Just In
- 54 min ago ರಾಯಲ್ ಎನ್ಫೀಲ್ಡ್ ಬೈಕಿಗೆ ನಡುಕ ಹುಟ್ಟುಸಿದ ಹೀರೋ ಬೈಕ್ ವಿತರಣೆ ಪ್ರಾರಂಭ: ರಸ್ತೆಗಿಳಿದು ಅಬ್ಬರಿಸುತ್ತಾ?
- 1 hr ago ದುಬಾರಿ ಬೆಲೆಯ ಮರ್ಸಿಡಿಸ್ ಸೆಡಾನ್ ಖರೀದಿಸಿದ ಕುಶಾ ಕಪಿಲಾ: ಯಾರು ಶಿವ ಈಕೆ.. ಈ ಕಾರಿನ ವಿಶೇಷತೆಗಳೇನು?
- 2 hrs ago Tata: 10 ಕೋಟಿ ಕಿ.ಮೀ ಮೈಲಿಗಲ್ಲು ದಾಟಿದ ಟಾಟಾ ಪವರ್ನ EV ಚಾರ್ಜಿಂಗ್ ನೆಟ್ವರ್ಕ್
- 2 hrs ago ಫ್ಯಾಮಿಲಿಯೊಂದಿಗೆ ಅರಾಮದಾಯಕ ಪ್ರಯಾಣಕ್ಕಾಗಿ ಇನ್ನೋವಾ ಹೈಕ್ರಾಸ್ ಹೊಸ ರೂಪಾಂತರ ಬಿಡುಗಡೆ
Don't Miss!
- News Chamarajanagar Lok Sabha Constituency: ಕೈ-ಕಮಲ ನಡುವೆ ಸಮರ-ಗೆಲ್ಲೋರಾರು?, ಅಭ್ಯರ್ಥಿಗಳ ಪ್ಲಸ್-ಮೈನಸ್ ಅಂಶಗಳು ಇಲ್ಲಿವೆ
- Finance ಈ ಎರಡು ದೇಶಗಳಿಗೆ ತಲಾ 10,000 ಟನ್ ಈರುಳ್ಳಿ ರಫ್ತು ಮಾಡಲು ಭಾರತ ಅನುಮತಿ
- Lifestyle ಶ್ರೀರಾಮನ ಸ್ಮರ್ಶಿಸಿದ ಸೂರ್ಯ ರಶ್ಮಿ..! 'ಸೂರ್ಯ ತಿಲಕ'ದ ಪ್ರಯೋಗ ಯಶಸ್ವಿ
- Sports ರೋಹಿತ್ ಮಾತನ್ನು ಗಂಭೀರವಾಗಿ ತೆಗೆದುಕೊಂಡ ದಿನೇಶ್ ಕಾರ್ತಿಕ್; ಟಿ20 ವಿಶ್ವಕಪ್ಗೆ ಆಯ್ಕೆ ಪಕ್ಕಾನಾ?
- Technology ಅಂತೂ ಬಿಡುಗಡೆ ಆಯ್ತು ಮೊಟೊ G64 5G ಫೋನ್!..ಅಚ್ಚರಿ ಬೆಲೆ, ಆಕರ್ಷಕ ಫೀಚರ್ಸ್!
- Movies ಚಂದನವನದಲ್ಲಿ ತ್ರಿವಿಕ್ರಮನಾಗಿ ಬೆಳೆದ ಹುಣಸೂರಿನ ವಾಮನಮೂರ್ತಿ ದ್ವಾರಕೀಶ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವರ್ಷದಲ್ಲಿ ಮೂರನೇ ಬಾರಿಗೆ ಹೆಚ್ಚಳವಾದ ಎಂಜಿ ಹೆಕ್ಟರ್, ಹೆಕ್ಟರ್ ಪ್ಲಸ್ ಕಾರುಗಳ ಬೆಲೆ
ಆಟೋ ಉತ್ಪಾದನಾ ಬಿಡಿಭಾಗಗಳ ಬೆಲೆ ಹೆಚ್ಚಳವಾಗುತ್ತಿರುವ ಪರಿಣಾಮ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ್ದು, ಎಂಜಿ ಮೋಟಾರ್ ಇಂಡಿಯಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಏರಿಕೆ ಮಾಡಿ ಹೊಸ ದರ ಪಟ್ಟಿ ಬಿಡುಗಡೆ ಮಾಡಿದೆ.
2021ರ ಅವಧಿಯಲ್ಲೇ ಈಗಾಗಲೇ ಎಂಜಿ ಕಾರುಗಳ ಬೆಲೆಯಲ್ಲಿ ಎರಡು ಬಾರಿ ಬೆಲೆ ಹೆಚ್ಚಳವಾಗಿದ್ದು, ಇದೀಗ ಮೂರನೇ ಬಾರಿಗೆ ಹೊಸ ಕಾರುಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ. ಹೊಸ ದರಪಟ್ಟಿಯಲ್ಲಿ ಹೆಕ್ಟರ್ ಮತ್ತು ಹೆಕ್ಟರ್ ಪ್ಲಸ್ ಕಾರುಗಳ ಬೆಲೆಯು ಸಾಕಷ್ಟು ದುಬಾರಿಯಾಗಿದ್ದು, ಹೆಕ್ಟರ್ ಮತ್ತುಹೆಕ್ಟರ್ ಹೊರತುಪಡಿಸಿ ಗ್ಲೊಸ್ಟರ್ ಮತ್ತು ಜೆಡ್ಎಸ್ ಎಲೆಕ್ಟ್ರಿಕ ಮಾದರಿಯ ಬೆಲೆಯಲ್ಲಿ ಯಾವುದೇ ಬದಲಾಣೆ ಮಾಡಲಾಗಿಲ್ಲ.
ಈ ಹಿಂದೆ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಬಿಡಿಭಾಗಗಳ ವೆಚ್ಚವು ನಿರಂತರವಾಗಿ ಹೆಚ್ಚುತ್ತಿರುವ ಪರಿಣಾಮ ನಿರಂತರವಾಗಿ ಬೆಲೆ ಪರಿಷ್ಕರಣೆ ಮಾಡುತ್ತಿದ್ದು, ಹೊಸ ವಾಹನಗಳು ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಬೆಲೆ ಏರಿಕೆ ಕಂಡಿವೆ.
ಆಟೋ ಕಂಪನಿಗಳು ವಿವಿಧ ಕಾರು ಮಾದರಿಗಳಿಗೆ ಅನುಗುಣವಾಗಿ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಶೇ. 1.50ರಿಂದ ಶೇ.3 ರಷ್ಟು ಬೆಲೆ ಹೆಚ್ಚಳವಾಗುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿಯಾಗಿ ರೂ. 50 ಸಾವಿರದಿಂದ ರೂ.1 ಲಕ್ಷದಷ್ಟು ಬೆಲೆ ಹೆಚ್ಚಳವಾಗಿವೆ.
ಮಧ್ಯಮ ಗಾತ್ರದ ಕಾರುಗಳ ಬೆಲೆಯಲ್ಲಿ ರೂ. 1 ಲಕ್ಷದಿಂದ ರೂ. 1.50 ಲಕ್ಷದಷ್ಟು ಬೆಲೆ ಹೆಚ್ಚಳವಾಗಿದ್ದು, ವಿದೇಶಿ ಮಾರುಕಟ್ಟೆಗಳಿಂದ ಆಮದುಗೊಳ್ಳುವ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್ಗಳ ಬೆಲೆ ಹೆಚ್ಚಳವಾಗಿರುವ ಪರಿಣಾಮ ಹೊಸ ವಾಹನ ಖರೀದಿಯು ಮತ್ತಷ್ಟು ಹೊರೆಯಾಗುತ್ತಿದೆ. ಹೊಸ ದರಪಟ್ಟಿದಲ್ಲಿ ಎಂಜಿ ಮೋಟಾರ್ ನಿರ್ಮಾಣದ ಹೆಕ್ಟರ್ ಕಾರುಗಳ ಬೆಲೆಯಲ್ಲಿ ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ ಶೇ. 1.50 ರಿಂದ ಶೇ.2 ರಷ್ಟು ಹೆಚ್ಚಳ ಮಾಡಿದೆ.
ಎಂಜಿ ಕಂಪನಿಯು ಹೆಕ್ಟರ್ ಮತ್ತು ಹೆಕ್ಟರ್ ಪ್ಲಸ್ ಹೊರತುಪಡಿಸಿ ಇನ್ನುಳಿದ ಕಾರು ಮಾದರಿಗಳಾದ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಗ್ಲೊಸ್ಟರ್ ಕಾರು ಮಾದರಿಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಹೊಸ ದರಪಟ್ಟಿಯಲ್ಲಿ ಹೆಕ್ಟರ್ ಸ್ಟ್ಯಾಂಡರ್ಡ್ ಮಾದರಿಯ ಬೆಲೆಯಲ್ಲಿ ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ ಆರಂಭಿಕ ಆವೃತ್ತಿಗಳು ರೂ. 28 ಸಾವಿರದಿಂದ ಟಾಪ್ ಎಂಡ್ ಮಾದರಿಯು ರೂ. 43 ಸಾವಿರ ಬೆಲೆ ಹೆಚ್ಚಳ ಪಡೆದುಕೊಂಡಿದೆ.
ಹಾಗೆಯೇ 7 ಸೀಟರ್ ಹೆಕ್ಟರ್ ಪ್ಲಸ್ ಕಾರು ಮಾದರಿಯ ಬೆಲೆಯ ಬೆಲೆಯಲ್ಲಿ ವೆರಿಯೆಂಟ್ಗಳಿಗೆ ಅನುಗುಣವಾಗಿ ಎಕ್ಸ್ಶೋರೂಂ ದರದಲ್ಲಿ ರೂ. 28 ಸಾವಿರದಿಂದ ರೂ. 43 ಸಾವಿರ ಹೆಚ್ಚಳ ಮಾಡಲಾಗಿದ್ದು, ಹೊಸ ದರಗಳು ಇಂದಿನಿಂದಲೇ ಅನ್ವಯವಾಗಲಿವೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!
ಬೆಲೆ ಬದಲಾವಣೆ ನಂತರ ಯಾವುದೇ ತಾಂತ್ರಿಕ ಅಂಶಗಳನ್ನು ಬದಲಾವಣೆಗೊಳಿಸದ ಎಂಜಿ ಮೋಟಾರ್ ಕಂಪನಿಯು ಈ ಹಿಂದಿನ ಮಾದರಿಯಲ್ಲಿರುವ ತಾಂತ್ರಿಕ ಅಂಶಗಳನ್ನು ಮುಂದುವರಿಸಿದ್ದು, ದರ ಏರಿಕೆಯಿಂದಾಗಿ ಯುಗಾದಿ ಸಂಭ್ರಮಾಚರಣೆಗಾಗಿ ಕಾರು ಖರೀದಿ ಯೋಜನೆಯಲ್ಲಿದ್ದ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ.