ಹೆಕ್ಟರ್ ಫೇಸ್‌ಲಿಫ್ಟ್ ಆವೃತ್ತಿಯ ಬೆಲೆ ಹೆಚ್ಚಿಸಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಕಂಪನಿಯು ತನ್ನ ಜನಪ್ರಿಯ ಹೆಕ್ಟರ್ ಎಸ್‌ಯುವಿ ಬೆಲೆಯನ್ನು ಹೆಚ್ಚಳ ಮಾಡಿದ್ದು, ಹೊಸ ದರ ಇಂದಿನಿಂದಲೇ ಅನ್ವಯವಾಗುವಂತೆ ಪರಿಸ್ಕೃತ ದರಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಹೆಕ್ಟರ್ ಫೇಸ್‌ಲಿಫ್ಟ್ ಆವೃತ್ತಿಯ ಬೆಲೆ ಹೆಚ್ಚಿಸಿದ ಎಂಜಿ ಮೋಟಾರ್

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಎಸ್‌ಯುವಿ ಕಾರುಗಳ ಮಾರಾಟ ಹೊಂದಿರುವ ಎಂಜಿ ಮೋಟಾರ್ ಕಂಪನಿಯು ಉತ್ಪಾದನಾ ವೆಚ್ಚ ಹೆಚ್ಚಿರುವ ಹಿನ್ನಲೆಯಲ್ಲಿ ಬೆಲೆ ಹೆಚ್ಚಳ ಮಾಡಿರುವುದಾಗಿ ಹೇಳಿಕೊಂಡಿದ್ದು, ಹೆಕ್ಟರ್ ಮಾದರಿಯ ಬೆಲೆಯನ್ನು ಕೇವಲ ಒಂದೇ ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ದರ ಹೆಚ್ಚಿಸಿದೆ. ಕಳೆದ ತಿಂಗಳು ಫೇಸ್‌ಲಿಫ್ಟ್ ವರ್ಷನ್ ಬಿಡುಗಡೆಯಾಗಿದ್ದ ಸಂದರ್ಭದಲ್ಲೂ ಭಾರೀ ಪ್ರಮಾಣದ ದರ ಹೆಚ್ಚಳ ಪಡೆದುಕೊಂಡಿದ್ದ ಹೆಕ್ಟರ್ ಕಾರು ಇದೀಗ ಮತ್ತೊಮ್ಮೆ ಬೆಲೆ ಹೆಚ್ಚಳ ಪಡೆದುಕೊಂಡಿದೆ.

ಹೆಕ್ಟರ್ ಫೇಸ್‌ಲಿಫ್ಟ್ ಆವೃತ್ತಿಯ ಬೆಲೆ ಹೆಚ್ಚಿಸಿದ ಎಂಜಿ ಮೋಟಾರ್

ಹೊಸ ದರಪಟ್ಟಿಯಲ್ಲಿ ಹೆಕ್ಟರ್ ಕಾರಿನ ಕೆಲವೇ ವೆರಿಯೆಂಟ್‌ಗಳಲ್ಲಿ ಬೆಲೆ ಹೆಚ್ಚಳ ಮಾಡಲಾಗಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಎಕ್ಸ್‌ಶೋರೂಂ ದರದಲ್ಲಿ ರೂ. 10 ಸಾವಿರದಷ್ಟು ಹೆಚ್ಚಿಸಲಾಗಿದೆ.

ಹೆಕ್ಟರ್ ಫೇಸ್‌ಲಿಫ್ಟ್ ಆವೃತ್ತಿಯ ಬೆಲೆ ಹೆಚ್ಚಿಸಿದ ಎಂಜಿ ಮೋಟಾರ್

2020ರ ಅಗಸ್ಟ್‌ನಲ್ಲಿ ವಿವಿಧ ವಾಹನ ಮಾದರಿಗಳ ಬೆಲೆ ಹೆಚ್ಚಳ ಮಾಡಿದ್ದ ಬಹುತೇಕ ಆಟೋ ಕಂಪನಿಗಳು ಇದೀಗ ಮತ್ತೆ ಬೆಲೆ ಹೆಚ್ಚಳ ಮಾಡುತ್ತಿದ್ದು, ಎಂಜಿ ಕಂಪನಿಯು ಹೆಕ್ಟರ್ ಬೆಲೆಯಲ್ಲಿ ಹೆಚ್ಚಳ ಮಾಡಿದೆ.

ಹೆಕ್ಟರ್ ಫೇಸ್‌ಲಿಫ್ಟ್ ಆವೃತ್ತಿಯ ಬೆಲೆ ಹೆಚ್ಚಿಸಿದ ಎಂಜಿ ಮೋಟಾರ್

ಫೆಬ್ರುವರಿ 4ರಿಂದಲೇ ಹೊಸ ಕಾರುಗಳ ಬೆಲೆ ಏರಿಕೆಯಾಗುವಂತೆ ಹೊಸ ದರ ನಿಗದಿಪಡಿಸಿರುವ ಎಂಜಿ ಮೋಟಾರ್ ಕಂಪನಿಯು ಮಿಡ್-ಸ್ಪೆಕ್ ರೂಪಾಂತರವಾದ ಸ್ಮಾರ್ಟ್ ಮತ್ತು ಟಾಪ್-ಸ್ಪೆಕ್ ರೂಪಾಂತರವಾದ ಶಾರ್ಪ್‌ನ ಬೆಲೆಯನ್ನು ಮಾತ್ರ ಹೆಚ್ಚಿಸಿದೆ. ಹೊಸ ದರ ಪ್ರಕಟವಾದ ನಂತರ ಹೆಕ್ಟರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.63 ಲಕ್ಷ ಬೆಲೆ ಪಡೆದುಕೊಂಡಿದೆ.

ಹೆಕ್ಟರ್ ಫೇಸ್‌ಲಿಫ್ಟ್ ಆವೃತ್ತಿಯ ಬೆಲೆ ಹೆಚ್ಚಿಸಿದ ಎಂಜಿ ಮೋಟಾರ್

ಇನ್ನು ಎಂಜಿ ಮೋಟಾರ್ ಕಂಪನಿಯು ಹೆಕ್ಟರ್ ಮತ್ತು ಹೆಕ್ಟರ್ ಪ್ಲಸ್ ಮೂಲಕ ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಂಪನಿಯು ಹೊಸ ಕಾರಿನಲ್ಲಿ ಮೊದಲ ಬಾರಿಗೆ ಸಿವಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡುವ ಸುಳಿವು ನೀಡಿದೆ.

ಹೆಕ್ಟರ್ ಫೇಸ್‌ಲಿಫ್ಟ್ ಆವೃತ್ತಿಯ ಬೆಲೆ ಹೆಚ್ಚಿಸಿದ ಎಂಜಿ ಮೋಟಾರ್

ಹೆಕ್ಟರ್ ಮತ್ತು ಹೆಕ್ಟರ್ ಪ್ಲಸ್ ಎಸ್‌ಯುವಿಯಲ್ಲಿ ಸದ್ಯ ಎಂಜಿ ಕಂಪನಿಯು 6-ಸ್ಪೀಡ್ ಮ್ಯಾನ್ಯುವಲ್ ಗೇರ್‌ಬಾಕ್ಸ್ ಆಯ್ಕೆ ಸ್ಟ್ಯಾಂಡರ್ಡ್ ಆಗಿ ಮತ್ತು ಪೆಟ್ರೋಲ್ ಮಾದರಿಗಳಿಗಾಗಿ 6-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಆಯ್ಕೆಯನ್ನು ನೀಡುತ್ತಿದೆ. ಆದರೆ ಹೊಸ ಕಾರುಗಳಲ್ಲಿ ಕಂಪನಿಯು 6-ಸ್ಪೀಡ್ ಸಿವಿಟಿ ಗೇರ್‌ಬಾಕ್ಸ್ ಅನ್ನು ಬಿಡುಗಡೆ ಮಾಡಲು ಮುಂದಾಗಿದ್ದು, ಹೊಸ ಆವೃತ್ತಿಯು ಆಟೋಮ್ಯಾಟಿಕ್ ಆವೃತ್ತಿಗಳನ್ನು ಬಯಸುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಲಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹೆಕ್ಟರ್ ಫೇಸ್‌ಲಿಫ್ಟ್ ಆವೃತ್ತಿಯ ಬೆಲೆ ಹೆಚ್ಚಿಸಿದ ಎಂಜಿ ಮೋಟಾರ್

ಸದ್ಯ ಖರೀದಿಗೆ ಲಭ್ಯವಿರುವ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಆವೃತ್ತಿಯು ಹೈ ಎಂಡ್ ಪೆಟ್ರೋಲ್ ಮಾದರಿಯಲ್ಲಿ ಮಾತ್ರ ಖರೀದಿಗೆ ಲಭ್ಯವಿದ್ದು, ಆರಂಭಿಕ ಪೆಟ್ರೋಲ್ ಮಾದರಿಗಳಿಗಾಗಿ ಸಿವಿಟಿ ಗೇರ್‌ಬಾಕ್ಸ್ ಸೂಕ್ತ ಆಯ್ಕೆಯಾಗಲಿದೆ.

ಹೆಕ್ಟರ್ ಫೇಸ್‌ಲಿಫ್ಟ್ ಆವೃತ್ತಿಯ ಬೆಲೆ ಹೆಚ್ಚಿಸಿದ ಎಂಜಿ ಮೋಟಾರ್

ಹೊಸ ಸಿವಿಟಿಯನ್ನು 1.5-ಲೀಟರ್ ಪೆಟ್ರೋಲ್ ಟರ್ಬೊ ಮಾದರಿಗಳಿಗಾಗಿ ಸಿದ್ದಪಡಿಸುತ್ತಿರುವ ಎಂಜಿ ಮೋಟಾರ್ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದ್ದು, ಹೊಸ ಸಿವಿಟಿ ಆಯ್ಕೆಯು ಹೆಕ್ಟರ್ ಮತ್ತು ಹೆಕ್ಟರ್ ಎರಡು ಆವೃತ್ತಿಗಳಿಗೂ ಪರಿಚಯಿಸಲಿದೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಹೆಕ್ಟರ್ ಫೇಸ್‌ಲಿಫ್ಟ್ ಆವೃತ್ತಿಯ ಬೆಲೆ ಹೆಚ್ಚಿಸಿದ ಎಂಜಿ ಮೋಟಾರ್

ಇನ್ನು ಹೆಕ್ಟರ್ ಮತ್ತು ಹೆಕ್ಟರ್ ಕಾರು ಮಾದರಿಗಳು ಬಹುತೇಕ ತಾಂತ್ರಿಕ ಅಂಶಗಳನ್ನು ಒಂದೇ ಮಾದರಿಯಲ್ಲಿ ಪಡೆದುಕೊಂಡಿದ್ದು, ಎಂಜಿನ್ ಆಯ್ಕೆ ಮತ್ತು ಆಸನ ಸೌಲಭ್ಯಗಳು ಮಾತ್ರ ವಿಭಿನ್ನತೆಯೊಂದಿಗೆ ಗ್ರಾಹಕರನ್ನು ಸೆಳೆಯಲಿವೆ. ಹೊಸ ಹೆಕ್ಟರ್ ಪ್ಲಸ್ 7 ಸೀಟರ್ ಮಾದರಿಯು, 6 ಸೀಟರ್ ಮಾದರಿಯಲ್ಲಿರುವಂತಹ ಇಂಟಿರಿಯರ್ ಹಾಗೂ ಎಕ್ಸ್ ಟಿರಿಯರ್ ಅನ್ನು ಹೊಂದಿದೆ. ಆದರೆ ಎರಡನೇ ಸಾಲಿನಲ್ಲಿ ಕ್ಯಾಪ್ಟನ್ ಸೀಟಿನ ಬದಲಿಗೆ ಬೆಂಚ್ ಸೀಟನ್ನು ನೀಡಲಾಗಿದೆ.

Most Read Articles

Kannada
English summary
New MG Hector Facelift Price Hiked New Price List. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X