Just In
- 51 min ago
ಮಕ್ಕಳಿಗಾಗಿ 60-70 ಕಿ.ಮೀ ಮೈಲೇಜ್ ನೀಡುವ ಮಿನಿ ಎಲೆಕ್ಟ್ರಿಕ್ ಜೀಪ್ ತಯಾರಿಸಿದ ತಂದೆ
- 1 hr ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 3 hrs ago
ಎಕ್ಸ್ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್ಯುವಿ500
- 3 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್
Don't Miss!
- News
ಮಂಗಳೂರು; ಇಂದಿನಿಂದ ರಂಝಾನ್ ಉಪವಾಸ ಆಚರಣೆ
- Sports
19 ವರ್ಷದ ಈ ಬ್ಯಾಟ್ಸ್ಮನ್ ಬಾರಿಸಿರೋ 8 ಐಪಿಎಲ್ ಸಿಕ್ಸರ್ ಸಾಮಾನ್ಯದ್ದಲ್ಲ!
- Lifestyle
ಅಧ್ಯಯನ: ಸ್ಥೂಲಕಾಯದವರ ಸ್ಮರಣಾ ಶಕ್ತಿ ಕಾಪಾಡುತ್ತೆ ಬೆಣ್ಣೆಹಣ್ಣು
- Finance
ಏಪ್ರಿಲ್ 13ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- Movies
ಸಾಮಾಜಿಕ ಜಾಲತಾಣಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಕನಸುಗಾರ
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಹೆಕ್ಟರ್ ಸರಣಿ ಕಾರುಗಳ ಬೆಲೆ ಹೆಚ್ಚಳ ಮಾಡಿದ ಎಂಜಿ ಮೋಟಾರ್
ಆಟೋ ಉತ್ಪಾದನಾ ಬಿಡಿಭಾಗಗಳ ಬೆಲೆ ಹೆಚ್ಚಳ ಪರಿಣಾಮ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ್ದು, ಎಂಜಿ ಮೋಟಾರ್ ಇಂಡಿಯಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಏರಿಕೆ ಮಾಡಿ ಹೊಸ ದರ ಪಟ್ಟಿ ಬಿಡುಗಡೆ ಮಾಡಿದೆ.

2021ರ ಅವಧಿಯಲ್ಲೇ ಈಗಾಗಲೇ ಒಂದು ಬಾರಿ ಬಹುತೇಕ ಹೊಸ ವಾಹನಗಳ ಬೆಲೆ ಹೆಚ್ಚಳವಾಗಿದ್ದು, ಇದೀಗ ಎರಡನೇ ಬಾರಿಗೆ ಏಪ್ರಿಲ್ ತಿಂಗಳಿನಲ್ಲಿ ಮತ್ತೆ ಹೊಸ ವಾಹನಗಳ ಬೆಲೆಯಲ್ಲಿ ಏರಿಕೆ ಮಾಡಲಾಗುತ್ತಿದೆ. ಎಂಜಿ ಮೋಟಾರ್ ಕಂಪನಿಯು ಕೂಡಾ ಪೂರ್ವ ನಿಗದಿಯೆಂತೆ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯಲ್ಲಿ ಹೆಚ್ಚಳ ಮಾಡಿದ್ದು, ಹೊಸ ದರಪಟ್ಟಿಯಲ್ಲಿ ಹೆಕ್ಟರ್ ಸರಣಿಗಳ ಬೆಲೆಯು ಸಾಕಷ್ಟು ದುಬಾರಿಯಾಗಿದೆ.

ಈ ಹಿಂದೆ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಬಿಡಿಭಾಗಗಳ ವೆಚ್ಚವು ನಿರಂತರವಾಗಿ ಹೆಚ್ಚುತ್ತಿರುವ ಪರಿಣಾಮ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬೆಲೆ ಪರಿಷ್ಕರಣೆ ಮಾಡುತ್ತಿದ್ದು, ಹೊಸ ವಾಹನಗಳು ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಬೆಲೆ ಏರಿಕೆ ಕಂಡಿವೆ.

ಆಟೋ ಕಂಪನಿಗಳು ವಿವಿಧ ಕಾರು ಮಾದರಿಗಳಿಗೆ ಅನುಗುಣವಾಗಿ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಶೇ. 1.50ರಿಂದ ಶೇ.3 ರಷ್ಟು ಬೆಲೆ ಹೆಚ್ಚಳವಾಗುತ್ತಿದ್ದು, ಕಳೆದ ವರ್ಷದಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿಯಾಗಿ ರೂ. 50 ಸಾವಿರದಿಂದ ರೂ.1 ಲಕ್ಷದಷ್ಟು ಬೆಲೆ ಹೆಚ್ಚಳವಾಗಿವೆ.

ಮಧ್ಯಮ ಗಾತ್ರದ ಬೆಲೆಯಲ್ಲಿ ರೂ. 1 ಲಕ್ಷದಿಂದ ರೂ. 1.50 ಲಕ್ಷದಷ್ಟು ಬೆಲೆ ಹೆಚ್ಚಳವಾಗಿದ್ದು, ವಿದೇಶಿ ಮಾರುಕಟ್ಟೆಗಳಿಂದ ಆಮದುಗೊಳ್ಳುವ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್‌ಗಳ ಬೆಲೆ ಹೆಚ್ಚಳವಾಗಿರುವ ಪರಿಣಾಮ ಹೊಸ ವಾಹನ ಖರೀದಿಯು ಮತ್ತಷ್ಟು ಹೊರೆಯಾಗುತ್ತಿದೆ. ಹೊಸ ದರಪಟ್ಟಿದಲ್ಲಿ ಎಂಜಿ ಮೋಟಾರ್ ನಿರ್ಮಾಣದ ಹೆಕ್ಟರ್ ಕಾರುಗಳ ಬೆಲೆಯಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಶೇ. 1.50 ರಿಂದ ಶೇ.2 ರಷ್ಟು ಹೆಚ್ಚಳ ಮಾಡಿದೆ.

ಎಂಜಿ ಕಂಪನಿಯು ಹೆಕ್ಟರ್ ಮತ್ತು ಹೆಕ್ಟರ್ ಪ್ಲಸ್ ಹೊರತುಪಡಿಸಿ ಇನ್ನುಳಿದ ಕಾರು ಮಾದರಿಗಳಾದ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಗ್ಲೊಸ್ಟರ್ ಕಾರು ಮಾದರಿಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಹೊಸ ದರಪಟ್ಟಿಯಲ್ಲಿ ಹೆಕ್ಟರ್ ಸ್ಟ್ಯಾಂಡರ್ಡ್ ಮಾದರಿಯು ಹೊಸ ದರ ಪಟ್ಟಿಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.18 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.18.86 ಲಕ್ಷ ಬೆಲೆ ಹೊಂದಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 29 ಸಾವಿರದಿಂದ ರೂ. 44 ಸಾವಿರ ಬೆಲೆ ಹೆಚ್ಚಳ ಮಾಡಲಾಗಿದೆ.
MOST READ: ವಾಣಿಜ್ಯ ವಾಹನಗಳ ನಿರ್ವಹಣಾ ವೆಚ್ಚ ತಗ್ಗಿಸಲು ಹೊಸ ಟರ್ಬೊ ಟ್ರಾನ್ ಎಂಜಿನ್ ಪರಿಚಯಿಸಿದ ಟಾಟಾ ಮೋಟಾರ್ಸ್

ಬೆಲೆ ಹೆಚ್ಚಳ ನಂತರ ಹೆಕ್ಟರ್ ಪ್ಲಸ್ 6 ಸೀಟರ್ ಮಾದರಿಯ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 17.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.61 ಲಕ್ಷ ಬೆಲೆ ಹೊಂದಿದ್ದು, ಬೆಲೆ ಹೆಚ್ಚಳ ನಂತರ 6 ಸೀಟರ್ ಮಾದರಿಯ ಬೆಲೆಯಲ್ಲಿ ರೂ. 39 ಸಾವಿರದಿಂದ ರೂ. 1. 51 ಲಕ್ಷ ಹೆಚ್ಚಳವಾಗಿದೆ.

ಹಾಗೆಯೇ 7 ಸೀಟರ್ ಹೆಕ್ಟರ್ ಪ್ಲಸ್ ಕಾರು ಮಾದರಿಯ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.63 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.89 ಲಕ್ಷ ಬೆಲೆ ಹೊಂದಿದ್ದು, 7 ಸೀಟರ್ ಬೆಲೆಯಲ್ಲಿ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 31 ಸಾವಿರದಿಂದ ರೂ. 49 ಸಾವಿರ ಹೆಚ್ಚಳ ಮಾಡಲಾಗಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಬೆಲೆ ಬದಲಾವಣೆ ನಂತರ ಯಾವುದೇ ತಾಂತ್ರಿಕ ಅಂಶಗಳನ್ನು ಬದಲಾವಣೆಗೊಳಿಸದ ಎಂಜಿ ಮೋಟಾರ್ ಕಂಪನಿಯು ಈ ಹಿಂದಿನ ಮಾದರಿಯಲ್ಲಿರುವ ತಾಂತ್ರಿಕ ಅಂಶಗಳನ್ನು ಮುಂದುವರಿಸಿದ್ದು, ಹೊಸ ದರಗಳು ಇಂದಿನಿಂದಲೇ ಅನ್ವಯವಾಗಲಿವೆ.