ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಎಂಜಿ ಮೋಟಾರ್ ಇಂಡಿಯಾ ಕಳೆದ ವರ್ಷ ಜನವರಿಯಲ್ಲಿ ಸಂಪೂರ್ಣ ಎಲೆಕ್ಟ್ರಿಕ್ ಮಾದರಿಯಾದ ಜೆಡ್ಎಸ್ ಕಾರನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಆ ಸಮಯದಲ್ಲಿ ದೇಶದಲ್ಲಿ ಬ್ರ್ಯಾಂಡ್‌ನ ಎರಡನೇ ಮಾದರಿಯಾಗಿ ಈ ಜೆಡ್ಎಸ್ ಇವಿ ಮಾದರಿಯನ್ನು ಬಿಡುಗಡೆಗೊಳಿಸಿತ್ತು.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ವಿದೇಶಿ ಮಾರುಕಟ್ಟೆಗಳಲ್ಲಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು 2018 ರಿಂದ ಮಾರಾಟವಾಗುತ್ತಿದೆ. ಇದರಿಂದ ಈ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಫೇಸ್‌ಲಿಫ್ಟ್ ಸ್ವೀಕರಿಸಲು ಸಿದ್ಧವಾಗಿದೆ. ನವೀಕರಣದ ಭಾಗವಾಗಿ, ಎಸ್‌ಐಸಿ ಒಡೆತನದ ಬ್ರಿಟಿಷ್ ವಾಹನ ತಯಾರಕ ಕಂಪನಿಯು ಈಗಾಗಲೇ ಚೀನಾದಲ್ಲಿ ಪೂರ್ವವೀಕ್ಷಣೆ ಮಾಡಿರುವ ಹೊಸ ಎಂಜಿ ಲೋಗೊವನ್ನು ಜೆಡ್ಎಸ್ ಎಲೆಕ್ಟ್ರಿಕ್ ಫೇಸ್‌ಲಿಫ್ಟ್ ಕಾರಿನಲ್ಲಿ ನೀಡಬಹುದು.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಲೋಗೋದ ಒಟ್ಟಾರೆ ವಿನ್ಯಾಸವು ಹೆಚ್ಚಾಗಿ ಬದಲಾಗದೆ ಇದ್ದರೂ, ಹೊಸ ಲೋಗೋ 3ಡಿ ಲುಕ್ ಅನ್ನು ಹೊಂದಿದೆ. ಇನ್ನು ಪ್ರಸುತ ಲೋಗೋ ಸಿಲ್ವರ್ ಬಣ್ಣದಲ್ಲಿದ್ದರೆ, ಹೊಸ ಲೋಗೊದಲ್ಲಿ ಬ್ಲ್ಯಾಕ್ ಫಿನಿಶ್ ಇರುತ್ತದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಕಳೆದ ವರ್ಷ ಬ್ರಿಟನ್ ನಲ್ಲಿ ಐಸಿಇ ಎಂಜಿ ಜೆಡ್ಎಸ್ ಇವಿ ಮಿಡ್-ಲೈಫ್ ಫೇಸ್‌ಲಿಫ್ಟ್ ಅನ್ನು ಪಡೆದುಕೊಂಡಿದೆ ಎಂದು ಗಮನಿಸಬೇಕು, ಆದರೆ ಜೆಡ್ಎಸ್ ಇವಿ ಇನ್ನು ಪ್ರಿ-ಫೇಸ್‌ಲಿಫ್ಟ್ ಮಾದರಿಯನ್ನು ಆಧರಿಸಿದೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಇದರರ್ಥ ಜೆಡ್ಎಸ್ ಇವಿ ಫೇಸ್‌ಲಿಫ್ಟ್ ಹೊಸ ತೀಕ್ಷ್ಣವಾದ ಹೆಡ್‌ಲ್ಯಾಂಪ್‌ಗಳೊಂದಿಗೆ ಮರುವಿನ್ಯಾಸಗೊಳಿಸಲಾದ ಮುಂಭಾಗದ ಫಾಸಿಕ ದೊಂದಿಗೆ ಬರಬಹುದು. ಇನ್ನು ನವೀಕರಿಸಿದ ಗ್ರಿಲ್ ಅನ್ನು ಹೊಂದಿರುತ್ತದೆ. ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಹಿಂಭಾಗದಲ್ಲಿ ಬಂಪರ್ ಮತ್ತು ಮರುವಿನ್ಯಾಸಗೊಳಿಸಲಾದ ಟೈಲ್‌ಲ್ಯಾಂಪ್‌ಗಳನ್ನು ಪಡೆಯುತ್ತದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಫೇಸ್‌ಲಿಫ್ಟ್ ಮಾದರಿಯು ಸಹ 400 ರೇಂಜ್ ಅನ್ನು ಹೊಂದಿರುತ್ತದೆ, ಅಂದರೆ ಒಂದು ಬಾರಿ ಇದನ್ನು ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಮಾಡಿದರೆ 400 ಕಿ.ಮೀ ವರೆಗೂ ಚಲಿಸಬಹುದಾಗಿದೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ನವೀಕರಿಸಿದ ಫೇಸ್‌ಲಿಫ್ಟ್ ಮಾದರಿಯನ್ನು ಮೊದಲು ಚೀನಾ ಮಾರುಕಟ್ಟೆಯಲ್ಲಿ ಪರಿಚಯಿಸಬಹುದು, ನಂತರ ಇತರ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿಯ ಇದೇ ವರ್ಷದ ಅಂತ್ಯದಲ್ಲಿ ಪರಿಚಯಿಸಬಹುದು ಎಂದು ನಿರೀಕ್ಷಿಸುತ್ತೇವೆ. ಆದರೆ ಕಂಪನಿಯು ಇದರ ಬಗ್ಗೆ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಇನ್ನು ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಒಳಭಾಗದಲ್ಲಿ ಪ್ರಮುಖ ನವೀಕರಣಗಳನ್ನು ಪಡೆಯಬಹುದು. ಇದರಲ್ಲಿ ಸಂಪೂರ್ಣ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಹೊಸ 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿರುತ್ತದೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಇನ್ನು ನವೀಕರಿಸಿದ ಎಲೆಕ್ಟ್ರಿಕ್ ಕಾರಿನಲ್ಲಿ ಕನೆಕ್ಟಿವಿಟಿ-ಟೆಕ್ ಫೀಚರ್ ಗಳನ್ನು ಸಹ ಪರಿಚಯಿಸುವ ನಿರೀಕ್ಷೆಯಿದೆ. ಇನ್ನು ಭಾರತದಲ್ಲಿ ಬಿಡುಗಡೆಯಾಗಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಪ್ರಿ-ಫೇಸ್‌ಲಿಫ್ಟ್ 44.5 ಕಿಲೋವ್ಯಾಟ್ ಬ್ಯಾಟರಿ ಪ್ಯಾಕ್ ಅನ್ನು ಪಡೆಯುತ್ತದೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ 2022ರ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಇದು 419 ಕಿಮೀ ರೇಂಜ್ ಹೊಂದಿರಬಹುದು. ಇನ್ನು ಇದರ ಎಲೆಕ್ಟ್ರಿಕ್ ಮೋಟರ್ 143 ಬಿಹೆಚ್‍ಪಿ ಪವರ್ ಮತ್ತು 353 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಭಾರತದಲ್ಲಿ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಫೇಸ್‌ಲಿಫ್ಟ್ ಮಾದರಿಯು ಮುಂದಿನ ವರ್ಷದಲ್ಲಿ ಬಿಡುಗಡೆಯಾಗಬಹುದೆಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
2022 MG ZS EV To Debut This Year With New Design. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X