ಮೊಬೈಲ್ ಟೆಸ್ಟಿಂಗ್ ಕೇಂದ್ರವಾಗಿ ಬದಲಾದ ಎಂಜಿ ಹೆಕ್ಟರ್ ಪ್ಲಸ್ ಎಸ್‌ಯುವಿ

ಕೋವಿಡ್ ವೈಸರ್ ಭೀತಿ ತಗ್ಗಿಸಲು ಹರಸಾಹಸ ಪಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನಕ್ಕೆ ಆಟೋ ಉತ್ಪಾದನಾ ಕಂಪನಿಗಳು ಸಹ ಸಾಕಷ್ಟು ಸಹಕಾರಿಯಾಗಿದ್ದು, ವಿಶೇಷವಾಗಿ ಎಂಜಿ ಮೋಟಾರ್ ಕಂಪನಿಯು ಸಮುದಾಯದ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.

ಮೊಬೈಲ್ ಟೆಸ್ಟಿಂಗ್ ಕೇಂದ್ರವಾಗಿ ಬದಲಾದ ಎಂಜಿ ಹೆಕ್ಟರ್ ಪ್ಲಸ್ ಎಸ್‌ಯುವಿ

ಕೋವಿಡ್ 2ನೇ ಅಲೆ ಹೊಡೆತಕ್ಕೆ ಬಹುತೇಕ ಆರ್ಥಿಕ ಚಟುವಟಿಕೆಗಳು ಸ್ತಬ್ಧಗೊಂಡಿದ್ದು, ಆಟೋ ಉತ್ಪಾದನಾ ವಲಯವು ಕೂಡಾ ಹಿಂದೆಂದಿಗಿಂತಲೂ ಹೆಚ್ಚು ನಷ್ಟ ಅನುಭವಿಸುತ್ತಿದೆ. ಆದರೂ ಸಹ ಹಲವು ಆಟೋ ಉತ್ಪದನಾ ಕಂಪನಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಾಯಕ್ಕೆ ನಿಂತಿದ್ದು, ಸಮುದಾಯ ರಕ್ಷಣೆಯಲ್ಲಿ ತಮ್ಮ ಬದ್ದತೆ ತೋರುವ ಮೂಲಕ ಸಾರ್ವಜನಿಕ ಮೆಚ್ಚುಗೆಗೆ ಕಾರಣವಾಗಿವೆ.

ಮೊಬೈಲ್ ಟೆಸ್ಟಿಂಗ್ ಕೇಂದ್ರವಾಗಿ ಬದಲಾದ ಎಂಜಿ ಹೆಕ್ಟರ್ ಪ್ಲಸ್ ಎಸ್‌ಯುವಿ

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ರಾಜ್ಯಗಳು ಸೋಂಕು ಹರಡುವಿಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಮೊಬೈಲ್ ಟೆಸ್ಟಿಂಗ್ ಕೇಂದ್ರವಾಗಿ ಬದಲಾದ ಎಂಜಿ ಹೆಕ್ಟರ್ ಪ್ಲಸ್ ಎಸ್‌ಯುವಿ

ಹೆಚ್ಚುತ್ತಿರುವ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ವಿವಿಧ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕೋವಿಡ್ ನಿಯಂತ್ರಣಕ್ಕೆ ಟಫ್ ರೂಲ್ಸ್ ಅನುಸರಿಸರಿಸುತ್ತಿದ್ದು, ಹಳ್ಳಿ-ಹಳ್ಳಿಗಳಲ್ಲೂ ಆರ್‌ಟಿಪಿಸಿಆರ್ ಟೆಸ್ಟಿಂಗ್‌ಗಳನ್ನು ಹೆಚ್ಚಿಸಲಾಗಿದೆ.

ಮೊಬೈಲ್ ಟೆಸ್ಟಿಂಗ್ ಕೇಂದ್ರವಾಗಿ ಬದಲಾದ ಎಂಜಿ ಹೆಕ್ಟರ್ ಪ್ಲಸ್ ಎಸ್‌ಯುವಿ

ಆರ್‌ಟಿಪಿಸಿಆರ್ ಟೆಸ್ಟಿಂಗ್‌ಗಾಗಿ ಎಂಜಿ ಮೋಟಾರ್ ಕಂಪನಿಯು ತನ್ನ ಹೆಕ್ಟರ್ ಪ್ಲಸ್ ಎಸ್‌ಯುವಿ ಮಾದರಿಯನ್ನೇ ಮೊಬೈಲ್ ಟೆಸ್ಟಿಂಗ್ ವಾಹನವನ್ನಾಗಿ ಪರಿವರ್ತಿಸಿ ಗುಜರಾತಿನ ಸರ್ಕಾರಿ ಆಸ್ಪತ್ರೆಯೊಂದಕ್ಕೆ ದೇಣಿಗೆಯಾಗಿ ನೀಡಿದ್ದು, ಆರ್‌ಟಿಪಿಸಿಆರ್ ಟೆಸ್ಟಿಂಗ್‌ಗಳನ್ನು ಹೆಚ್ಚಿಸಲು ಸಹಕಾರಿಯಾಗುತ್ತಿದೆ.

ಮೊಬೈಲ್ ಟೆಸ್ಟಿಂಗ್ ಕೇಂದ್ರವಾಗಿ ಬದಲಾದ ಎಂಜಿ ಹೆಕ್ಟರ್ ಪ್ಲಸ್ ಎಸ್‌ಯುವಿ

ಜೊತೆಗೆ ಸೋಂಕಿನ ಪ್ರಮಾಣ ಹೆಚ್ಚುತ್ತಿರುವುದರಿಂದ ವೈದ್ಯಕೀಯ ಸೇವೆಗಳು ಸವಾಲಾಗಿ ಪರಿಣಮಿಸಿದ್ದು, ಸರ್ಕಾರದ ಪಯತ್ನಗಳಿಗೆ ಪೂರಕವಾಗಿ ಎಂಜಿ ಮೋಟಾರ್ ಸೇರಿದಂತೆ ಪ್ರಮುಖ ವಾಹನ ಉತ್ಪಾದನಾ ಕಂಪನಿಗಳು ತನ್ನ ಸಾಮಾಜಿಕ ಜವಾಬ್ದಾರಿ ನೀತಿ ಅಡಿಯಲ್ಲಿ ಕೈಗೊಂಡ ಸಾಮಾಜಿಕ ಕಾರ್ಯಗಳು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಕಾರಣವಾಗಿವೆ.

ಮೊಬೈಲ್ ಟೆಸ್ಟಿಂಗ್ ಕೇಂದ್ರವಾಗಿ ಬದಲಾದ ಎಂಜಿ ಹೆಕ್ಟರ್ ಪ್ಲಸ್ ಎಸ್‌ಯುವಿ

ಕೋವಿಡ್ ವಿರುದ್ದದ ಹೋರಾಟದಲ್ಲಿ ಆರಂಭದಿಂದಲೂ ವಿವಿಧ ಹಂತಗಳಲ್ಲಿ ವಿವಿಧ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಕ್ಕೆ ಹಣಕಾಸಿನ ಜೊತೆ ವೈದ್ಯಕೀಯ ಸೇವೆಗಳ ನೆರವು ನೀಡಿರುವ ಎಂಜಿ ಮೋಟಾರ್ ಕಂಪನಿಯು ಈಗಾಗಲೇ ಆಕ್ಸಿಜನ್ ಉತ್ಪಾದನೆಗಾಗಿ ಸಾಕಷ್ಟು ಸಹಕಾರಿಯಾಗಿದೆ.

ಮೊಬೈಲ್ ಟೆಸ್ಟಿಂಗ್ ಕೇಂದ್ರವಾಗಿ ಬದಲಾದ ಎಂಜಿ ಹೆಕ್ಟರ್ ಪ್ಲಸ್ ಎಸ್‌ಯುವಿ

ಆಕ್ಸಿಜನ್ ಕೊರತೆ ಉಂಟಾದಾಗ ಕಾರು ಉತ್ಪಾದನಾ ಘಟಕದಲ್ಲೇ ಆಕ್ಸಿಜನ್ ಉತ್ಪಾದನೆಗಾಗಿ ಘಟಕದ ಒಂದು ಭಾಗವನ್ನೇ ಬಿಟ್ಟುಕೊಡುವ ಮೂಲಕ ವೈರಸ್ ವಿರುದ್ದದ ಹೋರಾಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡ ಎಂಜಿ ಮೋಟಾರ್ ಕಂಪನಿ ಹಲವಾರು ಸಾಮಾಜಿಕ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದೆ.

ಮೊಬೈಲ್ ಟೆಸ್ಟಿಂಗ್ ಕೇಂದ್ರವಾಗಿ ಬದಲಾದ ಎಂಜಿ ಹೆಕ್ಟರ್ ಪ್ಲಸ್ ಎಸ್‌ಯುವಿ

ಇತ್ತ ಆದಾಯ ಮೂಲಗಳಾದ ಕಾರು ಉತ್ಪಾದನೆ ಮತ್ತು ಮಾರಾಟ ಇಲ್ಲದ ಸಂದರ್ಭದಲ್ಲೂ ಸಾರ್ವಜನಿಕ ಆರೋಗ್ಯ ವೃದ್ದಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡ ಎಂಜಿ ಮೋಟರ್ ಕಂಪನಿಯು ಆ್ಯಂಬುಲೆನ್ಸ್ ಸೇವೆಗಳ ಜೊತೆಗೆ ಕೋವಿಡ್ ಕೇರ್‌ಗಳ ಹಾಸಿಗೆ ಸಂಖ್ಯೆಗಳನ್ನು ಹೆಚ್ಚಿಸಲು ಸಹಕರಿಸಿದೆ.

ಮೊಬೈಲ್ ಟೆಸ್ಟಿಂಗ್ ಕೇಂದ್ರವಾಗಿ ಬದಲಾದ ಎಂಜಿ ಹೆಕ್ಟರ್ ಪ್ಲಸ್ ಎಸ್‌ಯುವಿ

ಜೊತೆಗೆ ಎಂಜಿ ಮೋಟಾರ್ ಕಂಪನಿಯು ದೇಶಾದ್ಯಂತ ಪ್ರಮುಖ ಪೊಲೀಸ್ ಠಾಣೆಗಳಲ್ಲಿ ಕರೋನಾ ವಾರಿಯರ್ಸ್‌ಗೆ ಯಾವುದೇ ತೊಂದರೆಯಾಗದಂತೆ ನಿರಂತವಾಗಿ ವೆಹಿಕಲ್ ಸ್ಯಾನಿಟೈಜ್ ಸೌಲಭ್ಯವನ್ನು ಉಚಿತವಾಗಿ ಒದಗಿಸುತ್ತಿದ್ದು, ಕಾರ್ಪೊರೆಟ್ ಸಾಮಾಜಿಕ ಹೊಣೆಗಾರಿಕೆ ಅಡಿ ಸಮುದಾಯದ ಸೇವೆಗೆ ಜೊತೆಯಾಗಿರುವ ಎಂಜಿ ಮೋಟಾರ್ ನಿರ್ಧಾರಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Most Read Articles

Kannada
English summary
MG Motor Converts The Hector Plus SUV Into Covid-19 Mobile Testing Unit. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X