ಬಿಡುಗಡೆಯಾದ ಮೊದಲ ದಿನವೇ ಸೋಲ್ಡ್ ಔಟ್ ಆದ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರು

ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು ಇಂಡಿಯಾ ತನ್ನ ಹೊಸ ಎಂ340ಐ ಎಕ್ಸ್‌ಡ್ರೈವ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಈ ತಿಂಗಳ 10ರಂದು ಬಿಡುಗಡೆಗೊಳಿಸಿತು. ಈ ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.62.90 ಲಕ್ಷಗಳಾಗಿದೆ.

ಬಿಡುಗಡೆಯಾದ ಮೊದಲ ದಿನವೇ ಸೋಲ್ಡ್ ಔಟ್ ಆದ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರು

ಈ ಐಷಾರಾಮಿ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರನ್ನು ಭಾರತದಲ್ಲಿ ಸ್ಥಳೀಯವಾಗಿ ಅಭಿವೃದ್ದಿಪಡಿಸಲಾಗಿದೆ. ಇನ್ನು ಈ ಹೊಸ ಐಷಾರಾಮಿ ಬಿಎಂಡಬ್ಲ್ಯು ಕಾರು ಬಿಡುಗಡೆಯಾದ ದಿನವೇ ಸೋಲ್ಡ್ ಔಟ್ ಆಗಿದೆ. ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರು ದ್ರಾವಿಟ್ ಗ್ರೇ, ಸನ್ಸೆಟ್ ಆರೆಂಜ್ ಮತ್ತು ಟಾಂಜಾನೈಟ್ ಬ್ಲೂ ಎಂಬ ಮೂರು ಬಣ್ಣಗಳಲ್ಲಿ ಬಿಡುಗಡೆಗೊಳಿಸಲಾಗಿದೆ.

ಬಿಡುಗಡೆಯಾದ ಮೊದಲ ದಿನವೇ ಸೋಲ್ಡ್ ಔಟ್ ಆದ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರು

ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರಿನಲ್ಲಿ ಪವರ್ ಫುಲ್ 3.0-ಲೀಟರ್, ಆರು ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ ಮತ್ತು ಆಲ್-ವ್ಹೀಲ್ ಡ್ರೈವ್ ಸೆಟಪ್ ಒಳಗೊಂಡಿದೆ. ಈ ಎಂಜಿನ್ 87 ಬಿಹೆಚ್‌ಪಿ ಪವರ್ ಮತ್ತು 500 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಬಿಡುಗಡೆಯಾದ ಮೊದಲ ದಿನವೇ ಸೋಲ್ಡ್ ಔಟ್ ಆದ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರು

ಇನ್ನು ಪ್ಯಾಡಲ್ ಶಿಫ್ಟರ್‌ಗಳೊಂದಿಗೆ ಎಂಜಿನ್ ಅನ್ನು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಈ ಐಷಾರಾಮಿ ಬಿಎಂಡಬ್ಲ್ಯು ಕಾರು ಕೇವಲ 4.4 ಸೆಕೆಂಡುಗಳಲ್ಲಿ 100 ಕಿ,ಮೀ ವೇಗವನ್ನು ಪಡೆದುಕೊಳ್ಳುತ್ತದೆ.

ಬಿಡುಗಡೆಯಾದ ಮೊದಲ ದಿನವೇ ಸೋಲ್ಡ್ ಔಟ್ ಆದ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರು

ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರಿನಲ್ಲಿ ಎಂ-ಸ್ಪೆಸಿಫಿಕ್ ಚಾಸಿಸ್ ಟ್ಯೂನಿಂಗ್, ಬಿಎಂಡಬ್ಲ್ಯು ಎಕ್ಸ್‌ಡ್ರೈವ್ ಆಲ್-ವ್ಹೀಲ್ ಡ್ರೈವ್ ಮತ್ತು ಎಂ ಸ್ಪೋರ್ಟ್ ರಿಯರ್ ಡಿಫರೆನ್ಷಿಯಲ್ ಅನ್ನು ಹೊಂದಿವೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಬಿಡುಗಡೆಯಾದ ಮೊದಲ ದಿನವೇ ಸೋಲ್ಡ್ ಔಟ್ ಆದ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರು

ಇನ್ನು ಈ ಹೊಸ ಐಷಾರಾಮಿ ಕಾರಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಅಗ್ರೇಸಿವ್ ಮತ್ತು ನಯವಾದ ಹೆಡ್‌ಲೈಟ್‌ಗಳು ಮತ್ತು ಮಸ್ಕಲರ್ ಬಂಪರ್ ಅನ್ನು ಹೊಂದಿದೆ. ಇನ್ನು ಈ ಕಾರಿನಲ್ಲಿ 18 ಇಂಚಿನ ವ್ಹೀಲ್ ಗಳನ್ನು ನೀಡಿದೆ. ಇದರೊಂದಿಗೆ 19 ಇಂಚಿನ ವ್ಹೀಲ್ ಗಳ ಆಯ್ಕೆಯನ್ನು ನೀಡಿದೆ.

ಬಿಡುಗಡೆಯಾದ ಮೊದಲ ದಿನವೇ ಸೋಲ್ಡ್ ಔಟ್ ಆದ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರು

ಇನ್ನು ಈ ಕಾರಿನ ಬದಿಯ ಉದ್ದಕೂ ಅಗ್ರೇಸಿವ್ ಬಾಡಿ ಲೈನ್ ಗಳನ್ನು ಒಳಗೊಂಡಿದೆ. ಹಿಂಭಾಗದಲ್ಲಿ ಎಲ್ಇಡಿ ಟೈಲ್‌ಲೈಟ್‌ಗಳನ್ನೂ ಸಹ ಒಳಗೊಂಡಿದೆ. ಇದು ಡ್ಯುಯಲ್ ಔಟ್ ಲೆಟ್ ಗಳೊಂದಿಗೆ ಎಂ ಸ್ಪೋರ್ಟ್ ಎಕ್ಸಾಸ್ಟ್ ಸಹ ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಯಾದ ಮೊದಲ ದಿನವೇ ಸೋಲ್ಡ್ ಔಟ್ ಆದ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರು

ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರಿನ ಇಂಟಿರಿಯರ್ ನಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಕನೆಕ್ಟಿವಿಟಿ ಹೊಂದಿರುವ 10.25-ಇಂಚಿನ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇನ್ನು ಈ ಕಾರಿನಲ್ಲಿ 12.3-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.

ಬಿಡುಗಡೆಯಾದ ಮೊದಲ ದಿನವೇ ಸೋಲ್ಡ್ ಔಟ್ ಆದ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರು

ಇದರೊಂದಿಗೆ ಮೂರು ಜೋನ್ ಕ್ಲೈಮೇಟ್ ಕಂಟ್ರೋಲ್, ಅಂಬಿಯೆಟ್ ಲೈಟಿಂಗ್, ಕನೆಕ್ಟೆಡ್ ಪ್ಯಾಕೇಜ್ ಪ್ಲಸ್ ಜೊತೆಗೆ ರಿಯಲ್-ಟೈಮ್ ಟ್ರಾಫಿಕ್ ಮಾಹಿತಿ, ರಿಮೋಟ್ ಸರ್ವೀಸಸ್, ಕನ್ಸೈರ್ಜ್ ಸರ್ವೀಸಸ್ ಮತ್ತು ಆಪಲ್ ಕಾರ್ ಪ್ಲೇ ಸೇರಿದಂತೆ 8.8-ಇಂಚಿನ ಕಂಟ್ರೋಲ್ ಡಿಸ್ ಪ್ಲೇಯನ್ನು ಕೂಡ ಪಡೆದುಕೊಂಡಿದೆ.

Most Read Articles

Kannada
English summary
Bmw M340i xDrive sold Out In India. Read In Kannada.
Story first published: Friday, March 12, 2021, 9:47 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X