ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಸ್ಯಾವಿ 7 ಸೀಟರ್ ವರ್ಷನ್
ಎಂಜಿ ಮೋಟಾರ್ ಕಂಪನಿಯು ಗ್ಲೊಸ್ಟರ್ ಎಸ್‌ಯುವಿ ಮಾದರಿಯಲ್ಲಿ ಹೊಸ ವೆರಿಯೆಂಟ್ ಒಂದನ್ನು ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಗ್ಲೊಸ್ಟರ್ ಎಸ್‌ಯುವಿಯ ಟಾಪ್ ಎಂಡ್ ಮಾದರಿಯಾದ ಸ್ಯಾವಿಯಲ್ಲಿ 7 ಸೀಟರ್ ಆಯ್ಕೆ ನೀಡಲಾಗುತ್ತಿದೆ.

ಗ್ಲೊಸ್ಟರ್ ಎಸ್‌ಯುವಿ ಸದ್ಯ ಮಾರುಕಟ್ಟೆಯಲ್ಲಿ ಸೂಪರ್, ಸ್ಮಾರ್ಟ್, ಶಾರ್ಪ್ ಮತ್ತು ಸ್ಯಾವಿ ಎನ್ನುವ ನಾಲ್ಕು ಪ್ರಮುಖ ವೆರಿಯೆಂಟ್‌ಗಳನ್ನು ಹೊಂದಿದ್ದು, ವಿವಿಧ ವೆರಿಯೆಂಟ್‌ಗಳಲ್ಲಿ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯವನ್ನು ನೀಡಲಾಗುತ್ತಿದೆ. ಸ್ಯಾವಿ ವೆರಿಯೆಂಟ್‌ನಲ್ಲಿ 6 ಸೀಟರ್ ಮಾದರಿ ಮಾತ್ರ ಖರೀದಿಗೆ ಲಭ್ಯವಿದ್ದು, 7 ಸೀಟರ್ ಮಾದರಿಗಾಗಿ ಹೆಚ್ಚಿನ ಬೇಡಿಕೆ ಸಲ್ಲಿಕೆಯಾಗುತ್ತಿದೆ.

7 ಸೀಟರ್ ಸ್ಯಾವಿ ವರ್ಷನ್‌ಗೆ ಬೇಡಿಕೆ ಸಲ್ಲಿಕೆಯಾಗುತ್ತಿರುವುದರಿಂದ ಹೊಸ ಮಾದರಿಯನ್ನು ಬಿಡುಗಡೆ ಮಾಡಲು ಮುಂದಾಗಿರುವ ಎಂಜಿ ಮೋಟಾರ್ ಕಂಪನಿಯು ಶೀಘ್ರದಲ್ಲೇ ಮಾರಾಟ ಆರಂಭಿಸಲಿದ್ದು, ಸ್ಯಾವಿ ವೆರಿಯೆಂಟ್ ಹೊಸ ಆಸನ ಸೌಲಭ್ಯದೊಂದಿಗೆ ಮತ್ತಷ್ಟು ಉನ್ನತೀಕರಿಸಿದ ತಾಂತ್ರಿಕ ಅಂಶಗಳನ್ನು ಪಡೆದುಕೊಳ್ಳಬಹುದಾಗಿದೆ.

ಗ್ಲೊಸ್ಟರ್ ಸ್ಯಾವಿ ಮಾದರಿಯು ಸದ್ಯ 2+2+2 ವಿನ್ಯಾಸ ಆಸನ ಸೌಲಭ್ಯ ಹೊಂದಿದ್ದು, ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್ ನೀಡಲಾಗುತ್ತಿದೆ. ಆದರೆ ಹೆಚ್ಚಿನ ಗ್ರಾಹಕರು ಇದೇ ವೆರಿಯೆಂಟ್‌ನಲ್ಲಿ 2+3+2 ವಿನ್ಯಾಸದ ಆಸನ ಸೌಲಭ್ಯ ನೀಡುವಂತೆ ಬೇಡಿಕೆ ಸಲ್ಲಿಸುತ್ತಿದ್ದಾರೆ.

ಗ್ರಾಹಕರ ಬೇಡಿಕೆಯೆಂತೆ ಕಂಪನಿಯು ಇದೀಗ ಸ್ಯಾವಿ ಮಾದರಿಯಲ್ಲಿ 6 ಸೀಟರ್ ಮತ್ತು 7 ಸೀಟರ್ ಮಾದರಿಗಳನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಹೊಸ ಆಸನ ಸೌಲಭ್ಯದೊಂದಿಗೆ ಕೆಲವು ಪ್ರಮುಖ ತಾಂತ್ರಿಕ ಅಂಶಗಳನ್ನು ಪಡೆದುಕೊಳ್ಳಲಿದೆ ಎನ್ನಲಾಗಿದೆ.

ಎಂಜಿ ಕಂಪನಿಯು ಗ್ಲೊಸ್ಟರ್ ಆರಂಭಿಕ ಮಾದರಿಯಾದ ಸೂಪರ್ ವೆರಿಯೆಂಟ್‌ನಲ್ಲಿ 7 ಸೀಟರ್ ಮಾದರಿಯನ್ನು ಮಾತ್ರ ಮಾರಾಟ ಮಾಡುತ್ತಿದ್ದು, ಸ್ಮಾರ್ಟ್ ವೆರಿಯೆಂಟ್‌ನಲ್ಲಿ 6 ಸೀಟರ್ ಮಾದರಿಯನ್ನು ಮತ್ತು ಶಾರ್ಪ್ ವೆರಿಯೆಂಟ್‌ನಲ್ಲಿ ಮಾತ್ರ 6 ಸೀಟರ್ ಮತ್ತು 7 ಸೀಟರ್ ಆಯ್ಕೆ ನೀಡಲಾಗಿದೆ.

ಇದೀಗ ಹೈ ಎಂಡ್ ಮಾದರಿಯಾದ ಸ್ಯಾವಿಯಲ್ಲೂ ಕೂಡಾ 6 ಸೀಟರ್ ಮತ್ತು 7 ಸೀಟರ್ ಖರೀದಿಗೆ ಲಭ್ಯವಿರಲಿದ್ದು, ಹೊಸ ಆಸನ ಸೌಲಭ್ಯದೊಂದಿಗೆ ಹೆಚ್ಚುವರಿ ಬಣ್ಣಗಳ ಆಯ್ಕೆ ಲಭ್ಯವಾಗುವ ಸಾಧ್ಯತೆಗಳಿವೆ.

ಇನ್ನು ಗ್ಲೊಸ್ಟರ್ ಕಾರು ಮಾದರಿಯು ಫುಲ್ ಸೈಜ್ ಎಸ್‌ಯುವಿ ಆವೃತ್ತಿಯಾಗಿದ್ದು, 4,985-ಎಂ ಉದ್ದ, 1,926-ಎಂಎಂ ಅಗಲ, 1,867-ಎಂಎಂ ಎತ್ತರ ಹಾಗೂ 2,950-ಎಂಎಂ ವ್ಹೀಲ್ ಬೇಸ್‌ನೊಂದಿಗೆ ವಿಶಾಲವಾದ ಕ್ಯಾಬಿನ್‌ನೊಂದಿಗೆ ಉತ್ತಮ ಆಸನ ಸೌಲಭ್ಯ ಪಡೆದುಕೊಂಡಿದೆ.

ಗ್ಲೊಸ್ಟರ್ ಕಾರು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 29.98 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯ ಬೆಲೆಯನ್ನು ರೂ.35.58 ಲಕ್ಷ ಬೆಲೆ ಪಡೆದುಕೊಂಡಿದ್ದು, ಹೊಸ ಕಾರಿನಲ್ಲಿ ಲೆವಲ್-1 ಆಟೊನಮಸ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ.

ಲೆವಲ್-1 ಆಟೊನಮಸ್ ಟೆಕ್ನಾಲಜಿಯಲ್ಲಿ ಆಟೋಮ್ಯಾಟಿಕ್ ಪಾರ್ಕಿಂಗ್ ಅಸಿಸ್ಟ್ (ಎಪಿಎ), ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ (ಎಇಬಿ), ಫಾರ್ವರ್ಡ್ ಕೂಲಿಷನ್ ವಾರ್ನಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಹಾಗೂ ಲೇನ್ ಎಕ್ಸಿಟ್ ವಾರ್ನಿಂಗ್ ಸೌಲಭ್ಯಗಳಿವೆ.

ಹಾಗೆಯೇ ಹೊಸ ಕಾರಿನಲ್ಲಿ ಎಲ್‌ಇಡಿ ಲೈಟಿಂಗ್, ಆಟೋ ಲೆವೆಲಿಂಗ್‌ನೊಂದಿಗೆ ಹೆಡ್‌ಲ್ಯಾಂಪ್‌ಗಳು, ಎಂಜಿ ಲೋಗೋ ಹೊಂದಿರುವ ಒಆರ್‌ವಿಎಂ, ಪನೊರಮಿಕ್ ಸನ್‌ರೂಫ್, 19 ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್, ಫ್ರಂಟ್-ರಿಯರ್ ಫಾಗ್ ಲ್ಯಾಂಪ್, ಸ್ಟೀರಿಂಗ್-ಅಸಿಸ್ಟ್ ಕಾರ್ನರಿಂಗ್ ಲ್ಯಾಂಪ್, ಡ್ಯುಯಲ್-ಬ್ಯಾರೆಲ್ ಟ್ವಿನ್ ಕ್ರೋಮ್ ಎಕ್ಸಾಸ್ಟ್ ಗಳಿವೆ.

ಒಳಭಾಗದಲ್ಲಿ ಲೆದರ್ ಸೀಟ್, ಎರಡನೇ ಸಾಲಿನಲ್ಲಿ ಪರ್ಸನಲ್ ಕ್ಯಾಪ್ಟನ್ ಸೀಟ್, ಆ್ಯಪಲ್ ಕಾರ್ ಪ್ಲೇ ಹೊಂದಿರುವ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೇನ್‌ಮೆಂಟ್ ಸಿಸ್ಟಂ, ಆಂಡ್ರಾಯ್ಡ್ ಆಟೋ, ಎಂಜಿ ಕಂಪನಿಯ ಹೊಸ ಐ-ಸ್ಮಾರ್ಟ್ ಕನೆಕ್ಟೆಡ್ ಟೆಕ್ನಾಲಜಿ, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್, 8 ಇಂಚಿನ ಎಂಐಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪ್ಯಾಡಲ್ ಶಿಫ್ಟರ್, ತ್ರೀ ಜೋನ್ ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್, ರನ್ನಿಂಗ್ ಟೇಲ್‌ಗೇಟ್, ಹಿಟ್/ಕೂಲ್ ಮಾಡಬಹುದಾದ ಮುಂಭಾಗದ ಆಸನಗಳು, ವೈರ್‌ಲೆಸ್ ಚಾರ್ಜಿಂಗ್, ಮಲ್ಟಿ-ವೇ ಎಲೆಕ್ಟ್ರಾನಿಕ್ ಅಡ್ಜೆಸ್ಟ್ ಫ್ರಂಟ್ ಸೀಟ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.


Click it and Unblock the Notifications








