ಐಷಾರಾಮಿ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯ ಚಿತ್ರಗಳು ಬಹಿರಂಗ

ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು ತನ್ನ ಹೊಸ ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯ ಸ್ಪೈ ಚಿತ್ರಗಳು ಅಂತರ್ಜಾಲದಲ್ಲಿ ಸೋರಿಕೆಯಾಗಿದೆ.

ಐಷಾರಾಮಿ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯ ಚಿತ್ರಗಳು ಬಹಿರಂಗ

ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯು ಸಾಕಷ್ಟು ಹೊಸ ನವೀಕರಣಗಳನ್ನು ಪಡೆದುಕೊಂಡಿದೆ.ಹೊಸ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯ ಮುಂಭಾಗದಲ್ಲಿ ಬ್ಲ್ಯಾಕ್-ಔಟ್ ಸಿಗ್ನೇಚರ್ ಬಿಎಂಡಬ್ಲ್ಯು ಕಿಡ್ನಿ ಗ್ರಿಲ್ ಅನ್ನು ಹೊಂದಿದೆ. ಸ್ವೆಪ್‌ಬ್ಯಾಕ್ ಹೆಡ್‌ಲೈಟ್‌ಗಳು ಹೆಚ್ಚು ಸ್ಲೀಕರ್ ಆಗಿದೆ. ಇನ್ನು ಈ ಕಾರಿನಲ್ಲಿ ಎಲ್‌ಇಡಿ ಹೆಡ್‌ಲೈಟ್‌ಗಳು ಡಾರ್ಕ್ ಟಿಂಟ್ ಹೊಂದಿದೆ, ಹಿಂಭಾಗದಲ್ಲಿ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ.

ಐಷಾರಾಮಿ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯ ಚಿತ್ರಗಳು ಬಹಿರಂಗ

ಫೇಸ್‌ಲಿಫ್ಟ್ ಮಾದರಿಯು ಸಾಕಷ್ಟು ಸ್ಪೋರ್ಟಿ ಆಗಿ ಕಾಣುತ್ತದೆ. ಈ ಎಸ್‍ಯುವಿಯು ವ್ಹೀಲ್ ಆರ್ಚರ್ ಸುತ್ತಲೂ ಸ್ಕಲಪಡಡ್ ಆಚರ್ಸ್, ಸ್ಪೋರ್ಟಿ ಬಂಪರ್ ವಿನ್ಯಾಸ ಮತ್ತು ಇತ್ಯಾದಿಗಳನ್ನು ಸಹ ಪಡೆಯುತ್ತದೆ. ಇದಲ್ಲದೆ ಎಸ್‍ಯುವಿಗೆ ಮಾಡಿದ ಎಲ್ಲಾ ಟ್ವೀಕ್‌ಗಳು ಎಕ್ಸ್3 ಅನ್ನು ಹಿಂದಿನ ಮಾದರಿಗಿಂತ ಭಿನ್ನವಾಗಿ ಕಾಣುವಂತೆ ಮಾಡುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಐಷಾರಾಮಿ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯ ಚಿತ್ರಗಳು ಬಹಿರಂಗ

ಹೊಸ ಎಕ್ಸ್3 ಎಸ್‍ಯುವಿಯು ಹೊಸ ಡ್ಯುಯಲ್-ಟೋನ್ ಅಲಾಯ್ ವ್ಹೀಲ್‌ಗಳನ್ನು ಸಹ ಪಡೆಯುತ್ತದೆ. ಹೊಸ ಐಷಾರಾಮಿ ಎಸ್‍ಯುವಿ ಒಳಭಾಗದಲ್ಲಿ ಹೊಸ ಐಡ್ರೈವ್ 9 ಆಪರೇಟಿಂಗ್ ಸಿಸ್ಟಂ, 12.3-ಇಂಚಿನ ಡಿಜಿಟಲ್ ಇನ್ ಟ್ರೂಮೆಂಟ್ ಕ್ಲಸ್ಟರ್, ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಫೀಚರ್ಸ್ ಗಳನ್ನು ಹೊಂದಿರುತ್ತದೆ.

ಐಷಾರಾಮಿ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯ ಚಿತ್ರಗಳು ಬಹಿರಂಗ

ಇದರೊಂದಿಗೆ 16-ಸ್ಪೀಕರ್ ಹರ್ಮನ್ ಕಾರ್ಡನ್ ಸರೌಂಡ್ ಸೌಂಡ್ ಸಿಸ್ಟಂ, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಚಾರ್ಜಿಂಗ್, ಆಟೋಮ್ಯಾಟಿಕ್ ಕ್ಲೈಮೇಂಟ್ ಕಂಟ್ರೋಲ್ ಅನ್ನು ಪಡೆಯುತ್ತದೆ ಎಂದು ನಿರೀಕ್ಷಿಸುತ್ತೇವೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಐಷಾರಾಮಿ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯ ಚಿತ್ರಗಳು ಬಹಿರಂಗ

ಇನ್ನು ಫೇಸ್‌ಲಿಫ್ಟೆಡ್ ಎಕ್ಸ್3 ಎಸ್‍ಯುವಿಯಲ್ಲಿ 2.0 ಲೀಟರ್ ಟ್ವಿನ್ ಪವರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಈ ಎಂಜಿನ್ 248 ಬಿಹೆಚ್‍ಪಿ ಪವರ್ ಮತ್ತು 360 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.

ಐಷಾರಾಮಿ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯ ಚಿತ್ರಗಳು ಬಹಿರಂಗ

ಈ ಎಂಜಿನ್ ನೊಂದಿಗೆ 8-ಸ್ಪೀಡ್ ಸ್ಟೆಪ್ಟ್ರಾನಿಕ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ಇನ್ನು ಇದರೊಂದಿಗೆ 2.0 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಐಷಾರಾಮಿ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯ ಚಿತ್ರಗಳು ಬಹಿರಂಗ

ಈ ಎಂಜಿನ್ 184 ಬಿಹೆಚ್‍ಪಿ ಪವರ್ ಮತ್ತು 400 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಹೊಸ ಬಿಎಂಡಬ್ಲ್ಯು ಎಕ್ಸ್3 ಎಸ್‍ಯುವಿಯು ಕೇವಲ 6.3 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ.

ಐಷಾರಾಮಿ ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯ ಚಿತ್ರಗಳು ಬಹಿರಂಗ

ಎಲ್ಲಾ ಅಪ್‌ಡೇಟ್‌ಗಳು ಮತ್ತು ಟ್ವೀಕ್‌ಗಳೊಂದಿಗೆ ಫೇಸ್‌ಲಿಫ್ಟೆಡ್ ಬಿಎಂಡಬ್ಲ್ಯು ಎಕ್ಸ್3 ಆಕರ್ಷಕ ಲುಕ್ ಅನ್ನು ಹೊಂದಿದೆ. ಹೊಸ ಬಿಎಂಡಬ್ಲ್ಯು ಎಕ್ಸ್3 ಭಾರತದಲ್ಲಿ ಬಿಡುಗಡೆಯಾದ ಬಳಿಕ ಮರ್ಸಿಡಿಸ್ ಬೆಂಝ್ ಜಿಎಲ್‌ಸಿ ಮತ್ತು ಮುಂಬರುವ ಆಡಿ ಕ್ಯೂ5 ಫೇಸ್‌ಲಿಫ್ಟ್ ಎಸ್‌ಯುವಿಗಳಿಗೆ ಪೈಪೋಟಿ ನೀಡುತ್ತದೆ.

Source: Cochespias

More from DriveSpark

Article Published On: Tuesday, May 18, 2021, 20:19 [IST]
English summary
2022 BMW X3 SUV Facelift Photos Leak. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+