ಆಗಸ್ಟ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ MG ZS ಎಲೆಕ್ಟ್ರಿಕ್ ಕಾರು
ದೇಶದಲ್ಲಿ ಇಂದನ ಬೆಲೆಗಳು ಗಗನಕ್ಕೇರಿದೆ, ಇದರಿಂದ ಪಾರಾಗಲು ಹೆಚ್ಚಿನ ಜನರು ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಇದರಿಂದ ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ದಿನದಿಂದ ದಿನಕ್ಕೆ ಭಾರೀ ಬೇಡಿಕೆಯನ್ನು ಪಡೆದುಕೊಂಡಿದೆ.

ಹಲವು ಜನಪ್ರಿಯ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಿದೆ. ಇದರ ನಡುವೆ ಈಗಾಗಲೇ ಮಾರಾಟವಾಗುತ್ತಿರುವ ಹಲವು ಎಲೆಕ್ಟ್ರಿಕ್ ವಾಹನಗಳು ಭರ್ಜರಿ ಬೇಡಿಕೆಯೊಂದಿಗೆ ಮಾರಾಟವಾಗುತ್ತಿದೆ. ಕಳೆದ ತಿಂಗಳು ಎಂಜಿ ಕಂಪನಿಯ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿ ಮಾದರಿಯ 273 ಯುನಿಟ್‌ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಆಗಸ್ಟ್ ತಿಂಗಳಿನಲ್ಲಿ 119 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ವರ್ಷದ ಆಗಸ್ಟ್ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.129 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಕಳೆದ ತಿಂಗಳು ಎಂಜಿ ಮೋಟಾರ್ ಕಂಪನಿಯು ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿ ಮಾದರಿಗೆ 700ಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದೆ. ಈ ವಿಷಯವನ್ನು ಎಂಜಿ ಮೋಟಾರ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ರಾಜೀವ್ ಚಾಬಾ ಅವರು ಟ್ವೀಟ್ ಮಾಡಿ ತಿಳಿಸಿದ್ದರು.

ಈ ಬುಕ್ಕಿಂಗ್ ಎಂಜಿನ್ ಜೆಡ್ಎಸ್ ಎಲೆಕ್ಟ್ರಿಕ್ ಕಾರಿಗೆ ಪಡೆದ ಬುಕ್ಕಿಂಗ್ ನಲ್ಲಿ ಅತ್ಯಧಿಕವಾಗಿದೆ. ಜನರು ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳಿಗಿಂತ ಎಲೆಕ್ಟ್ರಿಕ್ ಕಾರನ್ನು ಖರೀದಿಸಲು ಬಯಸುತ್ತಿದ್ದಾರೆ ಎಂದು ತಿಳಿದು ಬರುತ್ತದೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳು ಇನ್ನೂ ತಮ್ಮ ಆರಂಭಿಕ ಹಂತದಲ್ಲಿದೆ,

ಅದರೆ ಕಳೆದ ಎರಡು ವರ್ಷಗಳಲ್ಲಿ, ನಾವು ಬೇಡಿಕೆಯಲ್ಲಿ ಭಾರೀ ಏರಿಕೆ ಕಂಡಿದ್ದೇವೆ ವಾಸ್ತವವಾಗಿ, 2020-21 ವಾರ್ಷಿಕ ಅವಧಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಹಿಂದಿನ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಶೇಕಡಾ 53 ರಷ್ಟು ಬೆಳವಣಿಗೆಯನ್ನು ಕಂಡಿದೆ. ಪ್ರಸ್ತುತ, ಟಾಟಾ ನೆಕ್ಸಾನ್ ಇವಿ ವಿಭಾಗದಲ್ಲಿ ಹೆಚ್ಚು ಮಾರಾಟವಾಗುತ್ತಿರುವ ಎಲೆಕ್ಟ್ರಿಕ್ ಪ್ಯಾಸೆಂಜರ್ ಕಾರ್ ಆಗಿದ್ದು, ತಿಂಗಳಿಗೆ 500 ಯೂನಿಟ್‌ಗಳನ್ನು ಮಾರಾಟ ಮಾಡುತ್ತಿದೆ,

ಎಂಜಿ ಜೆಡ್ಎಸ್ ಇವಿ ತಿಂಗಳಿಗೆ ಸರಾಸರಿ 250 ರಿಂದ 300 ಯೂನಿಟ್‌ಗಳನ್ನು ಮಾರಾಟ ಮಾಡುತ್ತಿದ್ದೇವೆ. ಆದರೆ ಇವಿ ತಯಾರಕರು ಮತ್ತು ಇತರ ವಾಹನ ತಯಾರಕರು ಪ್ರಸ್ತುತ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಬೇಡಿಕೆಗಿಂತ ಪೂರೈಕೆ ಆಗಿದೆ, ಇದು ಮುಖ್ಯವಾಗಿ ಸೆಮಿಕಂಡಕ್ಟರ್ ಚಿಪ್‌ಗಳ ಜಾಗತಿಕ ಕೊರತೆಯಿಂದಾಗಿ ಈ ಸಮಸ್ಯೆಯನ್ನು ಎದುರಿಸುತ್ತಿದೆ. ಆದರೆ, ಚಿಪ್‌ಗಳ ತೀವ್ರ ಕೊರತೆಯು ವರ್ಷದ ಅಂತ್ಯದವರೆಗೂ ಮುಂದುವರಿಯುತ್ತದೆ, ಇದು ಉತ್ಪಾದನಾ ನಿರ್ಬಂಧಗಳಿಗೆ ಕಾರಣವಾಗುತ್ತದೆ.

ಎಂಜಿ ಮೋಟಾರ್ ಇಂಡಿಯಾ ಕಳೆದ ವರ್ಷ ಜನವರಿಯಲ್ಲಿ ಸಂಪೂರ್ಣ ಎಲೆಕ್ಟ್ರಿಕ್ ಮಾದರಿಯಾದ ಜೆಡ್ಎಸ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಆ ಸಮಯದಲ್ಲಿ ದೇಶದಲ್ಲಿ ಬ್ರ್ಯಾಂಡ್‌ನ ಎರಡನೇ ಮಾದರಿಯಾಗಿ ಈ ಜೆಡ್ಎಸ್ ಇವಿ ಮಾದರಿಯನ್ನು ಬಿಡುಗಡೆಗೊಳಿಸಿತ್ತು.

ಸದ್ಯ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯ ಆರಂಭಿಕ ಬೆಲೆಯು ರೂ,20.99 ಲಕ್ಷಗಳಾಗಿದೆ, ಈ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿ ಮಾದರಿಯು ಹ್ಯುಂಡೈ ಕ್ರೆಟಾದಷ್ಟು ದೊಡ್ಡದಾಗಿದೆ, ಇದರ ಉದ್ದ 4,314 ಎಂಎಂ, ಅಗಲ 1,809 ಎಂಎಂ ಮತ್ತು ಎತ್ತರ 1,644 ಎಂಎಂ ಆಗಿದೆ. ಈ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯಲ್ಲಿ 4.5 ಕಿಲೋವ್ಯಾಟ್ ಬ್ಯಾಟರಿ ಪ್ಯಾಕ್ ಅನ್ನು ಅಳವಡಿಸಲಾಗಿದೆ.

ಇದನ್ನು ಮೂರು-ಹಂತದ ಪರ್ಮನೆಂಟ್ ಮ್ಯಾಗ್ನೆಟ್ ಸಿಂಕ್ರೊನಸ್ ಮೋಟರ್‌ಗೆ ಜೋಡಿಸಲಾಗಿದೆ. ಇದು ಒಟ್ಟು 142.7 ಬಿಹೆಚ್‍ಪಿ ಮತ್ತು ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿ ಝಡ್ಎಸ್ ಇವಿ ಎಸ್‍ಯುವಿಯು 419 ಕಿ.ಮೀ ರೇಂಜ್ ಅನ್ನು ನೀಡುತ್ತದೆ.

ಈ ಎಲೆಕ್ಟ್ರಿಕ್ ಕಾರು ಅತ್ಯಾಧುನಿಕ ಸುರಕ್ಷತಾ ಫೀಚರ್ಸ್ ಗಳನ್ನು ಹೊಂದಿವೆ. ಇದರಲ್ಲಿ 6 ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಇಬಿಡಿ ಯೊಂದಿಗೆ ಎಬಿಎಸ್, ಹಿಲ್ ಸ್ಟಾರ್ಟ್ ಅಸಿಸ್ಟ್, ರಿಯರ್ ಡಿಸ್ಕ್ ಬ್ರೇಕ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್, ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್, ಹೀಟೆಡ್ ಒಆರ್ವಿಎಂ ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಕ್ಯಾಮರಾವನ್ನು ಹೊಂದಿದೆ.

ಎಂಜಿ ಕಂಪನಿಯು ಚೀನಾದ SAIC ಮಾಲೀಕತ್ವದ ಜೆಡ್ಎಸ್ ಎಲೆಕಕ್ಟ್ರಿಕ್ ಕಾರಿನ ಒಟ್ಟಾರೆ ರೇಂಜ್ ಅನ್ನು ಮತ್ತಷ್ಟು ಹೆಚ್ಚಿಸುತ್ತಿದೆ. ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು 419 ಕಿ.ಮೀ ರೇಂಜ್ ಅನ್ನು ನೀಡುತ್ತದೆ. ಇದನ್ನು ಒಮ್ಮೆ ಚಾರ್ಜ್ ಮಾಡಿದರೆ 500 ಕಿ.ಮೀಗೆ ಹೆಚ್ಚಿಸಬಹುದು.

ಇನ್ನು ಎಂಜಿ ಮೋಟಾರ್ ಇಂಡಿಯಾ ಕಂಪನಿಯು ತನ್ನ ಇವಿ(ಎಲೆಕ್ಟ್ರಿಕ್ ವೆಹಿಕಲ್) ಪೋರ್ಟ್ಫೋಲಿಯೊವನ್ನು ಹೊಸ ಮಾದರಿಯನ್ನು ಬಿಡುಗಡೆಗೊಳಿಸುವ ಮೂಲಕ ವಿಸ್ತರಿಸಲು ಮುಂದಾಗಿದೆ. ವರದಿಗಳ ಪ್ರಕಾರ, ಮುಂದಿನ ಎರಡು ವರ್ಷಗಳಲ್ಲಿ ಹೊಸ ಎಂಜಿ ಎಲೆಕ್ಟ್ರಿಕ್ ಕಾರು ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಡಲಿದೆ. ಎಂಜಿ ಮೋಟರ್ ಇಂಡಿಯಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಚಾಬಾ ಅವರು ಭವಿಷ್ಯದಲ್ಲಿ ಹೆಚ್ಚಿನ ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲು ಯೋಜಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ನಮ್ಮ ಎರಡನೇ ಇವಿ ಕಾರನ್ನು ರೂ.20 ಲಕ್ಷ ಗಿಂತ ಕಡಿಮೆ ಬೆಲೆಯಲ್ಲಿ ನೋಡಬಹುದು.ಪ್ರಸ್ತುತ ಕರೋನಾ ಮತ್ತು ಉತ್ಪಾದನಾ ಸಾಮಗ್ರಿಗಳ (ವಿಶೇಷವಾಗಿ ಚಿಪ್ಸ್) ಕೊರತೆಯನ್ನು ಗಮನಿಸಿ ಹೊಸ ಎಂಜಿ ಎಲೆಕ್ಟ್ರಿಕ್ ಕಾರು ಎರಡು ವರ್ಷಗಳಲ್ಲಿ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದೆ ಎಂದು ಹೇಳಿದ್ದಾರೆ. ಉಳಿದಂತೆ ಹೊಸ ಎಲೆಕ್ಟ್ರಿಕ್ ಕಾರುಗಳ ಬಗ್ಗೆ ಯಾವುದೇ ಮಾಹಿತಿಗಳು ಬಹಿರಂಗವಾಗಿಲ್ಲ. ಆದರೆ ಎಂಜಿ ಕಂಪನಿಯ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಭರ್ಜರಿಯಾಗಿ ಮಾರಾಟವಾಗುತ್ತಿದೆ.


Click it and Unblock the Notifications