ಹೊಸ ತಂತ್ರಜ್ಞಾನಗಳೊಂದಿಗೆ ಬಿಡುಗಡೆಯಾಗಲಿದೆ 7-ಸೀಟರ್ ಜೀಪ್ ಎಸ್‍ಯುವಿ

ಅಮೆರಿಕ ಮೂಲದ ಜೀಪ್ ಕಂಪನಿಯ ಸರಣಿಯಲ್ಲಿ ಕಂಪಾಸ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ದೀರ್ಘಕಾಲದಿಂದ ಮಾರಾಟದಲ್ಲಿರುವ ಜನಪ್ರಿಯ ಮಾದರಿಯಾಗಿದೆ. ಇದಿಗ ಜೀಪ್ ಇಂಡಿಯಾ ಕಂಪಾಸ್ ಆಧರಿಸಿ 7-ಸೀಟರ್ ಪ್ರೀಮಿಯಂ ಪೂರ್ಣ ಗಾತ್ರದ ಎಸ್‍ಯುವಿಯನ್ನು ಸಿದ್ಧಪಡಿಸುತ್ತಿದೆ.

ಹೊಸ ತಂತ್ರಜ್ಞಾನಗಳೊಂದಿಗೆ ಬಿಡುಗಡೆಯಾಗಲಿದೆ 7-ಸೀಟರ್ ಜೀಪ್ ಎಸ್‍ಯುವಿ

ಈ ಜೀಪ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ಆರಂಭದಲ್ಲಿ ಫೇಸ್‌ಲಿಫ್ಟೆಡ್ ಕಂಪಾಸ್ ಎಸ್‍ಯುವಿಯನ್ನು ಪರಿಚಯಿಸಿತು. ಇನ್ನು ಜೀಪ್ ಕಂಪನಿಯು ತನ್ನ ಹೊಸ 7-ಸೀಟರ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಏಪ್ರಿಲ್ 4 ರಂದು ಅನಾವರಣಗೊಳಿಸಲಿದೆ. ಮೂರು-ಸಾಲಿನ ಎಸ್‌ಯುವಿ ಜೀಪ್‌ನ ಡಿಎನ್‌ಎಯನ್ನು ಒಳಗೊಂಡಂತೆ ತುಸು ಅಗ್ರೇಸಿವ್ ಲುಕ್ ಅನ್ನು ಹೊಂದಿದೆ.

ಹೊಸ ತಂತ್ರಜ್ಞಾನಗಳೊಂದಿಗೆ ಬಿಡುಗಡೆಯಾಗಲಿದೆ 7-ಸೀಟರ್ ಜೀಪ್ ಎಸ್‍ಯುವಿ

ಈ ಹೊಸ ಮೂರು ಸಾಲಿನ ಎಸ್‍ಯುವಿಯಯನ್ನು ಮಿಡ್ ಎಸ್‍ಯುವಿಯ ಕಂಪಾಸ್ ಮಾದರಿಗೆ ಹೋಲಿಸಿದರೆ ವಿಭಿನ್ನ ಮಾನಿಕರ್ ಪಡೆದಿದೆ. ಇನ್ನು ಹೊಸ 7-ಸೀಟರ್ ಜೀಪ್ ಎಸ್‍ಯುವಿಯು ಆಫ್-ರೋಡಿಂಗ್ ಸಾಮರ್ಥ್ಯವನ್ನು ಹೊಂದಿರುವಾಗ ದುಬಾರಿ ಒಳಾಂಗಣವನ್ನು ಹೊಂದಿರುತ್ತದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಹೊಸ ತಂತ್ರಜ್ಞಾನಗಳೊಂದಿಗೆ ಬಿಡುಗಡೆಯಾಗಲಿದೆ 7-ಸೀಟರ್ ಜೀಪ್ ಎಸ್‍ಯುವಿ

ಈ ಹೊಸ ಎಸ್‍ಯುವಿಯ ಮುಂಭಾಗದಲ್ಲಿ, ಕಂಪಾಸ್‌ಗೆ ಹೋಲಿಸಿದರೆ ವಿಭಿನ್ನ ಸ್ಟೈಲಿಂಗ್ ಅಂಶಗಳೊಂದಿಗೆ ಇದು ಹೆಚ್ಚು ಮಸ್ಕ್ಲರ್ ಲುಕ್ ಅನ್ನು ಹೊಂದಿರಬಹುದು. ಇದರಲ್ಲಿ ಲಂಬವಾದ ಗ್ರಿಲ್ ಸ್ಲ್ಯಾಟ್‌ಗಳು, ತೀಕ್ಷ್ಣವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಹೆಚ್ಚು ಅಗ್ರೇಸಿವ್ ಬಂಪರ್ ಪೈಪ್‌ಲೈನ್‌ನಲ್ಲಿರಬಹುದು.

ಹೊಸ ತಂತ್ರಜ್ಞಾನಗಳೊಂದಿಗೆ ಬಿಡುಗಡೆಯಾಗಲಿದೆ 7-ಸೀಟರ್ ಜೀಪ್ ಎಸ್‍ಯುವಿ

ಜೀಪ್ 7-ಸೀಟರ್ ಎಸ್‍ಯುವಿಯ ಡ್ಯಾಶ್‌ಬೋರ್ಡ್ ವಿನ್ಯಾಸವನ್ನು ಕಂಪಾಸ್ ಫೇಸ್‌ಲಿಫ್ಟ್‌ ಮಾದರಿಯೊಂದಿಗೆ ಹಂಚಿಕೊಳ್ಳಲಿದೆ. ಹೊಸ ಎಸ್‍ಯುವಿಯಲ್ಲಿ ಎಸಿ ವೆಂಟ್ಸ್, ಸ್ಪೀಕರ್‌ಗಳು, ಡೋರ್ ಹ್ಯಾಂಡಲ್ಸ್ ಫ್ರೇಮ್ ಮತ್ತು ಇತರ ಭಾಗಗಳ ಸುತ್ತಲೂ ಕ್ರೋಮ್ ಔಟ್ ಲೈನ್ ಅನ್ನು ಹೊಂದಿರಲಿದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಹೊಸ ತಂತ್ರಜ್ಞಾನಗಳೊಂದಿಗೆ ಬಿಡುಗಡೆಯಾಗಲಿದೆ 7-ಸೀಟರ್ ಜೀಪ್ ಎಸ್‍ಯುವಿ

ಇನ್ನು ಈ ಹೊಸ 7-ಸೀಟರ್ ಜೀಪ್ ಎಸ್‍ಯುವಿಯಲ್ಲಿ ದೊಡ್ಡ ಫ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಪಡೆಯಲಿದ್ದು, ಇದು ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಒಳಗೊಂಡಿರುತ್ತದೆ.

ಹೊಸ ತಂತ್ರಜ್ಞಾನಗಳೊಂದಿಗೆ ಬಿಡುಗಡೆಯಾಗಲಿದೆ 7-ಸೀಟರ್ ಜೀಪ್ ಎಸ್‍ಯುವಿ

ಇನ್ನು ಈ ಎಸ್‍ಯುವಿಯಲ್ಲಿ ಪನೋರಮಿಕ್ ಸನ್‌ರೂಫ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ, ಕ್ರೂಸ್ ಕಂಟ್ರೋಲ್, ಫುಲ್ ಎಲ್ಇಡಿ ಆಟೋ ಹೆಡ್‌ಲ್ಯಾಂಪ್‌ಗಳು, ಅಪ್‌ಡೇಟೆಡ್ ಯುಕನೆಕ್ಟ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಕಾರ್ ಕನೆಕ್ಟಿವಿಟಿ ತಂತ್ರಜ್ಞಾನ ಮತ್ತು ಇತರ ಉನ್ನತ ಫೀಚರ್ ಗಳನ್ನು ಹೊಂದಿರಲಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಹೊಸ ತಂತ್ರಜ್ಞಾನಗಳೊಂದಿಗೆ ಬಿಡುಗಡೆಯಾಗಲಿದೆ 7-ಸೀಟರ್ ಜೀಪ್ ಎಸ್‍ಯುವಿ

ಹೊಸ 7-ಸೀಟರ್ ಜೀಪ್ ಎಸ್‍ಯುವಿಯಲ್ಲಿ 2.0-ಲೀಟರ್ ಮಲ್ಟಿಜೆಟ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಬಹುದು ಈ ಎಂಜಿನ್ 173 ಬಿಹೆಚ್‌ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿರುತ್ತದೆ.

ಹೊಸ ತಂತ್ರಜ್ಞಾನಗಳೊಂದಿಗೆ ಬಿಡುಗಡೆಯಾಗಲಿದೆ 7-ಸೀಟರ್ ಜೀಪ್ ಎಸ್‍ಯುವಿ

ಇದರೊಂದಿಗೆ ಫಿಯೆಟ್ ಮೂಲದ 2.0-ಲೀಟರ್ ನಾಲ್ಕು-ಸಿಲಿಂಡರ್ ಡೀಸೆಲ್ ಟ್ವಿನ್-ಟರ್ಬೋಚಾರ್ಜ್ಡ್ ಎಂಜಿನ್ ಅನ್ನು ಕೂಡ ಪಡೆಯುವ ಸಾಧ್ಯತೆಯಿದೆ. ಇದು 200 ಬಿಹೆಚ್‌ಪಿ ಪವರ್ ಮತ್ತು 400 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ತಂತ್ರಜ್ಞಾನಗಳೊಂದಿಗೆ ಬಿಡುಗಡೆಯಾಗಲಿದೆ 7-ಸೀಟರ್ ಜೀಪ್ ಎಸ್‍ಯುವಿ

ಈ ಎಂಜಿನ್ ಅನ್ನು 9-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್‌ಗೆ ಜೋಡಿಸಲಾಗುವುದು. ಇದರೊಂದಿಗೆ ಎಡಬ್ಲ್ಯೂ ಸಿಸ್ಟಂ ಅನ್ನು ಒಳಗೊಂಡಿರುತ್ತದೆ ಇದು ಎರಡೂ ಆಕ್ಸಲ್‌ಗಳಿಗೆ ಪವರ್ ಅನ್ನು ಕಳುಹಿಸುವ ಸಾಧ್ಯತೆಯಿದೆ.

ಹೊಸ ತಂತ್ರಜ್ಞಾನಗಳೊಂದಿಗೆ ಬಿಡುಗಡೆಯಾಗಲಿದೆ 7-ಸೀಟರ್ ಜೀಪ್ ಎಸ್‍ಯುವಿ

7-ಸೀಟರ್ ಜೀಪ್ ಎಸ್‌ಯುವಿ ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಈ ಹೊಸ ಎಸ್‍ಯುವಿಯು ಭಾರತದಲ್ಲಿ ಬಿಡುಗಡೆಯಾದ ಬಳಿಕ ಟೊಯೊಟಾ ಫಾರ್ಚೂನರ್, ಫೋರ್ಡ್ ಎಂಡೀವರ್, ಫೋಕ್ಸ್‌ವ್ಯಾಗನ್ ಟಿಗುವಾನ್ ಆಲ್‌ಸ್ಪೇಸ್, ಮಹೀಂದ್ರಾ ಅಲ್ತುರಾಸ್ ಜಿ4 ಮತ್ತು ಸ್ಕೋಡಾ ಕೊಡಿಯಾಕ್ ಮಾದರಿಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Saturday, March 20, 2021, 9:58 [IST]
English summary
7-Seater Jeep SUV For India To Likely Get Nine-Speed Auto & AWD. Read In Kannada.
Read more on ಜೀಪ್ jeep
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+