Just In
- 2 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 4 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 4 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 5 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಬಿಡುಗಡೆ ದಿನಾಂಕ ಬಹಿರಂಗ
ಐಷಾರಾಮಿ ಕಾರು ತಯಾರಕ ಕಂಪನಿಯಾದ ಆಡಿ ತನ್ನ ಬಹುನಿರೀಕ್ಷಿತ 2021ರ ಎಸ್5 ಸ್ಪೋರ್ಟ್‌ಬ್ಯಾಕ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ನಾಲ್ಕು ಡೋರಿನ ಕೂಪ್ ಆಗಿದೆ.

ಆಡಿ ಇಂಡಿಯಾ ಕಂಪನಿಯು ಹೊಸ ಎಸ್5 ಸ್ಪೋರ್ಟ್‌ಬ್ಯಾಕ್ ಹೆಸರನ್ನು ತನ್ನ ವೆಬ್‌ಸೈಟ್‌ನಲ್ಲಿ ಈಗಾಗಲೇ ಪಟ್ಟಿ ಮಾಡಿದೆ. ಇನ್ನು ಆಡಿ ಕಂಪನಿಯು ಎಸ್5 ಸ್ಪೋರ್ಟ್‌ಬ್ಯಾಕ್ ಕಾರಿನ ಟೀಸರ್ ಅನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಇದೀಗ ಈ ಹೊಸ ಎಸ್5 ಸ್ಪೋರ್ಟ್‌ಬ್ಯಾಕ್ ಕಾರಿನ ಬಿಡುಗಡೆಯ ದಿನಾಂಕವನ್ನು ಆಡಿ ಬಹಿರಂಗಪಡಿಸಿದೆ. ಈ ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಕಾರು ಇದೇ ತಿಂಗಳ 22ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಇತ್ತೀಚಿಗೆ ಬಿಡುಗಡೆಗೊಳಿಸಿದ ಟೀಸರ್ ಚಿತ್ರದಲ್ಲಿ ಎಸ್5 ಸ್ಪೋರ್ಟ್‌ಬ್ಯಾಕ್ ಕಾರಿನ ಸಂಪೂರ್ಣ ವಿನ್ಯಾಸ ಬಹಿರಂಗವಾಗಿಲ್ಲದಿದ್ದರೂ ಕೆಲವು ಮಾಹಿತಿಗಳು ಬಹಿರಂಗವಾಗಿವೆ. ಟೀಸರ್ ಚಿತ್ರದಲ್ಲಿ ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಹನಿಕ್ಯೂಬ್ ಮಾದರಿಯೊಂದಿಗೆ ದೊಡ್ಡ ಸಿಂಗಲ್-ಫ್ರೇಮ್ ಗ್ರಿಲ್ ಅನ್ನು ಹೊಂದಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಇನ್ನು ಎಲ್ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್‌ಗಳೊಂದಿಗೆ ನಯವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳಿಂದ ಸುತ್ತುವರೆದಿದೆ. ಇದಲ್ಲದೆ ಹೆಡ್‌ಲ್ಯಾಂಪ್‌ಗಳು ಬ್ಲೂ ಸಿಗ್ನೇಚರ್ ಅಂಶಗಳನ್ನು ಒಳಗೊಂಡಿದೆ.

ಇದರೊಂದಿಗೆ 19 ಇಂಚಿನ 5-ಆರ್ಮ್-ಪೈಲಾನ್ ವಿನ್ಯಾಸ ವ್ಹೀಲ್ ಗಳೊಂದಿಗೆ ರೂಫ್ ರೈಲ್ ನೋಡಿದಾಗ ಎಸ್5 ಸ್ಪೋರ್ಟ್‌ಬ್ಯಾಕ್ ಮಾದರಿ ಎಂದು ಖಚಿತವಾಗುತ್ತದೆ. ಬ್ಲ್ಯಾಕ್ ಒಆರ್‍ವಿಎಂ ಕೂಡ ಒಳಗೊಂಡಿರುತ್ತದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಈ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಸ್ಪೋರ್ಟ್ ಸಸ್ಪೆಂಕ್ಷನ್ ಅನ್ನು ಹೊಂದಿದೆ. ಇನ್ನು ಈ ಹೊಸ ಸ್ಪೋರ್ಟ್‌ಬ್ಯಾಕ್ ಮಾದರಿಯಲ್ಲಿ ಸ್ಟ್ಯಾಂಡರ್ಡ್ ಆಡಿ ಡ್ರೈವ್ ಸೆಲೆಕ್ಟ್ ಜೊತೆಗೆ ಕಂಫರ್ಟ್, ಆಟೋ, ಡೈನಾಮಿಕ್ ಮತ್ತು ಇಂಡಿವಿಚ್ಯೂಯಲ್ ಎಂಬ ನಾಲ್ಕು ವಿಭಿನ್ನ ಮೋಡ್ ಗಳನ್ನು ಒಳಗೊಂಡಿವೆ.

ಆಡಿ ಕಂಪನಿಯು ಹೊಸ ಎಸ್5 ಸ್ಪೋರ್ಟ್‌ಬ್ಯಾಕ್ ಕಾರಿನಲ್ಲಿ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಇದು 3.0-ಲೀಟರ್ ಟಿಎಫ್‌ಎಸ್‌ಐ ಎಂಜಿನ್ ಆಗಿರಬಹುದು ಎಂದು ಹೇಳಲಾಗುತ್ತಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಈ ಎಂಜಿನ್ 349 ಬಿಹೆಚ್‌ಪಿ ಪವರ್ ಮತ್ತು 500 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ 3.0-ಲೀಟರ್ ಟಿಎಫ್‌ಎಸ್‌ಐ ಎಂಜಿನ್ ನೊಂದಿಗೆ 8-ಸ್ಪೀಡ್ ಟಿಪ್ಟ್ರೋನಿಕ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.

ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಕಾರು ಕೇವಲ 4.5 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಇನ್ನು ಬಹುನಿರೀಕ್ಷಿತ ಹೊಸ ಆಡಿ ಎಸ್5 ಸ್ಪೋರ್ಟ್‌ಬ್ಯಾಕ್ ಕಾರು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿದೆ.