Just In
Don't Miss!
- News
ಶ್ವಾನಗಳಿಂದ ಕೊರೊನಾ ಸೋಂಕು ನಿಖರ ಪತ್ತೆ: ಅಧ್ಯಯನ ವರದಿ
- Lifestyle
ಭಾನುವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಹೈದರಾಬಾದ್ ಸೋಲಿಸಿ ಅಗ್ರ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್
- Finance
ಮಹಾರಾಷ್ಟ್ರದಲ್ಲಿ ಲಾಕ್ಡೌನ್: ಕಾರುಗಳ ಉತ್ಪಾದನೆ ಮೇಲೆ ಭಾರೀ ಪರಿಣಾಮ
- Movies
ಸುಶಾಂತ್ ಸಿಂಗ್ ಸಾವಿನ ಬಗ್ಗೆ ಕಂಗನಾ ರಣಾವತ್ ಯೂ-ಟರ್ನ್?
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಐಷಾರಾಮಿ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರು ಬಿಡುಗಡೆ
ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು ಇಂಡಿಯಾ ತನ್ನ ಹೊಸ ಎಂ340ಐ ಎಕ್ಸ್‌ಡ್ರೈವ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.62.90 ಲಕ್ಷಗಳಾಗಿದೆ.

ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರು ದ್ರಾವಿಟ್ ಗ್ರೇ, ಸನ್ಸೆಟ್ ಆರೆಂಜ್ ಮತ್ತು ಟಾಂಜಾನೈಟ್ ಬ್ಲೂ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಿದೆ. ಈ ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಈಗಾಗಲೇ ಪ್ರಾರಂಭಿಸಿದ್ದಾರೆ. ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ಕಂಪನಿಯ ಡೀಲರ್ ಬಳಿ ಅಥವಾ ಆನ್‌ಲೈನ್ ಮೂಲಕ ಟೋಕರ್ ಮೊತ್ತ ರೂ.1 ಲಕ್ಷ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರಿನಲ್ಲಿ ಪವರ್ ಫುಲ್ 3.0-ಲೀಟರ್, ಆರು ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ ಮತ್ತು ಆಲ್-ವ್ಹೀಲ್ ಡ್ರೈವ್ ಸೆಟಪ್ ಹೊಂದಿದೆ. ಈ ಎಂಜಿನ್ 87 ಬಿಹೆಚ್‌ಪಿ ಪವರ್ ಮತ್ತು 500 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಇನ್ನು ಪ್ಯಾಡಲ್ ಶಿಫ್ಟರ್‌ಗಳೊಂದಿಗೆ ಎಂಜಿನ್ ಅನ್ನು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಈ ಐಷಾರಾಮಿ ಕಾರು ಕೇವಲ 4.4 ಸೆಕೆಂಡುಗಳಲ್ಲಿ 100 ಕಿ,ಮೀ ವೇಗವನ್ನು ಪಡೆದುಕೊಳ್ಳುತ್ತದೆ.

ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರಿನಲ್ಲಿ ಎಂ-ಸ್ಪೆಸಿಫಿಕ್ ಚಾಸಿಸ್ ಟ್ಯೂನಿಂಗ್, ಬಿಎಂಡಬ್ಲ್ಯು ಎಕ್ಸ್‌ಡ್ರೈವ್ ಆಲ್-ವ್ಹೀಲ್ ಡ್ರೈವ್ ಮತ್ತು ಎಂ ಸ್ಪೋರ್ಟ್ ರಿಯರ್ ಡಿಫರೆನ್ಷಿಯಲ್ ಅನ್ನು ಒಳಗೊಂಡಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಇನ್ನು ಈ ಹೊಸ ಐಷಾರಾಮಿ ಕಾರಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಅಗ್ರೇಸಿವ್ ಮತ್ತು ನಯವಾದ ಹೆಡ್‌ಲೈಟ್‌ಗಳು ಮತ್ತು ಮಸ್ಕಲರ್ ಬಂಪರ್ ಅನ್ನು ಹೊಂದಿದೆ. ಇನ್ನು ಈ ಕಾರಿನಲ್ಲಿ 18 ಇಂಚಿನ ವ್ಹೀಲ್ ಗಳನ್ನು ನೀಡಿದೆ. ಇದರೊಂದಿಗೆ 19 ಇಂಚಿನ ವ್ಹೀಲ್ ಗಳ ಆಯ್ಕೆಯನ್ನು ನೀಡಿದೆ.

ಇನ್ನು ಈ ಕಾರಿನ ಬದಿಯ ಉದ್ದಕೂ ಅಗ್ರೇಸಿವ್ ಬಾಡಿ ಲೈನ್ ಗಳನ್ನು ಒಳಗೊಂಡಿದೆ. ಹಿಂಭಾಗದಲ್ಲಿ ಎಲ್ಇಡಿ ಟೈಲ್‌ಲೈಟ್‌ಗಳನ್ನೂ ಸಹ ಒಳಗೊಂಡಿದೆ. ಇದು ಡ್ಯುಯಲ್ ಔಟ್ ಲೆಟ್ ಗಳೊಂದಿಗೆ ಎಂ ಸ್ಪೋರ್ಟ್ ಎಕ್ಸಾಸ್ಟ್ ಸಹ ಹೊಂದಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರಿನ ಇಂಟಿರಿಯರ್ ನಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಕನೆಕ್ಟಿವಿಟಿ ಹೊಂದಿರುವ 10.25-ಇಂಚಿನ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇನ್ನು ಈ ಕಾರಿನಲ್ಲಿ 12.3-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ನೀಡಿದೆ.

ಇದರೊಂದಿಗೆ ಮೂರು ಜೋನ್ ಕ್ಲೈಮೇಟ್ ಕಂಟ್ರೋಲ್, ಅಂಬಿಯೆಟ್ ಲೈಟಿಂಗ್, ಕನೆಕ್ಟೆಡ್ ಪ್ಯಾಕೇಜ್ ಪ್ಲಸ್ ಜೊತೆಗೆ ರಿಯಲ್-ಟೈಮ್ ಟ್ರಾಫಿಕ್ ಮಾಹಿತಿ, ರಿಮೋಟ್ ಸರ್ವೀಸಸ್, ಕನ್ಸೈರ್ಜ್ ಸರ್ವೀಸಸ್ ಮತ್ತು ಆಪಲ್ ಕಾರ್ ಪ್ಲೇ ಸೇರಿದಂತೆ 8.8-ಇಂಚಿನ ಕಂಟ್ರೋಲ್ ಡಿಸ್ ಪ್ಲೇಯನ್ನು ಕೂಡ ಪಡೆಯುತ್ತದೆ