ಭಾರತದಲ್ಲಿ ಮಾರಾಟವಾಗುತ್ತಿರುವ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಗೆ ತಕ್ಕಂತೆ ಹಲವು ಕಾರುಗಳ ಆಯ್ಕೆಗಳಿವೆ. ಆದರೆ ಮಧ್ಯಮ ಮತ್ತು ಕೆಳ ವರ್ಗದ ಜನರಿಗೆ ಕಾರು ಖರೀದಿಸುವುದು ದೊಡ್ಡ ಸವಾಲಾಗಿದೆ. ತಾವು ಕೂಡಿಟ್ಟ ಹಣದಲ್ಲಿ ಒಂದು ಕಾರು ಖರೀದಿಸಬೇಕೆಂಬ ಕನಸನ್ನು ಹೊಂದಿರುತ್ತಾರೆ.

ಭಾರತದಲ್ಲಿ ಮಾರಾಟವಾಗುತ್ತಿರುವ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಎಲ್ಲರಿಗೂ ಸ್ವಂತವಾಗಿ ಒಂದು ಕಾರು ಇರಬೇಕೆಂಬ ಆಸೆ ಇರುತ್ತದೆ. ಇತ್ತೀಚೆಗೆ ಒಂದು ಮಾಧ್ಯಮ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಸರಾಸರಿ 70% ರಷ್ಟು ಜನರು ಕೆಲಸಕ್ಕಾಗಿ ಪ್ರಯಾಣಿಸಲು ಸ್ವಂತ ವಾಹನಗಳಿಗೆ ಆದ್ಯತೆ ನೀಡುವುದಾಗಿ ತಿಳಿದುಬಂದಿದೆ. ಎಲ್ಲರೂ ದೈನಂದಿನ ಬಳಕೆಗೆ ಸಣ್ಣ ಕಾರನ್ನು ಬಳಕೆ ಮಾಡಲು ಇಷ್ಟಪಡುತ್ತಾರೆ. ಇದು ಹಲವು ಸಮೀಕ್ಷೆಗಳಲ್ಲಿ ಸಾಬೀತಾಗಿದ್ದು, ಎಲ್ಲರೂ ಸ್ವಂತ ವಾಹನ ಹೊಂದಲು ಇಷ್ಟಪಡುತ್ತಾರೆ.

ಭಾರತದಲ್ಲಿ ಮಾರಾಟವಾಗುತ್ತಿರುವ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹಲವಾರು ತಜ್ಞರು ಸಾರ್ವಜನಿಕ ಸಾರಿಗೆಯ ಬಳಕೆಯು ಮುಂಬರುವ ದಿನಗಳಲ್ಲಿ ಕಡಿಮೆಯಾಗುತ್ತದೆ ಮತ್ತು ಜನರು ಸಣ್ಣ ಕಾರುಗಳಿಗೆ ಆದ್ಯತೆ ನೀಡುತ್ತಾರೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ನಾವು ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಕಡಿಮೆ ಬೆಲೆಯ ಕಾರುಗಳನ್ನು ಖರೀದಿಸಲು ಬಯಸುವವರಿಗೆ ಇಲ್ಲೊಂದಿಷ್ಟು ಕಾರುಗಳ ಮಾಹಿತಿ ನೀಡಲಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ ಮಾರಾಟವಾಗುತ್ತಿರುವ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ದಟ್ಸನ್ ರೆಡಿ ಗೋ

ಎಂಟ್ರಿ ಲೆವೆಲ್ ಹ್ಯಾಚ್‌ಬ್ಯಾಕ್‌ನ ಬಿಎಸ್ 6 ಆವೃತ್ತಿಯನ್ನು ಕಳೆದ ವರ್ಷ ಮೇ ತಿಂಗಳಲ್ಲಿ ದೇಶದಲ್ಲಿ ಬಿಡುಗಡೆಗೊಳಿಸಿತು. ಇದು ಕಳೆದ ವರ್ಷದ ಮಿಡ್-ಲೈಫ್ ಫೇಸ್‌ಲಿಫ್ಟ್ ಅನ್ನು ಪಾಡೆದುಕೊಂಡಿತ್ತು. ಈ ಕಾರಿನ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.2.89 ಲಕ್ಷಗಳಾಗಿದೆ.

ಭಾರತದಲ್ಲಿ ಮಾರಾಟವಾಗುತ್ತಿರುವ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ದಟ್ಸನ್ ರೆಡಿ ಗೋ ಕಾರಿನಲ್ಲಿ 0.8-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 54 ಬಿಹೆಚ್‍ಪಿ ಪವರ್ ಮತ್ತು 72 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ ಇದರಲ್ಲಿ 1.0-ಲೀಟರ್ ಎಂಜಿನ್ ಅನ್ನು ಹೊಂದಿದ್ದು, ಇದು 68 ಬಿಹೆಚ್‍ಪಿ ಪವರ್ ಮತ್ತು 91 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಡೀಸೆಲ್ ಕಾರುಗಳಿವು

ಭಾರತದಲ್ಲಿ ಮಾರಾಟವಾಗುತ್ತಿರುವ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ರೆನಾಲ್ಟ್ ಕ್ವಿಡ್

ರೆನಾಲ್ಟ್ ಇಂಡಿಯಾ ಕಂಪನಿಯ ಕ್ವಿಡ್ ಹ್ಯಾಚ್‌ಬ್ಯಾಕ್ ಭಾರತೀಯ ಮಾರುಕಟ್ಟೆಯಲ್ಲಿ ಒಂದು ದಶಕದಿಂದಲೂ ಮಾರಾಟವಾಗುತ್ತಿದೆ. ರೆನಾಲ್ಟ್ ಕಂಪನಿಯ ಕಾರುಗಳ ಸರಣಿಯಲ್ಲಿ ಕ್ವಿಡ್ ಹ್ಯಾಚ್‌ಬ್ಯಾಕ್ ಜನಪ್ರಿಯ ಎಂಟ್ರಿ ಲೆವೆಲ್ ಮಾದರಿಯಾಗಿದೆ. ಈ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.3.12 ಲಕ್ಷಗಳಾಗಿದೆ.

ಭಾರತದಲ್ಲಿ ಮಾರಾಟವಾಗುತ್ತಿರುವ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ರೆನಾಲ್ಟ್ ಕ್ವಿಡ್ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿದೆ. ಇದರಲ್ಲಿ 800-ಸಿಸಿ ಎಂಜಿನ್ ಅನ್ನು ಹೊಂದಿದ್ದು, ಈ ಎಂಜಿನ್ 54 ಬಿಹೆಚ್‍ಪಿ ಪವರ್ 72 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇದರೊಂದಿಗೆ 1.0 ಲೀಟರ್ ಎಂಜಿನ್ ಅನ್ನು ಹೊಂದಿದ್ದು, 68 ಬಿಹೆಚ್‍ಪಿ ಪವರ್ ಮತ್ತು 91 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಮ್ಯಾನುವಲ್ ಮತ್ತು ಮತ್ತು ಎಎಂಟಿ ಗೇರ್ ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಭಾರತದಲ್ಲಿ ಮಾರಾಟವಾಗುತ್ತಿರುವ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಮಾರುತಿ ಎಸ್-ಪ್ರೆಸ್ಸೊ

ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿ ಹಲವಾರು ಎಂಟ್ರಿ ಲೆವಲ್ ಕಾರುಗಳನ್ನು ಹೊಂದಿದ್ದು, ಕೈಗೆಟುಕುವ ದರ ಹೊಂದಿರುವ ಕಾರುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಆಲ್ಟೊ ಹಾಗೂ ಎಸ್-ಪ್ರೆಸೊ ಕಾರುಗಳ ಮಾರಾಟವು ಹೆಚ್ಚಾಗುವ ಸಾಧ್ಯತೆಗಳಿವೆ.

ಭಾರತದಲ್ಲಿ ಮಾರಾಟವಾಗುತ್ತಿರುವ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಮಾರುತಿ ಎಸ್-ಪ್ರೆಸೊ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.3.70 ಲಕ್ಷಗಳಾಗಿದೆ. ಎಸ್-ಪ್ರೆಸ್ಸೊ ಮಿನಿ ಎಸ್‍‍ಯು‍ವಿ 998 ಸಿಸಿ ಪೆಟ್ರೋಲ್ ಎಂಜಿನ್‌ ‌67 ಬಿಎಚ್‌ಪಿ ಪವರ್ ಮತ್ತು 90 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಆರಂಭಿಕ ಕಾರು ಮಾದರಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು ಹೈ ಎಂಡ್ ಮಾದರಿಯಲ್ಲಿ 5-ಸ್ಪೀಡ್ ಆಟೋ ಗೇರ್ ಶಿಫ್ಟ್(ಎಜಿಎಸ್) ಆಯ್ಕೆಯನ್ನು ಹೊಂದಿದೆ.

ಭಾರತದಲ್ಲಿ ಮಾರಾಟವಾಗುತ್ತಿರುವ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಟಾಟಾ ಟಿಯಾಗೋ

2018ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾದ ಹ್ಯಾಚ್‌ಬ್ಯಾಕ್ ಎಂಬ ಖ್ಯಾತಿಯನ್ನು ಇದು ಹೊಂದಿದೆ. ಈ ವರ್ಷದ ಆರಂಭದಲ್ಲಿ ಟಾಟಾ ಕಂಪನಿಯು ಬಿಎಸ್ 6 ಆವೃತ್ತಿಯಲ್ಲಿ ಟಿಯಾಗೋ ಕಾರನ್ನು ಬಿಡುಗಡೆಗೊಳಿಸಿತು. ಟಿಯಾಗೋ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.4.85 ಲಕ್ಷಗಳಾಗಿದೆ.

ಭಾರತದಲ್ಲಿ ಮಾರಾಟವಾಗುತ್ತಿರುವ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಟಾಟಾ ಟಿಯಾಗೋ 1.2-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 85 ಬಿಹೆಚ್‍ಪಿ ಪವರ್ ಮತ್ತು 113 ಎನಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಫೀಡ್ ಎಎಂಟಿ ಯುನಿಟ್ ಅನ್ನು ಜೋಡಿಸಲಾಗಿದೆ.

ಭಾರತದಲ್ಲಿ ಮಾರಾಟವಾಗುತ್ತಿರುವ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಮಾರುತಿ ಸುಜುಕಿ ಇಗ್ನಿಸ್

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಇಗ್ನಿಸ್ ಫೇಸ್‌ಲಿಫ್ಟ್ ಕಾರನ್ನು ಕಳೆದ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಮಾರುತಿ ಸುಜುಕಿ ಕಂಫನಿಯು ಇಗ್ನಿಸ್ ಕಾರನ್ನು ಭಾರತದಲ್ಲಿ ನೆಕ್ಸಾ ಪ್ರೀಮಿಯಂ ಡೀಲರ್ ಗಳ ಮೂಲಕ ಮಾರಾಟ ಮಾಡಲಾಗುತ್ತದೆ. ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.4.89 ಲಕ್ಷಗಳಾಗಿದೆ.

ಭಾರತದಲ್ಲಿ ಮಾರಾಟವಾಗುತ್ತಿರುವ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಮಾರುತಿ ಸುಜುಕಿ ಇಗ್ನಿಸ್ ಫೇಸ್‌ಲಿಫ್ಟ್ ಕಾರಿನಲ್ಲಿ 1.2-ಲೀಟರಿನ ಕೆ 12 ಬಿ ಬಿಎಸ್-6 ಪೆಟ್ರೋಲ್ ಎಂಜಿನ್ ಹೊಂದಿದೆ. ಈ ಎಂಜಿನ್ 83 ಬಿಹೆಚ್ ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇಗ್ನಿಸ್ ಕಾರನ್ನು ಸಿಗ್ಮಾ, ಡೆಲ್ಟಾ, ಜೆಟ್ಟಾ ಮತ್ತು ಆಲ್ಫಾ ಎಂಬ ನಾಲ್ಕು ರೂಪಾಂತರಗಳಲ್ಲಿ ಮಾರಾಟ ಮಾಡಲಾತ್ತದೆ.

Most Read Articles

Kannada
English summary
Most Affordable New Cars. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X