ಇದೇ ತಿಂಗಳು 7ರಂದು ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ ಎಸ್‌ಯುವಿ

ಎಂಜಿ ಮೋಟಾರ್ ಕಂಪನಿಯು ಇದೇ ತಿಂಗಳು 7ರಂದು ಹೆಕ್ಟರ್ ಫೇಸ್‌ಲಿಫ್ಟ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಬದಲಾವಣೆಯೊಂದಿಗೆ ಬಿಡುಗಡೆಯಾಗುತ್ತಿರುವ ಫೇಸ್‌ಲಿಫ್ಟ್ ಕಾರಿನ ಟೀಸರ್ ಬಿಡುಗಡೆಗೊಂದಿಗೆ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಇದೇ ತಿಂಗಳು 7ರಂದು ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ ಎಸ್‌ಯುವಿ

2019ರ ಜುಲೈನಲ್ಲಿ ಮೊದಲ ಬಾರಿಗೆ ಬಿಎಸ್-4 ಎಂಜಿನ್ ಮಾದರಿಯೊಂದಿಗೆ ಬಿಡುಗಡೆಯಾಗಿದ್ದ ಎಂಜಿ ಹೆಕ್ಟರ್ ಎಸ್‌ಯುವಿಯು 2020ರ ಆರಂಭದಲ್ಲಿ ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಣಗೊಂಡಿತ್ತು. ಬಿಎಸ್-6 ಎಂಜಿನ್‍‌ನೊಂದಿಗೆ ಬಿಡುಗಡೆಗೊಂಡ ನಂತರ ಮತ್ತೆ ಯಾವುದೇ ಬದಲಾವಣೆ ಪಡೆದುಕೊಂಡಿರದ ಹೆಕ್ಟರ್ ಎಸ್‌ಯುವಿಯು ಇದೀಗ ಫೇಸ್‌ಲಿಫ್ಟ್ ಆವೃತ್ತಿಯೊಂದಿಗೆ ಪ್ರಮುಖ ಬದಲಾವಣೆ ಪಡೆದುಕೊಳ್ಳುತ್ತಿದೆ.

ಇದೇ ತಿಂಗಳು 7ರಂದು ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ ಎಸ್‌ಯುವಿ

ಎಂಜಿ ಮೋಟಾರ್ ಕಂಪನಿಯು ಹೆಕ್ಟರ್ ಫೇಸ್‌ಲಿಫ್ಟ್ ಕಾರು ಮಾದರಿಯನ್ನು ಇದೇ ತಿಂಗಳು 7ರಂದು ಬಿಡುಗಡೆ ಮಾಡಲಿರುವ ಕಂಪನಿಯು ಸಂಕ್ರಾಂತಿ ಸಂಭ್ರಮದ ವೇಳೆ ವಿತರಣೆ ಆರಂಭಿಸುವ ಸಿದ್ದತೆಯಲ್ಲಿದೆ.

ಇದೇ ತಿಂಗಳು 7ರಂದು ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ ಎಸ್‌ಯುವಿ

ಫೇಸ್‌ಲಿಫ್ಟ್ ಹೆಕ್ಟರ್ ಮಾದರಿಯಲ್ಲಿ ಹೆಕ್ಟರ್ ಪ್ಲಸ್‌ ಮಾದರಿಯಿಂದಲೂ ಕೆಲವು ಹೆಚ್ಚುವರಿ ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಳ್ಳಲಾಗಿದ್ದು, ಜೊತೆಗೆ ಯುಎಸ್ಎ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಷವರ್ಲೆ ಕಾಪ್ಟಿವಿಯಾದಲ್ಲಿರುವಂತೆ ಹೊರ ವಿನ್ಯಾಸವನ್ನು ಸಿದ್ದಪಡಿಸಲಾಗಿದೆ.

ಇದೇ ತಿಂಗಳು 7ರಂದು ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ ಎಸ್‌ಯುವಿ

ಷವರ್ಲೆ ಕಾಪ್ಟಿವಿಯಾ ಎಸ್‌ಯುವಿ ಕಾರು ಎಂಜಿ ಹೆಕ್ಟರ್ ಕಾರಿನ ರೀಬ್ಯಾಡ್ಜ್ ಆವೃತ್ತಿಯಾಗಿ ಯುಎಸ್ಎನಲ್ಲಿ ಮಾರಾಟಗೊಳ್ಳುತ್ತಿದ್ದು, ಹೆಕ್ಟರ್ ಫೇಸ್‌ಲಿಫ್ಟ್‌ ನಲ್ಲಿ ಸ್ಟ್ಯಾಂಡರ್ಡ್ ಆಗಿ ಹೊಸ ವಿನ್ಯಾಸದ 18-ಇಂಚಿನ ಅಲಾಯ್ ವೀಲ್ಹ್, ಆಟೋ ಡಿಮ್ಮಿಂಗ್ ರಿಯಲ್ ವ್ಯೂ ಮಿರರ್ ನೀಡಲಾಗಿದೆ. ಹಾಗೆಯೇ ಫೇಸ್‌ಲಿಫ್ಟ್ ಮಾದರಿಯಲ್ಲಿ ಹೊಸದಾಗಿ ಮರುವಿನ್ಯಾಸಗೊಳಿಸಲಾದ ಗ್ರಿಲ್ ಮತ್ತು ಡ್ಯುಯಲ್ ಕಲರ್ ಇಂಟಿರಿಯರ್ ಸಹ ನೀಡಲಾಗಿದ್ದು, ವಿನ್ಯಾಸದಲ್ಲಿನ ಬದಲಾವಣೆ ಹೊರತುಪಡಿಸಿ ಎಂಜಿನ್ ಆಯ್ಕೆಯಲ್ಲಿ ಬಿಎಸ್-6 ಮಾದರಿಯಲ್ಲಿರುವಂತೆಯೇ ಮುಂದುವರಿಸಲಾಗಿದೆ.

ಇದೇ ತಿಂಗಳು 7ರಂದು ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ ಎಸ್‌ಯುವಿ

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಸದ್ಯ ತನ್ನದೆ ಆದ ಜನಪ್ರಿಯತೆ ಹೊಂದಿರುವ ಎಂಜಿ ಹೆಕ್ಟರ್ ಕಾರು ಮಾದರಿಯು ಫೇಸ್‌ಲಿಫ್ಟ್ ಮಾದರಿಯೊಂದಿಗೆ ಮತ್ತಷ್ಟು ಗ್ರಾಹಕರನ್ನು ಆಕರ್ಷಣೆ ಮಾಡುವ ತವಕದಲ್ಲಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಇದೇ ತಿಂಗಳು 7ರಂದು ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ ಎಸ್‌ಯುವಿ

ಹೆಕ್ಟರ್ ಕಾರು ಮಾದರಿಯು ಬಿಎಸ್-6 ಮಾದರಿಯಲ್ಲಿರುವಂತೆಯೇ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಹೊಸ ವಿನ್ಯಾಸ ಮತ್ತು ಪ್ರೀಮಿಯಂ ಫೀಚರ್ಸ್‌ಗಳಲ್ಲಿ ಹೊಸ ಕಾರು ಕೆಲವು ಬದಲಾವಣೆಗಳನ್ನು ಪಡೆದುಕೊಳ್ಳಲಿದೆ.

ಇದೇ ತಿಂಗಳು 7ರಂದು ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ ಎಸ್‌ಯುವಿ

ಅತ್ಯುತ್ತಮ ಬೆಲೆಯೊಂದಿಗೆ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿರುವ ಹೆಕ್ಟರ್ ಕಾರು ಫೇಸ್‌ಲಿಫ್ಟ್ ಮಾದರಿಯೊಂದಿಗೆ ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲು ಸಜ್ಜುಗೊಂಡಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇದೇ ತಿಂಗಳು 7ರಂದು ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ ಎಸ್‌ಯುವಿ

ಇನ್ನು ಹೆಕ್ಟರ್ ಕಾರು ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.84 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.18.09 ಲಕ್ಷ ಬೆಲೆ ಹೊಂದಿದ್ದು, ಫೇಸ್‌ಲಿಫ್ಟ್ ಮಾದರಿಯು ಪ್ರಸ್ತುತ ಮಾದರಿಯ ಬೆಲೆಗಿಂತಲೂ ರೂ. 30 ಸಾವಿರ ರೂ. 50 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.

Most Read Articles

Kannada
English summary
MG Hector Facelift India Launch On 7th January 2021. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X