ಹೊಸ ಕಾರುಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಎಂಜಿ ಮೋಟಾರ್

ಲಾಕ್‌ಡೌನ್ ಅವಧಿಯಲ್ಲಿ ಕೊನೆಗೊಳ್ಳಲಿರುವ ವಾಹನಗಳ ವಾರಂಟಿ ಅವಧಿಯನ್ನು ಎಂಜಿ ಮೋಟಾರ್ ಕಂಪನಿಯು ವಿಸ್ತರಣೆ ಮಾಡಿದ್ದು, ಹೊಸ ಕಾರುಗಳನ್ನು ಹೊರ ತೆಗೆಯಲು ಸಾಧ್ಯವಿಲ್ಲದ ಸಂದರ್ಭದಲ್ಲಿ ತನ್ನ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ.

ಹೊಸ ಕಾರುಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಎಂಜಿ ಮೋಟಾರ್

ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ವಾಹನ ಮಾರಾಟಕ್ಕೆ ಕೆಲವು ಕಡೆಗಳಲ್ಲಿ ಷರತ್ತು ಬದ್ದ ಅವಕಾಶಗಳಿದ್ದರೂ ಗ್ರಾಹಕರ ಸೇವೆಗಳನ್ನು ಪೂರೈಸುವುದು ಆಟೋ ಉತ್ಪಾದನಾ ಕಂಪನಿಗಳಿಗೆ ಸವಾಲಿನ ಕೆಲಸವಾಗಿದೆ. ಆದರೆ ಲಾಕ್‌ಡೌನ್ ಅವಧಿಯಲ್ಲಿ ನಿಗದಿತ ಅವಧಿಯ ಸೇವೆಗಳನ್ನು ಪಡೆದುಕೊಳ್ಳದ ವಾಹನಗಳ ವಾರಂಟಿ ಅವಧಿಯು ಮುಗಿದುಹೋಗಲಿದ್ದು, ವಾರಂಟಿ ಅವಧಿ ಮುಕ್ತಾಯದಿಂದ ಉಚಿತ ಸೇವೆಗಳನ್ನು ಕಳೆದುಕೊಳ್ಳಲಿರುವ ಗ್ರಾಹಕರಿಗೆ ಎಂಜಿ ಮೋಟಾರ್ ಸಿಹಿಸುದ್ದಿ ಪ್ರಕಟಿಸಿದೆ.

ಹೊಸ ಕಾರುಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಎಂಜಿ ಮೋಟಾರ್

ಲಾಕ್‌ಡೌನ್ ಸಂದರ್ಭದಲ್ಲಿ ವಾಹನ ವಾರಂಟಿ ಮುಕ್ತಾಯವಾಗುವುದರಿಂದ ಗ್ರಾಹಕರ ಸೇವೆಗಳು ಕಡಿತವಾಗುವುದನ್ನು ತಪ್ಪಿಸಲು ಗ್ರಾಹಕರಿಗೆ ಹೆಚ್ಚುವರಿಯಾಗಿ ಎರಡು ತಿಂಗಳ ಕಾಲ ವಾರಂಟಿ ಅವಧಿಯನ್ನು ವಿಸ್ತರಿಸಲಾಗಿದೆ.

ಹೊಸ ಕಾರುಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಎಂಜಿ ಮೋಟಾರ್

ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಮುಕ್ತಾಯಗೊಂಡಿರುವ ಮತ್ತು ಮುಕ್ತಾಯಗೊಳ್ಳಬೇಕಿರುವ ಹೊಸ ಕಾರುಗಳ ವಾರಂಟಿ ಅವಧಿಯನ್ನು ಜುಲೈ 31ರ ತನಕ ಮುಂದೂಡಲಾಗಿದ್ದು, ಲಾಕ್‌ಡೌನ್ ಸಂದರ್ಭದಲ್ಲಿ ವಾರಂಟಿ ಮುಕ್ತಾಯಗೊಳ್ಳುವ ಉಚಿತ ಸೇವೆಗಳನ್ನು ಪಡೆದುಕೊಳ್ಳಬೇಕೆಂಬ ಗ್ರಾಹಕರ ಗೊಂದಲವನ್ನು ನಿವಾರಿಸಿದೆ.

ಹೊಸ ಕಾರುಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಎಂಜಿ ಮೋಟಾರ್

ವಾರಂಟಿ ಅವಧಿ ವಿಸ್ತರಣೆಯಾಗಿರುವುದರಿಂದ ವಾರಂಟಿ ಪ್ಯಾಕೇಜ್‌ನಲ್ಲಿರುವ ಸೇವೆಗಳನ್ನು ಪರಿಸ್ಥಿತಿ ತುಸು ಸುಧಾರಣೆಗೊಂಡ ನಂತರ ಪಡೆದುಕೊಳ್ಳಬಹುದಾಗಿದ್ದು, ವಾರಂಟಿ ಅವಧಿಯನ್ನು ವಿಸ್ತರಿಸಿರುವುದು ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿದೆ. ಇನ್ನು ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೆ ಉತ್ಪಾದನೆಯು ತಗ್ಗಿರುವುರುವುದು ಭಾರೀ ನಷ್ಟ ಎದುರಿಸುವ ಭೀತಿ ಎದುರಾಗಿದ್ದು, ಹೊಸ ಸುರಕ್ಷಾ ಕ್ರಮ ಕೈಗೊಂಡು ಉತ್ಪಾದನೆಯನ್ನು ಕೈಗೊಳ್ಳಲಾಗುತ್ತಿದೆ.

ಹೊಸ ಕಾರುಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಎಂಜಿ ಮೋಟಾರ್

ಪ್ರಮುಖ ಆಟೋ ಕಂಪನಿಗಳು ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಣೆ ಮಾಡುತ್ತಿದ್ದು, ವಾಹನ ಮಾರಾಟದಲ್ಲೂ ಕೂಡಾ ಹೊಸ ತಂತ್ರಗಳನ್ನು ಅಳವಡಿಸಿಕೊಂಡು ವೈರಸ್ ಹರಡುವಿಕೆ ತಡೆಯೊಂದಿಗೆ ಉದ್ಯಮ ವ್ಯವಹಾರ ಕೈಗೊಳ್ಳುತ್ತಿವೆ.

ಹೊಸ ಕಾರುಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಎಂಜಿ ಮೋಟಾರ್

ಇದರ ನಡುವೆ ಪರಿಸ್ಥಿತಿಗೆ ಅನುಗುಣವಾಗಿ ಹೊಸ ವಾಹನ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿರುವ ಪ್ರಮುಖ ವಾಹನ ಕಂಪನಿಗಳು ಹೊಸ ವಾಹನ ಉತ್ಪಾದನೆಯನ್ನು ಸುಮಾರು ಒಂದು ವಾರ ಬಂದ್ ಮಾಡುವುದಾಗಿ ಘೋಷಣೆ ಮಾಡಿವೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಹೊಸ ಕಾರುಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಇಂಡಿಯಾ ಕಂಪನಿಯು ಕೂಡಾ ಗುಜರಾತಿನ ವಡೋದರಲ್ಲಿರುವ ಹೊಲಾಲ್ ಕಾರು ಉತ್ಪಾದನಾ ಘಟಕವನ್ನು ಬಂದ್ ಮಾಡಿದ್ದು, ಉದ್ಯೋಗಿಗಳ ಆರೋಗ್ಯ ದೃಷ್ಠಿಯಿಂದ ಈ ಕ್ರಮ ತೆಗೆದುಕೊಂಡಿರುವಾಗಿ ಕಂಪನಿಯೇ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

ಹೊಸ ಕಾರುಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಎಂಜಿ ಮೋಟಾರ್

ಹೊಲಾಲ್ ಘಟಕದಲ್ಲಿ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದ್ದರೂ ಕೂಡಾ ಕಂಪನಿಯು ಮೆಡಿಕಲ್ ಆಕ್ಸಿಜನ್ ಉತ್ಪಾದನೆಯನ್ನು ಮುಂದುವರೆಸಿದ್ದು, ಗುಜರಾತ್ ಮೂಲದ ದೇವನಂದನ್ ಗ್ಯಾಸ್ ಪ್ರೈ.ಲಿ ಕಂಪನಿಯೊಂದಿಗೆ ಎಂಜಿ ಮೋಟಾರ್ ಜೊತೆಗೆ ಹೊಸ ಒಪ್ಪಂದಕ್ಕೆ ಸಹಿ ಹಾಕಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಕಾರುಗಳ ವಾರಂಟಿ ಅವಧಿಯನ್ನು ಹೆಚ್ಚಿಸಿದ ಎಂಜಿ ಮೋಟಾರ್

ಹೊಸ ಕಾರು ಉತ್ಪಾದನಾ ಘಟಕದ ಮೂಲಕ ಸಾಧ್ಯವಾದಷ್ಟು ಆಕ್ಸಿಜನ್ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸುವ ಗುರಿಹೊಂದಲಾಗಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಕಾರು ಉತ್ಪಾದನಾ ಘಟಕವನ್ನು ವೈದ್ಯಕೀಯ ಅಗತ್ಯಕ್ಕೆ ಅನುಗುಣವಾಗಿ ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಎಂಜಿ ಮೋಟಾರ್ ಹೆಮ್ಮೆ ವ್ಯಕ್ತಪಡಿಸಿದೆ.

More from DriveSpark

Article Published On: Wednesday, May 12, 2021, 10:51 [IST]
English summary
MG Motor Extends Service Schedule Validity. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+