ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ದೇಶಾದ್ಯಂತ ಕೋವಿಡ್ 2ನೇ ಅಲೆ ಹೆಚ್ಚಿರುವುದರಿಂದ ವಿವಿಧ ರಾಜ್ಯಗಳಲ್ಲಿ ಹಲವು ಕಠಿಣ ಕ್ರಮಗಳೊಂದಿಗೆ ಭಾಗಶಃ ಲಾಕ್ಡೌನ್, ಕರ್ಫ್ಯೂ ಕೈಗೊಳ್ಳಲಾಗುತ್ತಿದ್ದು, ಹೊಸ ಸುರಕ್ಷಾ ಕ್ರಮಗಳ ಪರಿಣಾಮ ಆಟೋ ಉದ್ಯಮವು ಮತ್ತೆ ನಷ್ಟದ ಸುಳಿಗೆ ಸಿಲುಕಿದೆ.

ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಕಳೆದ ವರ್ಷದ ಲಾಕ್‌ಡೌನ್‌ ಹೊಡೆತಕ್ಕೆ ಸಿಲುಕಿ ಸುಧಾರಿಸಿಕೊಳ್ಳುತ್ತಿದ್ದ ಆಟೋ ಉದ್ಯಮವು ಇದೀಗ ಮತ್ತೊಮ್ಮೆ ಲಾಕ್‌ಡೌನ್ ಸಂಕಷ್ಟ ಎದುರಿಸುತ್ತಿದ್ದು, ದೇಶಾದ್ಯಾಂತ ನೆಲೆಗೊಂಡಿರುವು ಹಲವು ಆಟೋ ಕಂಪನಿಗಳು ಈಗಾಗಲೇ ಕನಿಷ್ಠ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಿಸುತ್ತಿವೆ. ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೆ ಉತ್ಪಾದನೆಯು ತಗ್ಗಿರುವುರುವುದು ಭಾರೀ ನಷ್ಟ ಎದುರಿಸುವ ಭೀತಿ ಎದುರಾಗಿದ್ದು, ಹೊಸ ಸುರಕ್ಷಾ ಕ್ರಮ ಕೈಗೊಂಡು ಉತ್ಪಾದನೆ ಕೈಗೊಳ್ಳುತ್ತಿವೆ.

ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಪ್ರಮುಖ ಆಟೋ ಕಂಪನಿಗಳು ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಣೆ ಮಾಡುತ್ತಿದ್ದು, ವಾಹನ ಮಾರಾಟದಲ್ಲೂ ಕೂಡಾ ಹೊಸ ತಂತ್ರಗಳನ್ನು ಅಳವಡಿಸಿಕೊಂಡು ವೈರಸ್ ಹರಡುವಿಕೆ ತಡೆಯೊಂದಿಗೆ ಉದ್ಯಮ ವ್ಯವಹಾರ ಕೈಗೊಳ್ಳುತ್ತಿವೆ.

ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಇದರ ನಡುವೆ ಪರಿಸ್ಥಿತಿಗೆ ಅನುಗುಣವಾಗಿ ಹೊಸ ವಾಹನ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿರುವ ಪ್ರಮುಖ ವಾಹನ ಕಂಪನಿಗಳು ಹೊಸ ವಾಹನ ಉತ್ಪಾದನೆಯನ್ನು ಸುಮಾರು ಒಂದು ವಾರ ಬಂದ್ ಮಾಡುವುದಾಗಿ ಘೋಷಣೆ ಮಾಡಿವೆ.

ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಹೀರೋ ಮೋಟೊಕಾರ್ಪ್ ನಂತರ ಇದೀಗ ಎಂಜಿ ಮೋಟಾರ್ ಇಂಡಿಯಾ ಕಂಪನಿಯು ಕೂಡಾ ಗುಜರಾತಿನ ವಡೋದರಲ್ಲಿರುವ ಹೊಲಾಲ್ ಕಾರು ಉತ್ಪಾದನಾ ಘಟಕವನ್ನು ಬಂದ್ ಮಾಡುವುದಾಗಿ ಹೇಳಿಕೊಂಡಿದ್ದು, ಉದ್ಯೋಗಿಗಳ ಆರೋಗ್ಯ ದೃಷ್ಠಿಯಿಂದ ಈ ಕ್ರಮ ತೆಗೆದುಕೊಂಡಿರುವಾಗಿ ಕಂಪನಿಯೇ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಹೊಲಾಲ್ ಘಟಕದಲ್ಲಿ ಕಾರು ಉತ್ಪಾದನೆ ಸ್ಥಗಿತಗೊಂಡರೂ ಕೂಡಾ ಕಂಪನಿಯು ಮೆಡಿಕಲ್ ಆಕ್ಸಿಜನ್ ಉತ್ಪಾದನೆಯನ್ನು ಮುಂದುವರೆಸಲಿದೆ.

ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ವೈರಸ್ ಹರಡುವಿಕೆಯನ್ನು ತಡೆಯಲು ಮಾಸ್ಕ್, ಹ್ಯಾಂಡ್ ಸ್ಯಾನಿಟೈಜ್ ಮತ್ತು ಫೇಸ್-ಶೀಲ್ಡ್‌ಗಳ ಬಳಕೆಯು ಹೆಚ್ಚಿಸಲಾಗುತ್ತಿದ್ದರೂ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.

ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಅದರಲ್ಲೂ ತೀವ್ರ ಉಸಿರಾಟದಿಂದ ಬಳಲುತ್ತಿರುವ ಕೋವಿಡ್ ಸೋಂಕಿತರಿಗೆ ಅಗತ್ಯವಾಗಿರುವ ಆಕ್ಸಿಜನ್ ಕೊರತೆಯು ಸಾವಿನ ಸಂಖ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದ್ದು, ಆಕ್ಸಿಜನ್ ಉತ್ಪಾದನಾ ಕಂಪನಿಗಳಿಗೆ ಉತ್ಪಾದನಾ ಸಾಮಾರ್ಥ್ಯಕ್ಕಿಂತ ಹತ್ತು ಪಟ್ಟು ಬೇಡಿಕೆ ಬರುತ್ತಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಹೀಗಾಗಿ ಆಕ್ಸಿಜನ್ ಪೂರೈಕೆ ಮಾಡಲು ಪರದಾಡುತ್ತಿರುವ ಆಕ್ಸಿಜನ್ ಕಂಪನಿಗಳು ಸಾಮಾರ್ಥ್ಯ ಮೀರಿ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಿದ್ದು, ಕೆಲವು ಆಕ್ಸಿಜನ್ ಉತ್ಪಾದನಾ ಕಂಪನಿಗಳು ವಿವಿಧ ವಾಹನ ಉತ್ಪಾದನಾ ಕಂಪನಿಗಳ ಜೊತೆಗೂಡಿ ತಾತ್ಕಾಲಿಕ ಆಕ್ಸಿಜನ್ ಘಟಕಗಳನ್ನು ತೆರೆಯುತ್ತಿವೆ.

ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಇತ್ತೀಚೆಗೆ ಗುಜರಾತ್ ಮೂಲದ ದೇವನಂದನ್ ಗ್ಯಾಸ್ ಪ್ರೈ.ಲಿ ಕಂಪನಿಯು ಕೂಡಾ ಎಂಜಿ ಮೋಟಾರ್ ಜೊತೆಗೆ ಹೊಸ ಒಪ್ಪಂದಕ್ಕೆ ಸಹಿ ಹಾಕಿದ್ದು, ವಡೋದರದಲ್ಲಿರುವ ತನ್ನ ಕಾರು ಉತ್ಪಾದನಾ ಘಟಕದಲ್ಲಿ ತಾತ್ಕಾಲಿಕ ಆಕ್ಸಿಜನ್ ಉತ್ಪಾದನಾ ಘಟಕ ತೆರೆಯಲು ಅವಕಾಶ ನೀಡಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಹೊಸ ಘಟಕದ ಮೂಲಕ ಸಾಧ್ಯವಾದಷ್ಟು ಆಕ್ಸಿಜನ್ ಪ್ರಮಾಣವನ್ನು ಹೆಚ್ಚಿಸುವ ಗುರಿಹೊಂದಲಾಗಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಕಾರು ಉತ್ಪಾದನಾ ಘಟಕವನ್ನು ವೈದ್ಯಕೀಯ ಅಗತ್ಯತೆ ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಎಂಜಿ ಮೋಟಾರ್ ಹೆಮ್ಮೆ ವ್ಯಕ್ತಪಡಿಸಿದೆ.

Most Read Articles

Kannada
English summary
COVID-19 Crisis: MG Motor India Announced Halol Plant To Remain Shut For A Week. Read in Kannada.
Story first published: Tuesday, April 27, 2021, 17:24 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X