Just In
- 1 hr ago
ಫೋಕ್ಸ್ವ್ಯಾಗನ್ ಐಡಿ.4 ಜಿಟಿಎಕ್ಸ್ ಪರ್ಫಾಮೆನ್ಸ್ ಎಲೆಕ್ಟ್ರಿಕ್ ಕಾರಿನ ಟೀಸರ್ ಬಿಡುಗಡೆ
- 1 hr ago
ಕೇವಲ 48 ನಿಮಿಷಗಳಲ್ಲಿ ಸೋಲ್ಡ್ ಔಟ್ ಆದ ಕೆಟಿಎಂ 1290 ಸೂಪರ್ ಡ್ಯೂಕ್ ಆರ್ಆರ್
- 3 hrs ago
ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ
- 4 hrs ago
ದುಬಾರಿ ಬೆಲೆಯ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿ ಖರೀದಿಸಿದ ನಟ ಅರ್ಜುನ್ ಕಪೂರ್
Don't Miss!
- Sports
ಐಪಿಎಲ್ 2021: ಅತಿ ದೊಡ್ಡ ಮೈಲಿಗಲ್ಲು ಮುಟ್ಟಲು ವಿರಾಟ್ ಕೊಹ್ಲಿ ಮತ್ತಷ್ಟು ಸನಿಹ
- News
ಸರ್ಕಾರಗಳಿಗೆ ವರದಾನವಾಗುತ್ತಿದೆ ಫೇಸ್ಬುಕ್ ನೀತಿಯಲ್ಲಿನ ಲೋಪ
- Finance
ಸತತ 15ದಿನಗಳಿಂದ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸವಿಲ್ಲ
- Movies
'ನೀವು ಬಸ್ ಡ್ರೈವರ್ ಮಗನೇ, ನಮ್ಮ ಮುಷ್ಕರ ಬೆಂಬಲಿಸಿ': ಯಶ್ಗೆ ಪತ್ರ ಬರೆದ ಸಾರಿಗೆ ನೌಕರರು?
- Lifestyle
ರಕ್ತದಲ್ಲಿ ಕಬ್ಬಿಣದಂಶ ಹೆಚ್ಚಾದರೆ ಆಯುಸ್ಸು ಕಡಿಮೆಯಾಗುವುದು
- Education
NEET PG Admit Card 2021: ನೀಟ್ ಪಿಜಿ ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಎಂಜಿ ಮೋಟಾರ್
ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ ಕಾರು ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆಯನ್ನು ಆರಂಭಿಸಿ ಎರಡು ವರ್ಷ ಪೂರ್ಣಗೊಳ್ಳುತ್ತಿದ್ದು, ಕಾರು ಮಾರಾಟದಲ್ಲಿ ತನ್ನದೆ ಆದ ವೈಶಿಷ್ಟ್ಯತೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದೆ.

ಭಾರತದಲ್ಲಿ ಕಾರು ಉತ್ಪಾದನೆಯನ್ನು ಆರಂಭಿಸಿದ ನಂತರ ಇದುವರೆಗೆ 50 ಸಾವಿರ ಯುನಿಟ್ ಹೆಕ್ಟರ ಕಾರುಗಳನ್ನು ಉತ್ಪಾದನೆ ಮಾಡಿದ್ದು, ಹೊಸ ಸಂಭ್ರಮಾಚರಣೆಗಾಗಿ ಎಂಜಿ ಮೋಟಾರ್ ಕಂಪನಿಯು ತನ್ನ ಮಹಿಳಾ ಸಿಬ್ಬಂದಿಗೆ ವಿಶೇಷ ಜವಾಬ್ದಾರಿ ವಹಿಸಿತ್ತು. 50ನೇ ಸಾವಿರದ ಯುನಿಟ್ ಅನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿ ನೇತೃತ್ವದಲ್ಲೇ ನಿರ್ಮಾಣ ಮಾಡುವ ಗುರಿ ಹೊಂದಿದ್ದ ಎಂಜಿ ಕಂಪನಿಯು ಯೋಜನೆಯಂತೆ ಹೊಸ ಮೈಲಿಗಲ್ಲು ಸಾಧಿಸಿದೆ.

ಗುಜರಾತ್‌ನಲ್ಲಿರುವ ಹೊಲಾಲ್ ಕಾರು ಉತ್ಪಾದನಾ ಘಟಕದಲ್ಲಿ ಹೊಸ ಮೈಲಿಗಲ್ಲು ಸಾಧಿಸಿರುವ ಎಂಜಿ ಮೋಟಾರ್ ಕಂಪನಿಯು ಹೊಸ ಕಾರು ಉತ್ಪನ್ನಗಳೊಂದಿಗೆ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಹೊಂದಿರುವ ಹೊಸ ಕಾರು ಉತ್ಪಾದನಾ ಘಟಕದೊಂದಿಗೆ ಹೆಚ್ಚಿನ ಮಟ್ಟದಲ್ಲಿ ಕಾರು ಉತ್ಪಾದನೆ ಕೈಗೊಳ್ಳುತ್ತಿದೆ.

ಭಾರತದಲ್ಲಿ ಆರಂಭಿಕವಾಗಿ ರೂ. 3 ಸಾವಿರ ಕೋಟಿ ಆರಂಭಿಕ ಬಂಡವಾಳದೊಂದಿಗೆ ಆರಂಭವಾದ ಎಂಜಿ ಮೋಟಾರ್ ಹೊಸ ಕಾರು ಉತ್ಪಾದನಾ ಘಟಕವು ಇದುವರೆಗೆ 50 ಸಾವಿರ ಯುನಿಟ್ ಹೆಕ್ಟರ್ ಕಾರುಗಳನ್ನು ಉತ್ಪಾದನೆ ಕೈಗೊಂಡಿದ್ದು, ಆರಂಭದಲ್ಲಿ ಪ್ರತಿ ತಿಂಗಳು 2 ಸಾವಿರ ಯುನಿಟ್ ಉತ್ಪಾದನಾ ಸಾಮರ್ಥ್ಯ ಹೊಂದಿದ್ದ ಹೊಸ ಉತ್ಪಾದನಾ ಘಟಕವು ಇದೀಗ 3 ಸಾವಿರಕ್ಕೆ ತಲುಪಿದೆ.

ಹೊಸ ಕಾರು ಉತ್ಪಾದನಾ ಘಟಕದಲ್ಲಿ ಮಹಿಳಾ ಸಿಬ್ಬಂದಿಗೆ ಶೇ.33ರಷ್ಟು ಉದ್ಯೋಗಗಳನ್ನು ಮೀಸಲು ನೀಡುತ್ತಿರುವ ಎಂಜಿ ಮೋಟಾರ್ ಕಂಪನಿಯು ಹೊಸ ಗುರಿಸಾಧನೆಗಾಗಿ ಮಹಿಳಾ ಸಿಬ್ಬಂದಿಗೆ ವಿಶೇಷ ಜವಾಬ್ದಾರಿ ವಹಿಸುವ ಮೂಲಕ ಗಮನಸೆಳೆದಿದ್ದು, ಮುಂಬರುವ ದಿನಗಳಲ್ಲಿ ಕಾರು ಉತ್ಪಾದನೆಯಲ್ಲಿ ಮತ್ತಷ್ಟು ಹೊಸ ದಾಖಲೆಗಳನ್ನು ಮಾಡುವುದಾಗಿ ಹರ್ಷ ವ್ಯಕ್ತಪಡಿಸಿದೆ.

ಇನ್ನು ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ ಸದ್ಯ ಹೆಕ್ಟರ್, ಹೆಕ್ಟರ್ ಪ್ಲಸ್, ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಗ್ಲೊಸ್ಟರ್ ಎಸ್‌ಯುವಿ ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ. ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ತನ್ನದೆ ಆದ ಜನಪ್ರಿಯತೆ ಹೊಂದಿರುವ ಎಂಜಿ ಮೋಟಾರ್ ಕಂಪನಿಯು ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟಕ್ಕಾಗಿ ಭರ್ಜರಿ ಸಿದ್ದತೆ ನಡೆಸಿದೆ.

ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ ತನ್ನ ಐದನೇ ಕಾರು ಮಾದರಿಯಾಗಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯೊಂದನ್ನು ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರು ಸೆಗ್ಮೆಂಟ್ ಕಾರು ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಪವರ್‌ಫುಲ್ ಎಂಜಿನ್ ಆಯ್ಕೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.
MOST READ: ಮುಖೇಶ್ ಅಂಬಾನಿ ಭದ್ರತೆಗಾಗಿಯೇ ಬಂತು ಮೂರು ಕೋಟಿ ಬೆಲೆಯ ಕಾರು

ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯ ಮೂಲಕ ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿರುವ ಎಂಜಿ ಮೋಟಾರ್ ಕಂಪನಿಯು ಸದ್ಯ ಹೊಸ ಕಾರನ್ನು ಜೆಡ್ಎಸ್ ಪೆಟ್ರೋಲ್ ಮಾದರಿಯಾಗಿ ಪರೀಕ್ಷೆ ಕೈಗೊಂಡಿದೆ.

ಸ್ಟ್ಯಾಂಡರ್ಡ್ ಹೆಕ್ಟರ್ ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಕಾರು ಮಾರುತಿ ಎಸ್-ಕ್ರಾಸ್, ರೆನಾಲ್ಟ್ ಡಸ್ಟರ್, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಹೊಸ ಕಾರು ಆರಂಭಿಕವಾಗಿ ರೂ.10 ಲಕ್ಷದೊಳಗೆ ಬೆಲೆ ಹೊಂದಿರಲಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹೊಸ ಕಾರಿನಲ್ಲಿ 1.5-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಗಾಗಿ 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14 ಲಕ್ಷ ಬೆಲೆ ಹೊಂದಬಹುದೆಂದು ಅಂದಾಜಿಸಲಾಗುತ್ತಿದೆ.