ಪ್ರತಿ ಚಾರ್ಜ್‌ಗೆ 500 ಕಿ.ಮೀ ಮೈಲೇಜ್ ನೀಡಬಲ್ಲ ಬ್ಯಾಟರಿ ಆಯ್ಕೆ ಪಡೆದುಕೊಳ್ಳಲಿವೆ ಎಂಜಿ ಹೊಸ ಇವಿ ಕಾರುಗಳು

ಎಂಜಿ ಮೋಟಾರ್ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಜೆಡ್ಎಸ್ ಇವಿ ಮಾರಾಟದೊಂದಿಗೆ ಭಾರೀ ಬದಲಾವಣೆಗೆ ಕಾರಣವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರುಗಳ ಬ್ಯಾಟರಿ ರೇಂಜ್ ಹೆಚ್ಚಿಸುವ ನಿಟ್ಟಿನಲ್ಲಿ ಹಲವಾರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ.

ಹೈ ರೇಂಜ್ ಬ್ಯಾಟರಿ ಆಯ್ಕೆ ಪಡೆದುಕೊಳ್ಳಲಿವೆ ಎಂಜಿ ಹೊಸ ಇವಿ ಕಾರುಗಳು

ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಮೊದಲ ಬಾರಿಗೆ 2020ರ ಫೆಬ್ರವರಿಯಲ್ಲಿ ಬಿಡುಗಡೆ ಮಾಡಿದ್ದ ಸಂದರ್ಭದಲ್ಲಿ 44.5 kWh ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 340 ಕಿ.ಮೀ ಮೈಲೇಜ್ ಹೊಂದಿತ್ತು. ಇದೀಗ 2021ರ ಜೆಡ್ಎಸ್ ಇವಿ ಮಾದರಿಯಲ್ಲಿ ಈ ಹಿಂದಿನ 44.5 kWh ಬ್ಯಾಟರಿ ಪ್ಯಾಕ್ ಅನ್ನೇ ಸುಧಾರಿತ ತಂತ್ರಜ್ಞಾನದೊಂದಿಗೆ ಉನ್ನತೀಕರಿಸಲಾಗಿದ್ದು, ಹೊಸ ಆವೃತ್ತಿಯು ಇದೀಗ ಪ್ರತಿ ಚಾರ್ಚ್‌ಗೆ 419 ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಮರ್ಥ್ಯ ಹೊಂದಿದೆ.

ಹೈ ರೇಂಜ್ ಬ್ಯಾಟರಿ ಆಯ್ಕೆ ಪಡೆದುಕೊಳ್ಳಲಿವೆ ಎಂಜಿ ಹೊಸ ಇವಿ ಕಾರುಗಳು

ಮುಂಬರುವ ದಿನಗಳಲ್ಲಿ 44.5 kWh ಬ್ಯಾಟರಿ ಪ್ಯಾಕ್ ಅನ್ನೇ ಪ್ರತಿ ಚಾರ್ಜ್‌ಗೆ 500 ಕಿಮೀ ಗೆ ಹೆಚ್ಟಳವಾಗುವ ನಿಟ್ಟಿಯಲ್ಲಿ ಸಂಶೋಧನೆಗಳನ್ನು ಕೈಗೊಂಡಿರುವುದಾಗಿ ಹೇಳಿಕೊಂಡಿರುವ ಎಂಜಿ ಮೋಟಾರ್ ಕಂಪನಿಯ ಮುಖ್ಯಸ್ಥರು ಉನ್ನತೀಕರಿಸಿದ ಆವೃತ್ತಿಯನ್ನು 2022ರ ಆವೃತ್ತಿಯಲ್ಲಿ ಬಿಡುಗಡೆ ಮಾಡಲಿದೆ.

ಹೈ ರೇಂಜ್ ಬ್ಯಾಟರಿ ಆಯ್ಕೆ ಪಡೆದುಕೊಳ್ಳಲಿವೆ ಎಂಜಿ ಹೊಸ ಇವಿ ಕಾರುಗಳು

ಇದರ ಜೊತೆಗೆ ಗ್ರಾಹಕರ ಬೇಡಿಕೆ ಮತ್ತೆರಡು ಇವಿ ಕಾರುಗಳನ್ನು ಮುಂದಿನ ಕೆಲವೇ ವರ್ಷಗಳಲ್ಲಿ ಬಿಡುಗಡೆ ಮಾಡಲಿರುವ ಎಂಜಿ ಕಂಪನಿಯು ಮುಂದಿನ ಎಲೆಕ್ಟ್ರಿಕ್ ಕಾರು ಮಾದರಿಯನ್ನು ರೂ. 20 ಲಕ್ಷಕ್ಕಿಂತಲೂ ಕಡಿಮೆ ಬೆಲೆಯೊಂದಿಗೆ ಬಿಡುಗಡೆ ಮಾಡುವುದಾಗಿ ಸ್ಪಷ್ಟಪಡಿಸಿದೆ.

ಹೈ ರೇಂಜ್ ಬ್ಯಾಟರಿ ಆಯ್ಕೆ ಪಡೆದುಕೊಳ್ಳಲಿವೆ ಎಂಜಿ ಹೊಸ ಇವಿ ಕಾರುಗಳು

ಪ್ರಸ್ತುತ ಜೆಡ್ಎಸ್ ಇವಿಯಲ್ಲಿ ಜೋಡಿಸಲಾಗಿರುವ 44.5 kWh ಬ್ಯಾಟರಿ ಪ್ಯಾಕ್ ಮಾದರಿಯನ್ನೇ ಭವಿಷ್ಯದ ಇವಿ ಕಾರುಗಳಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಬೇರೆ ಬೇರೆ ಮೈಲೇಜ್ ಪ್ರಮಾಣ ಮತ್ತು ತಂತ್ರಜ್ಞಾನ ಬಳಕೆ ಹೊಂದಿದ್ದು, ಡಿಸಿ ಫಾಸ್ಟ್ ಚಾರ್ಜರ್‌ಗಳ ಸೌಲಭ್ಯವನ್ನು ಈ ವರ್ಷಾಂತ್ಯಕ್ಕೆ ಮತ್ತಷ್ಟು ಹೆಚ್ಚಳ ಮಾಡಲಾಗುತ್ತಿದೆ. ಟಾಟಾ ಪವರ್ ಜೊತೆಗೂಡಿ ಡಿಸಿ ಫಾಸ್ಟ್ ಚಾರ್ಜರ್ ನಿಲ್ದಾಣಗಳನ್ನು ನಿರ್ಮಾಣ ಮಾಡುತ್ತಿರುವ ಎಂಜಿ ಮೋಟಾರ್ ಕಂಪನಿಯು ಇದುವರೆಗೆ ವಿವಿಧ ನಗರಗಳಲ್ಲಿ ಒಟ್ಟು 16 ಡಿಸಿ ಫಾಸ್ಟ್ ಚಾರ್ಜರ್‌‌ಗಳನ್ನು ಸೇವೆಗೆ ಮುಕ್ತಗೊಳಿಸಿದ್ದು, ಈ ವರ್ಷಾಂತ್ಯಕ್ಕೆ ಡಿಸಿ ಫಾಸ್ಟ್ ಚಾರ್ಜರ್‌ಗಳ ಸಂಖ್ಯೆ 50ಕ್ಕೆ ಏರಿಕೆಯಾಗಲಿದೆ.

ಹೈ ರೇಂಜ್ ಬ್ಯಾಟರಿ ಆಯ್ಕೆ ಪಡೆದುಕೊಳ್ಳಲಿವೆ ಎಂಜಿ ಹೊಸ ಇವಿ ಕಾರುಗಳು

ಪ್ರಸ್ತುತ ಮಾರುಕಟ್ಟೆಯಲ್ಲಿ ಇಂಧನಗಳ ಬೆಲೆಗಳು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹೊಸ ವಾಹನಗಳ ಖರೀದಿದಾರರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದು, ಎಂಜಿ ಮೋಟಾರ್ ಕಂಪನಿಯು ತನ್ನ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯನ್ನು ಗ್ರಾಹಕರ ಬೇಡಿಕೆಯೆಂತೆ ಹಲವು ಹೊಸ ಬದಲಾವಣೆಗಳೊಂದಿಗೆ ಉನ್ನತೀಕರಿಸಿ ಬಿಡುಗಡೆಗೊಳಿಸಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೈ ರೇಂಜ್ ಬ್ಯಾಟರಿ ಆಯ್ಕೆ ಪಡೆದುಕೊಳ್ಳಲಿವೆ ಎಂಜಿ ಹೊಸ ಇವಿ ಕಾರುಗಳು

2020ರಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿದ್ದ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಇದೀಗ ಮಾರುಕಟ್ಟೆಯಲ್ಲಿನ ಬೇಡಿಕೆ ಹೆಚ್ಚುವರಿ ಬ್ಯಾಟರಿ ಸಾಮಾರ್ಥ್ಯ ಸೇರಿದಂತೆ ವಿವಿಧ ಸುಧಾರಿತ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿದೆ.

ಹೈ ರೇಂಜ್ ಬ್ಯಾಟರಿ ಆಯ್ಕೆ ಪಡೆದುಕೊಳ್ಳಲಿವೆ ಎಂಜಿ ಹೊಸ ಇವಿ ಕಾರುಗಳು

ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಆವೃತ್ತಿಯು ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಎಕ್ಸೈಟ್ ಮಾದರಿಯು ರೂ. 20,99,800 ಮತ್ತು ಎಕ್ಸ್‌ಕ್ಲೂಸಿವ್ ಮಾದರಿಯು ರೂ. 24,18,000 ಬೆಲೆ ಹೊಂದಿದೆ.

MOST READ: ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಹೈ ರೇಂಜ್ ಬ್ಯಾಟರಿ ಆಯ್ಕೆ ಪಡೆದುಕೊಳ್ಳಲಿವೆ ಎಂಜಿ ಹೊಸ ಇವಿ ಕಾರುಗಳು

ಹೈಟೆಕ್ ತಂತ್ರಜ್ಞಾನ ಪ್ರೇರಿತ 44.5 kWh ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಹೊಸ ಬ್ಯಾಟರಿ ಪ್ಯಾಕ್ ಜೋಡಣೆಯ ನಂತರ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಪ್ರಮಾಣವು ಪ್ರತಿ ಚಾರ್ಜ್‌ಗೆ ಈ ಹಿಂದೆ ನೀಡಲಾಗುತ್ತಿದ್ದ 340 ಕಿಮೀ ನಿಂದ 419 ಕಿಮೀ ಗೆ ಏರಿಕೆಯಾಗಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

Most Read Articles

Kannada
English summary
MG Motors Planning To Introduce Electric Vehicle With 500 Km Range. Read in Kannada.
Story first published: Friday, February 12, 2021, 22:30 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X