ಬಿಡುಗಡೆಗೆ ಸಜ್ಜಾದ ಹೊಸ ಬಿಎಂಡಬ್ಲ್ಯು ಐಎಕ್ಸ್ ಎಲೆಕ್ಟ್ರಿಕ್ ಎಸ್‍ಯುವಿ

ಜರ್ಮನ್ ಮೂಲದ ಐಷಾರಾಮಿ ವಾಹನ ತಯಾರಕ ಕಂಪನಿಯಾದ ಬಿಎಂಡಬ್ಲ್ಯು ತನ್ನ ಮೊದಲ ಆಲ್-ಎಲೆಕ್ಟ್ರಿಕ್ ಎಸ್‌ಯುವಿ ಐಎಕ್ಸ್ ಅನ್ನು ಈಗಾಗಲೇ ಜಾಗತಿಕವಾಗಿ ಅನಾವರಣಗೊಳಿಸಿತ್ತು. ಈ ಹೊಸ ಆಲ್-ಎಲೆಕ್ಟ್ರಿಕ್ ಬಿಎಂಡಬ್ಲ್ಯು ಐಎಕ್ಸ್ ಎಸ್‌ಯುವಿಯು ಆಕರ್ಷಕ ವಿನ್ಯಾಸ ಮತ್ತು ಐಷಾರಾಮಿ ಇಂಟಿರಿಯರ್ ಅನ್ನು ಒಳಗೊಂಡಿದೆ.

ಬಿಡುಗಡೆಗೆ ಸಜ್ಜಾದ ಹೊಸ ಬಿಎಂಡಬ್ಲ್ಯು ಐಎಕ್ಸ್ ಎಲೆಕ್ಟ್ರಿಕ್ ಎಸ್‍ಯುವಿ

ಈ ಹೊಸ ಆಲ್-ಎಲೆಕ್ಟ್ರಿಕ್ ಬಿಎಂಡಬ್ಲ್ಯು ಐಎಕ್ಸ್ ಎಸ್‌ಯುವಿಯು ಉತ್ಪಾದನೆಗೆ ಸಿದ್ಧವಾಗಿದೆ. ಇನ್ನು ಈ ಹೊಸ ಎಲೆಕ್ಟ್ರಿಕ್ ಎಸ್‍ಯುವಿ ಈ ವರ್ಷದ ನವೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ. ಬಿಎಂಡಬ್ಲ್ಯು ಐಎಕ್ಸ್ ಹೊಸ ಪ್ಲಾಟ್‌ಫಾರ್ಮ್, ವಿನ್ಯಾಸ ಮತ್ತು ಕೆನಕ್ಟಿವಿಟಿ ತಂತ್ರಜ್ಞಾನದ ಹೋಸ್ಟ್‌ನೊಂದಿಗೆ ಬರುತ್ತದೆ. ಹೊಸ ಬಿಎಂಡಬ್ಲ್ಯು ಐಎಕ್ಸ್ ಉದ್ದ ಮತ್ತು ಅಗಲ ಎಕ್ಸ್5 ಮಾದರಿಗೆ ಹೋಲುತ್ತದೆ ಎಂದು ಹೇಳಲಾಗುತ್ತದೆ. ಇನ್ನು ಈ ಹೊಸ ಎಲೆಕ್ಟ್ರಿಕ್ ಎಸ್‍ಯುವಿ ಎತ್ತರವು ಎಕ್ಸ್6 ಮಾದರಿಗೆ ಸಮಾನವಾಗಿದೆ.

ಬಿಡುಗಡೆಗೆ ಸಜ್ಜಾದ ಹೊಸ ಬಿಎಂಡಬ್ಲ್ಯು ಐಎಕ್ಸ್ ಎಲೆಕ್ಟ್ರಿಕ್ ಎಸ್‍ಯುವಿ

ಬಿಎಂಡಬ್ಲ್ಯು ಐಎಕ್ಸ್‌ನಲ್ಲಿರುವ ದೊಡ್ಡ ಕಿಡ್ನಿ ಗ್ರಿಲ್ ಅನ್ನು ಇಂಟಿಲಿಜಿಟೆಂಡ್ ಡ್ರೈವ್ಸ್ ಅಸಿಸ್ಟೆನ್ಸ್ ಟೆಕ್ನಾಲಜಿಗೆ ನೆರವಾಗಲು ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ ಅಳವಡಿಸಲಾಗಿದೆ. ಇದ್ರಲಿ ರಾಡಾರ್ ಸಿಸ್ಟಂ, ಸೆನ್ಸರ್ ಗಳು ಮತ್ತು ಕ್ಯಾಮೆರಾಗಳು ಕೂಡ ಸೇರಿವೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಗೆ ಸಜ್ಜಾದ ಹೊಸ ಬಿಎಂಡಬ್ಲ್ಯು ಐಎಕ್ಸ್ ಎಲೆಕ್ಟ್ರಿಕ್ ಎಸ್‍ಯುವಿ

ಈ ಬಿಎಂಡಬ್ಲ್ಯು ಐಎಕ್ಸ್ ವಿನ್ಯಾಸವು ವಿಶಿಷ್ಟವಾಗಿ ಆಕರ್ಷಕವಾಗಿದೆ. ಹೆಚ್ಚು ಭವಿಷ್ಯದ ಆಧಾರಿತ ಸ್ಟೈಲಿಂಗ್ ಹೊಂದಿದೆ. ಹೊಸ ಐಎಕ್ಸ್ ಬ್ರ್ಯಾಂಡ್ನ ಹೊಸ ಸ್ಕೇಲೆಬಲ್ ಆರ್ಕಿಟೆಕ್ಚರ್ ಅನ್ನು ಸಹ ಪರಿಚಯಿಸುತ್ತದೆ. ಒಟ್ಟಾರೆ ತೂಕವನ್ನು ಕಡಿಮೆ ಮಾಡುವಾಗ ಇದು ಅಲ್ಯೂಮಿನಿಯಂ ಸ್ಪೇಸ್-ಫ್ರೇಮ್ ಮತ್ತು ಟಾರ್ಶನಲ್ ಅನ್ನು ಹೊಂದಿದೆ.

ಬಿಡುಗಡೆಗೆ ಸಜ್ಜಾದ ಹೊಸ ಬಿಎಂಡಬ್ಲ್ಯು ಐಎಕ್ಸ್ ಎಲೆಕ್ಟ್ರಿಕ್ ಎಸ್‍ಯುವಿ

ಹೊಸ ಬಿಎಂಡಬ್ಲ್ಯು ಐಎಕ್ಸ್ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ ಆಕರ್ಷಕವಾದ ಇಂಟಿರಿಯರ್ ಅನ್ನು ಹೊಂದಿದೆ. ಹೊಸ ಐಎಕ್ಸ್‌ನ ಕ್ಯಾಬಿನ್ ಫ್ಯೂಚರಿಸ್ಟಿಕ್ ಎಂದು ಭಾವಿಸುತ್ತದೆ ಮತ್ತು ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇದರೊಂದಿಗೆ 15 ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಬಿಡುಗಡೆಗೆ ಸಜ್ಜಾದ ಹೊಸ ಬಿಎಂಡಬ್ಲ್ಯು ಐಎಕ್ಸ್ ಎಲೆಕ್ಟ್ರಿಕ್ ಎಸ್‍ಯುವಿ

ಹೊಸ ಐಎಕ್ಸ್ ಎಲೆಕ್ಟ್ರಿಕ್ ಎಸ್‌ಯುವಿ ಎರಡು ಎಲೆಕ್ಟ್ರಿಕ್ ಮೋಟರ್‌ಗಳನ್ನು ಒಳಗೊಂಡಿರುವ ಬ್ರ್ಯಾಂಡ್‌ನ ಐದನೇ ತಲೆಮಾರಿನ ಪವರ್‌ಟ್ರೇನ್ ಅನ್ನು ಬಳಸುತ್ತದೆ ಎಂದು ಬಿಎಂಡಬ್ಲ್ಯು ಹೇಳಿದೆ. ಈ ಎಲೆಕ್ಟ್ರಿಕ್ ಎಸ್‍ಯುವಿಯು ಎಕ್ಸ್‌ಡ್ರೈವ್50 ಮತ್ತು ಎಕ್ಸ್‌ಡ್ರೈವ್40 ಎಂಬ ಎರಡು ರೂಪಾಂತರಗಳನ್ನು ಹೊಂದಿರುತ್ತದೆ.

ಬಿಡುಗಡೆಗೆ ಸಜ್ಜಾದ ಹೊಸ ಬಿಎಂಡಬ್ಲ್ಯು ಐಎಕ್ಸ್ ಎಲೆಕ್ಟ್ರಿಕ್ ಎಸ್‍ಯುವಿ

ಇದರಲ್ಲಿ 523 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಮೋಟಾರ್ ಅನ್ನು ನೀಡಲಾಗುತ್ತದೆ. ಯುರೋಪಿಯನ್ ಡಬ್ಲ್ಯುಎಲ್‌ಟಿಪಿ ವ್ಹೀಲ್ ಪ್ರಕಾರ ಬಿಎಂಡಬ್ಲ್ಯು ಐಎಕ್ಸ್ ಸಿಂಗಲ್ ಚಾರ್ಜ್‌ನಲ್ಲಿ 600ಕ್ಕೂ ಹೆಚ್ಚು ಕಿಲೋಮೀಟರ್ ಚಲಿಸುವಷ್ಟು ಸಮರ್ಥವಾಗಿದೆ ಎಂದು ಹೇಳಲಾಗಿದೆ.

MOST READ: ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಡೀಸೆಲ್ ಕಾರುಗಳಿವು

ಬಿಡುಗಡೆಗೆ ಸಜ್ಜಾದ ಹೊಸ ಬಿಎಂಡಬ್ಲ್ಯು ಐಎಕ್ಸ್ ಎಲೆಕ್ಟ್ರಿಕ್ ಎಸ್‍ಯುವಿ

ಈ ಹೊಸ ಐಎಕ್ಸ್ ಎಲೆಕ್ಟ್ರಿಕ್ ಎಸ್‌ಯುವಿಯ ಉತ್ಪಾದನೆಯು ಜರ್ಮನಿಯ ಡಿಂಗೋಲ್ಫಿಂಗ್ ಘಟಕದಲ್ಲಿ ನಡೆಯಲಿದೆ. ಈ ಎಸ್‍ಯುವಿಯ ಎಕ್ಸ್‌ಡ್ರೈವ್40 ರೂಪಾಂತರವು 6.1 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಇನ್ನು ಎಕ್ಸ್‌ಡ್ರೈವ್50 4.6 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ

ಬಿಡುಗಡೆಗೆ ಸಜ್ಜಾದ ಹೊಸ ಬಿಎಂಡಬ್ಲ್ಯು ಐಎಕ್ಸ್ ಎಲೆಕ್ಟ್ರಿಕ್ ಎಸ್‍ಯುವಿ

ಈ ಹೊಸ ಬಿಎಂಡಬ್ಲ್ಯು ಐಎಕ್ಸ್ ಆಲ್-ಎಲೆಕ್ಟ್ರಿಕ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಯಾದ ಬಳಿಕ ಮರ್ಸಿಡಿಸ್ ಬೆಂಝ್ ಇಕ್ಯೂಸಿ, ಆಡಿ ಇ-ಟ್ರಾನ್ ಮತ್ತು ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಈ ಹೊಸ ಬಿಎಂಡಬ್ಲ್ಯು ಐಎಕ್ಸ್ ಎಲೆಕ್ಟ್ರಿಕ್ ಎಸ್‍ಯುವಿಯು ಭಾರತದಲ್ಲಿ ಬಿಡುಗಡೆಯಾಗುವುದರ ಬಗ್ಗೆ ಕಂಪನಿ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

More from DriveSpark

Article Published On: Tuesday, June 8, 2021, 19:31 [IST]
English summary
BMW IX Ev To Hit Global Market In November. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+