ರೂ.10 ಲಕ್ಷದೊಳಗೆ ಆರಂಭಿಕ ಬೆಲೆ ಹೊಂದಿರಲಿದೆ ಎಂಜಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಎಂಜಿ ಮೋಟಾರ್ ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ ಜೆಡ್ಎಸ್ ಪೆಟ್ರೋಲ್ ಮಾದರಿಯನ್ನು ಸಹ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಕಾರುನ್ನು ಆರಂಭಿಕವಾಗಿ ರೂ. 10 ಲಕ್ಷದೊಳಗೆ ಬಿಡುಗಡೆಗೊಳಿಸುವ ನೀಡಿದೆ.

ಸಿ5 ಏರ್‌ಕ್ರಾಸ್‌ ಎಸ್‌ಯುವಿಯೊಂದಿಗೆ ಭಾರತದಲ್ಲಿ ಹೊಸ ಅಧ್ಯಾಯ ಶುರುಮಾಡಿದ ಸಿಟ್ರನ್

ಹೊಸ ಜೆಡ್ಎಸ್ ಪೆಟ್ರೋಲ್ ಮಾದರಿಯ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿರುವ ಎಂಜಿ ಮೋಟಾರ್ ಕಂಪನಿಯು ಹೊಸ ಕಾರಿನಲ್ಲಿ ಅತ್ಯುತ್ತಮ ಫೀಚರ್ಸ್ ಜೋಡಣೆ ಮಾಡಲಿದ್ದು, ಹೊಸ ಕಾರಿನ ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಮುಂದುವರಿಸಿದೆ. ಸ್ಟ್ಯಾಂಡರ್ಡ್ ಹೆಕ್ಟರ್ ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಜೆಡ್ಎಸ್ ಕಾರು ಮಾರುತಿ ಎಸ್-ಕ್ರಾಸ್, ರೆನಾಲ್ಟ್ ಡಸ್ಟರ್, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಸಿ5 ಏರ್‌ಕ್ರಾಸ್‌ ಎಸ್‌ಯುವಿಯೊಂದಿಗೆ ಭಾರತದಲ್ಲಿ ಹೊಸ ಅಧ್ಯಾಯ ಶುರುಮಾಡಿದ ಸಿಟ್ರನ್

2020ರ ಫೆಬ್ರುವರಿಯಲ್ಲಿ ನಡೆದಿದ್ದ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ಜೆಡ್ಎಸ್ ಪೆಟ್ರೋಲ್ ಕಾರು ಮಾದರಿಯು ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತಿದ್ದು, ಹೊಸ ಕಾರು ಬಿಡುಗಡೆ ಕುರಿತಂತೆ ಹೆಕ್ಟರ್ ಸಿವಿಟಿ ಬಿಡುಗಡೆಯ ಸಂದರ್ಭದಲ್ಲಿ ಎಂಜಿ ಮೋಟಾರ್ ಹಿರಿಯ ಅಧಿಕಾರಿಯೊಬ್ಬರುವ ಜೆಡ್ಎಸ್ ಪೆಟ್ರೋಲ್ ಮಾದರಿಯನ್ನು ಇದೇ ತಿಂಗಳಾಂತ್ಯಕ್ಕೆ ಬಿಡುಗಡೆ ಮಾಡುತ್ತಿರುವುದಾಗಿ ಸುಳಿವು ನೀಡಿದ್ದಾರೆ.

ಸಿ5 ಏರ್‌ಕ್ರಾಸ್‌ ಎಸ್‌ಯುವಿಯೊಂದಿಗೆ ಭಾರತದಲ್ಲಿ ಹೊಸ ಅಧ್ಯಾಯ ಶುರುಮಾಡಿದ ಸಿಟ್ರನ್

ಹೊಸ ಕಾರಿನ ತಾಂತ್ರಿಕ ಮಾಹಿತಿಗಳನ್ನು ಸದ್ಯಕ್ಕೆ ಬಹಿರಂಗಪಡಿಸಲು ನಿರಾಕರಿಸಿರುವ ಎಂಜಿ ಕಂಪನಿಯ ಹಿರಿಯ ಅಧಿಕಾರಿಗಳು ಹೊಸ ಕಾರಿನಲ್ಲಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಭಿನ್ನವಾದ ತಾಂತ್ರಿಕ ಅಂಶಗಳನ್ನು ಅಳವಡಿಸಿ ಗ್ರಾಹಕರನ್ನು ಸೆಳೆಯುವ ಯೋಜನೆಯಲ್ಲಿದ್ದು, ಹೊಸ ಕಾರಿನಲ್ಲಿರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಸೌಲಭ್ಯವು ಕಾರಿನ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸುವ ನೀರಿಕ್ಷೆಯಿದೆ.

ಸಿ5 ಏರ್‌ಕ್ರಾಸ್‌ ಎಸ್‌ಯುವಿಯೊಂದಿಗೆ ಭಾರತದಲ್ಲಿ ಹೊಸ ಅಧ್ಯಾಯ ಶುರುಮಾಡಿದ ಸಿಟ್ರನ್

ಎಡಿಎಎಸ್ ಸೌಲಭ್ಯ ಅಳವಡಿಕೆಯಿಂದ ಕಾರು ಚಾಲನೆ ವೇಳೆ ರಸ್ತೆಗುಂಡಿಗಳನ್ನು ಸುಲಭವಾಗಿ ಪತ್ತೆಹಚ್ಚಲು ರಡಾರ್ ಬಳಕೆಯಾಗಲಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ಕಾರ್ಯ ನಿರ್ವಹಣೆ ಮಾಡುವ ರಸ್ತೆಗುಂಡಿಯಿಂದಾಗುವ ಅಪಾಯವನ್ನು ತಡೆಯಬಲ್ಲದು. ಜೊತೆಗೆ ಚಾಲಕನಿಗೆ ಧ್ವನಿ ಸಂದೇಶ ಮೂಲಕ ಎಚ್ಚರಿಕೆ ನೀಡಲಿದ್ದು, ರಿವರ್ಸ್ ಸಂದರ್ಭದಲ್ಲಿ 3ಡಿ ಪನೊರಮಿಕ್ ವ್ಯೂ ಸೌಲಭ್ಯ ಒದಗಿಸುತ್ತದೆ.

ಸಿ5 ಏರ್‌ಕ್ರಾಸ್‌ ಎಸ್‌ಯುವಿಯೊಂದಿಗೆ ಭಾರತದಲ್ಲಿ ಹೊಸ ಅಧ್ಯಾಯ ಶುರುಮಾಡಿದ ಸಿಟ್ರನ್

ಇದರೊಂದಿಗೆ ಹೊಸ ಕಾರಿನಲ್ಲಿ ಅತ್ಯುತ್ತಮ ಲೆದರ್ ವ್ಯಾರ್ಪ್ ಆಸನಗಳು, ಹಿಂಬದಿಯ ಪ್ರಯಾಣಿಕರಿಗೆ ಎಸಿ ವೆಂಟ್ಸ್, 10-ಇಂಚಿನ ಇನ್ಪೋಟೈನ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಪ್ಲ್ಯಾಟ್-ಬಾಟಮ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಹಿಂಬದಿಯ ಪ್ರಯಾಣಿಕರಿಗೆ ಅರಾಮದಾಯಕವಾದ ಆಸನ ಸೌಲಭ್ಯಗಳಿವೆ.

ಸಿ5 ಏರ್‌ಕ್ರಾಸ್‌ ಎಸ್‌ಯುವಿಯೊಂದಿಗೆ ಭಾರತದಲ್ಲಿ ಹೊಸ ಅಧ್ಯಾಯ ಶುರುಮಾಡಿದ ಸಿಟ್ರನ್

ಹೊಸ ಕಾರು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಮಾದರಿಯಲ್ಲೇ ತುಸು ವಿಭಿನ್ನ ವಿನ್ಯಾಸವನ್ನು ಹೊಂದಿರುವ ಜೆಡ್ಎಸ್ ಪೆಟ್ರೋಲ್ ಕಾರು ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದೆ ಎನ್ನಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಯೆಂತೆ ಸಾಮಾನ್ಯ ಪೆಟ್ರೋಲ್ ಮಾದರಿಯನ್ನು ಮತ್ತು ಪರ್ಫಾಮೆನ್ಸ್ ಬಯಸುವ ಗ್ರಾಹಕರು ಟರ್ಬೊ ಪೆಟ್ರೋಲ್ ಮಾದರಿಯನ್ನು ಖರೀದಿಸಬಹುದು.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಸಿ5 ಏರ್‌ಕ್ರಾಸ್‌ ಎಸ್‌ಯುವಿಯೊಂದಿಗೆ ಭಾರತದಲ್ಲಿ ಹೊಸ ಅಧ್ಯಾಯ ಶುರುಮಾಡಿದ ಸಿಟ್ರನ್

ಜೆಡ್ಎಸ್ ಕಾರಿನಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಹೊಸ ಕಾರು 4,314-ಎಂಎಂ ಉದ್ದ, 1,890-ಎಂಎಂ ಅಗಲ, 1,611-ಎಂಎಂ ಎತ್ತರ ಮತ್ತು 2,589-ಎಂಎಂ ವೀಲ್ಹ್‌ಬೆಸ್ ಪಡೆದುಕೊಂಡಿದೆ.

ಸಿ5 ಏರ್‌ಕ್ರಾಸ್‌ ಎಸ್‌ಯುವಿಯೊಂದಿಗೆ ಭಾರತದಲ್ಲಿ ಹೊಸ ಅಧ್ಯಾಯ ಶುರುಮಾಡಿದ ಸಿಟ್ರನ್

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 9.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಸಿ5 ಏರ್‌ಕ್ರಾಸ್‌ ಎಸ್‌ಯುವಿಯೊಂದಿಗೆ ಭಾರತದಲ್ಲಿ ಹೊಸ ಅಧ್ಯಾಯ ಶುರುಮಾಡಿದ ಸಿಟ್ರನ್

ಉತ್ತಮ ಬೆಲೆ ಆಯ್ಕೆಯೊಂದಿಗೆ ಕ್ರ್ಯಾಶ್ ಟೆಸ್ಟಿಂಗ್‌ನಲ್ಲೂ ಉತ್ತಮ ರೇಟಿಂಗ್ಸ್ ಪಡೆದುಕೊಳ್ಳುವ ಮೂಲಕ ಗ್ರಾಹಕರನ್ನು ಸೆಳೆಯುವ ನೀರಿಕ್ಷೆಯಲ್ಲಿರುವ ಹೊಸ ಕಾರು ಹೆಕ್ಟರ್ ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದೆ.

Article Published On: Tuesday, February 16, 2021, 8:45 [IST]
English summary
MG India's New Compact SUV To Arrive This Year. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+