ಮಹಾರಾಷ್ಟ್ರದಲ್ಲಿ ಹೊಸ ಸಬ್ಸಡಿ ಯೋಜನೆಯಡಿ 2 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ..

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗಿದೆ.

ಹೊಸ ಸಬ್ಸಡಿ ಯೋಜನೆಯಡಿ 2 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಹೊಸ ಸಬ್ಸಡಿ ಯೋಜನೆಯಡಿ 2 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಹೊಸ ಸಬ್ಸಡಿ ಯೋಜನೆಯಡಿ 2 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ವಿವಿಧ ರಾಜ್ಯಗಳು ತಮ್ಮ ರಾಜ್ಯದಲ್ಲಿನ ಹೊಸ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿವೆ. ಮಹಾರಾಷ್ಟ್ರ ಸರ್ಕಾರವು ಸಹ ಹೊಸ ಇವಿ ವಾಹನ ನೀತಿಯನ್ನು ಪ್ರಕಟಿಸಿದ್ದು, ಮಾಹಾರಾಷ್ಟ್ರದಲ್ಲಿ ಇವಿ ವಾಹನಗಳನ್ನು ಖರೀದಿಸುವವರಿಗಾಗಿ ಭಾರೀ ಪ್ರಮಾಣದ ಸಬ್ಸಡಿ ಆರಂಭಿಸಿದೆ.

ಹೊಸ ಸಬ್ಸಡಿ ಯೋಜನೆಯಡಿ 2 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ

ವ್ಯಯಕ್ತಿಕ ಇವಿ ವಾಹನಗಳ ಬದಲಾವಣೆಗಾಗಿ ಮಾತ್ರ ಸಾರ್ವಜನಿಕ ಸಾರಿಗೆ ವಾಹನಗಳ ಸಂಖ್ಯೆಯಲ್ಲೂ ಮಹತ್ವದ ಬದಲಾವಣೆ ತರುತ್ತಿರುವ ಮಹಾರಾಷ್ಟ್ರ ಸರ್ಕಾರವು ಹೊಸದಾಗಿ 2 ಸಾವಿರ ಎಲೆಕ್ಟ್ರಿಕ್ ಸಾರಿಗೆ ಬಸ್‌ಗಳನ್ನು ಖರೀದಿಸಿದೆ. ಮುಂಬೈ, ಪುಣೆ ಮತ್ತು ನಾಗಪುರ್‌ದಲ್ಲಿ ಈಗಾಗಲೇ ಸುಮಾರು 386 ಎಲೆಕ್ಟ್ರಿಕ್ ಬಸ್‌ಗಳು ಕಾರ್ಯನಿರ್ವಹಣೆಯಲ್ಲಿದ್ದು, ಇದೀಗ ಮತ್ತೆ 2 ಸಾವಿರ ಇವಿ ಬಸ್ ಖರೀದಿಸಲಾಗಿದೆ.

ಹೊಸ ಸಬ್ಸಡಿ ಯೋಜನೆಯಡಿ 2 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ

ಹೊಸ ಬಸ್‌ಗಳು ಹಂತ-ಹಂತವಾಗಿ ರಸ್ತೆಗಳಿಸಲಾಗುತ್ತಿದ್ದು, ನಗರ ಪ್ರಮುಖ ಮಾರ್ಗಗಳಲ್ಲಿ ಒಂದಾಗಿ ಡೀಸೆಲ್ ಮುಕ್ತ ಲೈನ್‌ಗಳನ್ನಾಗಿ ಘೋಷಣೆ ಮಾಡಲು ನಿರ್ಧರಿಸಲಾಗಿದೆ. ಈ ಕುರಿತು ಮಾತನಾಡಿರುವ ಮಹಾರಾಷ್ಟ್ರ ಪರಿಸರ ಸಚಿವ ಆದಿತ್ಯ ಠಾಕ್ರೆ ಮಹತ್ವದ ನಿರ್ಧಾರದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದು, ಸಾರ್ವಜನಿಕ ಸಾರಿಗೆ ವಾಹನಗಳಿಂದ ಉಂಟಾಗುತ್ತಿರುವ ಇಂಗಾಲದ ಹೊರಸೂಸುವಿಕೆಯನ್ನು ಪ್ರಮಾಣವು ತಗ್ಗಿಸಲು ಸರ್ಕಾರ ಬದ್ದವಾಗಿ ಎಂದಿದ್ದಾರೆ.

ಹೊಸ ಸಬ್ಸಡಿ ಯೋಜನೆಯಡಿ 2 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ

ಬೃಹನ್‌ ಮುಂಬೈ ಎಲೆಕ್ಟ್ರಿಕ್ ಸಫ್ಲೈ ಅಂಡ್ ಟ್ರಾನ್ಸ್‌ಪೋರ್ಟ್(BEST) ಸಂಸ್ಥೆಯು ಎಲೆಕ್ಟ್ರಿಕ್ ಬಸ್‌ಗಳನ್ನು ಈಗಾಗಲೇ ಯಶಸ್ವಿ ನಿರ್ವಹಿಸುತ್ತಿದ್ದು, ಯಾವುದೇ ಅಡೆತಡೆಯಿಲ್ಲದೆ ಬಸ್ ಸುಗಮ ಸಂಚಾರಕ್ಕಾಗಿ ಅಗತ್ಯ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಾಗುತ್ತಿದೆ.

ಹೊಸ ಸಬ್ಸಡಿ ಯೋಜನೆಯಡಿ 2 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ

ಈ ಮೂಲಕ ಮಹಾರಾಷ್ಟ್ರ ಸರ್ಕಾರವು 2021ರ ಕೊನೆಯಲ್ಲಿ ರಾಜ್ಯಾದ್ಯಂತ 1 ಲಕ್ಷಕ್ಕೂ ಅಧಿಕ ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗಿಳಿಸುವ ಉದ್ದೇಶ ಹೊಂದಿದ್ದು, ಎಲೆಕ್ಟ್ರಿಕ್ ದ್ವಿಚಕ್ರ ವಾಹನ, ತ್ರಿ ಚಕ್ರ ವಾಹನ ಮತ್ತು ಕಾರು ಮಾದರಿಗಳಿಗೆ ಗರಿಷ್ಠ ಪ್ರಮಾಣದ ಸಬ್ಸಡಿ ನೀಡಲು ಚಾಲನೆ ನೀಡಿದೆ.

ಹೊಸ ಸಬ್ಸಡಿ ಯೋಜನೆಯಡಿ 2 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಅಡಿಯಲ್ಲಿ ದ್ವಿಚಕ್ರ ವಾಹನಗಳಿಗಾಗಿ ಗರಿಷ್ಠ ರೂ.44 ಸಾವಿರ, ತ್ರಿ ಚಕ್ರ ವಾಹಗಳಿಗಾಗಿ ಗರಿಷ್ಠ ರೂ. 90 ಸಾವಿರ ಮತ್ತು ಎಲೆಕ್ಟ್ರಿಕ್ ಕಾರುಗಳಿಗಾಗಿ ಗರಿಷ್ಠ ರೂ. 2.75 ಲಕ್ಷ ಸಬ್ಸಡಿ ನೀಡುತ್ತಿದೆ.

ಹೊಸ ಸಬ್ಸಡಿ ಯೋಜನೆಯಡಿ 2 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ

ಹೊಸ ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರು 2021ರ ಡಿಸೆಂಬರ್ 31ರ ಒಳಗಾಗಿ ಖರೀದಿಸಿದ್ದಲ್ಲಿ ಹೆಚ್ಚಿನ ಮಟ್ಟದ ಸಬ್ಸಡಿ ದೊರೆಯಲಿದ್ದು, 2022ರ ಜನವರಿ 1ರಿಂದ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಸಬ್ಸಡಿ ಲಭ್ಯವಿದ್ದರೂ ಪ್ರಸ್ತುತ ವರ್ಷದ ಸಬ್ಸಡಿ ಪ್ರಮಾಣಕ್ಕಿಂತಲೂ ತುಸು ಕಡಿಮೆಯಾಗಲಿದೆ.

ಹೊಸ ಸಬ್ಸಡಿ ಯೋಜನೆಯಡಿ 2 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ

2022ರ ಜನವರಿ 1ರಿಂದ ಖರೀದಿ ಮಾಡಲಾಗುವ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ರೂ. 29 ಸಾವಿರ ಸಬ್ಸಡಿ, ತ್ರಿ ಚಕ್ರ ವಾಹನಗಳಿಗೆ ರೂ. 57 ಸಾವಿರ ಮತ್ತು ಇವಿ ಕಾರುಗಳಿಗೆ ರೂ. 1.75 ಲಕ್ಷ ಸಬ್ಸಡಿ ಲಭ್ಯವಿರಲಿದೆ.

ಹೊಸ ಸಬ್ಸಡಿ ಯೋಜನೆಯಡಿ 2 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ತೀವ್ರಗೊಳಿಸುವ ಉದ್ದೇಶದಿಂದ ಮಾಹಾರಾಷ್ಟ್ರ ಸರ್ಕಾರ ಡಿಸೆಂಬರ್ 31ರ ಒಳಗಾಗಿ ಇವಿ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ಹೆಚ್ಚಿನ ಮಟ್ಟದ ಸಬ್ಸಡಿ ಘೋಷಣೆ ಮಾಡಿದ್ದು, ಹೊಸ ಸಬ್ಸಡಿ ಯೋಜನೆಗಾಗಿ ಕನಿಷ್ಠ ಪ್ರಮಾಣ ಬ್ಯಾಟರಿ ಸಾಮರ್ಥ್ಯವನ್ನು ನಿಗದಿಪಡಿಸಲಾಗಿದೆ.

ಹೊಸ ಸಬ್ಸಡಿ ಯೋಜನೆಯಡಿ 2 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ

ಎಲೆಕ್ಟ್ರಿಕ್ ದ್ವಿಚಕ್ರವಾಹನಗಳು ಸಬ್ಸಡಿಗೆ ಅರ್ಹವಾಗಲು ಕನಿಷ್ಠ 3kWh ಬ್ಯಾಟರಿ ಪ್ಯಾಕ್ ಹೊಂದಿರಬೇಕಿದ್ದು, ತ್ರಿ ಚಕ್ರ ಎಲೆಕ್ಟ್ರಿಕ್ ವಾಹನಗಳಿಗೆ 7kWh ಬ್ಯಾಟರಿ ಪ್ಯಾಕ್ ಮತ್ತು ಎಲೆಕ್ಟ್ರಿಕ್ ಕಾರುಗಳಿಗೆ 30kWh ಬ್ಯಾಟರಿ ಪ್ಯಾಕ್ ಹೊಂದಿರಬೇಕಾಗುತ್ತದೆ.

ಹೊಸ ಸಬ್ಸಡಿ ಯೋಜನೆಯಡಿ 2 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ

ಇದರೊಂದಿಗೆ ಮಹಾರಾಷ್ಟ್ರ ಸರ್ಕಾರವು ಮುಂಬೈ, ಪುಣೆ, ನಾಗಪುರ್, ಔರಂಗಾಬಾದ್, ನಾಸಿಕ್, ಅಮರಾವತಿ ಮತ್ತು ಸೋಲಾಪುರ್‌ನಲ್ಲಿ 2500 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಉದ್ದೇಶಿಸಿದ್ದು, ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಳ್ಳುವ ಚಾರ್ಜಿಂಗ್ ನಿಲ್ದಾಣಗಳಿಗೆ ಗರಿಷ್ಠ ರೂ. 5 ಲಕ್ಷದ ತನಕ ಸಬ್ಸಡಿ ನೀಡಲು ಒಪ್ಪಿಗೆ ಸೂಚಿಸಿದೆ.

ಹೊಸ ಸಬ್ಸಡಿ ಯೋಜನೆಯಡಿ 2 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ

ಮಹಾರಾಷ್ಟ್ರ ಸರ್ಕಾರದ ಹೊಸ ಇವಿ ನೀತಿಯಲ್ಲಿ ಗಮನಿಸಬೇಕಾದ ಮತ್ತೊಂದು ಪ್ರಮುಖ ಅಂದರೆ ಅದು ಸಾರ್ವಜನಿಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಖಾಸಗಿ ಸ್ವತ್ತಿನಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ಸ್ಥಾಪಿಸಲು ಅನುಮತಿಯೊಂದಿಗೆ ತೆರಿಗೆ ವಿನಾಯ್ತಿಯ ಅವಕಾಶ ನೀಡಿದೆ.

Most Read Articles

Kannada
English summary
Mumbai best to get 1900 all electric buses soon
Story first published: Tuesday, September 21, 2021, 22:02 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X