ಹೊಸ ಬದಲಾವಣೆಗಳೊಂದಿಗೆ 2021ರ ಬಿಎಂಡಬ್ಲ್ಯು 5 ಸೀರಿಸ್ ಭಾರತದಲ್ಲಿ ಬಿಡುಗಡೆ

ಬಿಎಂಡಬ್ಲ್ಯು ಇಂಡಿಯಾ ಕಂಪನಿಯು ತನ್ನ ಜನಪ್ರಿಯ 5 ಸೀರಿಸ್ ಸೆಡಾನ್ ಮಾದರಿಯ 2021ರ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 62.90 ಲಕ್ಷ ಬೆಲೆ ಹೊಂದಿದೆ.

2021ರ ಬಿಎಂಡಬ್ಲ್ಯು 5 ಸೀರಿಸ್ ಭಾರತದಲ್ಲಿ ಬಿಡುಗಡೆ

ಮಧ್ಯಮ ಕ್ರಮಾಂಕದ ಐಷಾರಾಮಿ ಸೆಡಾನ್ ಮಾದರಿಗಳಲ್ಲಿ ಉತ್ತಮ ಬೇಡಿಕೆ ಹೊಂದಿರುವ 5 ಸೀರಿಸ್ ಮಾದರಿಯು ಹೊಸ ಆವೃತ್ತಿಯೊಂದಿಗೆ ಮತ್ತಷ್ಟು ವಿನೂತನ ತಂತ್ರಜ್ಞಾನ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಹೊಸ ಕಾರು 530ಐ ಎಂ ಸ್ಪೋರ್ಟ್, 520ಡಿ ಮತ್ತು 530ಡಿ ಎಂ ಸ್ಪೋರ್ಟ್ ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದೆ.

2021ರ ಬಿಎಂಡಬ್ಲ್ಯು 5 ಸೀರಿಸ್ ಭಾರತದಲ್ಲಿ ಬಿಡುಗಡೆ

ತಾಂತ್ರಿಕ ಸೌಲಭ್ಯಗಳು ಮತ್ತು ಎಂಜಿನ್ ಆಯ್ಕೆಗೆ ಅನುಗುಣವಾಗಿ 530ಐ ಎಂ ಸ್ಪೋರ್ಟ್ ಮಾದರಿಯು ರೂ. 62.90 ಲಕ್ಷ ಬೆಲೆ ಹೊಂದಿದ್ದರೆ 520ಡಿ ಮಾದರಿಯು ರೂ. 63.90 ಲಕ್ಷ ಮತ್ತು 530ಡಿ ಎಂ ಸ್ಪೋರ್ಟ್ ಮಾದರಿಯು ರೂ. 71.90 ಲಕ್ಷ ಬೆಲೆ ಹೊಂದಿವೆ.

2021ರ ಬಿಎಂಡಬ್ಲ್ಯು 5 ಸೀರಿಸ್ ಭಾರತದಲ್ಲಿ ಬಿಡುಗಡೆ

ಹೊಸ ಕಾರು ಬಿಡುಗಡೆಯೊಂದಿಗೆ ಅಧಿಕೃತ ಬುಕ್ಕಿಂಗ್ ಆರಂಭಿಸಿರುವ ಬಿಎಂಡಬ್ಲ್ಯು ಕಂಪನಿಯು ಹೊಸ ಕಾರು ಖರೀದಿಗೆ ಜುಲೈ 24ರ ಒಳಗಾಗಿ ಬುಕ್ಕಿಂಗ್ ದಾಖಲಿಸುವ ಗ್ರಾಹಕರಿಗೆ ಹೊಸ ಆಫರ್ ನೀಡಿದ್ದು, ನಿಗದಿತ ಅವಧಿಯಲ್ಲಿ ಬುಕ್ಕಿಂಗ್ ದಾಖಲಿಸಿದ್ದಲ್ಲಿ ಎಂ ಸ್ಪೋರ್ಟ್ ವೆರಿಯೆಂಟ್‌ಗಳ ಆಕ್ಸೆಸರಿಸ್ ಪ್ಯಾಕೇಜ್ ಜೋಡಣೆಯ ಮೇಲೆ ಶೇ.50ರಷ್ಟು ರಿಯಾಯ್ತಿ ನೀಡುವುದಾಗಿ ಘೋಷಣೆ ಮಾಡಿದೆ.

2021ರ ಬಿಎಂಡಬ್ಲ್ಯು 5 ಸೀರಿಸ್ ಭಾರತದಲ್ಲಿ ಬಿಡುಗಡೆ

ಇನ್ನು ಹೊಸ ಕಾರಿನಲ್ಲಿ 2020ರ ಮಾದರಿಗಿಂತಲೂ ಹಲವು ಹೊಸ ಬದಲವಣೆಗಳನ್ನು ಪರಿಚಯಿಸಿದ್ದು, ಹೊಸ ಕಾರಿನಲ್ಲಿ ಸ್ಪೋರ್ಟಿ ಡಿಸೈನ್‌ ಹೊಂದಿರುವ ಬಿಎಂಡಬ್ಲ್ಯು ಕಿಡ್ನಿ ಗ್ರಿಲ್, ಲೇಸರ್ ಲೈಡ್ ಹೆಡ್‌ಲ್ಯಾಂಪ್, ಮರುವಿನ್ಯಾಸಗೊಳಿಸಲಾದ ಬಂಪರ್, ಎಲ್ ಆಕಾರದ ಎಲ್ಇಡಿ ಡಿಆರ್‌ಎಲ್ಎಸ್ ಮತ್ತು 18 ಇಂಚಿನ ಅಲಾಯ್ ವೀಲ್ಹ್ ಜೋಡಿಸಲಾಗಿದೆ.

2021ರ ಬಿಎಂಡಬ್ಲ್ಯು 5 ಸೀರಿಸ್ ಭಾರತದಲ್ಲಿ ಬಿಡುಗಡೆ

ಹಾಗೆಯೇ ಹೊಸ ಕಾರಿನ ಹಿಂಭಾಗದ ಡಿಸೈನ್ ಕೂಡಾ ಆಕರ್ಷಕವಾಗಿದ್ದು, ಸ್ಪೋರ್ಟಿ ಎಕ್ಸಾಸ್ಟ್, ಎಲ್ಇಡಿ ಟೈಲ್‌ಲ್ಯಾಂಪ್, ಸ್ಪೋರ್ಟಿ ಬಂಪರ್ ಪಡೆದುಕೊಂಡಿದೆ. ಹೊಸ ಕಾರಿನಲ್ಲಿ ಹೊಸ ಡಿಸೈನ್ ಸೌಲಭ್ಯದೊಂದಿಗೆ ಕಾರ್ ಕನೆಕ್ಟಿವಿಟಿ ಕೂಡಾ ಸಾಕಷ್ಟು ಬದಲಾವಣೆಗೊಂಡಿದ್ದು, ಐಡ್ರೈವ್ ಸಿಸ್ಟಂ ಫೀಚರ್ಸ್ ಉನ್ನತೀಕರಿಸಲಾಗಿದೆ.

2021ರ ಬಿಎಂಡಬ್ಲ್ಯು 5 ಸೀರಿಸ್ ಭಾರತದಲ್ಲಿ ಬಿಡುಗಡೆ

ಹೊಸ ಕಾರಿನ ಒಳಭಾಗದಲ್ಲಿ ಆಕರ್ಷಕ ಕ್ಯಾಬಿನ್‌ನೊಂದಿಗೆ ಸುಧಾರಿತ ತಂತ್ರಜ್ಞಾನ ಪ್ರೇರಿತ ಡ್ಯಾಶ್‌ಬೋರ್ಡ್ ಸೌಲಭ್ಯಗಳನ್ನು ಒಳಗೊಂಡಿದ್ದು, 10.25 ಇಂಚಿನ ಇನ್ಪೋಟೈನ್‌ಮೆಂಟ್ ಡಿಸ್‌ಪ್ಲೇ, 10.25 ಇಂಚಿನ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ ಕನೆಕ್ಟಿವಿಟಿ, ಸ್ಪೋರ್ಟ್ ಸ್ಟ್ರೀರಿಂಗ್ ಮೌಂಟೆಡ್ ಕಂಟ್ರೋಲ್ ಸೌಲಭ್ಯಗಳಿವೆ.

2021ರ ಬಿಎಂಡಬ್ಲ್ಯು 5 ಸೀರಿಸ್ ಭಾರತದಲ್ಲಿ ಬಿಡುಗಡೆ

ಜೊತಗೆ ಹೊಸ ಕಾರಿನಲ್ಲಿ ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ಪನರೊಮಿಕ್ ಸನ್‌ರೂಫ್, ವೆಂಟಿಲೆಟೆಡ್ ಆಸನಗಳು, ರಿಯರ್ ಎಸಿ ವೆಂಟ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಹರ್ಮನ್ ಕಾರ್ಡನ್ ಸರೌಂಡ್ ಸೌಂಡ್ ಸಿಸ್ಟಂ ಮತ್ತು ಬಿಎಂಡಬ್ಲ್ಯು ವರ್ಚುವಲ್ ಕಂಟ್ರೋಲ್ ಅಸಿಸ್ಟ್ ಹೊಂದಿದೆ.

2021ರ ಬಿಎಂಡಬ್ಲ್ಯು 5 ಸೀರಿಸ್ ಭಾರತದಲ್ಲಿ ಬಿಡುಗಡೆ

ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಬಿಎಂಡಬ್ಲ್ಯು ಕಂಪನಿಯು ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫ್ರಂಟ್ ಕೂಲಿಷನ್ ವಾರ್ನಿಂಗ್, ಎಮರ್ಜೆನ್ಸಿ ಬ್ರೇಕ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರಿಯರ್ ಕೂಲಿಷನ್ ವಾರ್ನಿಂಗ್, 360 ಡಿಗ್ರಿ ಕ್ಯಾಮೆರಾ, 8 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಕಾರ್ನರಿಂಗ್ ಬ್ರೇಕ್ ಕಂಟ್ರೋಲ್, ಡೈನಾಮಿಕ್ ಟ್ರಾಕ್ಷನ್ ಕಂಟ್ರೋಲ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

2021ರ ಬಿಎಂಡಬ್ಲ್ಯು 5 ಸೀರಿಸ್ ಭಾರತದಲ್ಲಿ ಬಿಡುಗಡೆ

ಎಂಜಿನ್ ಮತ್ತು ಪರ್ಫಾಮೆನ್ಸ್

5 ಸೀರಿಸ್ ಕಾರು ಮಾದರಿಯಲ್ಲಿ 2.0-ಲೀಟರ್ ಇನ್ ಲೈನ್, ನಾಲ್ಕು-ಸಿಲಿಂಡರ್ ಪೆಟ್ರೋಲ್ ಎಂಜಿನ್, 2.0-ಲೀಟರ್ ಇನ್ ಲೈನ್ ಡೀಸೆಲ್ ಎಂಜಿನ್ ಮತ್ತು 3.0-ಲೀಟರ್ ಆರು ಸಿಲಿಂಡರ್ ಹೊಂದಿರುವ ಡಿಸೇಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದೆ.

2021ರ ಬಿಎಂಡಬ್ಲ್ಯು 5 ಸೀರಿಸ್ ಭಾರತದಲ್ಲಿ ಬಿಡುಗಡೆ

8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಆರಂಭಿಕ ಕಾರು ಮಾದರಿಯು 248 ಬಿಹೆಚ್‍ಪಿ 350 ಎನ್ಎಂ ಟಾರ್ಕ್ ಉತ್ಪಾದಿಸಿದ್ದಲ್ಲಿ ಮಧ್ಯಮ ಕ್ರಮಾಂಕದ ಆವೃತ್ತಿಯು 187.7 ಬಿಹೆಚ್‍ಪಿ, 400 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

2021ರ ಬಿಎಂಡಬ್ಲ್ಯು 5 ಸೀರಿಸ್ ಭಾರತದಲ್ಲಿ ಬಿಡುಗಡೆ

ಹೈ ಎಂಡ್ ಮಾದರಿಯಾದ 530ಡಿ ಎಂ ಸ್ಪೋರ್ಟ್ ಮಾದರಿಯು 261.4 ಬಿಎಚ್‌ಪಿ, 620 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿದ್ದು, ಹೊಸ ಕಾರು ಆಡಿ ಎ6, ಮರ್ಸಿಡಿಸ್ ಬೆಂಝ್ ಇ-ಕ್ಲಾಸ್, ಜಾಗ್ವಾರ್ ಎಕ್ಸ್‌ಎಫ್ ಮತ್ತು ವೋಲ್ವೋ ಎಸ್90, ಲೆಕ್ಸಸ್ ಇಎಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

More from DriveSpark

Article Published On: Thursday, June 24, 2021, 14:01 [IST]
English summary
2021 BMW 5 Series India Launch Price At Rs 62.90 Lakh. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+