ಕೋವಿಡ್ ಸಂಕಷ್ಟದಲ್ಲಿ ಗ್ರಾಹಕರಿಗಾಗಿ ಅತ್ಯುತ್ತಮ ಸೇವೆ ಆರಂಭಿಸಿದ ಎಂಜಿ ಮೋಟಾರ್

ಹೆಚ್ಚುತ್ತಿರುವ ಕೋವಿಡ್ 2ನೇ ಅಲೆಯಿಂದಾಗಿ ಸೂಕ್ತ ವೈದ್ಯಕೀಯ ಸೇವೆಗಳು ಸಮಯಕ್ಕೆ ಸರಿಯಾಗಿ ಲಭ್ಯವಾಗದ ಕಾರಣ ಸಾವಿನ ಪ್ರಮಾಣದಲ್ಲಿ ಸಾಕಷ್ಟು ಏರಿಕೆಯಾಗುತ್ತಿದ್ದು, ವೈಸರ್ ಭೀತಿ ತಗ್ಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹರಸಾಹಸಪಡುತ್ತಿವೆ.

ಕೋವಿಡ್ ಸಂಕಷ್ಟದಲ್ಲಿ ಗ್ರಾಹಕರಿಗಾಗಿ ಅತ್ಯುತ್ತಮ ಸೇವೆ ಆರಂಭಿಸಿದ ಎಂಜಿ ಮೋಟಾರ್

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ರಾಜ್ಯಗಳು ಸೋಂಕು ಹರಡುವಿಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೆಚ್ಚುತ್ತಿರುವ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ವಿವಿಧ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕೋವಿಡ್ ನಿಯಂತ್ರಣಕ್ಕೆ ಟಫ್ ರೂಲ್ಸ್ ಅನುಸರಿಸರಿಸುತ್ತಿವೆ.

ಕೋವಿಡ್ ಸಂಕಷ್ಟದಲ್ಲಿ ಗ್ರಾಹಕರಿಗಾಗಿ ಅತ್ಯುತ್ತಮ ಸೇವೆ ಆರಂಭಿಸಿದ ಎಂಜಿ ಮೋಟಾರ್

ವೈರಸ್ ಹರಡುವಿಕೆಯನ್ನು ತಡೆಯಲು ಮಾಸ್ಕ್, ಹ್ಯಾಂಡ್ ಸ್ಯಾನಿಟೈಜ್ ಮತ್ತು ಫೇಸ್-ಶೀಲ್ಡ್‌ಗಳ ಬಳಕೆಯು ಹೆಚ್ಚಿಸಲಾಗುತ್ತಿದ್ದರೂ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗುತ್ತಿರುವುದು ಸಾವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

ಕೋವಿಡ್ ಸಂಕಷ್ಟದಲ್ಲಿ ಗ್ರಾಹಕರಿಗಾಗಿ ಅತ್ಯುತ್ತಮ ಸೇವೆ ಆರಂಭಿಸಿದ ಎಂಜಿ ಮೋಟಾರ್

ಸೋಂಕಿನ ಪ್ರಮಾಣ ಹೆಚ್ಚುತ್ತಿರುವುದರಿಂದ ವೈದ್ಯಕೀಯ ಸೇವೆಗಳು ಹೊಸ ಸವಾಲಾಗಿ ಪರಿಣಮಿದ್ದು, ಸರ್ಕಾರದ ಪಯತ್ನಗಳಿಗೆ ಪೂರಕವಾಗಿ ಎಂಜಿ ಮಟಾರ್ ಕಂಪನಿಯು ತನ್ನ ಗ್ರಾಹಕರಿಗೆ ಹೊಸ ಸೇವೆ ಒದಗಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಕಾರಣವಾಗಿದೆ.

ಕೋವಿಡ್ ಸಂಕಷ್ಟದಲ್ಲಿ ಗ್ರಾಹಕರಿಗಾಗಿ ಅತ್ಯುತ್ತಮ ಸೇವೆ ಆರಂಭಿಸಿದ ಎಂಜಿ ಮೋಟಾರ್

ಕೋವಿಡ್ ಸೋಂಕಿತರಲ್ಲಿ ಗಂಭೀರ ಪ್ರಕರಣಗಳನ್ನು ಹೊರತುಪಡಿಸಿ ಆರಂಭಿಕ ಹಂತದ ಸೋಂಕು ದೃಡಪಟ್ಟು ಮನೆಯಲ್ಲಿಯೇ ಆರೈಕೆಯಾಗುತ್ತಿರುವ ಸೋಂಕಿತರಿಗೆ ಎಂಜಿ ಮೋಟಾರ್ ಕಂಪನಿಯು ತಜ್ಞ ವೈದ್ಯರಿಂದ ಸಂಪೂರ್ಣವಾಗಿ ಉಚಿತ ಸಲಹೆಗಾಗಿ ಹೆಲ್ತ್‌ಲೈನ್ ಆರಂಭಿಸಿದೆ.

ಕೋವಿಡ್ ಸಂಕಷ್ಟದಲ್ಲಿ ಗ್ರಾಹಕರಿಗಾಗಿ ಅತ್ಯುತ್ತಮ ಸೇವೆ ಆರಂಭಿಸಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಕಂಪನಿಯು ದೇಶಾದ್ಯಂತ ಲಕ್ಷಾಂತರ ಸಂಖ್ಯೆಯಲ್ಲಿರುವ ತನ್ನ ಗ್ರಾಹಕರ ಆರೋಗ್ಯ ಕಾಳಜಿಗಾಗಿ ಹೊಸ ಪಯತ್ನಕ್ಕೆ ಕೈಹಾಕಿದ್ದು, ಮೈ ಎಂಜಿ ಆ್ಯಪ್ ಮೂಲಕ ಮಾಹಿತಿ ಹಂಚಿಕೊಳ್ಳುವ ಸೋಂಕಿತರಿಗೆ ನುರಿತ ವೈದ್ಯರಿಂದ ಉಚಿತ ಸಲಹೆ ಮತ್ತು ಸೂಚನೆಗಳನ್ನು ನೀಡಲಾಗುತ್ತಿದೆ.

MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಕೋವಿಡ್ ಸಂಕಷ್ಟದಲ್ಲಿ ಗ್ರಾಹಕರಿಗಾಗಿ ಅತ್ಯುತ್ತಮ ಸೇವೆ ಆರಂಭಿಸಿದ ಎಂಜಿ ಮೋಟಾರ್

ಸೋಂಕು ಪ್ರಮಾಣ ಮತ್ತು ಅದಕ್ಕೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚೆರಿಕೆ ಕ್ರಮಗಳು, ಔಷಧಿಗಳ ಮಾಹಿತಿ, ಆರೋಗ್ಯ ವೃದ್ದಿಯ ಕ್ರಮಗಳು ಮತ್ತು ಹೆಲ್ತ್ ಟ್ರ್ಯಾಕ್ ಬಗೆಗೆ ಸಂಪೂರ್ಣವಾಗಿ ಉಚಿತ ಮಾಹಿತಿ ನೀಡಲಾಗುತ್ತದೆ.

ಕೋವಿಡ್ ಸಂಕಷ್ಟದಲ್ಲಿ ಗ್ರಾಹಕರಿಗಾಗಿ ಅತ್ಯುತ್ತಮ ಸೇವೆ ಆರಂಭಿಸಿದ ಎಂಜಿ ಮೋಟಾರ್

ಲಾಕ್‌ಡೌನ್ ಸಂದರ್ಭದಲ್ಲಿ ಸೋಂಕು ದೃಡಪಟ್ಟ ತಕ್ಷಣವೇ ಚಿಕಿತ್ಸೆಗಾಗಿ ಅಲೆದಾಟ, ಮಾನಸಿಕವಾಗಿ ಧೃತಿ ಗೆಡುವುದನ್ನು ತಪ್ಪಿಸಲು ಸಮಯಕ್ಕೆ ಸರಿಯಾದ ಮಾರ್ಗದರ್ಶನ ಮತ್ತು ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು 24x7 ಮಾದರಿಯಲ್ಲಿ ಸೂಕ್ತ ಮಾಹಿತಿ ನೀಡಲಿರುವ ಎಂಜಿ ಹೆಲ್ತ್‌ಲೈನ್ ಸರ್ಕಾರದ ಪ್ರಯತ್ನಕ್ಕೆ ವಿಭಿನ್ನವಾಗಿ ಕೈಜೋಡಿಸಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಕೋವಿಡ್ ಸಂಕಷ್ಟದಲ್ಲಿ ಗ್ರಾಹಕರಿಗಾಗಿ ಅತ್ಯುತ್ತಮ ಸೇವೆ ಆರಂಭಿಸಿದ ಎಂಜಿ ಮೋಟಾರ್

ಇನ್ನು ಕೋವಿಡ್ ವಿರುದ್ದದ ಹೋರಾಟದಲ್ಲಿ ಆರಂಭದಿಂದಲೂ ವಿವಿಧ ಹಂತಗಳಲ್ಲಿ ವಿವಿಧ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಕ್ಕೆ ಹಣಕಾಸಿನ ಜೊತೆ ವೈದ್ಯಕೀಯ ಸೇವೆಗಳ ನೆರವು ನೀಡಿರುವ ಎಂಜಿ ಮೋಟಾರ್ ಕಂಪನಿಯು ಆಕ್ಸಿಜನ್ ಉತ್ಪಾದನೆಗಾಗಿ ಸಾಕಷ್ಟು ಸಹಕಾರಿಯಾಗುವುದರ ಜೊತೆಗೆ ತನ್ನ ಕಾರು ಉತ್ಪಾದನಾ ಘಟಕದ ಒಂದು ಭಾಗವನ್ನೇ ಬಿಟ್ಟುಕೊಡುವ ಮೂಲಕ ವೈರಸ್ ವಿರುದ್ದದ ಹೋರಾಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ.

Most Read Articles

Kannada
English summary
Mg Motor Introduces A 24X7 MG Healthline For Its Customers. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X