Just In
Don't Miss!
- News
ಪೊಲೀಸ್ ಠಾಣೆಯಲ್ಲಿ ಬಗೆಹರಿದ ಒಂದು ಕೋಣದ ವಿವಾದ!
- Movies
'ದೀಪ್ ಸಿಧು ಜೊತೆ ನನಗೆ ಯಾವುದೇ ಸಂಬಂಧವಿಲ್ಲ': ಸಂಸದ, ನಟ ಸನ್ನಿ ಡಿಯೋಲ್ ಸ್ಪಷ್ಟನೆ
- Finance
ಬಜೆಟ್ 2021: ಸ್ಟ್ಯಾಂಡರ್ಡ್ ಡಿಡಕ್ಷನ್ ರು. 1 ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ
- Sports
ಬೈರ್ಸ್ಟೋವ್ಗೆ 2 ಪಂದ್ಯಗಳ ವಿಶ್ರಾಂತಿ ನೀಡಿರುವುದನ್ನು ಸಮರ್ಥಿಸಿದ ಇಂಗ್ಲೆಂಡ್ ಕೋಚ್
- Education
WCD Chitradurga Recruitment 2021: ಅಂಗನವಾಡಿಯಲ್ಲಿ 129 ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ ಹೊಂದಿರಲಿದೆ ಬಿಡುಗಡೆಯಾಗಲಿರುವ ಎಂಜಿ ಜೆಡ್ಎಸ್ ಕಾರು
ಭಾರತದಲ್ಲಿ ಐದನೇ ಕಾರು ಮಾದರಿಯಾಗಿ ಬಿಡುಗಡೆಯಾಗುತ್ತಿರುವ ಎಂಜಿ ಮೋಟಾರ್ ಹೊಚ್ಚ ಹೊಸ ಜೆಡ್ಎಸ್ ಪೆಟ್ರೋಲ್ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದ್ದು, ಮಧ್ಯಮ ಕ್ರಮಾಂಕದ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಲ್ಲೇ ಅತಿ ಹೆಚ್ಚು ಐಷಾರಾಮಿ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದೆ.

ದೇಶಿಯ ಮಾರುಕಟ್ಟೆಯಲ್ಲಿ ಹೆಕ್ಟರ್, ಹೆಕ್ಟರ್ ಪ್ಲಸ್, ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಗ್ಲೊಸ್ಟರ್ ಎಸ್‌ಯುವಿ ಕಾರುಗಳನ್ನು ಬಿಡುಗಡೆಗೊಳಿಸಿ ಅತ್ಯುತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಎಂಜಿ ಮೋಟಾರ್ ಇಂಡಿಯಾ ಕಂಪನಿಯು ಶೀಘ್ರದಲ್ಲೇ ಜೆಡ್ಎಸ್ ಪೆಟ್ರೋಲ್ ಮಾದರಿಯನ್ನು ಬಿಡುಗಡೆ ಮಾಡಲಿದೆ. ಹೊಸ ಕಾರು ಬಿಡುಗಡೆಗಾಗಿ ಈಗಾಗಲೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿರುವ ಎಂಜಿ ಕಂಪನಿಯು ಹೊಸ ಕಾರನ್ನು ಪ್ರತಿ ಸ್ಪರ್ಧಿ ಕಾರು ಮಾದರಿಗಳಿಂತಸೂ ಭಿನ್ನವಾಗಿ ಗುರುತಿಸುವಂತಹ ಫೀಚರ್ಸ್‌ಗಳನ್ನು ಅಳವಡಿಸುತ್ತಿದೆ.

ಹೆಕ್ಟರ್ ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಕಾರು ಮಾರುತಿ ಎಸ್-ಕ್ರಾಸ್, ರೆನಾಲ್ಟ್ ಡಸ್ಟರ್, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೂ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಉತ್ತಮ ಬೆಲೆ ಆಯ್ಕೆಯೊಂದಿಗೆ ಕ್ರ್ಯಾಶ್ ಟೆಸ್ಟಿಂಗ್‌ನಲ್ಲೂ ಉತ್ತಮ ರೇಟಿಂಗ್ಸ್ ಪಡೆದುಕೊಳ್ಳುವ ಮೂಲಕ ಗ್ರಾಹಕರ ಸೆಳೆಯುವ ನೀರಿಕ್ಷೆಯಲ್ಲಿರುವ ಹೊಸ ಕಾರು ಐಷಾರಾಮಿ ಕಾರುಗಳಲ್ಲಿ ಅಳವಡಿಸಲಾಗುವ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಪಡೆದುಕೊಂಡಿರುವುದು ಕಾರಿನ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸುವ ನೀರಿಕ್ಷೆಯಿದೆ.

ಎಡಿಎಎಸ್ ಸೌಲಭ್ಯ ಅಳವಡಿಕೆಯಿಂದ ಕಾರು ಚಾಲನೆ ವೇಳೆ ರಸ್ತೆಗುಂಡಿಗಳನ್ನು ಸುಲಭವಾಗಿ ಪತ್ತೆಹಚ್ಚಲು ರಡಾರ್ ಬಳಕೆಯಾಗಲಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ಕಾರ್ಯ ನಿರ್ವಹಣೆ ಮಾಡುವ ರಸ್ತೆಗುಂಡಿಯಿಂದಾಗುವ ಅಪಾಯವನ್ನು ತಡೆಯಬಲ್ಲದು. ಜೊತೆಗೆ ಚಾಲಕನಿಗೆ ಧ್ವನಿ ಸಂದೇಶ ಮೂಲಕ ಎಚ್ಚರಿಕೆ ನೀಡಲಿದ್ದು, ರಿವರ್ಸ್ ಸಂದರ್ಭದಲ್ಲಿ 3ಡಿ ಪನೊರಮಿಕ್ ವ್ಯೂ ಸೌಲಭ್ಯ ಒದಗಿಸುತ್ತದೆ.

ಇದರೊಂದಿಗೆ ಹೊಸ ಕಾರು ಪ್ರೀಮಿಯಂ ಫೀಚರ್ಸ್‌ಗಳಲ್ಲಿ ಮಾತ್ರವಲ್ಲ ಸುರಕ್ಷತೆಯಲ್ಲೂ ಗಮನಸೆಳೆಯಲಿರುವ ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಕಿಯಾ ಸೆಲ್ಟೊಸ್ ಮತ್ತು ಹ್ಯುಂಡೈ ಕ್ರೆಟಾ ಕಾರುಗಳಿಂತಲೂ ಉತ್ತಮ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿರಲಿದೆ ಎನ್ನಲಾಗಿದೆ.

ಹೊಸ ಕಾರು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಮಾದರಿಯಲ್ಲೇ ತುಸು ವಿಭಿನ್ನ ವಿನ್ಯಾಸವನ್ನು ಹೊಂದಿರುವ ಜೆಡ್ಎಸ್ ಪೆಟ್ರೋಲ್ ಕಾರು ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದೆ ಎನ್ನಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಯೆಂತೆ ಸಾಮಾನ್ಯ ಪೆಟ್ರೋಲ್ ಮಾದರಿಯನ್ನು ಮತ್ತು ಪರ್ಫಾಮೆನ್ಸ್ ಬಯಸುವ ಗ್ರಾಹಕರು ಟರ್ಬೊ ಪೆಟ್ರೋಲ್ ಮಾದರಿಯನ್ನು ಖರೀದಿಸಬಹುದು.

ಜೆಡ್ಎಸ್ ಕಾರಿನಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಹೊಸ ಕಾರು 4,314-ಎಂಎಂ ಉದ್ದ, 1,890-ಎಂಎಂ ಅಗಲ, 1,611-ಎಂಎಂ ಎತ್ತರ ಮತ್ತು 2,589-ಎಂಎಂ ವೀಲ್ಹ್‌ಬೆಸ್ ಪಡೆದುಕೊಂಡಿದೆ.

ಈ ವರ್ಷದ ಮಾರ್ಚ್ ಹೊತ್ತಿಗೆ ಬಿಡುಗಡೆಯಾಗಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 9 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿದ್ದು, ಹೊಸ ಕಾರು ಬಿಡುಗಡೆ ಮಾಡಲು ಈಗಾಗಲೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ.
Source: Rushlane Spylane