ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಭಾರತೀಯ ಆಟೋ ಉದ್ಯಮವು ಕೋವಿಡ್ ಹೊಡೆತಕ್ಕೆ ಸಿಲುಕಿ ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಬೆಳವಣಿಗೆ ಸಾಧಿಸುತ್ತಿದ್ದು, ವೈರಸ್ ಪರಿಣಾಮ ಬಿಡುಗಡೆಯಿಂದ ಹಿಂದೆ ಸರಿದಿದ್ದ ಹಲವು ಹೊಸ ವಾಹನಗಳು ಇದೀಗ ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗುತ್ತಿವೆ.

 ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಆರ್ಥಿಕ ಸಂಕಷ್ಟದ ನಡುವೆಯೂ ಸೋಂಕಿನ ಭೀತಿಯಿಂದಾಗಿ ಸ್ವಂತ ವಾಹನ ಬಳಕೆ ಹೆಚ್ಚುತ್ತಿರುವುದೇ ಹೊಸ ವಾಹನ ಮಾರಾಟದಲ್ಲಿ ತ್ವರಿತವಾಗಿ ಬೆಳವಣಿಗೆ ಕಂಡುಬರುತ್ತಿದ್ದು, ಅಗಸ್ಟ್ ಅವಧಿಯಲ್ಲಿ ಹಲವು ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿವೆ. ಹಾಗಾದರೆ ಹೊಸ ಪಟ್ಟಿಯಲ್ಲಿ ಯಾವೆಲ್ಲಾ ಕಾರುಗಳಿವೆ ಎಂಬುವುದನ್ನು ಈ ಲೇಖನದಲ್ಲಿ ತಿಳಿಯೋಣ.

 ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಟಾಟಾ ಟಿಯಾಗೋ ಎನ್‌ಆರ್‌ಜಿ ಫೇಸ್‌ಲಿಫ್ಟ್

ಜನಪ್ರಿಯ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ 2021ರ ಟಿಯಾಗೋ ಎನ್‌ಆರ್‌ಜಿ ಫೇಸ್‌ಲಿಫ್ಟೆಡ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದ್ದು, ಹೊಸ ಕಾರು ಇದೇ ತಿಂಗಳು 4 ರಂದು ಬಿಡುಗಡೆಯಾಗಲಿದೆ.

 ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಟಾಟಾ ಕಂಪನಿಯು ಈಗಾಗಲೇ ಹೊಸ ಟಿಯಾಗೋ ಎನ್‌ಆರ್‌ಜಿ ಫೇಸ್‌ಲಿಫ್ಟ್ ಹೊಸ ಟೀಸರ್ ಬಿಡುಗಡೆಗೊಳಿಸಿದ್ದು, ಟೀಸರ್ ನಲ್ಲಿ ಟಿಯಾಗೋ ಎನ್‌ಆರ್‌ಜಿ ಫೇಸ್‌ಲಿಫ್ಟೆಡ್ ಕಾರಿನಲ್ಲಿ ಬ್ಲ್ಯಾಕ್ ರೂಫ್ ನೀಡಿರುವುದನ್ನು ಖಚಿತಪಡಿಸಿದೆ. ಈ ಹೊಸ ಟಿಯಾಗೋ ಎನ್‌ಆರ್‌ಜಿ ಡ್ಯುಯಲ್ ಟೋನ್ ಬಣ್ಣ ಹೊಂದಿದ್ದು, 2018 ಮತ್ತು 2020ರ ನಡುವೆ ಕ್ರಾಸ್‌ಓವರ್ ಮಾದರಿಯಾಗಿ ಮಾರಾಟ ಮಾಡಲಾಗಿತ್ತು.

 ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಸ್ಕೋಡಾ ಕುಶಾಕ್ 1.5-ಲೀಟರ್ ವರ್ಷನ್

ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಕಾರು ಮಾದರಿಯಾದ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಶೀಘ್ರದಲ್ಲೇ ಹೊಸ ಕಾರಿನ 1.5-ಲೀಟರ್ ಮಾದರಿಯನ್ನು ವಿತರಣೆ ಮಾಡಲು ಸಜ್ಜಾಗುತ್ತಿದೆ.

 ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಹೊಸ ಕುಶಾಕ್ ಕಾರಿನಲ್ಲಿ ಸ್ಕೋಡಾ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ನೀಡಿದ್ದು, ಸದ್ಯಕ್ಕೆ 1.0-ಲೀಟರ್ ಪೆಟ್ರೋಲ್ ಮಾದರಿಯನ್ನು ಮಾತ್ರ ವಿತರಣೆ ಮಾಡಲಾಗುತ್ತಿದೆ. 1.5-ಲೀಟರ್ ಮಾದರಿಯ ಬೆಲೆಯನ್ನು ಈಗಾಗಲೇ ಘೋಷಣೆ ಮಾಡಲಾಗಿದ್ದರೂ ಕಾರಣಾಂತರಗಳಿಂದ ಹೈ ಎಂಡ್ ಮಾದರಿಯ ವಿತರಣೆಯನ್ನು ವಿಳಂಬ ಮಾಡಿದ್ದ ಕಂಪನಿಯು ಇದೀಗ 1.5-ಲೀಟರ್ ಮಾದರಿಯನ್ನು ಈ ಮುಂದಿನ ತಿಂಗಳು 13ರಿಂದ ವಿತರಣೆ ಮಾಡುವ ಭರವಸೆ ನೀಡಿದೆ.

 ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಮಹೀಂದ್ರಾ ಎಕ್ಸ್‌ಯುವಿ700

ಬಹುನೀರಿಕ್ಷಿತ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯು ಈ ತಿಂಗಳಾಂತ್ಯಕ್ಕೆ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದ್ದು, ಹೊಸ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಕಾರಿನ ಹೊಸ ತಲೆಮಾರಿನ ಆವೃತ್ತಿಯಾಗಿ ಮಾರಾಟಗೊಳ್ಳಲಿದೆ.

 ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಯಾಗುತ್ತಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳ ಕುರಿತಾಗಿ ಒಂದೊಂದೆ ಮಾಹಿತಿಗಳನ್ನು ಹಂಚಿಕೊಳ್ಳುತ್ತಿರುವ ಮಹೀಂದ್ರಾ ಕಂಪನಿಯು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದು, 6 ಸೀಟರ್ ಜೊತೆಗೆ 7 ಸೀಟರ್ ಆಯ್ಕೆಯೊಂದಿಗೆ ಹೊಸ ಕಾರು ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಪಡೆದುಕೊಳ್ಳಲಿದೆ.

 ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಬಿಎಸ್-6 ಫೋರ್ಸ್ ಗೂರ್ಖಾ ಎಸ್‌ಯುವಿ

ಫೋರ್ಸ್ ಮೋಟಾರ್ಸ್ ಕಂಪನಿಯು ತನ್ನ ಬಹುನೀರಿಕ್ಷಿತ ಬಿಎಸ್-6 ಗೂರ್ಖಾ ಎಸ್‌ಯುವಿ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆಗಾಗಿ ಅಂತಿಮ ಸಿದ್ದತೆ ನಡೆಸುತ್ತಿದ್ದು, ಹೊಸ ಆಫ್ ರೋಡ್ ಎಸ್‌ಯುವಿಯು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಈ ತಿಂಗಳಾಂತ್ಯದಲ್ಲಿ ಬಿಡುಗಡೆಯಾಗಲಿದೆ.

 ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಗೂರ್ಖಾ ಬಿಎಸ್-6 ಆವೃತ್ತಿಯನ್ನು ಕೋವಿಡ್ ಪರಿಸ್ಥಿತಿಯಿಂದಾಗಿ ಬಿಡುಗಡೆಯನ್ನು ಮುಂದೂಡಿಕೆ ಮಾಡಲಾಗುತ್ತಿದ್ದು, ಇದೀಗ ಪರಿಸ್ಥಿತಿ ಸಹಜಸ್ಥಿತಿಯತ್ತ ಮರಳುತ್ತಿರುವುದರಿಂದ ಹೊಸ ಕಾರು ಬಿಡುಗಡೆಗೆ ನಿರ್ಧರಿಸಿದೆ. ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ತ್ರಿ ಡೋರ್ ಮತ್ತು ಫೈವ್ ಡೋರ್ ಮಾದರಿಗಳೊಂದಿಗೆ ಬಿಡುಗಡೆಯಾಗುತ್ತಿದ್ದು, ಸದ್ಯ ಹೊಸ ಕಾರು ಮಾದರಿಯಲ್ಲಿ ತ್ರಿ ಡೋರ್ ಮಾದರಿಯು ಖರೀದಿಗೆ ಲಭ್ಯವಾಗಲಿದೆ.

 ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಹೋಂಡಾ ಅಮೇಜ್ ಫೇಸ್‌ಲಿಫ್ಟ್

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಶೀಘ್ರದಲ್ಲೇ ತನ್ನ ಅಮೇಜ್ ಕಾರಿನ ಫೇಸ್‌ಲಿಫ್ಟ್ ಆವೃತ್ತಿಯನ್ನು ಬಿಡುಗಡೆ ಮಾಡಲು ಸಿದ್ದವಾಗಿದ್ದು, ಹೊಸ ಕಾರಿನ ಬುಕ್ಕಿಂಗ್ ಪ್ರಕ್ರಿಯೆಯು ಈಗಾಗಲೇ ಆಯ್ದ ಕಾರ್ ಡೀಲರ್ಸ್‌ಗಳಲ್ಲಿ ಆರಂಭವಾಗಿದೆ.

 ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಅಮೇಜ್ ಫೇಸ್‌ಲಿಫ್ಟ್ ಕಾರು ಮಾದರಿಯ ಖರೀದಿಗಾಗಿ ಹೋಂಡಾ ಕಂಪನಿಯು ಇದುವರೆಗೂ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಘೋಷಣೆ ಮಾಡಿಲ್ಲವಾದರೂ ಆಸಕ್ತ ಗ್ರಾಹಕರಿಂದ ಪ್ರಮುಖ ಡೀಲರ್ಸ್‌ಗಳಲ್ಲಿ ಮುಂಗಡ ಪಾವತಿ ಸ್ವಿಕರಿಸುತ್ತಿದ್ದು, ಹೊಸ ಕಾರು ಈ ತಿಂಗಳು 17ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ.

 ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಫೋರ್ಡ್ ಆಸ್ಪೈರ್ ಆಟೋಮ್ಯಾಟಿಕ್ ವರ್ಷನ್

ಫೋರ್ಡ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಯಾದ ಫಿಗೊ ಹ್ಯಾಚ್‌ಬ್ಯಾಕ್ ಕಾರಿನಲ್ಲಿ ಕಳೆದ ವಾರವಷ್ಟೇ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಿದ್ದು, ಇದೀಗ ಕಂಪನಿಯು ಆಸ್ಪೈರ್ ಕಂಪ್ಯಾಕ್ಟ್ ಸೆಡಾನ್ ಮಾದರಿಯಲ್ಲೂ ಆಟೋಮ್ಯಟಿಕ್ ವರ್ಷನ್ ಪರಿಚಯಿಸಲು ಸಿದ್ದವಾಗಿದೆ.

 ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಿವು!

ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಮತ್ತು ಕಂಪ್ಯಾಕ್ಟ್ ಸೆಡಾನ್ ಮಾದರಿಗಳಲ್ಲಿ ಫಿಗೊ ಮತ್ತು ಆಸ್ಪೈರ್ ಕಾರುಗಳು ಉತ್ತಮ ಬೇಡಿಕೆ ಹೊಂದಿದ್ದು, ಕಂಪನಿಯು ಎರಡು ಕಾರು ಮಾದರಿಗಳಲ್ಲೂ ಪೆಟ್ರೋಲ್ ಆಟೋಮ್ಯಾಟಿಕ್ ಬಿಡುಗಡೆ ಮಾಡುವ ಯೋಜನೆ ಹೊಂದಿದೆ. ಫೋರ್ಡ್ ಕಂಪನಿಯು ಕಳೆದ ವಾರವಷ್ಟೇ ಫಿಗೊ ಕಾರಿನ ಆಟೋಮ್ಯಾಟಿಕ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಇದೀಗ ಆಸ್ಪೈರ್ ಕಾರಿನಲ್ಲೂ ಹೊಸ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ.

Most Read Articles

Kannada
English summary
New car launches in august 2021 details
Story first published: Tuesday, August 3, 2021, 20:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X