Just In
- 2 hrs ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 6 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- Movies
ರಾಖಿ ಸಾವಂತ್ ಬಯೋಪಿಕ್ ಈ ಸ್ಟಾರ್ ನಟಿಯೇ ಮಾಡಬೇಕಂತೆ
- News
Breaking: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ?
- Sports
ಐಪಿಎಲ್ 2021: ಈ ಬಾರಿಯ ಆವೃತ್ತಿಯ ಕೆಲ ಗಮನಾರ್ಹ ಬದಲಾವಣೆಗಳು
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಐಷಾರಾಮಿ ಆಸ್ಟನ್ ಮಾರ್ಟಿನ್ ಡಿಬಿಎಕ್ಸ್ ಎಸ್‍ಯುವಿ ಬಿಡುಗಡೆ
ಜನಪ್ರಿಯ ಕಾರು ತಯಾರಕ ಕಂಪನಿಯಾದ ಆಸ್ಟನ್ ಮಾರ್ಟಿನ್ ತನ್ನ ಡಿಬಿಎಕ್ಸ್ ಎಸ್‍ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಆಸ್ಟನ್ ಮಾರ್ಟಿನ್ ಡಿಬಿಎಕ್ಸ್ ಎಸ್‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.3.82 ಕೋಟಿಯಾಗಿದೆ.

ಹೊಸ ಆಸ್ಟನ್ ಮಾರ್ಟಿನ್ ಡಿಬಿಎಕ್ಸ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳೊಂದಿಗೆ ‘ಡಿಬಿ' ಗ್ರಿಲ್, ಮಸ್ಕ್ಯುಲರ್ ಬಾನೆಟ್ ಲೈನ್‌ಗಳನ್ನು ಒಳಗೊಂಡಿದೆ. ಡಿಬಿಎಕ್ಸ್ ಹಿಂಭಾಗದಲ್ಲಿ ಬ್ರ್ಯಾಂಡ್ ಸಿಗ್ನೇಚರ್ ಡಕ್ಟೈಲ್ ಬೂಟ್-ಲಿಡ್ ಸ್ಪಾಯ್ಲರ್, ಎಲ್ಇಡಿ ಟೈಲ್ ಲೈಟ್ಸ್ ಮತ್ತು ಬಂಪರ್ ನಲ್ಲಿ ಸಂಯೋಜಿಸಲ್ಪಟ್ಟ ಟ್ವಿನ್ ಎಕ್ಸಾಸ್ಟ್ ಗಳನ್ನು ಹೊಂದಿವೆ. ಆಸ್ಟನ್ ಮಾರ್ಟಿನ್ ಡಿಬಿಎಕ್ಸ್ ಎಸ್‍ಯುವಿಯಲ್ಲಿ 22 ಇಂಚಿನ ದೊಡ್ಡ ಅಲಾಯ್ ವ್ಹೀಲ್ ಗಳು, ಫ್ರೇಮ್‌ಲೆಸ್ ಡೋರ್ ಮತ್ತು ಕೂಪ್ ತರಹದ ರೂಫ್‌ಲೈನ್ ಅನ್ನು ಹೊಂದಿದೆ.

ಹೊಸ ಆಸ್ಟನ್ ಮಾರ್ಟಿನ್ ಡಿಬಿಎಕ್ಸ್ ಎಸ್‍ಯುವಿಯ ಒಳಭಾಗದಲ್ಲಿ ಸ್ಪೋರ್ಟಿ ಮತ್ತು ಐಷಾರಾಮಿ ಗುಣಲಕ್ಷಣಗಳನ್ನು ಸಂಯೋಜಿಸುವ ಹಲವಾರು ಫೀಚರ್ ಗಳನ್ನು ಒಳಗೊಂಡಿದೆ. ಡಿಬಿಎಕ್ಸ್‌ನ ಕ್ಯಾಬಿನ್ ಸುತ್ತಲೂ ಪ್ರೀಮಿಯಂ ಲೆದರ್ ನಿಂದ ಕೂಡಿದ್ದು, ಡಿಬಿ11 ನಲ್ಲಿ ಕಂಡುಬರುವ ಸ್ಪೋರ್ಟಿ ಸೀಟುಗಳನ್ನು ಹೊಂದಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಡಿಬಿಎಕ್ಸ್ ದೊಡ್ಡ 12.3-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, 10.25-ಇಂಚಿನ ಡಿಜಿಟಲ್ ಇನ್ಫೋಟೈನ್ಮೆಂಟ್ ಸಿಸ್ಟಂನೊಂದಿಗೆ ಆಪಲ್ ಕಾರ್ ಪ್ಲೇ ಕನೆಕ್ಟಿವಿಟಿ ಸ್ಟ್ಯಾಂಡರ್ಡ್ ಆಗಿ ಹೊಂದಿದೆ. 360 ಡಿಗ್ರಿ ಕ್ಯಾಮೆರಾ, ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಚಾರ್ಜಿಂಗ್, ಮಲ್ಟಿ-ಜೋನ್ ಕ್ಲೈಮೇಟ್ ಕಂಟ್ರೋಲ್ ಮತ್ತು ಇತರ ಫೀಚರ್ ಗಳನ್ನು ಸಹ ಲಭ್ಯವಿದೆ.

ಹೊಸ ಆಸ್ಟನ್ ಮಾರ್ಟಿನ್ ಡಿಬಿಎಕ್ಸ್ ಎಸ್‍ಯುವಿ ಉತ್ತಮ ಕ್ಯಾಬಿನ್ ಮತ್ತು ಬೂಟ್ ಸ್ಪೇಸ್ ಅನ್ನು ಹೊಂದಿದೆ. ಐಷಾರಾಮಿ ಮತ್ತು ಉತ್ತಮ ಸ್ಪೇಸ್ ಅನ್ನು ಒಳಗೊಂಡಿರುವ ಎಸ್‍ಯುವಿ ಇದಾಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಈ ಎಸ್‍ಯುವಿಯು 5,039 ಎಂಎಂ ಉದ್ದ, 1,998 ಎಂಎಂ ಅಗಲ ಮತ್ತು 1,680 ಎಂಎಂ ಎತ್ತರವನ್ನು ಹೊಂದಿದೆ. ಇನ್ನು ಎಸ್‍ಯುವಿಯು 3,060 ಎಂಎಂ ವ್ಹೀಲ್‌ಬೇಸ್‌ನೊಂದಿಗೆ ಬರುತ್ತದೆ ಮತ್ತು 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹೊಂದಿದೆ ಎಂದು ಹೇಳಲಾಗಿದೆ

ಹೊಸ ಆಸ್ಟನ್ ಮಾರ್ಟಿನ್ ಡಿಬಿಎಕ್ಸ್ ಏರ್ ಸಸ್ಪೆಂಕ್ಷನ್ ಸಿಸ್ಟಂ ಅನ್ನು ಹೊಂದಿದೆ. ಇದು ಎಸ್‍ಯುವಿಯನ್ನು ಕ್ರಮವಾಗಿ 45 ಎಂಎಂ ನಿಂದ 50 ಎಂಎಂ ವರೆಗೆ ಹೆಚ್ಚಿಸಲು ಅಥವಾ ಕಡಿಮೆ ಮಾಡಲು ಅನುವು ಮಾಡಿಕೊಡುತ್ತದೆ. ಇನ್ನು ಈ ಎಸ್‍ಯುವಿಯು 632-ಲೀಟರ್ ದೊಡ್ಡ ಬೂಟ್ ಸ್ಪೇಸ್ ಅನ್ನು ಹೊಂದಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಆಸ್ಟನ್ ಮಾರ್ಟಿನ್ ಡಿಬಿಎಕ್ಸ್ ಎಸ್‍ಯುವಿಯಲ್ಲಿ 4.0-ಲೀಟರ್ ಟ್ವಿನ್-ಟರ್ಬೊ ವಿ8 ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 542 ಬಿಹೆಚ್‍ಪಿ ಪವರ್ ಮತ್ತು 700 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್ ಅನ್ನು 9-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಸ್ಟ್ಯಾಂಡರ್ಡ್ ಆಗಿ ಜೋಡಿಸಲಾಗಿದೆ.

ಇನ್ನು ಈ ಐಷಾರಾಮಿ ಡಿಬಿಎಕ್ಸ್ ಎಸ್‍ಯುವಿಯು ಕೇವಲ 4.5 ಸೆಕೆಂಡುಗಳಲ್ಲಿ 0 - 100 ಕಿಮೀ ವೇಗವನ್ನು ಪಡೆದುಕೊಳ್ಳುತ್ತದೆ. ಇನ್ನು ಆಸ್ಟನ್ ಮಾರ್ಟಿನ್ ಡಿಬಿಎಕ್ಸ್ 291 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿರುತ್ತದೆ.

ಆಸ್ಟನ್ ಮಾರ್ಟಿನ್ ಡಿಬಿಎಕ್ಸ್ ಎಸ್‍ಯುವಿಯು ಅಂತಿಮವಾಗಿ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಬ್ರಿಟಿಷ್ ಸೂಪರ್ ಕಾರ್ ಬ್ರ್ಯಾಂಡ್ ಆಸ್ಟನ್ ಮಾರ್ಟಿನ್ ಡಿಬಿಎಕ್ಸ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಲಂಬ್ಯೂರ್ಗಿನಿ ಉರುಸ್, ಬೆಂಟ್ಲೆ ಬೆಂಟೇಗಾ ವಿ8, ಪೋರ್ಷೆ ಕೇಯೆನ್ ಮತ್ತು ರೋಲ್ಸ್ ರಾಯ್ಸ್ ಕುಲ್ಲಿನಾನ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.