ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ 7-ಸೀಟರ್ ಕಾರುಗಳಿವು

ಭಾರತದಲ್ಲಿ ದಿನದಂದ ದಿನಕ್ಕೆ 7-ಸೀಟರ್ ಕಾರುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಹಲವು ಜನಪ್ರಿಯ ಕಾರು ತಯಾರಕ ಕಂಪನಿಗಳು 7-ಸೀಟರ್ ಕಾರುಗಳನ್ನು ಬಿಡುಗಡೆಗೊಳಿಸುತ್ತಿದ್ದಾರೆ. ಇದರಿಂದ ಭಾರತದಲ್ಲಿ 7-ಸೀಟರ್ ಕಾರುಗಳ ವಿಭಾಗದಲ್ಲಿ ಗ್ರಾಹಕರಿಗೆ ಹಲವು ಆಯ್ಕೆಗಳಿವೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ 7-ಸೀಟರ್ ಕಾರುಗಳಿವು

ಸ್ವದೇಶಿ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಹ್ಯಾರಿಯರ್ ಎಸ್‍ಯುವಿಯ 7-ಸೀಟರ್ ಮಾದರಿಯಾಗಿ ಸಫಾರಿ ಹೆಸರಿನಲ್ಲಿ ಬಿಡುಗಡೆಗೊಳಿಸಲಾಗಿದೆ. ಇದೇ ಸಾಲಿಗೆ ಹೆಕ್ಟರ್ ಪ್ಲಸ್ ಎಸ್‍ಯುವಿಯು ಕೂಡ ಸೇರುತ್ತದೆ. ಭಾರತದಲ್ಲಿ ಹೆಚ್ಚಿನ ಸದಸ್ಯರನ್ನು ಒಳಗೊಂಡಿರುವ ದೊಡ್ಡ ಕುಟುಂಬಗಳು ಹೆಚ್ಚು ಇವೆ. ಎಲ್ಲರೂ ಒಟ್ಟಿಗೆ ಪ್ರಯಾಣ ಮಾಡಲು 7-ಸೀಟರ್ ಕಾರುಗಳನ್ನೇ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಆದರೆ 7-ಸೀಟರ್ ಕಾರುಗಳು ಹೆಚ್ಚು ದುಬಾರಿ ಎಂದುಕೊಂಡು ಹೆಚ್ಚಿನ ಜನರು ಖರೀದಿಸಲು ಹಿಂದೇಟು ಹಾಕುತ್ತಾರೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ 7-ಸೀಟರ್ ಕಾರುಗಳಿವು

ಆದರೆ ಬಾರತೀಯ ಮಾರುಕಟ್ಟೆಯಲ್ಲಿ ಕೆಲವು ಜನಪ್ರಿಯ ಕಾರು ತಯಾರಕ ಕಂಪನಿಗಳ 7-ಸೀಟರ್ ಕಾರುಗಳು ಕೈಗೆಡುಕುವ ದರದಲ್ಲಿ ಲಭ್ಯವಿದೆ. ಈ 7-ಸೀಟರ್ ಕಾರುಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

MOST READ: ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಡೀಸೆಲ್ ಕಾರುಗಳಿವು

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ 7-ಸೀಟರ್ ಕಾರುಗಳಿವು

ಮಾರುತಿ ಸುಜುಕಿ ಇಕೋ

ಮಾರುತಿ ಸುಜುಕಿ ಇಕೋ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಅತ್ಯಂತ ಹಳೆಯ ಯುಟಿಲಿಟಿ ವಾಹನಗಳಲ್ಲಿ ಒಂದಾಗಿದೆ. ಈ ಇಕೋ ವ್ಯಾನ್ ಭಾರತದಲ್ಲಿ 2010ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡಿತು, ಬಿಎಸ್ 6 ಮಾದರಿಯನ್ನು ಕಳೆದ ವರ್ಷ ಜನವರಿಯಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಲಾಯಿತು.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ 7-ಸೀಟರ್ ಕಾರುಗಳಿವು

ಈ ಇಕೋ ಮಾದರಿಯಲ್ಲಿ 5ರಿಂದ 7 ಸೀಟುಗಳನ್ನು ಹೊಂದಿದೆ. ಈ ಕಾರಿನಲ್ಲಿ 1.2 ಲೀಟರ್ ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 73 ಬಿಹೆಚ್‌ಪಿ ಮತ್ತು 101 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನಲ್ಲಿ 5 ಸ್ಪೀಡಿನ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ ಅಳವಡಿಸಲಾಗಿದೆ.ಸದ್ಯ ಮಾರುತಿ ಸುಜುಕಿ ಇಕೋ ಮಾದರಿಯ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.4.08 ಲಕ್ಷದಿಂದ ರೂ.7.05 ಲಕ್ಷಗಳಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ 7-ಸೀಟರ್ ಕಾರುಗಳಿವು

ದಟ್ಸನ್ ಗೋ ಪ್ಲಸ್

ದಟ್ಸನ್ ಇಂಡಿಯಾ ಕಂಪನಿಯು ತನ್ನ ಬಿಎಸ್-6 ದಟ್ಸನ್ ಪ್ಲಸ್ ಕಾರನ್ನು ಈ ವರ್ಷದ ಮೇ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿತ್ತು. ಈ ಕಾರಿನ ಆರಂಭಿಕ ಬೆಲೆಯು ದೆಹಲಿ ಎಕ್ಸ್ ಶೊರೂಂ ಪ್ರಕಾರ ರೂ.4.25 ಲಕ್ಷವಾಗಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ 7-ಸೀಟರ್ ಕಾರುಗಳಿವು

ದಟ್ಸನ್ ಗೋ ಪ್ಲಸ್ ಕಾರಿನಲ್ಲಿ 1.2-ಲೀಟರ್ ಮೂರು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ ಐದು-ಸ್ಪೀಡ್ ಮ್ಯಾನುವಲ್‌ ಗೇರ್ ಬಾಕ್ಸ್ ಆಯ್ಕೆಯು 68 ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇನ್ನು ಸಿವಿಟಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯು 75 ಬಿಹೆಚ್‌ಪಿ ಮತ್ತು 104 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ 7-ಸೀಟರ್ ಕಾರುಗಳಿವು

ರೆನಾಲ್ಟ್ ಟ್ರೈಬರ್

ರೆನಾಲ್ಟ್ ಕಂಪನಿಯು ಟ್ರೈಬರ್ ಎಂಪಿವಿಯನ್ನು ಭಾರತದಲ್ಲಿ ಮೊದಲ ಬಾರಿಗೆ 2019ರಲ್ಲಿ ಬಿಡುಗಡೆ ಮಾಡಲಾಯಿತು. ಈ ರೆನಾಲ್ಟ್ ಟ್ರೈಬರ್ ಕಾರು ಸಿಎಮ್ಎಫ್-ಎ ಪ್ಲಾಟ್‌ಫಾರ್ಮ್‌ನ ಮಾರ್ಪಡಿಸಿದ ಆವೃತ್ತಿಯನ್ನು ಆಧರಿಸಿದ ಸಬ್-ನಾಲ್ಕು ಮೀಟರ್ ಎಂಪಿವಿ ಆಗಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ 7-ಸೀಟರ್ ಕಾರುಗಳಿವು

ಈ ಎಂಪಿವಿಯಲ್ಲಿ 1.0-ಲೀಟರ್, 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 70 ಬಿಹೆಚ್‌ಪಿ ಪವರ್ ಮತ್ತು 96 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ರೆನಾಲ್ಟ್ ಟ್ರೈಬರ್ ಎಂಪಿವಿಯ ಆರಂಭಿಕ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.5.33 ಲಕ್ಷಗಳಾಗಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ 7-ಸೀಟರ್ ಕಾರುಗಳಿವು

ಮಾರುತಿ ಸುಜುಕಿ ಎರ್ಟಿಗಾ

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಕಂಪನಿಯು ಎರ್ಟಿಗಾ ಎಂಪಿವಿಯನ್ನು ನವೀಕರಿಸಿ 2019ರಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಪರಿಚಯಿಸಿತು. ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಎಂಪಿವಿಗಳ ಪಟ್ಟಿಯಲ್ಲಿ ಎರ್ಟಿಗಾ ನಂ.1 ಸ್ಥಾನದಲ್ಲಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ 7-ಸೀಟರ್ ಕಾರುಗಳಿವು

ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಮಾದರಿಯ ಬಗ್ಗೆ ಹೇಳುವುದಾದರೆ, ಇದರಲ್ಲಿ ಏಕೈಕ 1.5-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ, ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ. ಈ ಎಂಪಿವಿಯ ಆರಂಭಿಕ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.7.81 ಲಕ್ಷಗಳಾಗಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ 7-ಸೀಟರ್ ಕಾರುಗಳಿವು

ಮಹೀಂದ್ರಾ ಬೊಲೆರೊ

ಮಹೀಂದ್ರಾ ಅಂಡ್ ಮಹೀಂದ್ರಾ ಕಂಪನಿಯು ಬಿಎಸ್-6 ಬೊಲೆರೊ ಮಾದರಿಯನ್ನು ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿತ್ತು. ಮಹೀಂದ್ರಾ ಬೊಲೆರೊ ಕೈಗೆಟುಕುವ ಬೆಲೆ ಮತ್ತು ಒರಟಾದ ಯುಟಿಲಿಟಿ ವಾಹನವಾಗಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುತ್ತಿರುವ 7-ಸೀಟರ್ ಕಾರುಗಳಿವು

ಬೊಲೆರೊದಲ್ಲಿ 1.5 ಎಲ್ 3-ಸಿಲಿಂಡರ್ ಎಮ್ಹಾಕ್ 75 ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 75 ಬಿ‍‍ಹೆಚ್‍‍ಪಿ ಪವರ್ ಮತ್ತು 195 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಮಾನ್ಯುವಲ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಈ ಬೊಲೆರೊ ಮಾದರಿಯ ಆರಂಭಿಕ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.8.17 ಲಕ್ಷಗಳಾಗಿದೆ.

Most Read Articles

Kannada
English summary
Five Most Affordable 7-Seater Cars. Read In Kananda.
Story first published: Wednesday, April 21, 2021, 12:36 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X