಚಿತವಾಗಿದ್ದು, ಆಸ್ಟರ್ ಕಾರಿನ ಬಗೆಗೆ ತಾಂತ್ರಿಕ ಮಾಹಿತಿಗಳು ಕಂಪ್ಯಾಕ್ಟ್ ಎಸ್ಯುವಿ ಪ್ರಿಯರನ್ನು ಸೆಳೆಯುತ್ತಿವೆ.
ಹೊಸ ಕಾರು ಸದ್ಯ ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಹ್ಯುಂಡೈ ಕ್ರೆಟಾ(Hyundai Creta) ಕಿಯಾ ಸೆಲ್ಟೊಸ್(Kia Seltos) ಸ್ಕೋಡಾ ಕುಶಾಕ್(Skoda Kushaq) ಕಾರುಗಳಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದ್ದು, ಹೊಸ ಆಸ್ಟರ್ ಕಾರಿನಲ್ಲಿ ಎಂಜಿ ಮೋಟಾರ್ ಕಂಪನಿಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ನೀಡುತ್ತಿದೆ.
ಸಾಮಾನ್ಯವಾಗಿ ಯಾವುದೇ ಒಂದು ಕಾರಿನ ಮಧ್ಯಮ ಕ್ರಮಾಂಕದ ಕಾರಿನ ಆರಂಭಿಕ ಬೆಲೆಯು ಮತ್ತು ಟಾಪ್ ಎಂಡ್ ಮಾದರಿಯ ಬೆಲೆಯು ಆರಂಭಿಕ ಮಾದರಿಯ ಬೆಲೆಗಿಂತಲೂ ಹೆಚ್ಚು ದುಬಾರಿಯಾಗಿರುವುದಲ್ಲದೆ ಬೆಲೆ ಕಾರಣಕ್ಕಾಗಿ ಆರಂಭಿಕ ಮಾದರಿಯಲ್ಲಿ ಹಲವಾರು ಫೀಚರ್ಸ್ಗಳನ್ನು ಕೈಬಿಡಲಾಗುತ್ತದೆ.
ಕೆಲವೇ ಕೆಲವು ಸ್ಟ್ಯಾಂಡರ್ಡ್ ಫೀಚರ್ಸ್ ಹೊರತುಪಡಿಸಿ ಆರಂಭಿಕ ಆವೃತ್ತಿಗೂ ಟಾಪ್ ಎಂಡ್ ಆವೃತ್ತಿಯಲ್ಲಿನ ತಾಂತ್ರಿಕ ಅಂಶಗಳಿಗೂ ಸಾಕಷ್ಟು ವ್ಯತ್ಯಾಸಗಳಿರುತ್ತವೆ. ಆದರೆ ಎಂಜಿ ಮೋಟಾರ್ ಕಂಪನಿಯು ತನ್ನ ಹೊಸ ಕಾರಿನ ಆರಂಭಿಕ ಆವೃತ್ತಿಗಳಲ್ಲಿಯೇ ಪ್ರತಿಸ್ಪರ್ಧಿ ಕಾರುಗಳ ಮಧ್ಯಮ ಕ್ರಮಾಂಕದಲ್ಲಿನ ಆವೃತ್ತಿಗಳ ಫೀಚರ್ಸ್ಗಳನ್ನು ಪಡೆದುಕೊಳ್ಳಬಹುದಾಗಿದೆ.
ಇತ್ತೀಚೆಗೆ ಕಂಪನಿಯು ಹಂಚಿಕೊಂಡಿರುವ ಮಾಹಿತಿ ಪ್ರಕಾರ ಕಂಪನಿಯು ಆರಂಭಿಕ ಮಾದರಿಯಲ್ಲೂ ಕೂಡಾ ಸ್ಟ್ಯಾಂಡರ್ಡ್ ಆಗಿ ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯ್ಡ್ ಆಟೋ ಸೌಲಭ್ಯವನ್ನು ಜೋಡಣೆ ಮಾಡಿರುವ ಬಗೆಗೆ ಮಾಹಿತಿ ನೀಡಿದೆ.
ಹಾಗೆಯೇ ಹೊಸ ಆಸ್ಟರ್ ಕಾರು ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದ್ದು, ವ್ಯಯಕ್ತಿಕರಣಗೊಳಿಸಿದ ಕೃತಕ ಬುದ್ಧಿಮತ್ತೆ ಸೌಲಭ್ಯ ಹೊಂದಿರುವ ಭಾರತದ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಇದರೊಂದಿಗೆ ರಿಲಯನ್ಸ್ ಜಿಯೋದಿಂದ ಎರವಲು ಪಡೆಯಲಾದ ರಿಯಲ್-ಟೈಮ್ ಇನ್ಫೋಟೈನ್ಮೆಂಟ್ ಮತ್ತು ಟೆಲಿಮ್ಯಾಟಿಕ್ಸ್ಗಾಗಿ ಇ-ಸಿಮ್ ಮತ್ತು ಐಒಟಿ ಟೆಕ್ ಅನ್ನು ಒಳಗೊಂಡಿರುವ ಹೊಸ ಕಾರು ಗರಿಷ್ಠ ಸುರಕ್ಷತೆ ಖಚಿತಪಡಿಸಲಿದ್ದು, 4ಜಿ ಇಂಟರ್ನೆಟ್ ಸೌಲಭ್ಯದೊಂದಿಗೆ ಹಲವಾರು ಆಟೋಮೋಟಿವ್ ಸಂಬಂಧಿತ ಗ್ರಾಹಕರ ಸೇವೆಗಳನ್ನು ಸುಲಭವಾಗಿ ಹೊಸ ಪ್ಲ್ಯಾಟ್ಫಾರ್ಮ್ ಮೂಲಕ ಪಡೆದುಕೊಳ್ಳಬಹುದಾಗಿದೆ.
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಸೌಲಭ್ಯದೊಂದಿಗೆ ಮನರಂಜನೆ, ಕಾರಿನ ತಾಂತ್ರಿಕ ಅಂಶಗಳ ನ್ಯೂನತೆಗಳ ಪತ್ತೆ ಹಚ್ಚುವಲ್ಲಿ ಸಹಕಾರಿಯಾಗುವುದರ ಜೊತೆ ವಾಯ್ಸ್ ಅಸಿಸ್ಟ್ ಮೂಲಕ ಚಾಲನೆಯನ್ನು ಸರಳಗೊಳಿಸುತ್ತದೆ.
ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್)ನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫಾರ್ವಡ್ ಕೂಲಿಷನ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಲೇನ್ ಕೀಪ್ ಅಸಿಸ್ಟ್, ಲೈನ್ ಡಿಫಾರ್ಚರ್ ಪ್ರಿವೆಷನ್, ಸ್ಪೀಡ್ ವಾರ್ನಿಂಗ್, ಇಂಟೆಲಿಜೆಂಟ್ ಮೋಡ್ ಹೊಂದಿರುವ ಸ್ಪಿಡ್ ಅಸಿಸ್ಟ್ ಸಿಸ್ಟಂ, ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್ಗಳಲಿವೆ.
ಹಾಗೆಯೇ ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್ಗಳಲಿವೆ.
ಜೊತೆಗೆ ಕಾರು ಚಾಲನೆ ವೇಳೆ ರಸ್ತೆಗುಂಡಿಗಳನ್ನು ಸುಲಭವಾಗಿ ಪತ್ತೆಹಚ್ಚಲು ಎಡಿಎಎಸ್ ತಂತ್ರಜ್ಞಾನದಲ್ಲಿ ರಡಾರ್ ಸೌಲಭ್ಯವಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ಕಾರ್ಯ ನಿರ್ವಹಣೆ ಮಾಡುವ ಮೂಲಕ ರಸ್ತೆಗುಂಡಿಯಿಂದಾಗುವ ಅಪಾಯವನ್ನು ತಡೆಯಬಲ್ಲದು.
ಅಪಾಯದ ಮುನ್ಸೂಚನೆಯನ್ನು ಅರಿಯಲು ಚಾಲಕನಿಗೆ ಧ್ವನಿ ಸಂದೇಶ ಮೂಲಕ ಎಚ್ಚರಿಕೆ ನೀಡುವ ಎಡಿಎಎಸ್ ಸೌಲಭ್ಯವು ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸಲಿದ್ದು, ಜೊತೆಗೆ 10-ಇಂಚಿನ ಇನ್ಪೋಟೈನ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪ್ಲ್ಯಾಟ್-ಬಾಟಮ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಹಿಂಬದಿಯ ಪ್ರಯಾಣಿಕರಿಗೆ ಅರಾಮದಾಯಕವಾದ ಆಸನ ಸೌಲಭ್ಯಗಳಿವೆ.
ಇನ್ನು ಹೊಸ ಆಸ್ಟರ್ ಕಾರಿನಲ್ಲಿ ಕಂಪನಿಯು 1.5-ಲೀಟರ್ ಪೆಟ್ರೋಲ್ ಆವೃತ್ತಿಯನ್ನು ಮತ್ತು ಪರ್ಫಾಮೆನ್ಸ್ ಮಾದರಿಯಾಗಿ 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಹೊಸ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10 ಲಕ್ಷದಿಂದ ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದೆ.