Just In
- 8 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 10 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 11 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 11 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬೆಂಗಳೂರಲ್ಲಿ ರೆಮಿಡಿಸ್ವಿರ್ ಔಷಧಿ ಪೂರೈಕೆಗೆ SAST ಏಜೆನ್ಸಿ ನಿಯೋಜನೆ
- Lifestyle
ಗುರುವಾರದ ದಿನ ಭವಿಷ್ಯ: ಈ ದಿನ ಹೇಗಿದೆ ನಿಮ್ಮ ರಾಶಿಫಲ
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಜೆಡ್ಎಸ್ ಪೆಟ್ರೋಲ್ ಕಂಪ್ಯಾಕ್ಟ್ ಎಸ್ಯುವಿ
ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹಲವಾರು ಹೊಸ ಬದಲಾವಣೆಗಳೊಂದಿಗೆ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಎಂಜಿ ಮೋಟಾರ್ ಕಂಪನಿಯು ತನ್ನ ಐದನೇ ಕಾರು ಮಾದರಿಯಾಗಿ ಕಂಪ್ಯಾಕ್ಟ್ ಎಸ್ಯುವಿಯನ್ನು ಬಿಡುಗಡೆ ಮಾಡುತ್ತಿದ್ದು, ವಿದೇಶಿ ಮಾರುಕಟ್ಟೆಗಳಲ್ಲಿ ಜೆಡ್ಎಸ್ ಪೆಟ್ರೋಲ್ ಮಾದರಿಯೇ ಭಾರತದಲ್ಲಿ ಹೊಸ ಹೆಸರಿನೊಂದಿಗೆ ರಸ್ತೆಗಿಳಿಯುವ ಸಿದ್ದತೆಯಲ್ಲಿದೆ.

ಹೊಸ ಕಂಪ್ಯಾಕ್ಟ್ ಎಸ್ಯುವಿ ಮಾದರಿಯ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿರುವ ಎಂಜಿ ಮೋಟಾರ್ ಕಂಪನಿಯು ಸದ್ಯ ಹೊಸ ಕಾರನ್ನು ಜೆಡ್ಎಸ್ ಪೆಟ್ರೋಲ್ ಮಾದರಿಯಾಗಿ ಪರೀಕ್ಷೆ ಕೈಗೊಂಡಿದ್ದು, ಹೊಸ ಕಾರಿನಲ್ಲಿ ಅತ್ಯುತ್ತಮ ಫೀಚರ್ಸ್ ಜೋಡಣೆ ಮಾಡಲಿದೆ. ಹೊಸ ಕಾರಿನ ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗಿದ್ದು, ಸ್ಟ್ಯಾಂಡರ್ಡ್ ಹೆಕ್ಟರ್ ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಕಾರು ಮಾರುತಿ ಎಸ್-ಕ್ರಾಸ್, ರೆನಾಲ್ಟ್ ಡಸ್ಟರ್, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

2020ರ ಫೆಬ್ರುವರಿಯಲ್ಲಿ ನಡೆದಿದ್ದ ದೆಹಲಿ ಆಟೋ ಎಕ್ಸ್ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ಎಂಜಿ ಹೊಸ ಕಾರು ಮಾದರಿಯು ಈ ವರ್ಷದ ಮೂರನೇ ತ್ರೈಮಾಸಿಕ ವೇಳೆಗೆ ಬಿಡುಗಡೆಗೊಳ್ಳುವ ಬಹುತೇಕ ಖಚಿತವಾಗಿದ್ದು, ಹೊಸ ಕಾರು ಆರಂಭಿಕವಾಗಿ ರೂ.10 ಲಕ್ಷದೊಳಗೆ ಬೆಲೆ ಹೊಂದಿರಲಿದೆ.

ಸದ್ಯಕ್ಕೆ ಹೊಸ ಕಾರಿನ ತಾಂತ್ರಿಕ ಮಾಹಿತಿಗಳನ್ನು ಸದ್ಯಕ್ಕೆ ಬಹಿರಂಗಪಡಿಸಲು ನಿರಾಕರಿಸಿರುವ ಎಂಜಿ ಕಂಪನಿಯ ಹೊಸ ಕಾರಿನಲ್ಲಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಭಿನ್ನವಾದ ತಾಂತ್ರಿಕ ಅಂಶಗಳನ್ನು ಅಳವಡಿಸಿ ಗ್ರಾಹಕರನ್ನು ಸೆಳೆಯುವ ಯೋಜನೆಯಲ್ಲಿದ್ದು, ಹೊಸ ಕಾರಿನಲ್ಲಿರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಸೌಲಭ್ಯವು ಕಾರಿನ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸುವ ನೀರಿಕ್ಷೆಯಿದೆ.

ಹೊಸ ಎಡಿಎಎಸ್ ಸೌಲಭ್ಯ ಅಳವಡಿಕೆಯಿಂದ ಕಾರು ಚಾಲನೆ ವೇಳೆ ರಸ್ತೆಗುಂಡಿಗಳನ್ನು ಸುಲಭವಾಗಿ ಪತ್ತೆಹಚ್ಚಲು ರಡಾರ್ ಬಳಕೆಯಾಗಲಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ಕಾರ್ಯ ನಿರ್ವಹಣೆ ಮಾಡುವ ರಸ್ತೆಗುಂಡಿಯಿಂದಾಗುವ ಅಪಾಯವನ್ನು ತಡೆಯಬಲ್ಲದು. ಜೊತೆಗೆ ಚಾಲಕನಿಗೆ ಧ್ವನಿ ಸಂದೇಶ ಮೂಲಕ ಎಚ್ಚರಿಕೆ ನೀಡಲಿದ್ದು, ರಿವರ್ಸ್ ಸಂದರ್ಭದಲ್ಲಿ 3ಡಿ ಪನೊರಮಿಕ್ ವ್ಯೂ ಸೌಲಭ್ಯ ಒದಗಿಸುತ್ತದೆ.

ಇದರೊಂದಿಗೆ ಹೊಸ ಕಾರಿನಲ್ಲಿ ಅತ್ಯುತ್ತಮ ಲೆದರ್ ವ್ಯಾರ್ಪ್ ಆಸನಗಳು, ಹಿಂಬದಿಯ ಪ್ರಯಾಣಿಕರಿಗೆ ಎಸಿ ವೆಂಟ್ಸ್, 10-ಇಂಚಿನ ಇನ್ಪೋಟೈನ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪ್ಲ್ಯಾಟ್-ಬಾಟಮ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಹಿಂಬದಿಯ ಪ್ರಯಾಣಿಕರಿಗೆ ಅರಾಮದಾಯಕವಾದ ಆಸನ ಸೌಲಭ್ಯಗಳಿವೆ.

ಹೊಸ ಕಾರು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಮಾದರಿಯಲ್ಲೇ ತುಸು ವಿಭಿನ್ನ ವಿನ್ಯಾಸವನ್ನು ಹೊಂದಿರುವ ಹೊಸ ಕಾರು ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದೆ ಎನ್ನಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಯೆಂತೆ ಸಾಮಾನ್ಯ ಪೆಟ್ರೋಲ್ ಮಾದರಿಯನ್ನು ಮತ್ತು ಪರ್ಫಾಮೆನ್ಸ್ ಬಯಸುವ ಗ್ರಾಹಕರು ಟರ್ಬೊ ಪೆಟ್ರೋಲ್ ಮಾದರಿಯನ್ನು ಖರೀದಿಸಬಹುದು.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಕಾರಿನಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಹೊಸ ಕಾರು 4,314-ಎಂಎಂ ಉದ್ದ, 1,890-ಎಂಎಂ ಅಗಲ, 1,611-ಎಂಎಂ ಎತ್ತರ ಮತ್ತು 2,589-ಎಂಎಂ ವೀಲ್ಹ್ಬೆಸ್ ಪಡೆದುಕೊಂಡಿದೆ.

ಮಧ್ಯಮ ಕ್ರಮಾಂಕದ ಎಸ್ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಎಂಜಿ ಹೊಸ ಕಂಪ್ಯಾಕ್ಟ್ ಎಸ್ಯುವಿ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 9.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14 ಲಕ್ಷ ಬೆಲೆ ಹೊಂದಬಹುದೆಂದು ಅಂದಾಜಿಸಲಾಗುತ್ತಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್ಯುವಿ ಕಾರುಗಳಿವು..!

ಉತ್ತಮ ಬೆಲೆ ಆಯ್ಕೆಯೊಂದಿಗೆ ಕ್ರ್ಯಾಶ್ ಟೆಸ್ಟಿಂಗ್ನಲ್ಲೂ ಉತ್ತಮ ರೇಟಿಂಗ್ಸ್ ಪಡೆದುಕೊಳ್ಳುವ ಮೂಲಕ ಗ್ರಾಹಕರನ್ನು ಸೆಳೆಯುವ ನೀರಿಕ್ಷೆಯಲ್ಲಿರುವ ಹೊಸ ಕಾರು ಹೆಕ್ಟರ್ ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಹೆಚ್ಚಿನ ಮಟ್ಟದ ಸ್ಥಳೀಯ ಬಿಡಿಭಾಗಗಳೊಂದಿಗೆ ಉತ್ಪಾದನೆಗೊಂಡಿರುವುದರಿಂದ ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಂತಲೂ ಬೆಲೆಯಲ್ಲಿ ಗಮನಸೆಳೆಯಲಿದೆ.