Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 4 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 4 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 5 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೆಕ್ಟರ್ ಪ್ಲಸ್ ಎಸ್‌ಯುವಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೊಳಿಸಿದ ಎಂಜಿ ಮೋಟಾರ್
ಎಂಜಿ ಮೋಟಾರ್ ಇಂಡಿಯಾ ಕಂಪನಿಯು ಕಳೆದ ವಾರವಷ್ಟೇ ತನ್ನ ಜನಪ್ರಿಯ ಕಾರು ಮಾದರಿಯಾದ ಹೆಕ್ಟರ್ ಫೇಸ್‌ಲಿಫ್ಟ್ ಮತ್ತು ಹೆಕ್ಟರ್ ಪ್ಲಸ್ 7 ಸೀಟರ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಇದೀಗ ಹೆಕ್ಟರ್ ಪ್ಲಸ್ ವೆರಿಯೆಂಟ್ ಕೆಲವು ಬದಲಾವಣೆ ಮಾಡಿರುವ ಕಂಪನಿಯು ಸೆಲೆಕ್ಟ್ ಆವೃತ್ತಿಯನ್ನು ಬಿಡುಗಡೆ ಮಾಡಿ ಹೊಸ ದರ ಪ್ರಕಟಿಸಿದೆ.

2021ರ ಹೆಕ್ಟರ್ ಪ್ಲಸ್ ಮಾದರಿಯನ್ನು ಗ್ರಾಹಕರ ಬೇಡಿಕೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಸ್ಟೈಲ್, ಸೂಪರ್, ಸ್ಮಾರ್ಟ್, ಶಾರ್ಪ್ ವೆರಿಯೆಂಟ್‌ಗಳೊಂದಿಗೆ ಬಿಡುಗಡೆ ಮಾಡಿದ್ದ ಎಂಜಿ ಮೋಟಾರ್ ಕಂಪನಿಯು ಇದೀಗ ಹೊಸದಾಗಿ ಸೆಲೆಕ್ಟ್ ಮಾದರಿಯನ್ನು ಬಿಡುಗಡೆ ಮಾಡಿದೆ. ಹೆಕ್ಟರ್ ಪ್ಲಸ್ ಸೆಲೆಕ್ಟ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ 18.33 ಲಕ್ಷ ಬೆಲೆ ಪಡೆದುಕೊಂಡಿದ್ದು, 7 ಸೀಟರ್ ಮಾದರಿಯ ಡೀಸೆಲ್ ಆವೃತ್ತಿಯಲ್ಲಿ ಹೈ ಎಂಡ್ ಮಾದರಿಯಾಗಿರಲಿದೆ.

ಹೆಕ್ಟರ್ ಪ್ಲಸ್ ಕಾರು ಹೊಸ ವೆರಿಯೆಂಟ್ ಸೇರ್ಪಡೆ ನಂತರ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ 13.35 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.19.13 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರಿನಲ್ಲಿ 7 ಸೀಟರ್ ಆಯ್ಕೆಯೇ ಪ್ರಮುಖ ಬದಲಾವಣೆಯಾಗಿದೆ.

7 ಸೀಟರ್ ಸೌಲಭ್ಯವುಳ್ಳ ಹೆಕ್ಟರ್ ಪ್ಲಸ್ ಕಾರಿನಲ್ಲಿ ಆರಂಭಿಕ ಕಾರು ಮಾದರಿಯಾದ ಸ್ಟೈಲ್ ಆವೃತ್ತಿ ಮಾತ್ರವೇ ಪೆಟ್ರೋಲ್ ಮತ್ತು ಡೀಸೆಲ್ ಎರಡು ಎಂಜಿನ್ ಆಯ್ಕೆಯಲ್ಲಿ ಲಭ್ಯವಿರಲಿದ್ದು, ಇನ್ನುಳಿದ ಆವೃತ್ತಿಗಳಲ್ಲಿ ಕೆಲವು ಮಾದರಿಗಳಲ್ಲಿ ವೆರಿಯೆಂಟ್‌ಗೆ ಅನುಗುಣವಾಗಿ ಪೆಟ್ರೋಲ್ ಎಂಜಿನ್ ಮತ್ತು ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಹೆಕ್ಟರ್ ಮತ್ತು ಹೆಕ್ಟರ್ ಕಾರು ಮಾದರಿಗಳು ಬಹುತೇಕ ತಾಂತ್ರಿಕ ಅಂಶಗಳನ್ನು ಒಂದೇ ಮಾದರಿಯಲ್ಲಿ ಪಡೆದುಕೊಂಡಿದ್ದು, ಎಂಜಿನ್ ಆಯ್ಕೆ ಮತ್ತು ಆಸನ ಸೌಲಭ್ಯಗಳು ಮಾತ್ರ ವಿಭಿನ್ನತೆಯೊಂದಿಗೆ ಗ್ರಾಹಕರನ್ನು ಸೆಳೆಯಲಿವೆ. ಹೊಸ ಹೆಕ್ಟರ್ ಪ್ಲಸ್ 7 ಸೀಟರ್ ಮಾದರಿಯು, 6 ಸೀಟರ್ ಮಾದರಿಯಲ್ಲಿರುವಂತಹ ಇಂಟಿರಿಯರ್ ಹಾಗೂ ಎಕ್ಸ್ ಟಿರಿಯರ್ ಅನ್ನು ಹೊಂದಿದೆ. ಆದರೆ ಎರಡನೇ ಸಾಲಿನಲ್ಲಿ ಕ್ಯಾಪ್ಟನ್ ಸೀಟಿನ ಬದಲಿಗೆ ಬೆಂಚ್ ಸೀಟನ್ನು ನೀಡಲಾಗಿದೆ.

ಹೆಕ್ಟರ್ ಪ್ಲಸ್ 7 ಸೀಟರ್ ಮಾದರಿಯ ಬೆಲೆ ಎಕ್ಸ್ ಶೋರೂಂ ದರದಂತೆ ರೂ.13.35 ಲಕ್ಷಗಳಿಂದ ರೂ.18.33 ಲಕ್ಷಗಳಾದರೆ, 6 ಸೀಟರ್ ಗಳ ಮಾದರಿಯ ಬೆಲೆಯು ಎಕ್ಸ್ ಶೋರೂಂ ದರದಂತೆ ರೂ.15.99 ಲಕ್ಷಗಳಿಂದ ರೂ.19.13 ಲಕ್ಷಗಳಾಗಿದೆ.

ಹೊಸ ಹೆಕ್ಟರ್ ಪ್ಲಸ್ 7 ಸೀಟರ್ ಮಾದರಿಯಲ್ಲಿ ಸ್ಟ್ಯಾಂಡರ್ಡ್ ಹೆಕ್ಟರ್ ಕಾರಿನಲ್ಲಿರುವಂತಹ ಎಂಜಿನ್ ಮಾದರಿಯನ್ನೇ ಆಯ್ಕೆ ಮಾಡಿಕೊಳ್ಳಲಾಗಿದ್ದು, ಗ್ರಾಹಕರು ತಮ್ಮಅಗತ್ಯಕ್ಕೆ ಅನುಗುಣವಾಗಿ 1.5 ಲೀಟರ್ ಪೆಟ್ರೋಲ್, 1.5 ಲೀಟರ್ ಪೆಟ್ರೋಲ್ ಹೈಬ್ರಿಡ್ ಹಾಗೂ 2.0 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಮಾಡಬಹುದಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

1.5 ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 141 ಬಿಹೆಚ್‌ಪಿ, 250 ಎನ್ಎಂ ಟಾರ್ಕ್ ಉತ್ಪಾದಿಸಿದಲ್ಲಿ 2.0 ಲೀಟರ್ ಡೀಸೆಲ್ ಎಂಜಿನ್ ಮಾದರಿಯು 168 ಬಿಹೆಚ್‌ಪಿ, 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಮೈಲ್ಡ್ ಹೈಬ್ರಿಡ್ ಮಾದರಿಯನ್ನು 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಆಯ್ದ ಮಾದರಿಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಹೊಸ ಕಾರಿನ ಎಂಜಿನ್‌ಗಳನ್ನು 6 ಸ್ಪೀಡ್ ಮ್ಯಾನ್ಯುವಲ್ ಗೇರ್ ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಮತ್ತು 6 ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಆಯ್ಕೆ ಹೊಂದಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ನೊಂದಿಗೆ ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಎಂಜಿ ಕಂಪನಿಯು ಹೊಸ ಕಾರಿನ ಮೂಲಕ ಎಂಪಿವಿ ಕಾರು ಖರೀದಿದಾರನ್ನು ಸೆಳೆಯುತ್ತಿದೆ.