Just In
- 2 hrs ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 6 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- Movies
ರಾಖಿ ಸಾವಂತ್ ಬಯೋಪಿಕ್ ಈ ಸ್ಟಾರ್ ನಟಿಯೇ ಮಾಡಬೇಕಂತೆ
- News
Breaking: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ?
- Sports
ಐಪಿಎಲ್ 2021: ಈ ಬಾರಿಯ ಆವೃತ್ತಿಯ ಕೆಲ ಗಮನಾರ್ಹ ಬದಲಾವಣೆಗಳು
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಂದರ್ಶನ: ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳ ಬೆಲೆ ಇಳಿಕೆಗೆ ಹೊಸ ಯೋಜನೆ ರೂಪಿಸಿದ ಎಂಜಿ ಮೋಟಾರ್
ಎಂಜಿ ಮೋಟಾರ್ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾದ ಜೆಡ್ಎಸ್ ಇವಿ ಮೂಲಕ ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆಯಾದ ಕೇವಲ ಒಂದೇ ವರ್ಷದಲ್ಲಿ ಮತ್ತಷ್ಟು ಹೊಸ ಬದಲಾವಣೆಗಳೊಂದಿಗೆ ಗ್ರಾಹಕನ್ನು ಸೆಳೆಯಲು ಸಿದ್ದವಾಗಿದೆ. ಜೆಡ್ಎಸ್ ಇವಿ ಹೊಸ ಆವೃತ್ತಿಯ ಮೂಲಕ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಮತ್ತೊಂದು ಹಂತದ ಬೆಳವಣಿಗೆಯ ನೀರಿಕ್ಷೆಯಲ್ಲಿರುವ ಎಂಜಿ ಮೋಟಾರ್ ಕಂಪನಿಯು ಭವಿಷ್ಯದ ವಾಹನ ಮಾರಾಟದಲ್ಲಿ ಮಹತ್ವದ ಪಾತ್ರವಹಿಸುವ ಸುಳಿವು ನೀಡಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಇಂಧನಗಳ ಬೆಲೆಗಳು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹೊಸ ವಾಹನಗಳ ಖರೀದಿದಾರರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದು, ಎಂಜಿ ಮೋಟಾರ್ ಕಂಪನಿಯು ತನ್ನ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯನ್ನು ಗ್ರಾಹಕರ ಬೇಡಿಕೆಯೆಂತೆ ಹಲವು ಹೊಸ ಬದಲಾವಣೆಗಳೊಂದಿಗೆ ಉನ್ನತೀಕರಿಸಿ ಬಿಡುಗಡೆಗೊಳಿಸಿದೆ. 2020ರಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿದ್ದ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಇದೀಗ ಮಾರುಕಟ್ಟೆಯಲ್ಲಿನ ಬೇಡಿಕೆ ಹೆಚ್ಚುವರಿ ಬ್ಯಾಟರಿ ಸಾಮಾರ್ಥ್ಯ ಸೇರಿದಂತೆ ವಿವಿಧ ಸುಧಾರಿತ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿದೆ.

ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಆವೃತ್ತಿಯು ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಎಕ್ಸೈಟ್ ಮಾದರಿಯು ರೂ. 20,99,800 ಮತ್ತು ಎಕ್ಸ್‌ಕ್ಲೂಸಿವ್ ಮಾದರಿಯು ರೂ. 24,18,000 ಬೆಲೆ ಹೊಂದಿದೆ.

ಹೈಟೆಕ್ ತಂತ್ರಜ್ಞಾನ ಪ್ರೇರಿತ 44.5 kWh ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಹೊಸ ಬ್ಯಾಟರಿ ಪ್ಯಾಕ್ ಜೋಡಣೆಯ ನಂತರ ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಪ್ರಮಾಣವು ಪ್ರತಿ ಚಾರ್ಜ್‌ಗೆ ಈ ಹಿಂದೆ ನೀಡಲಾಗುತ್ತಿದ್ದ 340 ಕಿಮೀ ನಿಂದ 419 ಕಿಮೀ ಗೆ ಏರಿಕೆಯಾಗಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

2021ರ ಜೆಡ್ಎಸ್ ಇವಿ ಕಾರಿನೊಂದಿಗೆ ಭಾರತದಲ್ಲಿನ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಸಾಕಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿರುವ ಎಂಜಿ ಮೋಟಾರ್ ಕಂಪನಿಯು ಭವಿಷ್ಯದ ಯೋಜನೆಗಳ ಕುರಿತಾಗಿ ಹಲವು ಮಹತ್ವದ ವಿಚಾರಗಳನ್ನು ಡ್ರೈವ್‌ಸ್ಪಾರ್ಕ್ ತಂಡದೊಂದಿಗಿನ ಸಂದರ್ಶನ ಮಾತನಾಡಿರುವ ಎಂಜಿ ಮೋಟಾರ್ ಇಂಡಿಯಾ ಕಂಪನಿಯ ವಾಣಿಜ್ಯ ವಿಭಾಗದ ಮುಖ್ಯಸ್ಥ ಗೌರವ್ ಗುಪ್ತಾ ಅವರು ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಅವಶ್ಯಕತೆ, ಸವಾಲುಗಳು ಮತ್ತು ಭವಿಷ್ಯದ ಯೋಜನೆಗಳ ಅನುಷ್ಠಾನದ ಕುರಿತಾದ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಸ್ಥಳೀಯ ಸಂಪನ್ಮೂನ ಬಳಕೆಯು ಇವಿ ವಾಹನಗಳ ಬೆಲೆ ಇಳಿಕೆಯಲ್ಲಿ ಪಾತ್ರವಹಿಸುವುದಾಗಿ ಹೇಳಿರುವ ಎಂಜಿ ಮೋಟಾರ್ ಮುಖ್ಯಸ್ಥರು ಮುಂಬರುವ ದಿನಗಳಲ್ಲಿ ಸ್ಥಳೀಯವಾಗಿ ಉತ್ಪಾದನೆಯಾದ ಬ್ಯಾಟರಿ ಉತ್ಪನ್ನದೊಂದಿಗೆ ಮತ್ತಷ್ಟು ಬೆಲೆ ಇಳಿಕೆ ಮಾಡಲು ಸಹಕಾರಿಯಾಗಿದೆ ಎಂದಿದ್ದಾರೆ.

ಸದ್ಯ ಬಹುತೇಕ ಎಲೆಕ್ಟ್ರಿಕ್ ವಾಹನ ತಯಾಕ ಕಂಪನಿಗಳು ವಿದೇಶಿ ಮಾರುಕಟ್ಟೆಗಳಿಂದಲೇ ಹಲವಾರು ಬಿಡಿಭಾಗಗಳು ಮತ್ತು ಬ್ಯಾಟರಿ ಉತ್ಪನ್ನ ಆಮದು ಮಾಡಿಕೊಂಡು ಭಾರತದಲ್ಲಿ ಜೋಡಣೆ ಮಾಡಿ ಮಾರಾಟ ಮಾಡುತ್ತಿದ್ದು, ಇದು ಸ್ಥಳೀಯವಾಗಿ ಹೆಚ್ಚದಾಗ ಮಾತ್ರವೇ ಇವಿ ವಾಹನಗಳ ಬೆಲೆಯನ್ನು ತಗ್ಗಿಸಲು ಸಾಧ್ಯವಾಗಲಿದೆ ಎನ್ನುವ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

ಜೊತೆಗೆ ಗ್ರಾಹಕರು ಉತ್ತಮ ಬೆಲೆಯೊಳಗೆ ಹೆಚ್ಚಿನ ಮಟ್ಟದ ಮೈಲೇಜ್ ನೀರಿಕ್ಷೆಯಿಸುತ್ತಿರುವುದು ಕೂಡಾ ಇವಿ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಹಲವಾರು ಬದಲಾವಣೆಗಳಿಗೆ ಕಾರಣವಾಗಿದ್ದು, ಎಂಜಿ ಮೋಟಾರ್ ಕೂಡಾ ಈ ಹಿಂದಿನ 44.5 kWh ಬ್ಯಾಟರಿ ಪ್ಯಾಕ್ ಅನ್ನು ಹೊಸ ತಂತ್ರಜ್ಞಾನದೊಂದಿಗೆ ಉನ್ನತೀಕರಿಸಿರುವುದು ಉತ್ತಮ ಬೆಳವಣಿಗೆಯಾಗಿದೆ.

2020ರಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿದ್ದ ಜೆಡ್ಎಸ್ ಇವಿ ಕಾರಿನಲ್ಲಿ 44.5 kWh ಬ್ಯಾಟರಿ ಪ್ಯಾಕ್ ನೀಡಿದ್ದರೂ ಅದು ಪ್ರತಿ ಚಾರ್ಜ್‌ಗೆ ಗರಿಷ್ಠ 340 ಕಿಮೀ ಮೈಲೇಜ್ ಹೊಂದಿತ್ತು. ಇದೀಗ 2021ರ ಜೆಡ್ಎಸ್ ಇವಿಯಲ್ಲಿ 44.5 kWh ಬ್ಯಾಟರಿ ಪ್ಯಾಕ್ ಅಳವಡಿಸಿದ್ದರೂ ಹೊಸ ಬ್ಯಾಟರಿಯು ಸುಧಾರಿತ ತಂತ್ರಜ್ಞಾನದೊಂದಿಗೆ ಅಭಿವೃದ್ದಿಗೊಂಡಿರುವುದರಿಂದ ಪ್ರತಿ ಚಾರ್ಜ್‌ಗೆ ಈ ಹಿಂದಿಗಿಂತಲೂ 79 ಕಿಮೀ ಹೆಚ್ಚು ಮೈಲೇಜ್ ನೀಡುತ್ತದೆ.

ಮುಂಬರುವ ದಿನಗಳಲ್ಲಿ ಇದು ಪ್ರತಿ ಚಾರ್ಜ್‌ಗೆ 500 ಕಿಮೀ ಗೆ ಹೆಚ್ಟಳವಾಗುವ ನಿಟ್ಟಿಯಲ್ಲಿ ಸಂಶೋಧನೆಗಳನ್ನು ಕೈಗೊಂಡಿರುವುದಾಗಿ ಹೇಳಿಕೊಂಡಿರುವ ಎಂಜಿ ಮೋಟಾರ್ ಕಂಪನಿಯ ಮುಖ್ಯಸ್ಥರು ಗ್ರಾಹಕರ ಬಜೆಟ್‌ಗೆ ಅನುಗುಣವಾಗಿ ಶೀಘ್ರದಲ್ಲೇ ಮತ್ತಷ್ಟು ಹೊಸ ಇವಿ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿರುವುದಾಗಿ ಮಾಹಿತಿ ಬಹಿರಂಗಡಿಸಿದ್ದಾರೆ.

ಮುಂದಿನ ಎಲೆಕ್ಟ್ರಿಕ್ ಕಾರು ಮಾದರಿಯು ರೂ. 20 ಲಕ್ಷಕ್ಕಿಂತಲೂ ಕಡಿಮೆಯಿರುವುದಾಗಿ ಸುಳಿವು ನೀಡಲಾಗಿದ್ದು, ಪ್ರಸ್ತುತ ಜೆಡ್ಎಸ್ ಇವಿ ಜೋಡಿಸಲಾಗಿರುವ 44.5 kWh ಬ್ಯಾಟರಿ ಪ್ಯಾಕ್ ಮಾದರಿಯನ್ನೇ ಭವಿಷ್ಯದ ಇವಿ ಕಾರುಗಳಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮೈಲೇಜ್ ಪ್ರಮಾಣ ಮತ್ತು ತಂತ್ರಜ್ಞಾನ ಬಳಕೆ ಹೊಂದಿರಲಿವೆ ಎಂದಿದ್ದಾರೆ.

ಹಾಗೆಯೇ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಜಾಲ ವಿಸ್ತರಿಸುವ ಕುರಿತಾಗಿತೂ ಕೆಲವು ಮಾಹಿತಿ ಹಂಚಿಕೊಂಡಿರುವ ಕಂಪನಿಯು ಹಂತ-ಹಂತವಾಗಿ ದೇಶದ ಪ್ರಮುಖ 31 ನರಗಳಲ್ಲಿ ಇವಿ ಮಾರಾಟವನ್ನು ಆರಂಭಿಸಿದ್ದು, ಆರಂಭದಲ್ಲಿ ಕೇವಲ 5 ಪ್ರಮುಖ ಮಾಹಾನಗರಗಳಲ್ಲಿ ಮಾತ್ರವೇ ಮಾರಾಟವನ್ನು ಹೊಂದಿತ್ತು.

ಮೊದಲ ಹಂತದಲ್ಲೇ ಬೆಂಗಳೂರಿನಲ್ಲಿ ಇವಿ ಮಾರಾಟ ಆರಂಭಿಸಿದ್ದ ಎಂಜಿ ಮೋಟಾರ್ ಕಂಪನಿಯು ಇದೀಗ ರಾಜ್ಯದಲ್ಲಿ ಹೊಸದಾಗಿ ಮೈಸೂರು ಮತ್ತು ಮಂಗಳೂರಿನಲ್ಲಿ ಜೆಡ್ಎಸ್ ಇವಿ ಮಾರಾಟದ ಆರಂಭದೊಂದಿಗೆ ದೇಶದ 31 ನಗರಗಳಲ್ಲಿ ಗ್ರಾಹಕರನ್ನು ತಲುಪಲು ಸಿದ್ದವಾಗಿದೆ.

ಸದ್ಯಕ್ಕೆ ಹೊಸದಾಗಿ ಕಾರು ಮಾರಾಟ ಆರಂಭವಾಗಿರುವ ನಗರಗಳಲ್ಲಿನ ಚಾರ್ಜಿಂಗ್ ಸೌಲಭ್ಯಗಳ ಹೆಚ್ಚಳದೊಂದಿಗೆ ಗ್ರಾಹಕರಲ್ಲಿ ಭವಿಷ್ಯದ ವಾಹನಗಳ ಬಗೆಗೆ ವಿಶ್ವಾಸ ಮೂಡಿಸುವುದು ಕಂಪನಿಯ ಮುಖ್ಯ ಗುರಿಯಾಗಿದೆ ಎಂದಿರುವ ಗೌರವ್ ಗುಪ್ತಾ ಅವರು ಡಿಸಿ ಫಾಸ್ಟ್ ಚಾರ್ಜರ್‌ಗಳನ್ನು ಈ ವರ್ಷಾಂತ್ಯಕ್ಕೆ ಮತ್ತಷ್ಟು ಹೆಚ್ಚಳ ಮಾಡಲಾಗುತ್ತಿದೆ ಎಂದಿದ್ದಾರೆ.

ಟಾಟಾ ಪವರ್ ಜೊತೆಗೂಡಿ ಡಿಸಿ ಫಾಸ್ಟ್ ಚಾರ್ಜರ್ ನಿಲ್ದಾಣಗಳನ್ನು ನಿರ್ಮಾಣ ಮಾಡುತ್ತಿರುವ ಎಂಜಿ ಮೋಟಾರ್ ಕಂಪನಿಯು ಇದುವರೆಗೆ ವಿವಿಧ ನಗರಗಳಲ್ಲಿ ಒಟ್ಟು 16 ಡಿಸಿ ಫಾಸ್ಟ್ ಚಾರ್ಜರ್‌ಗಳನ್ನು ಸೇವೆಗೆ ಮುಕ್ತಗೊಳಿಸಿದ್ದು, ಈ ವರ್ಷಾಂತ್ಯಕ್ಕೆ ಡಿಸಿ ಫಾಸ್ಟ್ ಚಾರ್ಜರ್‌ಗಳ ಸಂಖ್ಯೆ 50ಕ್ಕೆ ಏರಿಕೆಯಾಗುವುದಾಗಿ ಹೇಳಿದ್ದಾರೆ.

ನಾವು ಎಲೆಕ್ಟ್ರಿಕ್ ವಾಹನಗಳ ಮಾರಾಟ ಜೊತೆಗೆ ಗ್ರಾಹಕರ ವಿಶ್ವಾಸ ಗಳಿಸಲು ಮೊದಲು ಮೂಲಭೂತ ಸೌಕರ್ಯ ನಿರ್ಮಾಣಕ್ಕೆ ಆದ್ಯತೆ ನೀಡುತ್ತಿದ್ದೇವೆ ಎಂದಿರುವ ಗೌರವ್ ಗುಪ್ತಾ ಅವರು ಜೆಡ್‌ಎಸ್ ಇವಿಯೊಂದಿಗೆ ನಾವು ದೇಶಿಯ ಮಾರುಕಟ್ಟೆಯಲ್ಲಿ ಹಲವಾರು ಪಾಠಗಳನ್ನು ಕಲಿತಿದ್ದೇವೆ. ಆ ಅನುಭವಗಳೆ ನಮ್ಮ ಭವಿಷ್ಯ ಯೋಜನೆಗಳಿಗೆ ಪ್ರಮುಖ ಹೆಜ್ಜೆಗಳಾಗುವ ವಿಶ್ವಾಸವಿದೆ ಎಂದಿರುವ ಎಂಜಿ ಮುಖ್ಯಸ್ಥರು ಕಾರು ಮಾರಾಟ ಸುಧಾರಿಸಲು ಜೂಮ್‌ಕಾರ್, ಒರಿಕ್ಸ್ ಜೊತೆಗಿನ ಸಹಭಾಗಿತ್ವವು ಕಾರು ಚಂದಾದಾರಿಕೆ ಹೆಚ್ಚಿಸಿರುವುದು ಹೊಸ ಯೋಜನೆಗಳಿಗೆ ಪೂರಕವಾಗಿದೆ ಎಂದಿದ್ದಾರೆ.