ಗಗನಕ್ಕೇರಿದ ಇಂಧನ ಬೆಲೆ: ಭಾರೀ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಗಗನಕ್ಕೇರಿದೆ, ಇದರಿಂದ ಪಾರಾಗಲು ಹೆಚ್ಚಿನ ಜನರು ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಇದರಿಂದ ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಭಾರೀ ಬೇಡಿಕೆಯನ್ನು ಪಡೆದುಕೊಂಡಿದೆ.

ಗಗನಕ್ಕೇರಿದ ಇಂಧನ ಬೆಲೆ: ಭಾರೀ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಇದಕ್ಕೆ ಉತ್ತಮ ಉದಾಹರಣೆ ಎಂದರೆ ಕಳೆದ ತಿಂಗಳು ಎಂಜಿ ಮೋಟರ್ ಕಂಪನಿಯು ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿ ಮಾದರಿಗೆ 600ಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದೆ. ಈ ವಿಷಯವನ್ನು ಎಂಜಿ ಮೋಟಾರ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ರಾಜೀವ್ ಚಾಬಾ ಅವರು ಟ್ವೀಟ್ ಮಾಡಿ ಹೇಳಿದ್ದಾರೆ. ಇದು ಎಂಜಿನ್ ಜೆಡ್ಎಸ್ ಎಲೆಕ್ಟ್ರಿಕ್ ಕಾರಿಗೆ ಪಡೆದ ಬುಕ್ಕಿಂಗ್ ನಲ್ಲಿ ಅತ್ಯಧಿಕವಾಗಿದೆ. ಜನರು ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳಿಗಿಂತ ಎಲೆಕ್ಟ್ರಿಕ್ ಕಾರನ್ನು ಖರೀದಿಸಲು ಬಯಸುತ್ತಿದ್ದಾರೆ ಎಂದು ತಿಳಿದು ಬರುತ್ತದೆ.

ಗಗನಕ್ಕೇರಿದ ಇಂಧನ ಬೆಲೆ: ಭಾರೀ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಎಂಜಿ ಮೋಟಾರ್ ಇಂಡಿಯಾ ಕಳೆದ ವರ್ಷ ಜನವರಿಯಲ್ಲಿ ಸಂಪೂರ್ಣ ಎಲೆಕ್ಟ್ರಿಕ್ ಮಾದರಿಯಾದ ಜೆಡ್ಎಸ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಆ ಸಮಯದಲ್ಲಿ ದೇಶದಲ್ಲಿ ಬ್ರ್ಯಾಂಡ್‌ನ ಎರಡನೇ ಮಾದರಿಯಾಗಿ ಈ ಜೆಡ್ಎಸ್ ಇವಿ ಮಾದರಿಯನ್ನು ಬಿಡುಗಡೆಗೊಳಿಸಿತ್ತು.

ಗಗನಕ್ಕೇರಿದ ಇಂಧನ ಬೆಲೆ: ಭಾರೀ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಸದ್ಯ ಎಂಜಿ ಜೆಡ್ಎಸ್ ಇವಿ ಮಾದರಿಯ ಆರಂಭಿಕ ಬೆಲೆಯು ರೂ, 20.99 ಲಕ್ಷಗಳಾಗಿದೆ, ಈ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿ ಮಾದರಿಯು ಹ್ಯುಂಡೈ ಕ್ರೆಟಾದಷ್ಟು ದೊಡ್ಡದಾಗಿದೆ, ಇದರ ಉದ್ದ 4,314 ಎಂಎಂ, ಅಗಲ 1,809 ಎಂಎಂ ಮತ್ತು ಎತ್ತರ 1,644 ಎಂಎಂ ಆಗಿದೆ.

ಗಗನಕ್ಕೇರಿದ ಇಂಧನ ಬೆಲೆ: ಭಾರೀ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಈ ಎಂಜಿ ಜೆಡ್ಎಸ್ ಇವಿ ಮಾದರಿಯಲ್ಲಿ 4.5 ಕಿಲೋವ್ಯಾಟ್ ಬ್ಯಾಟರಿ ಪ್ಯಾಕ್ ಅನ್ನು ಅಳವಡಿಸಲಾಗಿ. ಇದನ್ನು ಮೂರು-ಹಂತದ ಪರ್ಮನೆಂಟ್ ಮ್ಯಾಗ್ನೆಟ್ ಸಿಂಕ್ರೊನಸ್ ಮೋಟರ್‌ಗೆ ಜೋಡಿಸಲಾಗಿದೆ. ಇದು ಒಟ್ಟು 142.7 ಬಿಹೆಚ್‍ಪಿ ಮತ್ತು ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿ ಝಡ್ಎಸ್ ಇವಿ ಎಸ್‍ಯುವಿಯು 419 ಕಿ.ಮೀ ರೇಂಜ್ ಅನ್ನು ನೀಡುತ್ತದೆ.

ಗಗನಕ್ಕೇರಿದ ಇಂಧನ ಬೆಲೆ: ಭಾರೀ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಎಂಜಿ ಜೆಡ್ಎಸ್ ಇವಿ ಅತ್ಯಾಧುನಿಕ ಸುರಕ್ಷತಾ ಫೀಚರ್ಸ್ ಗಳನ್ನು ಹೊಂದಿವೆ. ಇದರಲ್ಲಿ 6 ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಇಬಿಡಿ ಯೊಂದಿಗೆ ಎಬಿಎಸ್, , ಹಿಲ್ ಸ್ಟಾರ್ಟ್ ಅಸಿಸ್ಟ್, ರಿಯರ್ ಡಿಸ್ಕ್ ಬ್ರೇಕ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್, ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್, ಹೀಟೆಡ್ ಒಆರ್ವಿಎಂ ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಕ್ಯಾಮರಾವನ್ನು ಹೊಂದಿದೆ.

ಗಗನಕ್ಕೇರಿದ ಇಂಧನ ಬೆಲೆ: ಭಾರೀ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಇನ್ನು ಎಂಜಿ ಮೋಟಾರ್ ಇಂಡಿಯಾ ಕಂಪನಿಯು ತನ್ನ ಇವಿ(ಎಲೆಕ್ಟ್ರಿಕ್ ವೆಹಿಕಲ್) ಪೋರ್ಟ್ಫೋಲಿಯೊವನ್ನು ಹೊಸ ಮಾದರಿಯನ್ನು ಬಿಡುಗಡೆಗೊಳಿಸುವ ಮೂಲಕ ವಿಸ್ತರಿಸಲು ಮುಂದಾಗಿದೆ. ವರದಿಗಳ ಪ್ರಕಾರ, ಮುಂದಿನ ಎರಡು ವರ್ಷಗಳಲ್ಲಿ ಹೊಸ ಎಂಜಿ ಎಲೆಕ್ಟ್ರಿಕ್ ಕಾರು ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಡಲಿದೆ.

ಗಗನಕ್ಕೇರಿದ ಇಂಧನ ಬೆಲೆ: ಭಾರೀ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಎಂಜಿ ಮೋಟರ್ ಇಂಡಿಯಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಚಾಬಾ ಅವರು ಭವಿಷ್ಯದಲ್ಲಿ ಹೆಚ್ಚಿನ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲು ಯೋಜಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ನಮ್ಮ ಎರಡನೇ ಇವಿ ಕಾರನ್ನು ರೂ.20 ಲಕ್ಷ ಗಿಂತ ಕಡಿಮೆ ಬೆಲೆಯಲ್ಲಿ ನೋಡಬಹುದು.

ಗಗನಕ್ಕೇರಿದ ಇಂಧನ ಬೆಲೆ: ಭಾರೀ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಪ್ರಸ್ತುತ ಕರೋನಾ ಮತ್ತು ಉತ್ಪಾದನಾ ಸಾಮಗ್ರಿಗಳ (ವಿಶೇಷವಾಗಿ ಚಿಪ್ಸ್) ಕೊರತೆಯನ್ನು ಗಮನಿಸಿ ಹೊಸ ಎಂಜಿ ಎಲೆಕ್ಟ್ರಿಕ್ ಕಾರು ಎರಡು ವರ್ಷಗಳಲ್ಲಿ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದೆ ಎಂದು ಹೇಳಿದ್ದಾರೆ. ಉಳಿದಂತೆ ಹೊಸ ಎಲೆಕ್ಟ್ರಿಕ್ ಎಸ್‍ಯುವಿಯ ಬಗ್ಗೆ ಯಾವುದೇ ಮಾಹಿತಿಗಳು ಬಹಿರಂಗವಾಗಿಲ್ಲ.

ಗಗನಕ್ಕೇರಿದ ಇಂಧನ ಬೆಲೆ: ಭಾರೀ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಇನ್ನು ವಿದೇಶಿ ಮಾರುಕಟ್ಟೆಗಳಲ್ಲಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು 2018 ರಿಂದ ಮಾರಾಟವಾಗುತ್ತಿದೆ. ಇದರಿಂದ ಈ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಫೇಸ್‌ಲಿಫ್ಟ್ ಸ್ವೀಕರಿಸಲು ಸಿದ್ಧವಾಗಿದೆ. ನವೀಕರಣದ ಭಾಗವಾಗಿ, ಎಸ್‌ಐಸಿ ಒಡೆತನದ ಬ್ರಿಟಿಷ್ ವಾಹನ ತಯಾರಕ ಕಂಪನಿಯು ಈಗಾಗಲೇ ಚೀನಾದಲ್ಲಿ ಪೂರ್ವವೀಕ್ಷಣೆ ಮಾಡಿರುವ ಹೊಸ ಎಂಜಿ ಲೋಗೊವನ್ನು ಜೆಡ್ಎಸ್ ಎಲೆಕ್ಟ್ರಿಕ್ ಫೇಸ್‌ಲಿಫ್ಟ್ ಕಾರಿನಲ್ಲಿ ನೀಡಬಹುದು

ಗಗನಕ್ಕೇರಿದ ಇಂಧನ ಬೆಲೆ: ಭಾರೀ ಬೇಡಿಕೆ ಪಡೆದುಕೊಂಡ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು

ಲೋಗೋದ ಒಟ್ಟಾರೆ ವಿನ್ಯಾಸವು ಹೆಚ್ಚಾಗಿ ಬದಲಾಗದೆ ಇದ್ದರೂ, ಹೊಸ ಲೋಗೋ 3ಡಿ ಲುಕ್ ಅನ್ನು ಹೊಂದಿದೆ. ಇನ್ನು ಪ್ರಸುತ ಲೋಗೋ ಸಿಲ್ವರ್ ಬಣ್ಣದಲ್ಲಿದ್ದರೆ, ಹೊಸ ಲೋಗೊದಲ್ಲಿ ಬ್ಲ್ಯಾಕ್ ಫಿನಿಶ್ ಇರುತ್ತದೆ. ಭಾರತದಲ್ಲಿ ಮಾರಾಟವಾಗುವ ಜೆಡ್ಎಸ್ ಇವಿ ಮಾದರಿಯು ಸದ್ಯಕ್ಕೆ ಫೇಸ್‌ಲಿಫ್ಟ್ ಪಡೆಯುವ ಸಾಧ್ಯತೆಗಳು ಕಡಿಮೆಯಾಗಿದೆ.

Most Read Articles

Kannada
English summary
Mg zs ev high demand in indian market july 2021 details
Story first published: Thursday, August 5, 2021, 22:06 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X