ಭಾರತದಲ್ಲಿ ಯಶಸ್ವಿ ಒಂದು ವರ್ಷ ಪೂರೈಸಿದ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಎಂಜಿ ಮೋಟಾರ್ ಕಂಪನಿಯು ಹೊಸ ಕಾರು ಮಾರಾಟದಲ್ಲಿ ಕೆಲ ತಿಂಗಳಿನಿಂದ ಉತ್ತಮ ಬೇಡಿಕೆ ಕಾಯ್ದುಕೊಂಡಿದ್ದು, ಐಷಾರಾಮಿ ಕಾರು ಮಾದರಿಯಾಗಿರುವ ಗ್ಲೊಸ್ಟರ್ ಎಸ್‌ಯುವಿ ಮಾದರಿಯ ಮಾರಾಟದಲ್ಲೂ ಹೊಸ ದಾಖಲೆಗೆ ಕಾರಣವಾಗಿದೆ.

ಭಾರತದಲ್ಲಿ ಯಶಸ್ವಿ ಒಂದು ವರ್ಷ ಪೂರೈಸಿದ ಎಂಜಿ ಗ್ಲೊಸ್ಟರ್ ಎಸ್‌ಯುವಿ

2020ರ ನವೆಂಬರ್‌ನಲ್ಲಿ ಬಿಡುಗಡೆಗೊಂಡಿದ್ದ ಹೊಸ ಗ್ಲೊಸ್ಟರ್ ಕಾರು ಮಾದರಿಯು ದುಬಾರಿ ಬೆಲೆ ನಡುವೆಯೂ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ಯಶಸ್ವಿ ಒಂದು ವರ್ಷ ಪೂರೈಸಿದೆ. ಕಳೆದ ಒಂದು ವರ್ಷದಲ್ಲಿ ಗ್ಲೊಸ್ಟರ್ ಕಾರು ಮಾದರಿಯು 1 ಸಾವಿರಕ್ಕೂ ಅಧಿಕ ಯುನಿಟ್‌ಗಳು ಮಾರಾಟಗೊಂಡಿದ್ದು, ಹೊಸ ಕಾರಿನ ಮೂಲಕ ಎಂಜಿ ಕಂಪನಿಯು ಪ್ರತಿಸ್ಪರ್ಧಿ ಮಾದರಿಗಳಾದ ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಿದೆ.

ಭಾರತದಲ್ಲಿ ಯಶಸ್ವಿ ಒಂದು ವರ್ಷ ಪೂರೈಸಿದ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಫುಲ್ ಸೈಜ್ ಎಸ್‌ಯುವಿ ವೈಶಿಷ್ಟ್ಯತೆಯೊಂದಿಗೆ ಹಲವಾರು ಆಧುನಿಕ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿರುವ ಹೊಸ ಗ್ಲೊಸ್ಟರ್ ಕಾರು ಮಾದರಿಯು ಬಿಡುಗಡೆಯ ನಂತರ ಗ್ರಾಹಕರ ಬೇಡಿಕೆ ಕೆಲವು ಬದಲಾವಣೆಗಳನ್ನು ಪಡೆದುಕೊಂಡಿದೆ.

ಭಾರತದಲ್ಲಿ ಯಶಸ್ವಿ ಒಂದು ವರ್ಷ ಪೂರೈಸಿದ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಸೂಪರ್, ಸ್ಮಾರ್ಟ್, ಶಾರ್ಪ್ ಮತ್ತು ಸ್ಯಾವಿ ಎನ್ನುವ ನಾಲ್ಕು ವೆರಿಯೆಂಟ್ ಹೊಂದಿರುವ ಗ್ಲೊಸ್ಟರ್ ಕಾರು ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಎಸ್‌ಯುವಿ ಕಾರು ಮಾದರಿಗಳಲ್ಲೇ ಅತಿ ಹೆಚ್ಚು ವೀಲ್ಹ್ ಬೆಸ್ ಹೊಂದಿದೆ.

ಭಾರತದಲ್ಲಿ ಯಶಸ್ವಿ ಒಂದು ವರ್ಷ ಪೂರೈಸಿದ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಹೊಸ ಕಾರು ಭಾರತದಲ್ಲಿ ಯಶಸ್ವಿ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಇತ್ತೀಚೆಗೆ 4x4 ಅಡ್ವೆಂಚರ್ ಡ್ರೈವ್ ಕಲ್ಪಿಸಿದ್ದ ಎಂಜಿ ಮೋಟಾರ್ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ವಿಶ್ವಾದಲ್ಲಿದ್ದು, ಹೊಸ ಕಾರು ಫುಲ್ ಸೈಜ್ ಎಸ್‌ಯುವಿ ಮಾದರಿಯಲ್ಲಿಯೇ ಹಲವಾರು ವಿಶೇಷತೆಗಳನ್ನು ಒಳಗೊಂಡಿದೆ.

ಭಾರತದಲ್ಲಿ ಯಶಸ್ವಿ ಒಂದು ವರ್ಷ ಪೂರೈಸಿದ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಹೊಸ ಗ್ಲೊಸ್ಟರ್ ಕಾರು ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 29.98 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯ ಬೆಲೆಯನ್ನು ರೂ.37.68 ಲಕ್ಷ ಬೆಲೆ ಪಡೆದುಕೊಂಡಿದೆ.

ಭಾರತದಲ್ಲಿ ಯಶಸ್ವಿ ಒಂದು ವರ್ಷ ಪೂರೈಸಿದ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಆಟೋನಮಸ್ ಲೆವಲ್ 1 ಟೆಕ್ನಾಲಜಿಯೊಂದಿಗೆ ಅತಿ ಹೆಚ್ಚು ಸುರಕ್ಷಿತ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿ ಹೊಸ ಗ್ಲೊಸ್ಟರ್ ಎಸ್‌ಯುವಿಯಲ್ಲಿ ಆಟೋಮ್ಯಾಟಿಕ್ ಪಾರ್ಕಿಂಗ್ ಅಸಿಸ್ಟ್ (ಎಪಿಎ), ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ (ಎಇಬಿ), ಫಾರ್ವರ್ಡ್ ಕೂಲಿಷನ್ ವಾರ್ನಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಹಾಗೂ ಲೇನ್ ಎಕ್ಸಿಟ್ ವಾರ್ನಿಂಗ್ ಸೌಲಭ್ಯಗಳಿವೆ.

ಭಾರತದಲ್ಲಿ ಯಶಸ್ವಿ ಒಂದು ವರ್ಷ ಪೂರೈಸಿದ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಹಾಗೆಯೇ ಹೊಸ ಕಾರಿನಲ್ಲಿ ಎಲ್‌ಇಡಿ ಲೈಟಿಂಗ್, ಆಟೋ ಲೆವೆಲಿಂಗ್‌ನೊಂದಿಗೆ ಹೆಡ್‌ಲ್ಯಾಂಪ್‌ಗಳು, ಎಂಜಿ ಲೋಗೋ ಹೊಂದಿರುವ ಒಆರ್‌ವಿಎಂ, ಪನೊರಮಿಕ್ ಸನ್‌ರೂಫ್, 19 ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್, ಫ್ರಂಟ್-ರಿಯರ್ ಫಾಗ್ ಲ್ಯಾಂಪ್‌, ಸ್ಟೀರಿಂಗ್-ಅಸಿಸ್ಟ್ ಕಾರ್ನರಿಂಗ್ ಲ್ಯಾಂಪ್‌, ಡ್ಯುಯಲ್-ಬ್ಯಾರೆಲ್ ಟ್ವಿನ್ ಕ್ರೋಮ್ ಎಕ್ಸಾಸ್ಟ್ ಗಳಿವೆ.

ಭಾರತದಲ್ಲಿ ಯಶಸ್ವಿ ಒಂದು ವರ್ಷ ಪೂರೈಸಿದ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಒಳಭಾಗದಲ್ಲಿ ಲೆದರ್ ಸೀಟ್, ಎರಡನೇ ಸಾಲಿನಲ್ಲಿ ಪರ್ಸನಲ್ ಕ್ಯಾಪ್ಟನ್ ಸೀಟ್, ಆ್ಯಪಲ್ ಕಾರ್ ಪ್ಲೇ ಹೊಂದಿರುವ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೇನ್‌ಮೆಂಟ್ ಸಿಸ್ಟಂ, ಆಂಡ್ರಾಯ್ಡ್ ಆಟೋ, ಎಂಜಿ ಕಂಪನಿಯ ಹೊಸ ಐ-ಸ್ಮಾರ್ಟ್ ಕನೆಕ್ಟೆಡ್ ಟೆಕ್ನಾಲಜಿ, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್, 8 ಇಂಚಿನ ಎಂಐಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪ್ಯಾಡಲ್ ಶಿಫ್ಟರ್‌, ತ್ರೀ ಜೋನ್ ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್, ರನ್ನಿಂಗ್ ಟೇಲ್‌ಗೇಟ್, ಹಿಟ್/ಕೂಲ್ ಮಾಡಬಹುದಾದ ಮುಂಭಾಗದ ಆಸನಗಳು, ವೈರ್‌ಲೆಸ್ ಚಾರ್ಜಿಂಗ್, ಮಲ್ಟಿ-ವೇ ಎಲೆಕ್ಟ್ರಾನಿಕ್ ಅಡ್ಜೆಸ್ಟ್ ಫ್ರಂಟ್ ಸೀಟ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.

ಭಾರತದಲ್ಲಿ ಯಶಸ್ವಿ ಒಂದು ವರ್ಷ ಪೂರೈಸಿದ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಹಾಗೆಯೇ ಐ-ಸ್ಮಾರ್ಟ್ ತಂತ್ರಜ್ಞಾನವು ಚಾಲಕನ ಸ್ಮಾರ್ಟ್‌ಫೋನ್ ಮೂಲಕ ಅಪ್ಲಿಕೇಶನ್ ಸಂಪರ್ಕಿಸಲು ಅನುವು ಮಾಡಿಕೊಡುತ್ತದೆ. ಇದು ವಾಹನದ ಸ್ಥಿತಿ, ಲೈವ್ ವೆಹಿಕಲ್ ಟ್ರ್ಯಾಕಿಂಗ್, ಜಿಯೋಫೆನ್ಸಿಂಗ್, ಕಾರಿನ ವಿವಿಧ ಫೀಚರ್ ಗಳ ರಿಮೋಟ್ ಫಂಕ್ಷನ್ ಸೇರಿದಂತೆ ಒಟ್ಟು 57 ಹೆಚ್ಚುವರಿ ಫೀಚರ್ ಗಳನ್ನು ನೀಡುತ್ತದೆ.

ಭಾರತದಲ್ಲಿ ಯಶಸ್ವಿ ಒಂದು ವರ್ಷ ಪೂರೈಸಿದ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಈ ಮೂಲಕ ಕಾರು ಪ್ರಯಾಣವನ್ನು ಆರಾಮದಾಯಕ ಮತ್ತು ಸುರಕ್ಷಿತವಾಗಿಸುವ ಹೊಸ ಗ್ಲೊಸ್ಟರ್ ಎಸ್‌ಯುವಿ ಕಾರು 4,985-ಎಂ ಉದ್ದ, 1,926-ಎಂಎಂ ಅಗಲ, 1,867-ಎಂಎಂ ಎತ್ತರ ಹಾಗೂ 2,950-ಎಂಎಂ ವ್ಹೀಲ್ ಬೇಸ್ ಹೊಂದಿದೆ.

ಭಾರತದಲ್ಲಿ ಯಶಸ್ವಿ ಒಂದು ವರ್ಷ ಪೂರೈಸಿದ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಗ್ಲೊಸ್ಟರ್ ಎಸ್‌ಯುವಿಯಲ್ಲಿ 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದ್ದು, ಸೂಪರ್ ಹಾಗೂ ಸ್ಮಾರ್ಟ್ ಮಾದರಿಗಳು ಒಂದೇ ಟರ್ಬೋ ಚಾರ್ಜರ್ ಅನ್ನು ಹೊಂದಿದ್ದರೆ ಟಾಪ್-ಎಂಡ್ ಮಾದರಿಗಳಾದ ಶಾರ್ಪ್ ಹಾಗೂ ಸ್ಯಾವಿಯಲ್ಲಿ ಟ್ವಿನ್-ಟರ್ಬೊ ಸೆಟಪ್ ಅಳವಡಿಸಲಾಗಿದೆ.

ಭಾರತದಲ್ಲಿ ಯಶಸ್ವಿ ಒಂದು ವರ್ಷ ಪೂರೈಸಿದ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಬೇಸ್ ಮಾದರಿಗಳಲ್ಲಿರುವ 2.0-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಮಾದರಿಯು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 160-ಬಿಹೆಚ್‌ಪಿ, 375-ಎನ್ಎಂ ಟಾರ್ಕ್ ಉತ್ಪಾದಿಸಲಿದ್ದರೆ, ಟಾಪ್-ಎಂಡ್ ಮಾದರಿಯಲ್ಲಿರುವ 2.0-ಲೀಟರ್ ಟ್ವಿನ್-ಟರ್ಬೊ ಎಂಜಿನ್ ಮಾದರಿಯು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 216-ಬಿಹೆಚ್‌ಪಿ, 480-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

Article Published On: Tuesday, November 30, 2021, 10:51 [IST]
English summary
Mg gloster suv one year milestone in india details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+