Just In
- 22 min ago
ಭಾರತದಲ್ಲಿ ಸೆಲ್ಟೊಸ್ ಫೇಸ್‌ಲಿಫ್ಟ್ ಆವೃತ್ತಿಯ ಬಿಡುಗಡೆಗಾಗಿ ಸಿದ್ದವಾದ ಕಿಯಾ ಮೋಟಾರ್ಸ್
- 10 hrs ago
ಕೋವಿಡ್ ವ್ಯಾಕ್ಸಿನ್ ಸಾಗಾಣಿಕೆಗಾಗಿ ಹೊಸ ಮಾದರಿಯ ಟ್ರಕ್ ಸಿದ್ದಪಡಿಸಿದ ಭಾರತ್ ಬೆಂಝ್
- 11 hrs ago
ಮೊದಲ ವರ್ಷದ ಸಂಭ್ರಮ- ಟಾಟಾ ನೆಕ್ಸಾನ್ ಇವಿ ಖರೀದಿ ಮೇಲೆ ಹೊಸ ಆಫರ್
- 12 hrs ago
ಸ್ಥಗಿತವಾಯ್ತು ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಮತ್ತು ಸ್ಟ್ರೀಟ್ ರಾಡ್ ಬೈಕುಗಳು
Don't Miss!
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- News
ಭಾರತದಿಂದ 2 ಮಿಲಿಯನ್ ಕೊರೊನಾವೈರಸ್ ಲಸಿಕೆ ಪಡೆದ ಬ್ರೆಜಿಲ್
- Lifestyle
"ಶನಿವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ "
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Sports
ಭಾರತ vs ಆಸೀಸ್: ಕಾಕತಾಳೀಯ, ಕುತೂಹಲಕಾರಿ ಅಂಕಿ-ಅಂಶಗಳು!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇದೇ ತಿಂಗಳು 7ರಂದು ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ ಎಸ್‌ಯುವಿ
ಎಂಜಿ ಮೋಟಾರ್ ಕಂಪನಿಯು ಇದೇ ತಿಂಗಳು 7ರಂದು ಹೆಕ್ಟರ್ ಫೇಸ್‌ಲಿಫ್ಟ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಬದಲಾವಣೆಯೊಂದಿಗೆ ಬಿಡುಗಡೆಯಾಗುತ್ತಿರುವ ಫೇಸ್‌ಲಿಫ್ಟ್ ಕಾರಿನ ಟೀಸರ್ ಬಿಡುಗಡೆಗೊಂದಿಗೆ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

2019ರ ಜುಲೈನಲ್ಲಿ ಮೊದಲ ಬಾರಿಗೆ ಬಿಎಸ್-4 ಎಂಜಿನ್ ಮಾದರಿಯೊಂದಿಗೆ ಬಿಡುಗಡೆಯಾಗಿದ್ದ ಎಂಜಿ ಹೆಕ್ಟರ್ ಎಸ್‌ಯುವಿಯು 2020ರ ಆರಂಭದಲ್ಲಿ ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಣಗೊಂಡಿತ್ತು. ಬಿಎಸ್-6 ಎಂಜಿನ್‍ನೊಂದಿಗೆ ಬಿಡುಗಡೆಗೊಂಡ ನಂತರ ಮತ್ತೆ ಯಾವುದೇ ಬದಲಾವಣೆ ಪಡೆದುಕೊಂಡಿರದ ಹೆಕ್ಟರ್ ಎಸ್‌ಯುವಿಯು ಇದೀಗ ಫೇಸ್‌ಲಿಫ್ಟ್ ಆವೃತ್ತಿಯೊಂದಿಗೆ ಪ್ರಮುಖ ಬದಲಾವಣೆ ಪಡೆದುಕೊಳ್ಳುತ್ತಿದೆ.

ಎಂಜಿ ಮೋಟಾರ್ ಕಂಪನಿಯು ಹೆಕ್ಟರ್ ಫೇಸ್‌ಲಿಫ್ಟ್ ಕಾರು ಮಾದರಿಯನ್ನು ಇದೇ ತಿಂಗಳು 7ರಂದು ಬಿಡುಗಡೆ ಮಾಡಲಿರುವ ಕಂಪನಿಯು ಸಂಕ್ರಾಂತಿ ಸಂಭ್ರಮದ ವೇಳೆ ವಿತರಣೆ ಆರಂಭಿಸುವ ಸಿದ್ದತೆಯಲ್ಲಿದೆ.

ಫೇಸ್‌ಲಿಫ್ಟ್ ಹೆಕ್ಟರ್ ಮಾದರಿಯಲ್ಲಿ ಹೆಕ್ಟರ್ ಪ್ಲಸ್ ಮಾದರಿಯಿಂದಲೂ ಕೆಲವು ಹೆಚ್ಚುವರಿ ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಳ್ಳಲಾಗಿದ್ದು, ಜೊತೆಗೆ ಯುಎಸ್ಎ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಷವರ್ಲೆ ಕಾಪ್ಟಿವಿಯಾದಲ್ಲಿರುವಂತೆ ಹೊರ ವಿನ್ಯಾಸವನ್ನು ಸಿದ್ದಪಡಿಸಲಾಗಿದೆ.

ಷವರ್ಲೆ ಕಾಪ್ಟಿವಿಯಾ ಎಸ್‌ಯುವಿ ಕಾರು ಎಂಜಿ ಹೆಕ್ಟರ್ ಕಾರಿನ ರೀಬ್ಯಾಡ್ಜ್ ಆವೃತ್ತಿಯಾಗಿ ಯುಎಸ್ಎನಲ್ಲಿ ಮಾರಾಟಗೊಳ್ಳುತ್ತಿದ್ದು, ಹೆಕ್ಟರ್ ಫೇಸ್‌ಲಿಫ್ಟ್ ನಲ್ಲಿ ಸ್ಟ್ಯಾಂಡರ್ಡ್ ಆಗಿ ಹೊಸ ವಿನ್ಯಾಸದ 18-ಇಂಚಿನ ಅಲಾಯ್ ವೀಲ್ಹ್, ಆಟೋ ಡಿಮ್ಮಿಂಗ್ ರಿಯಲ್ ವ್ಯೂ ಮಿರರ್ ನೀಡಲಾಗಿದೆ. ಹಾಗೆಯೇ ಫೇಸ್‌ಲಿಫ್ಟ್ ಮಾದರಿಯಲ್ಲಿ ಹೊಸದಾಗಿ ಮರುವಿನ್ಯಾಸಗೊಳಿಸಲಾದ ಗ್ರಿಲ್ ಮತ್ತು ಡ್ಯುಯಲ್ ಕಲರ್ ಇಂಟಿರಿಯರ್ ಸಹ ನೀಡಲಾಗಿದ್ದು, ವಿನ್ಯಾಸದಲ್ಲಿನ ಬದಲಾವಣೆ ಹೊರತುಪಡಿಸಿ ಎಂಜಿನ್ ಆಯ್ಕೆಯಲ್ಲಿ ಬಿಎಸ್-6 ಮಾದರಿಯಲ್ಲಿರುವಂತೆಯೇ ಮುಂದುವರಿಸಲಾಗಿದೆ.

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಸದ್ಯ ತನ್ನದೆ ಆದ ಜನಪ್ರಿಯತೆ ಹೊಂದಿರುವ ಎಂಜಿ ಹೆಕ್ಟರ್ ಕಾರು ಮಾದರಿಯು ಫೇಸ್‌ಲಿಫ್ಟ್ ಮಾದರಿಯೊಂದಿಗೆ ಮತ್ತಷ್ಟು ಗ್ರಾಹಕರನ್ನು ಆಕರ್ಷಣೆ ಮಾಡುವ ತವಕದಲ್ಲಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೆಕ್ಟರ್ ಕಾರು ಮಾದರಿಯು ಬಿಎಸ್-6 ಮಾದರಿಯಲ್ಲಿರುವಂತೆಯೇ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಹೊಸ ವಿನ್ಯಾಸ ಮತ್ತು ಪ್ರೀಮಿಯಂ ಫೀಚರ್ಸ್‌ಗಳಲ್ಲಿ ಹೊಸ ಕಾರು ಕೆಲವು ಬದಲಾವಣೆಗಳನ್ನು ಪಡೆದುಕೊಳ್ಳಲಿದೆ.

ಅತ್ಯುತ್ತಮ ಬೆಲೆಯೊಂದಿಗೆ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿರುವ ಹೆಕ್ಟರ್ ಕಾರು ಫೇಸ್‌ಲಿಫ್ಟ್ ಮಾದರಿಯೊಂದಿಗೆ ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲು ಸಜ್ಜುಗೊಂಡಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇನ್ನು ಹೆಕ್ಟರ್ ಕಾರು ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.84 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.18.09 ಲಕ್ಷ ಬೆಲೆ ಹೊಂದಿದ್ದು, ಫೇಸ್‌ಲಿಫ್ಟ್ ಮಾದರಿಯು ಪ್ರಸ್ತುತ ಮಾದರಿಯ ಬೆಲೆಗಿಂತಲೂ ರೂ. 30 ಸಾವಿರ ರೂ. 50 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.