ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದ ಎಂಜಿ ಜೆಡ್ಎಸ್

ಹೊಸ ಕಾರುಗಳ ಮಾರಾಟದಲ್ಲಿ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿರುವ ಎಂಜಿ ಮೋಟಾರ್ ಕಂಪನಿಯು ಕೈಗೆಟುವ ಬೆಲೆಯೊಂದಿಗೆ ವಿವಿಧ ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಜಾಗತಿಕ ಮಾರುಕಟ್ಟೆಗಳಲ್ಲಿ ಇತ್ತೀಚೆಗೆ ಬಿಡುಗಡೆಯಾಗಿರುವ ಮಧ್ಯಮ ಕ್ರಮಾಂಕದ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗಮನಸೆಳೆದಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದ ಎಂಜಿ ಜೆಡ್ಎಸ್

2020ರ ಆರಂಭದಲ್ಲಿ ಬಿಡುಗಡೆಯಾದ ಜೆಡ್ಎಸ್ ಪೆಟ್ರೋಲ್ ಮಾದರಿಯು ಪ್ರಯಾಣಿಕ ಸುರಕ್ಷತೆ ವಿಚಾರವಾಗಿ ಗಮನಸೆಳೆಯುತ್ತಿದ್ದು, ಏಷಿಯನ್ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್‌ನೊಂದಿಗೆ ಅತ್ಯುತ್ತಮ ಸುರಕ್ಷಾ ಕ್ರಮಗಳ ಅಳವಡಿಕೆಯನ್ನು ಖಾತ್ರಿಪಡಿಸಿದೆ. ಸದ್ಯ ಜೆಡ್ಎಸ್ ಪೆಟ್ರೋಲ್ ಕಾರು ಮಾದರಿಯು ಥೈಲ್ಯಾಂಡ್ ಮತ್ತು ವಿಯೆಟ್ನಾಂನಲ್ಲಿ ಮಾರಾಟವಾಗುತ್ತಿದ್ದು, ಇದೇ ಕಾರು ಮಾದರಿಯನ್ನು ಇದೀಗ ಭಾರತದಲ್ಲೂ ಬಿಡುಗಡೆಗಾಗಿ ಎಂಜಿ ಮೋಟಾರ್ ಕಂಪನಿಯು ಅಂತಿಮ ಹಂತದ ಸಿದ್ದತೆಯಲ್ಲಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದ ಎಂಜಿ ಜೆಡ್ಎಸ್

2020ರ ಫೆಬ್ರುವರಿಯಲ್ಲಿ ನಡೆದಿದ್ದ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಜೆಡ್ಎಸ್ ಪೆಟ್ರೋಲ್ ಮಾದರಿಯನ್ನು ಮೊದಲ ಬಾರಿಗೆ ಪ್ರದರ್ಶನಗೊಳಿಸಿದ್ದ ಎಂಜಿ ಮೋಟಾರ್ ಕಂಪನಿಯು ಇದೀಗ ಐದನೇ ಕಾರು ಮಾದರಿಯಾಗಿ ಭಾರತದಲ್ಲಿ ಬಿಡುಗಡೆ ಮಾಡುತ್ತಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದ ಎಂಜಿ ಜೆಡ್ಎಸ್

ಹೆಕ್ಟರ್, ಹೆಕ್ಟರ್ ಪ್ಲಸ್, ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಗ್ಲೊಸ್ಟರ್ ಕಾರುಗಳನ್ನು ಬಿಡುಗಡೆಗೊಳಿಸಿ ಅತ್ಯುತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಎಂಜಿ ಮೋಟಾರ್ ಇಂಡಿಯಾ ಕಂಪನಿಯು ಶೀಘ್ರದಲ್ಲೇ ಜೆಡ್ಎಸ್ ಪೆಟ್ರೋಲ್ ಮಾದರಿಯನ್ನು ಬಿಡುಗಡೆ ಮಾಡಲಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದ ಎಂಜಿ ಜೆಡ್ಎಸ್

ಹೆಕ್ಟರ್ ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಕಾರು ಮಾರುತಿ ಎಸ್-ಕ್ರಾಸ್, ರೆನಾಲ್ಟ್ ಡಸ್ಟರ್, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೂ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಉತ್ತಮ ಬೆಲೆ ಆಯ್ಕೆಯೊಂದಿಗೆ ಕ್ರ್ಯಾಶ್ ಟೆಸ್ಟಿಂಗ್‌ನಲ್ಲೂ ಉತ್ತಮ ರೇಟಿಂಗ್ಸ್ ಪಡೆದುಕೊಳ್ಳುವ ಮೂಲಕ ಗ್ರಾಹಕರ ಸೆಳೆಯುವ ನೀರಿಕ್ಷೆಯಲ್ಲಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದ ಎಂಜಿ ಜೆಡ್ಎಸ್

ಸದ್ಯ ಕ್ರ್ಯಾಶ್ ಟೆಸ್ಟಿಂಗ್ ಮಾಡಲಾದ ಜೆಡ್ಎಸ್ ಕಾರು ಮಾದರಿಯು ಥೈಲ್ಯಾಂಡ್‌ನಲ್ಲಿ ಮಾರಾಟವಾಗುತ್ತಿರುವ ಕಾರು ಮಾದರಿಯಾಗಿದ್ದು, ತುಸು ವಿಭಿನ್ನ ತಾಂತ್ರಿಕ ಅಂಶಗಳನ್ನು ಹೊಂದಲಿರುವ ದೇಶಿಯ ಮಾರುಕಟ್ಟೆಯಲ್ಲಿನ ಜೆಡ್ಎಸ್ ಕಾರು ಕನಿಷ್ಠ 4 ಸ್ಟಾರ್ ರೇಟಿಂಗ್ ಗಿಟ್ಟಿಸಿಕೊಳ್ಳುವ ನೀರಿಕ್ಷೆಯಿದೆ.

ಯಾಕೆಂದರೆ ಥೈಲ್ಯಾಂಡ್ ಮತ್ತು ವಿಯೆಟ್ನಾಂನಲ್ಲಿ ಮಾರಾಟವಾಗುವ ಜೆಡ್ಎಸ್ ಕಾರು ಮಾದರಿಯು ಹಲವಾರು ಪ್ರೀಮಿಯಂ ಸೇಫ್ಟಿ ಫೀಚರ್ಸ್ ಹೊಂದಿದ್ದು, ಬೆಲೆ ಕೂಡಾ ಹೆಕ್ಟರ್ ಕಾರು ಮಾದರಿಯಾಗಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದ ಎಂಜಿ ಜೆಡ್ಎಸ್

ಇದರಿಂದ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಜೆಡ್ಎಸ್ ಪೆಟ್ರೋಲ್ ಮಾದರಿಯು ಬಜೆಟ್ ಬೆಲೆಯ ಕಾರಣಕ್ಕಾಗಿ ಕೆಲವು ಪ್ರೀಮಿಯಂ ಫೀಚರ್ಸ್ ಕಳೆದುಕೊಳ್ಳುವ ಸಾಧ್ಯತೆಗಳಿದ್ದು, ಸೇಫ್ಟಿ ಫೀಚರ್ಸ್‌ನಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿರುವಂತೆ ಮುಂಚೂಣಿ ಹೊಂದುವ ನೀರಿಕ್ಷೆಯಲ್ಲಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದ ಎಂಜಿ ಜೆಡ್ಎಸ್

ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಾಗಲಿರುವ ಹೊಸ ಕಾರು ಹೆಕ್ಟರ್ ಕಾರಿಗಿಂತಲೂ ಕೆಳದರ್ಜೆಯಲ್ಲಿ ಮಾರಾಟಗೊಳ್ಳಲಿದ್ದು, ಬೆಲೆ ವಿಚಾರದಲ್ಲೂ ಪ್ರತಿಸ್ಪರ್ಧಿ ಕಾರುಗಳಿಗೆ ಇದು ಭರ್ಜರಿ ಪೈಪೋಟಿ ನೀಡಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದ ಎಂಜಿ ಜೆಡ್ಎಸ್

ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಮಾದರಿಯಲ್ಲೇ ತುಸು ವಿಭಿನ್ನ ವಿನ್ಯಾಸವನ್ನು ಹೊಂದಿರುವ ಜೆಡ್ಎಸ್ ಪೆಟ್ರೋಲ್ ಕಾರು ಎರಡು ಎಂಜಿನ್ ಆಯ್ಕೆ ಹೊಂದಿರಲಿದೆ ಎನ್ನಲಾಗಿದ್ದು, ಗ್ರಾಹಕರ ಬೇಡಿಕೆಯೆಂತೆ 1.5-ಲೀಟರ್ ಪೆಟ್ರೋಲ್ ಮತ್ತು 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದುಕೊಳ್ಳಲಿರುವ ಹೊಸ ಕಾರು ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಲಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದ ಎಂಜಿ ಜೆಡ್ಎಸ್

ಹೊಸ ಕಾರು ಬಿಎಸ್-6 ವೈಶಿಷ್ಟ್ಯತೆಗೆ ಅನುಗುಣವಾಗಿ ಅಭಿವೃದ್ದಿ ಹೊಂದಿದ್ದು, ಹೊಸ ಕಾರು 4,314-ಎಂಎಂ ಉದ್ದ, 1,890-ಎಂಎಂ ಅಗಲ, 1,611-ಎಂಎಂ ಎತ್ತರ ಮತ್ತು 2,589-ಎಂಎಂ ವೀಲ್ಹ್‌ಬೆಸ್ ಪಡೆದುಕೊಂಡಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದ ಎಂಜಿ ಜೆಡ್ಎಸ್

ಈ ಮೂಲಕ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 9 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಹೊಸ ಕಾರು ಬಿಡುಗಡೆ ಮಾಡಲು ಈಗಾಗಲೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಲಾಗಿದೆ.

Most Read Articles

Kannada
English summary
MG ZS Petrol SUV ASEAN NCAP Crash Test. Read in Kannada.
Story first published: Saturday, January 2, 2021, 15:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X