Just In
- 1 hr ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 3 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 6 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- News
ಪಶ್ಚಿಮ ಬಂಗಾಳ ಕಾಶ್ಮೀರವಾದರೆ ತಪ್ಪೇನು ಹೇಳಿ; ಸುವೇಂದುಗೆ ಒಮರ್ ತಿರುಗೇಟು
- Movies
ದೀದಿ ಸಾಮ್ರಾಜ್ಯದಲ್ಲಿ ಕಮಲದ ಕೈ ಹಿಡಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Sports
ಐಪಿಎಲ್ 2021: ಅಧಿಕೃತ ವೇಳಾಪಟ್ಟಿ ಬಿಡುಗಡೆ, ಮೊದಲ ಪಂದ್ಯದಲ್ಲಿ ಆರ್ಸಿಬಿಗೆ ಮುಂಬೈ ಎದುರಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೊದಲ ವರ್ಷದ ಸಂಭ್ರಮ- ಜೆಡ್ಎಸ್ ಇವಿ ಹೊಸ ಆವೃತ್ತಿ ಬಿಡುಗಡೆಗೆ ಸಿದ್ದವಾದ ಎಂಜಿ ಮೋಟಾರ್..!
ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯಾದ ಜೆಡ್ಎಸ್ ಇವಿ ಬಿಡುಗಡೆಗೊಳಿಸಿ ಒಂದು ವರ್ಷ ಪೂರ್ಣಗೊಂಡಿದ್ದು, ಕಂಪನಿಯು ಇದೇ ತಿಂಗಳು 8ರಂದು 2021ರ ಆವೃತ್ತಿಯನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.

ದೇಶಾದ್ಯಂತ ಸದ್ಯ ಎಲೆಕ್ಟ್ರಿಕ್ ಕಾರುಗಳ ಮಾರಾಟ ಪ್ರಕ್ರಿಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಅತ್ಯತ್ತಮ ಮೈಲೇಜ್ ಪ್ರೇರಿತ ಕಾರು ಪೈಕಿ ಒಂದಾಗಿರುವ ಎಂಜಿ ಮೋಟಾರ್ ನಿರ್ಮಾಣದ ಜೆಡ್ಎಸ್ ಇವಿ ಎಸ್‌ಯುವಿ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ. 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಬಿಡುಗಡೆಯಾದ ನಂತರ ಎಂಜಿ ಮೋಟಾರ್ ಕಂಪನಿಯು ಇದುವರೆಗೆ ಸುಮಾರು 4 ಸಾವಿರಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸ ಕಾರು ಹ್ಯುಂಡೈ ಕೊನಾ ಇವಿ ಮತ್ತು ಟಾಟಾ ನೆಕ್ಸಾನ್ ಕಾರುಗಳಿಗೆ ಪೈಪೋಟಿ ನೀಡುತ್ತಿದೆ.

ಜೆಡ್ಎಸ್ ಇವಿ ಬಿಡುಗಡೆಯಾದ ಆರಂಭದಲ್ಲಿ ಕೇವಲ ಆರು ಪ್ರಮುಖ ಮಾಹಾನಗರಗಳಲ್ಲಿ ಮಾತ್ರವೇ ಮಾರಾಟಕ್ಕೆ ಚಾಲನೆ ನೀಡಿದ್ದ ಎಂಜಿ ಕಂಪನಿಯು ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ಹೆಚ್ಚಿದಂತೆ ಸುಮಾರು 20 ನಗರಗಳಲ್ಲಿ ಜೆಡ್ಎಸ್ ಇವಿ ಮಾರಾಟ ವಿಸ್ತರಣೆ ಮಾಡಿದೆ.

ಜೆಡ್ಎಸ್ ಇವಿ ಮೂಲಕ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿನ ಸವಾಲುಗಳು, ಬೆಳವಣಿಗೆ ಕುರಿತಂತೆ ಸಾಕಷ್ಟು ಹೊಸ ಅನುಭವಗಳನ್ನು ಎದುರಿಸಿರುವ ಎಂಜಿ ಮೋಟಾರ್ ಕಂಪನಿಯು ಇದೀಗ ಹೊಸ ಕಾರಿನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿ ಮಾರುಕಟ್ಟೆ ಪ್ರವೇಶಿಸುತ್ತಿದೆ.

2021ರ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಪರಿಚಯಿಸುತ್ತಿರುವ ಎಂಜಿ ಮೋಟಾರ್ ಕಂಪನಿಯು ಸುಧಾರಿತ ಬ್ಯಾಟರಿ ಪ್ಯಾಕ್ ನೀಡುವ ಸಾಧ್ಯತೆಗಳಿದ್ದು, ಮತ್ತಷ್ಟು ಹೊಸ ನಗರಗಳಿಗೂ ಜೆಡ್ಎಸ್ ಇವಿ ಮಾರಾಟವನ್ನು ವಿಸ್ತರಿಸಲಿದೆ. ಜೆಡ್ಎಸ್ ಎಲೆಕ್ಟ್ರಿಕ್ ಕಾರು ಸದ್ಯ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಎಕ್ಸೈಟ್ ಮಾದರಿಯ ಬೆಸ್ ವೆರಿಯೆಂಟ್ ಮಾದರಿಯಾಗಿ ಮತ್ತು ಎಕ್ಸ್‌ಕ್ಲೂಸಿವ್ ವೆರಿಯೆಂಟ್ ಹೈ ಎಂಡ್ ಮಾದರಿಯಾಗಿ ಮಾರಾಟವಾಗುತ್ತಿದೆ.

ಎಕ್ಸೈಟ್ ಆವೃತ್ತಿಗಯು ರೂ.20.58 ಲಕ್ಷ ಮತ್ತು ಎಕ್ಸ್‌ಕ್ಲೂಸಿವ್ ಆವೃತ್ತಿಗೆ ರೂ.23.58 ಲಕ್ಷ ನಿಗದಿ ಪಡಿಸಲಾಗಿದ್ದು, ಬಿಡುಗಡೆಯ ಸಂದರ್ಭದಲ್ಲಿ ಮೊದಲ ಬಾರಿಗೆ ಬುಕ್ ಮಾಡಿದ್ದ 1 ಸಾವಿರ ಗ್ರಾಹಕರಿಗೆ ಬರೋಬ್ಬರಿ ರೂ.1 ಲಕ್ಷ ಆಫರ್ ನೀಡಲಾಗಿತ್ತು.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಬ್ಯಾಟರಿ ಸಾಮರ್ಥ್ಯ ಮತ್ತು ಮೈಲೇಜ್
ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎರಡು ವೆರಿಯೆಂಟ್‌ಗಳಲ್ಲೂ 44.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದ್ದು, ಈ ಮೂಲಕ ಒಂದು ಬಾರಿ ಪೂರ್ಣಪ್ರಮಾಣದಲ್ಲಿ ಚಾರ್ಜ್ ಮಾಡಿದ್ದಲ್ಲಿ ಗರಿಷ್ಠ 340 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಹೊಸ ಕಾರಿನ ಬ್ಯಾಟರಿಯನ್ನು ಹೋಂ ಚಾರ್ಜರ್ ಮೂಲಕ ಚಾರ್ಜ್ ಮಾಡಲು 8 ಗಂಟೆ ಸಮಯ ತೆಗೆದುಕೊಳ್ಳಲಿದ್ದು, ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಮೂಲಕ ಕೇವಲ 50 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್ ಮಾಡಿಕೊಳ್ಳಬಹುದಾಗಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಎಂಜಿ ಕಂಪನಿಯು ಹೊಸ ಆವೃತ್ತಿಯಲ್ಲಿ ಗರಿಷ್ಠ 400 ಕಿ.ಮೀ ಅಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಮೈಲೇಜ್‌ಗೆ ತಕ್ಕಂತೆ ಕಾರಿನ ಬೆಲೆ ಕೂಡಾ ತುಸು ದುಬಾರಿಯಾಗಿರಲಿದೆ. ಆದರೆ ಸೂಪರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವು ದೊರೆಯುತ್ತಿರುವ ಹಿನ್ನಲೆಯಲ್ಲಿ ಹೊಸ ಆವೃತ್ತಿಯು ದುಬಾರಿ ಬೆಲೆ ನಡುವೆಯೂ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದ್ದು, ಮುಂದಿನ ವಾರವಷ್ಟೇ ಹೊಸ ಕಾರು ರಸ್ತೆಗಿಳಿಯಲಿದೆ.