Just In
Don't Miss!
- News
ತೊಂದರೆಗೊಳಗಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಮತ್ತಷ್ಟು ಲಸಿಕೆ: ಕೇಂದ್ರ
- Finance
UMANG APP: ಇಪಿಎಫ್ಗೆ ಸಂಬಂಧಿಸಿದ ಆ್ಯಪ್, ವೈಶಿಷ್ಟ್ಯಗಳೇನು ತಿಳಿಯಿರಿ
- Movies
ಜಾಕಿ ಚಾನ್ ತಮ್ಮ ಮಗನಿಗೆ ಸಾವಿರಾರು ಕೋಟಿ ಆಸ್ತಿಯನ್ನು ಕೊಡುತ್ತಿಲ್ಲವೇಕೆ?
- Lifestyle
ಭಾನುವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಹೈದರಾಬಾದ್ ಸೋಲಿಸಿ ಅಗ್ರ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಗೆ ಸಜ್ಜಾದ ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರು
ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು ತನ್ನ ಹೊಸ ಎಂ340ಐ ಎಕ್ಸ್‌ಡ್ರೈವ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಈ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಮಾದರಿ ಬಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ.

ಬಿಎಂಡಬ್ಲ್ಯು ತನ್ನ 3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಬಿಡುಗಡೆಗೊಳಿಸಿದ ನಂತರ ಮತ್ತೊಂದು ಜನಪ್ರಿಯ ಎಂ340ಐ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಲು ಸಜ್ಜಾಗಿದೆ. ಇನ್ನು ಈ ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರಿನ ಬಿಡುಗಡೆ ದಿನಾಂಕವು ಬಹಿರಂಗವಾಗಿದೆ. ಅದರಂತೆ ಈ ಐಷಾರಾಮಿ ಬಿಎಂಡಬ್ಲ್ಯು ಕಾರು ಮಾರ್ಚ್ 10 ರಂದು ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಇದೀಗ ಈ ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರಿನ ಹೆಸರನ್ನು ಬ್ರ್ಯಾಂಡ್‌ನ ಇಂಡಿಯನ್ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ.

ಈ ಎಂ ಪರ್ಫಾರ್ಮೆನ್ಸ್ ನಂತೆ ಡೈನಾಮಿಕ್ಸ್ ನೀಡುವುದರೊಂದಿಗೆ ಹೆಚ್ಚಿನ ಕಾರ್ಯಕ್ಷಮತೆಯನ್ನು ಒದಗಿಸುವ ಮಾದರಿಯಂತೆ ರೀ ಟ್ಯೂನ್ ಮಾಡಲಾಗಿದೆ. ಆದರೆ ಇದು ಸಂಪೂರ್ಣವಾದ ಪರ್ಫಾರ್ಮೆನ್ಸ್ ಕಾರು ಆಗಿರುವುದಿಲ್ಲ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಈ ಎಂ340ಐ ಕಾರಿನಲ್ಲಿ 3.0-ಲೀಟರ್, ಆರು ಸಿಲಿಂಡರ್ ಮೋಟರ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಇನ್ನು ಬಿಎಂಡಬ್ಲ್ಯುನ ಚೆನ್ನೈ ಸ್ಥಾವರದಲ್ಲಿ ಸ್ಥಳೀಯವಾಗಿ ಎಂ340ಐ ಕಾರನ್ನು ಜೋಡಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಬಿಎಂಡಬ್ಲ್ಯು ಎಂ340ಐ ಕಾರು ಆಲ್-ವ್ಹೀಲ್-ಡ್ರೈವ್ (ಎಡಬ್ಲ್ಯೂಡಿ) ಸೆಟಪ್ ಪಡೆಯುವ ಸಾಧ್ಯತೆಯಿದೆ. ಇನ್ನು ಇದರಲ್ಲಿ ನೀಡುವ 3.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 370 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಬಹುದು.
MOST READ: ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಇನ್ನು ಹೊಸ ಬಿಎಂಡಬ್ಲ್ಯು ಎಂ340ಐ ಸ್ಪೋರ್ಟಿ ಲುಕ್ ಅನ್ನು ಹೊಂದಿರುತ್ತದೆ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಎಂ340ಐ ಮಾದರಿಯು ನವೀಕರಿಸಿದ ಬಂಪರ್, ಬಿಎಂಡಬ್ಲ್ಯು ಝಡ್ ಪ್ರೇರಿತ ಕ್ರೋಮ್ ಸ್ಟಡ್ಡ್ ಗ್ರಿಲ್, ದೊಡ್ಡದಾದ 19 ಇಂಚಿನ ಅಲಾಯ್ ವ್ಹೀಲ್ ಗಳು ಅನ್ನು ಒಳಗೊಂಡಿದೆ.

ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರಿನ ಒಳಭಾಗದಲ್ಲಿ ಮೂರು-ಝೋನ್ ಕ್ಲೈಮೇಟ್ ಕಂಟ್ರೋಲ್, ಅಂಬೈಟ್ ಲೈಟ್ ಮತ್ತು ರೇರ್ ಮೀರರ್ ಸ್ಟ್ಯಾಂಡರ್ಡ್ ಫಿಟ್‌ಮೆಂಟ್ ಆಗಿ ಪಡೆಯುತ್ತದೆ. ಇನ್ನು ಮುಂಭಾಗ ಮತ್ತು ಹಿಂಭಾಗದಲ್ಲಿ ಪಾರ್ಕಿಂಗ್ ಸೆನ್ಸರ್ ಗಳನ್ನು ಹೊಂದಿವೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಇನ್ನು ಈ ಕಾರಿನಲ್ಲಿ ಕಡಿಮೆ ಪ್ರೊಫೈಲ್ ಟೈರ್‌ಗಳಲ್ಲಿ ಪರಿಷ್ಕೃತ ಹಿಂಭಾಗದ ಡಿಫ್ಯೂಸರ್ ಮತ್ತು ದೊಡ್ಡ ಎಕ್ಸಾಸ್ಟ್ ಅನ್ನು ಹೊಂದಿದೆ. ನಂತರ ಎಂ ಸ್ಪೋರ್ಟ್ ಸಸ್ಪೆಂಕ್ಷನ್ ಮುಂಭಾಗದಲ್ಲಿ ದೊಡ್ಡ 348 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 345 ಎಂಎಂ ಡಿಸ್ಕ್ ಬ್ರೇಕ್ ಅನ್ನು ಹೊಂದಿರುತ್ತದೆ..

ಇನ್ನು ಈ ಹೊಸ ಐಷಾರಾಮಿ ಕಾರಿನಲ್ಲಿ ನ್ಯಾವಿಗೇಷನ್ ಸಿಸ್ಟಮ್‌ನೊಂದಿಗೆ ಬಿಎಂಡಬ್ಲ್ಯು ಲೈವ್ ಕಾಕ್‌ಪಿಟ್ ಪ್ಲಸ್ ರಿಯಲ್ ಟೈಮ್ ಟ್ರಾಫಿಕ್ ಡೀಟಲ್ಸ್, ರಿಮೋಟ್ ಸರ್ವೀಸಸ್, ಕನ್ಸೈರ್ಜ್ ಸರ್ವಿಸ್ ಸೇರಿದಂತೆ ಕನೆಕ್ಟಿವಿಟಿ ಪ್ಯಾಕೇಜ್ ಪ್ಲಸ್‌ನೊಂದಿಗೆ 8.8-ಇಂಚಿನ ಕಂಟ್ರೋಲ್ ಡಿ ಪ್ಲೇಯನ್ನು ಒಳಗೊಂಡಿರುತ್ತದೆ.