Just In
- 1 hr ago
ಮಕ್ಕಳಿಗಾಗಿ 60-70 ಕಿ.ಮೀ ಮೈಲೇಜ್ ನೀಡುವ ಮಿನಿ ಎಲೆಕ್ಟ್ರಿಕ್ ಜೀಪ್ ತಯಾರಿಸಿದ ತಂದೆ
- 1 hr ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 3 hrs ago
ಎಕ್ಸ್ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್ಯುವಿ500
- 3 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್
Don't Miss!
- News
ಮಂಗಳೂರು; ಇಂದಿನಿಂದ ರಂಝಾನ್ ಉಪವಾಸ ಆಚರಣೆ
- Movies
ಕಹಿಯೇ ಹೆಚ್ಚಿದ್ದರು ಸಿಹಿಯಾಗಿ ಯುಗಾದಿ ಶುಭಾಶಯ ಕೋರಿದ ಸಿನಿ ತಾರೆಯರು
- Sports
19 ವರ್ಷದ ಈ ಬ್ಯಾಟ್ಸ್ಮನ್ ಬಾರಿಸಿರೋ 8 ಐಪಿಎಲ್ ಸಿಕ್ಸರ್ ಸಾಮಾನ್ಯದ್ದಲ್ಲ!
- Lifestyle
ಅಧ್ಯಯನ: ಸ್ಥೂಲಕಾಯದವರ ಸ್ಮರಣಾ ಶಕ್ತಿ ಕಾಪಾಡುತ್ತೆ ಬೆಣ್ಣೆಹಣ್ಣು
- Finance
ಏಪ್ರಿಲ್ 13ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡೀಸೆಲ್ ಕಾರುಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾದ ಪೆಟ್ರೋಲ್ ಕಾರುಗಳು
ಭಾರತದಲ್ಲಿ ಪೆಟ್ರೋಲ್ ಕಾರುಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದೆ. ಬಿಎಸ್ 6 ನಿಯಮಗಳನ್ನು ಜಾರಿಗೊಳಿಸಿದ ನಂತರ ಪೆಟ್ರೋಲ್ ಕಾರುಗಳಿಗೆ ಬೇಡಿಕೆ ಹೆಚ್ಚಾಗಿದೆ. ಪೆಟ್ರೋಲ್ ಮಾದರಿಗಳು ಮಾರುಕಟ್ಟೆಯಲ್ಲಿ 83%ರಷ್ಟು ಪಾಲನ್ನು ಹೊಂದಿವೆ.

ಇದರಲ್ಲಿ ಮಾರುತಿ ಸುಜುಕಿ ಕಂಪನಿಯು ಪ್ರಮುಖ ಪಾಲನ್ನು ಹೊಂದಿದೆ. ಹ್ಯುಂಡೈ, ಮಹೀಂದ್ರಾ ಅಂಡ್ ಮಹೀಂದ್ರಾ ಸೇರಿದಂತೆ ಹಲವು ಕಂಪನಿಗಳು ಡೀಸೆಲ್ ಮಾದರಿಗಳನ್ನು ಮಾರಾಟ ಮಾಡುತ್ತವೆ. ಡೀಸೆಲ್ ಕಾರುಗಳ ಮಾರಾಟದಲ್ಲಿ ಮಹೀಂದ್ರಾ ಕಂಪನಿಯು ಪ್ರಥಮ ಸ್ಥಾನದಲ್ಲಿದೆ.

ಮಾರುತಿ ಸುಜುಕಿ ಕಂಪನಿಯು ಪೆಟ್ರೋಲ್ ಕಾರುಗಳನ್ನು ಮಾತ್ರ ಮಾರಾಟ ಮಾಡುತ್ತದೆ. ಕಂಪನಿಯು ಕಳೆದ ತಿಂಗಳು 1.44 ಲಕ್ಷ ಪೆಟ್ರೋಲ್ ಕಾರುಗಳನ್ನು ಮಾರಾಟ ಮಾಡಿದೆ. ಕಂಪನಿಯ ಡೀಸೆಲ್ ಕಾರುಗಳ ಮಾರಾಟವು ಶೂನ್ಯವಾಗಿದೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಮಾರುತಿ ಸುಜುಕಿ ಕಂಪನಿಯು ಸದ್ಯಕ್ಕೆ ಡೀಸೆಲ್ ಎಂಜಿನ್ ಕಾರುಗಳನ್ನು ಮಾರಾಟ ಮಾಡುತ್ತಿಲ್ಲ. ಆದರೆ ಮುಂಬರುವ ದಿನಗಳಲ್ಲಿ ದೊಡ್ಡ ಕಾರುಗಳನ್ನು ಡೀಸೆಲ್ ಎಂಜಿನ್'ನೊಂದಿಗೆ ಮಾರಾಟ ಮಾಡುವ ಸಾಧ್ಯತೆಗಳಿವೆ.

ಹ್ಯುಂಡೈ ಕಂಪನಿಯು ಕಳೆದ ತಿಂಗಳು 39,956 ಯುನಿಟ್ ಪೆಟ್ರೋಲ್ ಕಾರುಗಳನ್ನು ಮಾರಾಟ ಮಾಡಿದ್ದರೆ, 11,634 ಯುನಿಟ್ ಡೀಸೆಲ್ ಕಾರುಗಳನ್ನು ಮಾರಾಟ ಮಾಡಿದೆ. ಕಂಪನಿಯ ಪೆಟ್ರೋಲ್ ಕಾರುಗಳ ಮಾರಾಟವು 77%ನಷ್ಟಿದ್ದರೆ, ಡೀಸೆಲ್ ಕಾರುಗಳ ಮಾರಾಟವು 23%ನಷ್ಟಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಹ್ಯುಂಡೈ ಕಂಪನಿಯು ಸಣ್ಣ ಕಾರುಗಳನ್ನು ಡೀಸೆಲ್ ಎಂಜಿನ್'ನೊಂದಿಗೆ ಮಾರಾಟ ಮಾಡುತ್ತದೆ. ಕಳೆದ ತಿಂಗಳು ಟಾಟಾ ಮೋಟಾರ್ಸ್ 20,810 ಯುನಿಟ್ ಪೆಟ್ರೋಲ್ ಕಾರುಗಳನ್ನು ಮಾರಾಟ ಮಾಡಿದ್ದರೆ, 5922 ಯುನಿಟ್ ಡೀಸೆಲ್ ಕಾರುಗಳನ್ನು ಮಾರಾಟ ಮಾಡಿದೆ.

ಟಾಟಾ ಮೋಟಾರ್ಸ್ ಕಂಪನಿಯು ದೊಡ್ಡ ಕಾರುಗಳನ್ನು ಮಾತ್ರ ಡೀಸೆಲ್ ಎಂಜಿನ್'ನೊಂದಿಗೆ ಮಾರಾಟ ಮಾಡುತ್ತಿದೆ. ಟಾಟಾ ಮೋಟಾರ್ಸ್ ಕಂಪನಿಯು ಡೀಸೆಲ್ ಎಂಜಿನ್ ಅನ್ನು ಸಣ್ಣ ಕಾರುಗಳಲ್ಲಿ ನೀಡುತ್ತಿಲ್ಲ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಫೆಬ್ರವರಿ ತಿಂಗಳಿಯಲ್ಲಿ ಕಿಯಾ ಮೋಟಾರ್ಸ್ ಕಂಪನಿಯು 9755 ಯುನಿಟ್ ಪೆಟ್ರೋಲ್ ಕಾರುಗಳನ್ನು ಮಾರಾಟ ಮಾಡಿದ್ದರೆ, 6947 ಯುನಿಟ್ ಡೀಸೆಲ್ ಕಾರುಗಳನ್ನು ಮಾರಾಟ ಮಾಡಿದೆ.

ಕಂಪನಿಯ ಪೆಟ್ರೋಲ್ ಕಾರುಗಳ ಮಾರಾಟವು 59%ನಷ್ಟಿದ್ದರೆ, ಡೀಸೆಲ್ ಕಾರುಗಳ ಮಾರಾಟವು 41%ನಷ್ಟಿದೆ. ಕಿಯಾ ಮೋಟಾರ್ಸ್ ಕಂಪನಿಯು ಸದ್ಯಕ್ಕೆ ಮೂರುಮಾದರಿಗಳನ್ನು ಮಾರಾಟ ಮಾಡುತ್ತಿದೆ. ಈ ಎಲ್ಲಾ ಮೂರು ಮಾದರಿಗಳು ಡೀಸೆಲ್ ಎಂಜಿನ್ ಹೊಂದಿವೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ಕಳೆದ ತಿಂಗಳು 1935 ಯುನಿಟ್ ಪೆಟ್ರೋಲ್ ಕಾರುಗಳನ್ನು ಮಾರಾಟ ಮಾಡಿದ್ದರೆ, 13,445 ಯುನಿಟ್ ಡೀಸೆಲ್ ಕಾರುಗಳನ್ನು ಮಾರಾಟ ಮಾಡಿದೆ.

ಕಂಪನಿಯ ಪೆಟ್ರೋಲ್ ಕಾರುಗಳ ಮಾರಾಟವು 12%ನಷ್ಟಿದ್ದರೆ, ಡೀಸೆಲ್ ಕಾರುಗಳ ಮಾರಾಟವು 88%ನಷ್ಟಿದೆ. ಟೊಯೊಟಾ ಕಂಪನಿಯು 6104 ಯುನಿಟ್ ಪೆಟ್ರೋಲ್ಕಾರುಗಳನ್ನು ಹಾಗೂ 7950 ಯುನಿಟ್ ಡೀಸೆಲ್ ಕಾರುಗಳನ್ನು ಮಾರಾಟ ಮಾಡಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಹೋಂಡಾ ಕಂಪನಿಯು 8097 ಯುನಿಟ್ ಪೆಟ್ರೋಲ್ ಕಾರುಗಳನ್ನು ಮಾರಾಟ ಮಾಡಿದ್ದರೆ, 1227 ಯುನಿಟ್ ಡೀಸೆಲ್ ಕಾರುಗಳನ್ನು ಮಾರಾಟ ಮಾಡಿದೆ.ಫೋರ್ಡ್ 2958 ಯುನಿಟ್ ಪೆಟ್ರೋಲ್ ಹಾಗೂ 2817 ಯುನಿಟ್ ಡೀಸೆಲ್ ಕಾರುಗಳನ್ನು ಮಾರಾಟ ಮಾಡಿದೆ.

ಕಂಪನಿಯ ಪೆಟ್ರೋಲ್ ಕಾರುಗಳ ಮಾರಾಟವು 51%ನಷ್ಟಿದ್ದರೆ, ಡೀಸೆಲ್ ಕಾರುಗಳ ಮಾರಾಟವು 49%ನಷ್ಟಿದೆ. ನಿಸ್ಸಾನ್, ಫೋಕ್ಸ್‌ವ್ಯಾಗನ್ ಕಂಪನಿಗಳು ಯಾವುದೇ ಡೀಸೆಲ್ ಕಾರುಗಳನ್ನು ಮಾರಾಟ ಮಾಡಿಲ್ಲ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಆದರೆ ಈ ಕಂಪನಿಗಳು ಕ್ರಮವಾಗಿ 4244 ಹಾಗೂ 2186 ಯುನಿಟ್ ಪೆಟ್ರೋಲ್ ಕಾರುಗಳನ್ನು ಮಾರಾಟ ಮಾಡಿವೆ. ಸ್ಕೋಡಾ ಕಂಪನಿಯು ಸಹ ಯಾವುದೇ ಡೀಸೆಲ್ ಕಾರುಗಳನ್ನು ಮಾರಾಟ ಮಾಡಿಲ್ಲ. ಆದರೆ ಕಂಪನಿಯು 853 ಯುನಿಟ್ ಪೆಟ್ರೋಲ್ ಕಾರುಗಳನ್ನು ಮಾರಾಟ ಮಾಡಿದೆ.