ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಐಷಾರಾಮಿ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿ
ಈ ವರ್ಷದ ಆರಂಭದಲ್ಲಿ ಬಿಎಂಡಬ್ಲ್ಯು ಕಂಪನಿಯು ತನ್ನ ಎಕ್ಸ್3 ಎಸ್‌ಯುವಿ ಸರಣಿಯ ಹೊಸ ರೂಪಾಂತರವನ್ನು ಪರಿಚಯಿಸಿತು. ಹೊಸ ಹೊಸ ರೂಪಾಂತರವು ಬಿಎಂಡಬ್ಲ್ಯು ಎಕ್ಸ್3 ಎಕ್ಸ್‌ಡ್ರೈವ್ 30ಐ ಸ್ಪೋರ್ಟ್‌ಎಕ್ಸ್ ಟ್ರಿಮ್ ರೂಪದಲ್ಲಿ ಬರುತ್ತದೆ.

ಈ ಬಿಎಂಡಬ್ಲ್ಯು ಎಕ್ಸ್3 ಎಕ್ಸ್‌ಡ್ರೈವ್ 30ಐ ಸ್ಪೋರ್ಟ್‌ಎಕ್ಸ್ ರೂಪಾಂತರದ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.56.50 ಲಕ್ಷಗಳಾಗಿದೆ. ಇದೀಗ ಕಂಪನಿಯು ಎಕ್ಸ್3 ಮಾದರಿಗೆ ಮಿಡ್-ಲೈಫ್ ಅಪ್ಡೇಟ್ ನೀಡುವ ನಿರೀಕ್ಷೆಯಿದೆ. ಆದರೆ ಕಂಪನಿಯು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಚಿತ್ರದ ಪ್ರಕಾರ, ಫೇಸ್‌ಲಿಫ್ಟ್ ಮಾದರಿಯು ಸಾಕಷ್ಟು ಸ್ಪೋರ್ಟಿ ಆಗಿ ಕಾಣುತ್ತದೆ. ಇನ್ನು ಎಕ್ಸ್3 ಮಿಲಿಟರಿ ಗ್ರೀನ್ ಬಣ್ಣವನ್ನು ಹೊಂದಿದೆ. ಈ ಎಸ್‍ಯುವಿಯು ವ್ಹೀಲ್ ಆರ್ಚರ್ ಸುತ್ತಲೂ ಸ್ಕಲಪಡಡ್ ಆಚರ್ಸ್, ಸ್ಪೋರ್ಟಿ ಬಂಪರ್ ವಿನ್ಯಾಸ ಮತ್ತು ಇತ್ಯಾದಿಗಳನ್ನು ಸಹ ಪಡೆಯುತ್ತದೆ.

ಇದಲ್ಲದೆ ಎಸ್‍ಯುವಿಗೆ ಮಾಡಿದ ಎಲ್ಲಾ ಟ್ವೀಕ್‌ಗಳು ಎಕ್ಸ್3 ಅನ್ನು ಹಿಂದಿನ ಮಾದರಿಗಿಂತ ಭಿನ್ನವಾಗಿ ಕಾಣುವಂತೆ ಮಾಡುತ್ತದೆ. ಹೊಸ ಎಕ್ಸ್3 ಎಸ್‍ಯುವಿಯು ಹೊಸ ಡ್ಯುಯಲ್-ಟೋನ್ ಅಲಾಯ್ ವ್ಹೀಲ್‌ಗಳನ್ನು ಸಹ ಪಡೆಯುತ್ತದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ

ಇನ್ನು ಈ ಐಷಾರಾಮಿ ಬಿಎಂದಬ್ಲ್ಯು ಎಕ್ಸ್3 ಎಸ್‍ಯುವಿಯು ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಹೊಸ ವಿನ್ಯಾಸದೊಂದಿಗೆ ಎಲ್‌ಇಡಿ ಫಾಗ್ ಲ್ಯಾಂಪ್‌ಗಳು, ಸಿಗ್ನೇಚರ್ ಕಿಡ್ನಿ ಗ್ರಿಲ್ ಅಪ್ ಫ್ರಂಟ್, ಎಲ್‌ಇಡಿ ಟೈಲ್ ಲೈಟ್ಸ್, ರಿವೈಸ್ಡ್ ರೂಫ್ ಸ್ಪಾಯ್ಲರ್ ಮತ್ತು ಡ್ಯುಯಲ್ ಎಕ್ಸಾಸ್ಟ್ ಪೈಪ್‌ಗಳನ್ನು ಸಹ ಪಡೆಯಲಿದೆ.

ಈ ಐಷಾರಾಮಿ ಎಸ್‍ಯುವಿ ಒಳಭಾಗದಲ್ಲಿ ಹೊಸ ಐಡ್ರೈವ್ 9 ಆಪರೇಟಿಂಗ್ ಸಿಸ್ಟಂ, 12.3-ಇಂಚಿನ ಡಿಜಿಟಲ್ ಇನ್ ಟ್ರೂಮೆಂಟ್ ಕ್ಲಸ್ಟರ್, ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, 16-ಸ್ಪೀಕರ್ ಹರ್ಮನ್ ಕಾರ್ಡನ್ ಸರೌಂಡ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಚಾರ್ಜಿಂಗ್, ಆಟೋಮ್ಯಾಟಿಕ್ ಕ್ಲೈಮೇಂಟ್ ಕಂಟ್ರೋಲ್ ಅನ್ನು ಪಡೆಯುತ್ತದೆ ಎಂದು ನಿರೀಕ್ಷಿಸುತ್ತೇವೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇನ್ನು ಫೇಸ್‌ಲಿಫ್ಟೆಡ್ ಎಕ್ಸ್3 ಎಸ್‍ಯುವಿಯಲ್ಲಿ 2.0 ಲೀಟರ್ ಟ್ವಿನ್ ಪವರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಈ ಎಂಜಿನ್ 248 ಬಿಹೆಚ್‍ಪಿ ಪವರ್ ಮತ್ತು 360 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್ ನೊಂದಿಗೆ 8-ಸ್ಪೀಡ್ ಸ್ಟೆಪ್ಟ್ರಾನಿಕ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ಇನ್ನು ಇದರೊಂದಿಗೆ ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಲಾಗಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಈ ಎಂಜಿನ್ 184 ಬಿಹೆಚ್‍ಪಿ ಪವರ್ ಮತ್ತು 400 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಹೊಸ ಬಿಎಂಡಬ್ಲ್ಯು ಎಕ್ಸ್3 ಎಸ್‍ಯುವಿಯು ಕೇವಲ 6.3 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ.

ಎಲ್ಲಾ ಅಪ್‌ಡೇಟ್‌ಗಳು ಮತ್ತು ಟ್ವೀಕ್‌ಗಳೊಂದಿಗೆ ಫೇಸ್‌ಲಿಫ್ಟೆಡ್ ಬಿಎಂಡಬ್ಲ್ಯು ಎಕ್ಸ್3 ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಬಿಎಂಡಬ್ಲ್ಯು ಎಕ್ಸ್3 ಭಾರತದಲ್ಲಿ ಬಿಡುಗಡೆಯಾದ ಬಳಿಕ ಮರ್ಸಿಡಿಸ್ ಬೆಂಝ್ ಜಿಎಲ್‌ಸಿ ಮತ್ತು ಮುಂಬರುವ ಆಡಿ ಕ್ಯೂ5 ಫೇಸ್‌ಲಿಫ್ಟ್ ಎಸ್‌ಯುವಿಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications








