ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ MG ZS ಎಲೆಕ್ಟ್ರಿಕ್ ಕಾರು

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೇರಿದೆ, ಇದರಿಂದ ಪಾರಾಗಲು ಹೆಚ್ಚಿನ ಜನರು ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಇದರಿಂದ ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿದೆ.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ MG ZS ಎಲೆಕ್ಟ್ರಿಕ್ ಕಾರು

ಇದಕ್ಕೆ ಉತ್ತಮ ಉದಾಹರಣೆ ಎಂದರೆ ಕಳೆದ ತಿಂಗಳು MG Motor ಕಂಪನಿಯು ZS ಎಲೆಕ್ಟ್ರಿಕ್ ಎಸ್‍ಯುವಿ ಮಾದರಿಗೆ 700ಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದೆ. ಈ ವಿಷಯವನ್ನು ಎಂಜಿ ಮೋಟಾರ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ರಾಜೀವ್ ಚಾಬಾ ಅವರು ಟ್ವೀಟ್ ಮಾಡಿದ್ದಾರೆ. ಇದರೊದಿಗೆ ಕೆಲವರು ಇವಿಗಾಗಿ ಭಾರತ ಸಿದ್ಧವಾಗಿಲ್ಲ ಎಂದು ಹೇಳುತ್ತಾರೆ. ನಾವು ಹೋಗಲು ಬಹಳ ದೂರವಿದೆ ಮತ್ತು ಮಾಡಬೇಕಾದ ಹಲವು ಕೆಲಸಗಳಿವೆ ಆದರೆ ಸಂಖ್ಯೆಗಳು ಖಂಡಿತವಾಗಿಯೂ ಕಣ್ಣು ತೆರೆಸುತ್ತವೆ ಎಂದು ಹೇಳಿಕೊಂಡಿದ್ದಾರೆ.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ MG ZS ಎಲೆಕ್ಟ್ರಿಕ್ ಕಾರು

ಈ ಬುಕ್ಕಿಂಗ್ ಎಂಜಿನ್ ಜೆಡ್ಎಸ್ ಎಲೆಕ್ಟ್ರಿಕ್ ಕಾರಿಗೆ ಪಡೆದ ಬುಕ್ಕಿಂಗ್ ನಲ್ಲಿ ಅತ್ಯಧಿಕವಾಗಿದೆ. ಜನರು ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳಿಗಿಂತ ಎಲೆಕ್ಟ್ರಿಕ್ ಕಾರನ್ನು ಖರೀದಿಸಲು ಬಯಸುತ್ತಿದ್ದಾರೆ ಎಂದು ತಿಳಿದು ಬರುತ್ತದೆ.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ MG ZS ಎಲೆಕ್ಟ್ರಿಕ್ ಕಾರು

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳು ಇನ್ನೂ ತಮ್ಮ ಆರಂಭಿಕ ಹಂತದಲ್ಲಿದೆ, ಅದರೆ ಕಳೆದ ಎರಡು ವರ್ಷಗಳಲ್ಲಿ, ನಾವು ಬೇಡಿಕೆಯಲ್ಲಿ ಭಾರೀ ಏರಿಕೆ ಕಂಡಿದ್ದೇವೆ ವಾಸ್ತವವಾಗಿ, 2020-21 ವಾರ್ಷಿಕ ಅವಧಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಹಿಂದಿನ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಶೇಕಡಾ 53 ರಷ್ಟು ಬೆಳವಣಿಗೆಯನ್ನು ಕಂಡಿದೆ.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ MG ZS ಎಲೆಕ್ಟ್ರಿಕ್ ಕಾರು

ಪ್ರಸ್ತುತ, ಟಾಟಾ ನೆಕ್ಸಾನ್ ಇವಿ ವಿಭಾಗದಲ್ಲಿ ಹೆಚ್ಚು ಮಾರಾಟವಾಗುತ್ತಿರುವ ಎಲೆಕ್ಟ್ರಿಕ್ ಪ್ಯಾಸೆಂಜರ್ ಕಾರ್ ಆಗಿದ್ದು, ತಿಂಗಳಿಗೆ 500 ಯೂನಿಟ್‌ಗಳನ್ನು ಮಾರಾಟ ಮಾಡುತ್ತಿದೆ, MG ZS ಇವಿ ತಿಂಗಳಿಗೆ ಸರಾಸರಿ 250 ರಿಂದ 300 ಯೂನಿಟ್‌ಗಳನ್ನು ಮಾರಾಟ ಮಾಡುತ್ತಿದ್ದೇವೆ.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ MG ZS ಎಲೆಕ್ಟ್ರಿಕ್ ಕಾರು

ಆದರೆ ಇವಿ ತಯಾರಕರು ಮತ್ತು ಇತರ ವಾಹನ ತಯಾರಕರು ಪ್ರಸ್ತುತ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಬೇಡಿಕೆಗಿಂತ ಪೂರೈಕೆ ಆಗಿದೆ, ಇದು ಮುಖ್ಯವಾಗಿ ಸೆಮಿಕಂಡಕ್ಟರ್ ಚಿಪ್‌ಗಳ ಜಾಗತಿಕ ಕೊರತೆಯಿಂದಾಗಿ. 2021ರ ಆಗಸ್ಟ್ ತಿಂಗಳ ಮಾರಾಟ ಸಂಖ್ಯೆಯನ್ನು ಘೋಷಿಸುತ್ತಾ, ಚಾಬಾ ಹೇಳಿದರು, ನಾವು ಬಿಡುವಿಲ್ಲದ ಡೀಲರ್‌ಶಿಪ್‌ಗಳನ್ನು ನೋಡುತ್ತಿದ್ದೇವೆ.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ MG ZS ಎಲೆಕ್ಟ್ರಿಕ್ ಕಾರು

ಆದರೆ, ಚಿಪ್‌ಗಳ ತೀವ್ರ ಕೊರತೆಯು ವರ್ಷದ ಅಂತ್ಯದವರೆಗೂ ಮುಂದುವರಿಯುತ್ತದೆ, ಇದು ಉತ್ಪಾದನಾ ನಿರ್ಬಂಧಗಳಿಗೆ ಕಾರಣವಾಗುತ್ತದೆ. ಸೆಪ್ಟೆಂಬರ್‌ನಲ್ಲಿ ಉತ್ಪಾದನೆಯು ತೀವ್ರವಾಗಿ ಪರಿಣಾಮ ಬೀರುತ್ತದೆ ಎಂದು ನಿರೀಕ್ಷಿಸಿ, ಇದು ಆಗಸ್ಟ್‌ಗಿಂತ ಕಡಿಮೆ ಇರುತ್ತದೆ. ಕಳೆದ ತಿಂಗಳು, ಪ್ರತಿಸ್ಪರ್ಧಿ ಟಾಟಾ ಮೋಟಾರ್ಸ್ ಕೂಡ ನೆಕ್ಸಾನ್ ಇವಿಗಾಗಿ ಕಂಪನಿಯು ಪಡೆಯುತ್ತಿರುವ ಒಟ್ಟು ಬುಕಿಂಗ್‌ಗಳ ಮೂರನೇ ಒಂದು ಭಾಗವನ್ನು ಮಾತ್ರ ಉತ್ಪಾದಿಸಲು ಸಾಧ್ಯ ಎಂದು ಹೇಳಿದೆ.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ MG ZS ಎಲೆಕ್ಟ್ರಿಕ್ ಕಾರು

MG Motor ಇಂಡಿಯಾ ಕಳೆದ ವರ್ಷ ಜನವರಿಯಲ್ಲಿ ಸಂಪೂರ್ಣ ಎಲೆಕ್ಟ್ರಿಕ್ ಮಾದರಿಯಾದ ZS ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಆ ಸಮಯದಲ್ಲಿ ದೇಶದಲ್ಲಿ ಬ್ರ್ಯಾಂಡ್‌ನ ಎರಡನೇ ಮಾದರಿಯಾಗಿ ಈ ZS ಇವಿ ಮಾದರಿಯನ್ನು ಬಿಡುಗಡೆಗೊಳಿಸಿತ್ತು.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ MG ZS ಎಲೆಕ್ಟ್ರಿಕ್ ಕಾರು

ಸದ್ಯ MG ZS ಎಲೆಕ್ಟ್ರಿಕ್ ಕಾರು ಮಾದರಿಯ ಆರಂಭಿಕ ಬೆಲೆಯು ರೂ, 20.99 ಲಕ್ಷಗಳಾಗಿದೆ, ಈ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿ ಮಾದರಿಯು ಹ್ಯುಂಡೈ ಕ್ರೆಟಾದಷ್ಟು ದೊಡ್ಡದಾಗಿದೆ, ಇದರ ಉದ್ದ 4,314 ಎಂಎಂ, ಅಗಲ 1,809 ಎಂಎಂ ಮತ್ತು ಎತ್ತರ 1,644 ಎಂಎಂ ಆಗಿದೆ.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ MG ZS ಎಲೆಕ್ಟ್ರಿಕ್ ಕಾರು

ಈ ZS ಎಲೆಕ್ಟ್ರಿಕ್ ಕಾರು ಮಾದರಿಯಲ್ಲಿ 4.5 ಕಿಲೋವ್ಯಾಟ್ ಬ್ಯಾಟರಿ ಪ್ಯಾಕ್ ಅನ್ನು ಅಳವಡಿಸಲಾಗಿ. ಇದನ್ನು ಮೂರು-ಹಂತದ ಪರ್ಮನೆಂಟ್ ಮ್ಯಾಗ್ನೆಟ್ ಸಿಂಕ್ರೊನಸ್ ಮೋಟರ್‌ಗೆ ಜೋಡಿಸಲಾಗಿದೆ. ಇದು ಒಟ್ಟು 142.7 ಬಿಹೆಚ್‍ಪಿ ಮತ್ತು ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿ ಝಡ್ಎಸ್ ಇವಿ ಎಸ್‍ಯುವಿಯು 419 ಕಿ.ಮೀ ರೇಂಜ್ ಅನ್ನು ನೀಡುತ್ತದೆ.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ MG ZS ಎಲೆಕ್ಟ್ರಿಕ್ ಕಾರು

ಈ ಎಲೆಕ್ಟ್ರಿಕ್ ಕಾರು ಅತ್ಯಾಧುನಿಕ ಸುರಕ್ಷತಾ ಫೀಚರ್ಸ್ ಗಳನ್ನು ಹೊಂದಿವೆ. ಇದರಲ್ಲಿ 6 ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಇಬಿಡಿ ಯೊಂದಿಗೆ ಎಬಿಎಸ್, ಹಿಲ್ ಸ್ಟಾರ್ಟ್ ಅಸಿಸ್ಟ್, ರಿಯರ್ ಡಿಸ್ಕ್ ಬ್ರೇಕ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್, ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್, ಹೀಟೆಡ್ ಒಆರ್ವಿಎಂ ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಕ್ಯಾಮರಾವನ್ನು ಹೊಂದಿದೆ.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ MG ZS ಎಲೆಕ್ಟ್ರಿಕ್ ಕಾರು

ಇನ್ನು ಎಂಜಿ ಮೋಟಾರ್ ಇಂಡಿಯಾ ಕಂಪನಿಯು ತನ್ನ ಇವಿ(ಎಲೆಕ್ಟ್ರಿಕ್ ವೆಹಿಕಲ್) ಪೋರ್ಟ್ಫೋಲಿಯೊವನ್ನು ಹೊಸ ಮಾದರಿಯನ್ನು ಬಿಡುಗಡೆಗೊಳಿಸುವ ಮೂಲಕ ವಿಸ್ತರಿಸಲು ಮುಂದಾಗಿದೆ. ವರದಿಗಳ ಪ್ರಕಾರ, ಮುಂದಿನ ಎರಡು ವರ್ಷಗಳಲ್ಲಿ ಹೊಸ ಎಂಜಿ ಎಲೆಕ್ಟ್ರಿಕ್ ಕಾರು ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಡಲಿದೆ. ಎಂಜಿ ಮೋಟರ್ ಇಂಡಿಯಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಚಾಬಾ ಅವರು ಭವಿಷ್ಯದಲ್ಲಿ ಹೆಚ್ಚಿನ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲು ಯೋಜಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ MG ZS ಎಲೆಕ್ಟ್ರಿಕ್ ಕಾರು

ನಮ್ಮ ಎರಡನೇ ಇವಿ ಕಾರನ್ನು ರೂ.20 ಲಕ್ಷ ಗಿಂತ ಕಡಿಮೆ ಬೆಲೆಯಲ್ಲಿ ನೋಡಬಹುದು.ಪ್ರಸ್ತುತ ಕರೋನಾ ಮತ್ತು ಉತ್ಪಾದನಾ ಸಾಮಗ್ರಿಗಳ (ವಿಶೇಷವಾಗಿ ಚಿಪ್ಸ್) ಕೊರತೆಯನ್ನು ಗಮನಿಸಿ ಹೊಸ ಎಂಜಿ ಎಲೆಕ್ಟ್ರಿಕ್ ಕಾರು ಎರಡು ವರ್ಷಗಳಲ್ಲಿ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದೆ ಎಂದು ಹೇಳಿದ್ದಾರೆ. ಉಳಿದಂತೆ ಹೊಸ ಎಲೆಕ್ಟ್ರಿಕ್ ಕಾರುಗಳ ಬಗ್ಗೆ ಯಾವುದೇ ಮಾಹಿತಿಗಳು ಬಹಿರಂಗವಾಗಿಲ್ಲ.

Most Read Articles

Kannada
English summary
Mg motor india receives over 700 bookings for zs electric suv in august 2021 details
Story first published: Friday, September 3, 2021, 12:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X