ಹೊಸ ಫೀಚರ್ಸ್‌ಗಳೊಂದಿಗೆ ಹೆಕ್ಟರ್ ಶೈನ್ ಆವೃತ್ತಿಯನ್ನು ಬಿಡುಗಡೆ ಮಾಡಿದ ಎಂಜಿ ಮೋಟಾರ್

ಎಂಜಿ ಮೋಟರ್ ಕಂಪನಿಯು ತನ್ನ ಜನಪ್ರಿಯ ಹೆಕ್ಟರ್ ಆವೃತ್ತಿಯ ಶೈನ್ ವೆರಿಯೆಂಟ್ ಅನ್ನು ಹೊಸ ಫೀಚರ್ಸ್‌ಗಳೊಂದಿಗೆ ಉನ್ನತೀಕರಿಸಿ ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14.51 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಹೆಕ್ಟರ್ ಶೈನ್ ಆವೃತ್ತಿಯನ್ನು ಬಿಡುಗಡೆ ಮಾಡಿದ ಎಂಜಿ ಮೋಟಾರ್

ಹೆಕ್ಟರ್ ಫೇಸ್‌ಲಿಫ್ಟ್‌ ಎಸ್‌ಯುವಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಒಟ್ಟು ನಾಲ್ಕು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಸ್ಟೈಲ್, ಸೂಪರ್, ಶೈನ್ ಮತ್ತು ಸ್ಮಾರ್ಟ್ ವೆರಿಯೆಂಟ್‌ಗಳನ್ನು ಹೊಂದಿದೆ. ಇದರಲ್ಲಿ ಇದೀಗ ಶೈನ್ ಆವೃತ್ತಿಯಲ್ಲಿ ಕೆಲವು ಪ್ರಮುಖ ತಾಂತ್ರಿಕ ಅಂಶಗಳ ಉನ್ನತೀಕರಣದೊಂದಿಗೆ ಬಿಡುಗಡೆ ಮಾಡಿದ್ದು, ಹೊಸ ವೆರಿಯೆಂಟ್ ಪೆಟ್ರೋಲ್ ಮತ್ತು ಡೀಸೆಲ್ ಎರಡು ಆಯ್ಕೆಯಲ್ಲೂ ಖರೀದಿಗೆ ಲಭ್ಯವಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಹೆಕ್ಟರ್ ಶೈನ್ ಆವೃತ್ತಿಯನ್ನು ಬಿಡುಗಡೆ ಮಾಡಿದ ಎಂಜಿ ಮೋಟಾರ್

ಹೊಸ ಫೀಚರ್ಸ್‌ಗಳೊಂದಿಗೆ ಉನ್ನತೀಕರಣಗೊಂಡಿರುವ ಹೆಕ್ಟರ್ ಶೈನ್ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಪೆಟ್ರೋಲ್ ಮಾದರಿಯು ರೂ. 14.51 ಲಕ್ಷಕ್ಕೆ ಮತ್ತು ಡೀಸೆಲ್ ಮಾದರಿಯು ರೂ. 16.49 ಲಕ್ಷಕ್ಕೆ ಖರೀದಿಗೆ ಲಭ್ಯವಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಹೆಕ್ಟರ್ ಶೈನ್ ಆವೃತ್ತಿಯನ್ನು ಬಿಡುಗಡೆ ಮಾಡಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಕಂಪನಿಯು ಹೊಸ ಶೈನ್ ಹೆಕ್ಟರ್ ಬಿಡುಗಡೆಗೂ ಮುನ್ನ ಹೈ ಎಂಡ್ ಸ್ಮಾರ್ಟ್ ವೆರಿಯೆಂಟ್‌ನಲ್ಲಿ ಮಾತ್ರ ನೀಡಲಾಗುತ್ತಿದ್ದ ಪ್ರಮುಖ ತಾಂತ್ರಿಕ ಅಂಶಗಳನ್ನು ಇದೀಗ ಶೈನ್ ವೆರಿಯೆಂಟ್‌ನಲ್ಲೂ ನೀಡಲಾಗುತ್ತಿದ್ದು, ಹೊಸ ಮಾದರಿಯಲ್ಲಿ ಇದೀಗ ಸ್ಟ್ಯಾಂಡರ್ಡ್ ಆಗಿ ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ಹೊಸದಾಗಿ ಒಂದು ಬಣ್ಣದ ಆಯ್ಕೆಯನ್ನು ನೀಡಲಾಗಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಹೆಕ್ಟರ್ ಶೈನ್ ಆವೃತ್ತಿಯನ್ನು ಬಿಡುಗಡೆ ಮಾಡಿದ ಎಂಜಿ ಮೋಟಾರ್

ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ಹೊಸ ಬಣ್ಣದ ಆಯ್ಕೆ ಹೊರತುಪಡಿಸಿ ಶೈನ್ ಮಾದರಿಯಲ್ಲಿ ಈ ತಾಂತ್ರಿಕ ಸೌಲಭ್ಯಗಳು ಮತ್ತು ಎಂಜಿನ್ ಆಯ್ಕೆಯನ್ನೇ ಮುಂದುವರಿಸಿದ್ದು, ಮಿಡ್ ವೆರಿಯೆಂಟ್‌ನಲ್ಲಿ ಎಲೆಕ್ಟ್ರಿಕ್ ಸನ್‌ರೂಫ್ ಬಯಸುವ ಗ್ರಾಹಕರಿಗೆ ಹೊಸ ವೆರೆಯೆಂಟ್ ಸೂಕ್ತವಾಗಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಹೆಕ್ಟರ್ ಶೈನ್ ಆವೃತ್ತಿಯನ್ನು ಬಿಡುಗಡೆ ಮಾಡಿದ ಎಂಜಿ ಮೋಟಾರ್

ಶೈನ್ ಕಾರು ಆವೃತ್ತಿಯು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಗಳೊಂದಿಗೆ ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಆವೃತ್ತಿಗಳನ್ನು ಹೊಂದಿದ್ದು, ಶೈನ್ ವೆರಿಯೆಂಟ್‌ನಲ್ಲಿ ಪೆಟ್ರೋಲ್ ಮೈಲ್ಡ್ ಹೈಬ್ರಿಡ್ ಮಾದರಿಯನ್ನು ನೀಡಲಾಗಿಲ್ಲ.

ಹೊಸ ಫೀಚರ್ಸ್‌ಗಳೊಂದಿಗೆ ಹೆಕ್ಟರ್ ಶೈನ್ ಆವೃತ್ತಿಯನ್ನು ಬಿಡುಗಡೆ ಮಾಡಿದ ಎಂಜಿ ಮೋಟಾರ್

ಸದ್ಯ ಹೆಕ್ಟರ್ ಸ್ಟ್ಯಾಂಡರ್ಡ್ ಮಾದರಿಗಳು ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 13.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.20 ಲಕ್ಷ ಬೆಲೆ ಹೊಂದಿದ್ದು, ವಿವಿಧ ವೆರಿಯೆಂಟ್‍‌ಗಳಿಗೆ ಅನುಗುಣವಾಗಿ ಪೆಟ್ರೋಲ್, ಡೀಸೆಲ್ ಮತ್ತು ಪೆಟ್ರೋಲ್ ಮೈಲ್ಡ್ ಹೈಬ್ರಿಡ್ ಮಾದರಿಗಳನ್ನು ನೀಡಲಾಗುತ್ತದೆ.

ಹೊಸ ಫೀಚರ್ಸ್‌ಗಳೊಂದಿಗೆ ಹೆಕ್ಟರ್ ಶೈನ್ ಆವೃತ್ತಿಯನ್ನು ಬಿಡುಗಡೆ ಮಾಡಿದ ಎಂಜಿ ಮೋಟಾರ್

ಹೆಕ್ಟರ್ ಕಾರಿನಲ್ಲಿ 1.5 ಲೀಟರ್ ಪೆಟ್ರೋಲ್, 1.5 ಲೀಟರ್ ಪೆಟ್ರೋಲ್ ಹೈಬ್ರಿಡ್ ಹಾಗೂ 2.0 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಲಭ್ಯವಿದ್ದು, ಕಂಪನಿಯು ಹೊಸ ಕಾರಿನಲ್ಲಿ ಮೊದಲ ಬಾರಿಗೆ ಸಿವಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆವೃತ್ತಿಯನ್ನು ಈ ವರ್ಷದ ಆರಂಭದಲ್ಲಿ ಬಿಡುಗಡೆ ಮಾಡಿತ್ತು.

ಹೊಸ ಫೀಚರ್ಸ್‌ಗಳೊಂದಿಗೆ ಹೆಕ್ಟರ್ ಶೈನ್ ಆವೃತ್ತಿಯನ್ನು ಬಿಡುಗಡೆ ಮಾಡಿದ ಎಂಜಿ ಮೋಟಾರ್

ಹೆಕ್ಟರ್ ಮತ್ತು ಹೆಕ್ಟರ್ ಪ್ಲಸ್ ಎಸ್‌ಯುವಿಯಲ್ಲಿ ಸದ್ಯ ಎಂಜಿ ಮೋಟಾರ್ ಕಂಪನಿಯು 6-ಸ್ಪೀಡ್ ಮ್ಯಾನ್ಯುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಸ್ಟ್ಯಾಂಡರ್ಡ್ ಆಗಿ ಮತ್ತು ಟರ್ಬೊ ಪೆಟ್ರೋಲ್ ಮಾದರಿಗಳಿಗಾಗಿ 6-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಆಯ್ಕೆಯನ್ನು ನೀಡುತ್ತಿದ್ದು, 8-ಸ್ಪೀಡ್ ಸಿವಿಟಿ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಇಕೋ ಮತ್ತು ಸ್ಪೋಟ್ ಮೋಡ್‌ಗಳನ್ನು ಹೊಸದಾಗಿ ಪರಿಚಯಿಸಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಹೆಕ್ಟರ್ ಶೈನ್ ಆವೃತ್ತಿಯನ್ನು ಬಿಡುಗಡೆ ಮಾಡಿದ ಎಂಜಿ ಮೋಟಾರ್

ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಆವೃತ್ತಿಯು ಹೈ ಎಂಡ್ ಪೆಟ್ರೋಲ್ ಮಾದರಿಯಲ್ಲಿ ಮಾತ್ರ ಖರೀದಿಗೆ ಲಭ್ಯವಿದ್ದು, ಆರಂಭಿಕ ಪೆಟ್ರೋಲ್ ಮಾದರಿಗಳಿಗಾಗಿ 8-ಸ್ಪೀಡ್ ಸಿವಿಟಿ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಹೆಕ್ಟರ್ ಶೈನ್ ಆವೃತ್ತಿಯನ್ನು ಬಿಡುಗಡೆ ಮಾಡಿದ ಎಂಜಿ ಮೋಟಾರ್

ಇದರೊಂದಿಗೆ ಆಕರ್ಷಕ ಬೆಲೆಗಳಲ್ಲಿ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬೈಯ್‌ಬ್ಯಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ 1 ಲಕ್ಷ ಕಿಲೋಮೀಟರ್‍, 5 ವರ್ಷದ ವರೆಗು ಲೇಬರ್ ಫ್ರೀ ಸರ್ವೀಸ್‌ಗಳನ್ನು ನೀಡಲಾಗುತ್ತಿದ್ದು, ಇದು ಎಸ್‌ಯುವಿ ಕಾರು ಖರೀದಿದಾರರ ಪ್ರಮುಖ ಆಕರ್ಷಣೆಯಾಗಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಹೆಕ್ಟರ್ ಶೈನ್ ಆವೃತ್ತಿಯನ್ನು ಬಿಡುಗಡೆ ಮಾಡಿದ ಎಂಜಿ ಮೋಟಾರ್

ಇನ್ನು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಸದ್ಯ ತನ್ನದೆ ಆದ ಜನಪ್ರಿಯತೆ ಹೊಂದಿರುವ ಎಂಜಿ ಹೆಕ್ಟರ್ ಕಾರು ಮಾದರಿಯು ಫೇಸ್‌ಲಿಫ್ಟ್ ಮಾದರಿಯೊಂದಿಗೆ ಮತ್ತಷ್ಟು ಗ್ರಾಹಕರನ್ನು ಆಕರ್ಷಣೆ ಮಾಡುತ್ತಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಹೆಕ್ಟರ್ ಶೈನ್ ಆವೃತ್ತಿಯನ್ನು ಬಿಡುಗಡೆ ಮಾಡಿದ ಎಂಜಿ ಮೋಟಾರ್

ಅತ್ಯುತ್ತಮ ಬೆಲೆಯೊಂದಿಗೆ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿರುವ ಹೆಕ್ಟರ್ ಕಾರು ಫೇಸ್‌ಲಿಫ್ಟ್ ಮಾದರಿಯೊಂದಿಗೆ ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಹ್ಯಾರಿಯರ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡುತ್ತಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಹೆಕ್ಟರ್ ಶೈನ್ ಆವೃತ್ತಿಯನ್ನು ಬಿಡುಗಡೆ ಮಾಡಿದ ಎಂಜಿ ಮೋಟಾರ್

ಹೆಕ್ಟರ್ ಕಾರು ಬಿಡುಗಡೆಯ ನಂತರ ಇದುವರೆಗೆ ಸುಮಾರು 60 ಸಾವಿರಕ್ಕೂ ಹೆಚ್ಚು ಯುನಿಟ್‌ಗಳು ಮಾರಾಟಗೊಂಡಿದ್ದು, ಕಾರಿನ ಕಾಯುವಿಕೆ ತಗ್ಗಿಸಲು ಉತ್ಪಾದನಾ ಪ್ರಕ್ರಿಯೆಯನ್ನು ಹೆಚ್ಚಿಸಲಾಗಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಹೆಕ್ಟರ್ ಶೈನ್ ಆವೃತ್ತಿಯನ್ನು ಬಿಡುಗಡೆ ಮಾಡಿದ ಎಂಜಿ ಮೋಟಾರ್

ಬಿಎಸ್-6 ನಿಯಮದಂತೆ ಎಂಜಿನ್ ಅನ್ನು ಉನ್ನತೀಕರಿಸಿರದ ನಂತರ ಗ್ರಾಹಕರಿಗೆ ಮತ್ತಷ್ಟು ಅನುಕೂಲಕವಾಗಲಿದ್ದು, ಪೆಟ್ರೋಲ್ ಮತ್ತು ಹೈಬ್ರಿಡ್ ವರ್ಷನ್ ಕಾರು ಮಾದರಿಗೆ ಹೆಚ್ಚಿನ ಗ್ರಾಹಕರು ಬೇಡಿಕೆ ಸಲ್ಲಿಸುತ್ತಿದ್ದಾರೆ.

Most Read Articles

Kannada
English summary
Mg hector shine variant launched in india at rs 14 51 lakh details.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X